ಶಿಕ್ಷಣ ಕಾಶಿ ಧಾರವಾಡಕ್ಕೆ ಮತ್ತೊಂದು ಗರಿ: ವಿಶ್ವದ ಅಗ್ರ ವಿಜ್ಞಾನಿಗಳ ಪಟ್ಟಿಯಲ್ಲಿ ಕೆಎಲ್ಇ ಸಂಶೋಧಕರು

ನೆದರಲ್ಯಾಂಡ್‌ನ ಎಲೆವಿಯರ್ ಬಿವಿ ಹಾಗೂ ಯುಎಸ್‌ಎನ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯವು ಸಿದ್ಧಪಡಿಸಿದ ವಿಜ್ಞಾನಿಗಳ ಪಟ್ಟಿಯಲ್ಲಿ ಕೆಎಲ್‌ಇ ತಾಂತ್ರಿಕ ವಿವಿಯ ಪ್ರೊ ಸೇರ್ಪಡೆಯಾಗಿದ್ದಾರೆ.

ಶಿಕ್ಷಣ ಕಾಶಿ ಧಾರವಾಡಕ್ಕೆ ಮತ್ತೊಂದು ಗರಿ: ವಿಶ್ವದ ಅಗ್ರ ವಿಜ್ಞಾನಿಗಳ ಪಟ್ಟಿಯಲ್ಲಿ ಕೆಎಲ್ಇ ಸಂಶೋಧಕರು
: ವಿಶ್ವದ ಅಗ್ರ ವಿಜ್ಞಾನಿಗಳ ಪಟ್ಟಿಯಲ್ಲಿ ಕೆಎಲ್ಇ ಸಂಶೋಧಕರು
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Oct 21, 2022 | 7:32 AM

ಧಾರವಾಡ: ವಾಣಿಜ್ಯ ನಗರಿ ಒಂದಿಲ್ಲೊಂದು ರೀತಿಯಲ್ಲಿ ಗೌರವ ಗರಿಯನ್ನು ಮುಡಿಗೇರಿಸಿಕೊಳ್ಳುವ ಮೂಲಕ ತನ್ನ ಕೀರ್ತಿಯನ್ನು ವಿಸ್ತರಿಸುತ್ತಲೇ ಬಂದಿದೆ. ಇದಕ್ಕೆ ನಿದರ್ಶನವೆಂಬಂತೆ ಇಲ್ಲಿಯ ಕೆಎಲ್‌ಇ ತಾಂತ್ರಿಕ ವಿಶ್ವವಿದ್ಯಾಲಯದ ಆರು ಸಂಶೋಧಕರು ವಿಶ್ವದ ಅಗ್ರ ಶೇ. 2ರಷ್ಟು ವಿಜ್ಞಾನಿಗಳಲ್ಲಿ ಸ್ಥಾನ ಪಡೆದಿದ್ದಾರೆ. ‌ನೆದರಲ್ಯಾಂಡ್‌ನ ಎಲೆವಿಯರ್ ಬಿವಿ ಹಾಗೂ ಯುಎಸ್‌ಎನ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯವು ಸಿದ್ಧಪಡಿಸಿದ ವಿಜ್ಞಾನಿಗಳ ಪಟ್ಟಿಯಲ್ಲಿ ಕೆಎಲ್‌ಇ ತಾಂತ್ರಿಕ ವಿವಿಯ ಪ್ರೊ. ತೇಜರಾಜ ಅಮೀನಭಾವಿ, ಡಾ. ನಾಗರಾಜ ಪಿ. ಶೆಟ್ಟಿ, ಪ್ರೊ. ವಿನಾಯಕ ಗಾಯತೊಂಡೆ, ಪ್ರೊ. ನಾಗರಾಜ ಬಾಣಪುರಮಠ, ಡಾ. ಮೋಹನಕೃಷ್ಣ ಗುಂಡ ಮತ್ತು ಡಾ. ಶ್ವೇತಾ ಮಾಳೋಡೆ ಸೇರ್ಪಡೆಯಾಗಿದ್ದಾರೆ. ಇದರಲ್ಲಿ ಪ್ರೊ. ತೇಜರಾಜ್ ಮತ್ತು ಡಾ. ನಾಗರಾಜ ಶೆಟ್ಟಿ ಸತತ 3ನೇ ವರ್ಷ ಈ ಮನ್ನಣಿಗೆ ಪಾತ್ರರಾಗಿದ್ದಾರೆ.

950ಕ್ಕೂ ಹೆಚ್ಚು ಸಂಶೋಧನಾ ಲೇಖನ ಪ್ರಕಟಿಸಿರುವ ಪ್ರೊ. ತೇಜರಾಜ

22 ವೈಜ್ಞಾನಿಕ ಕ್ಷೇತ್ರಗಳು ಹಾಗೂ 176 ಉಪ ಕ್ಷೇತ್ರಗಳಲ್ಲಿ 1 ವರ್ಷದ ಅವಧಿಯಲ್ಲಿ ಕನಿಷ್ಠ 5 ಸಂಶೋಧನಾ ಲೇಖನಗಳನ್ನು ಪ್ರಕಟಿಸಿರುವುದನ್ನು ಪರಿಗಣಿಸಿ ಶ್ರೇಯಾಂಕವನ್ನು ಪ್ರಮಾಣೀಕರಿಸಲಾಗಿದೆ. ವಿಜ್ಞಾನಿಗಳ ವೃತ್ತಿ ಜೀವನದ ಅವಧಿಯ ಡೇಟಾವನ್ನು 2021ರ ಅಂತ್ಯಕ್ಕೆ ನವೀಕರಿಸಲಾಗಿದೆ. ಪ್ರೊ. ತೇಜರಾಜ ಅಮೀನಭಾವಿ ಕೆಎಲ್‌ಇ ತಾಂತ್ರಿಕ ವಿವಿಯ ಸ್ಕೂಲ್ ಆಫ್ ಅಡ್ವಾನ್ಸ್‌ಡ್ ಸೈನ್ಸಸ್‌ನಲ್ಲಿ ಸಂಶೋಧನಾ ನಿರ್ದೇಶಕರು ಹಾಗೂ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿದ್ದಾರೆ. ಅಂತಾರಾಷ್ಟ್ರೀಯ ಪ್ರತಿಷ್ಠಿತ ನಿಯತಕಾಲಿಕಗಳಲ್ಲಿ 950ಕ್ಕೂ ಹೆಚ್ಚು ಸಂಶೋಧನಾ ಲೇಖನಗಳನ್ನು ಪ್ರಕಟಿಸಿದ್ದಾರೆ. ಪಾಲಿಮರ್ ವಿಜ್ಞಾನ ಮತ್ತು ತಂತ್ರಜ್ಞಾನ, ತ್ಯಾಜ್ಯದಿಂದ ಶಕ್ತಿ, ಮತ್ತು ಪರಿಸರ ವಿಜ್ಞಾನವು ಅವರ ಆಸಕ್ತಿ ವಿಷಯಗಳಾಗಿವೆ.

ಡಾ. ನಾಗರಾಜ ಶೆಟ್ಟಿ ಅವರು ಕೆಎಲ್‌ಇ ತಾಂತ್ರಿಕ ವಿವಿಯ ಸ್ಕೂಲ್ ಆಫ್ ಅಡ್ವಾನ್ಸಡ್ ಸೈನ್ಸಸ್‌ನ ಸಹ ಪ್ರಾಧ್ಯಾಪಕರಾಗಿದ್ದಾರೆ. ಅಂತಾರಾಷ್ಟ್ರೀಯ ಪ್ರತಿಷ್ಠಿತ ನಿಯತಕಾಲಿಕಗಳಲ್ಲಿ 270ಕ್ಕೂ ಹೆಚ್ಚು ಸಂಶೋಧನಾ ಲೇಖನಗಳನ್ನು ಪ್ರಕಟಿಸಿದ್ದಾರೆ. ನ್ಯಾನೊ ವಸ್ತುಗಳ ಅನ್ವಯಗಳು, ಸಂವೇದಕಗಳು, ಜೈವಿಕ ಸಂವೇದಕಗಳು, ತ್ಯಾಜ್ಯ ನೀರಿನ ಸಂಸ್ಕರಣೆ, ತ್ಯಾಜ್ಯದಿಂದ ಶಕ್ತಿ ಮತ್ತು ಹೈಡೋಜನ್ ಶಕ್ತಿ ಉತ್ಪಾದನೆ ಕ್ಷೇತ್ರದಲ್ಲಿ ಹೆಚ್ಚು ಆಸಕ್ತಿಯನ್ನು ಹೊಂದಿದ್ದಾರೆ. ಇದನ್ನೂ ಓದಿ: ಮೀಸಲಾತಿ ಹೆಚ್ಚಳಕ್ಕೆ ಸುಗ್ರೀವಾಜ್ಞೆ, ಮುಂದಿನ ಅಧಿವೇಶನದಲ್ಲಿಯೇ ವಿಧೇಯಕ ಮಂಡನೆ; ಸಚಿವ ಸಂಪುಟ ತೀರ್ಮಾನ

ಪ್ರೊ. ವಿನಾಯಕ ಗಾಯತೊಂಡೆ ಅವರು ಕೆಎಲ್‌ಇ ಮತ್ತು ಆಪ್ಟಿಮೈಜೇಶನ್, ಇನ್ನಿತರ ಕ್ಷೇತ್ರಗಳಲ್ಲಿ ಸಂಶೋಧನಾ ನಿರತರಾಗಿದ್ದಾರೆ. 173ಕ್ಕೂ ಅಧಿಕ ಲೇಖನಗಳು ಅಂತಾರಾಷ್ಟ್ರೀಯ ಪ್ರತಿಷ್ಠಿತ ಜರ್ನಲ್‌ಗಳಲ್ಲಿ ಪ್ರಕಟವಾಗಿವೆ. ಪ್ರೊ. ನಾಗರಾಜ ಬಾನಾಪುರಮಠ, ವಸ್ತು ವಿಜ್ಞಾನ ಕೇಂದ್ರದಲ್ಲಿ ಮುಖ್ಯಸ್ಥರಾಗಿ ಕೆಲಸ ಮಾಡುತ್ತಿದ್ದಾರೆ. ಅಂತಾರಾಷ್ಟ್ರೀಯ ಪ್ರತಿಷ್ಠಿತ ಜರ್ನಲ್‌ಗಳಲ್ಲಿ 306ಕ್ಕೂ ಹೆಚ್ಚು ಸಂಶೋಧನಾ ಲೇಖನಗಳನ್ನು ಪ್ರಕಟಿಸಿದ್ದಾರೆ.

ಮೋಹನಕೃಷ್ಣ ಗುಂಡ, ಸ್ಕೂಲ್ ಆಫ್ ಅಡ್ವಾನ್ಸ್‌ಡ್ ಸೈನ್ಸಸ್‌ನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿದ್ದಾರೆ. ಅಂತಾರಾಷ್ಟ್ರೀಯ ಪ್ರತಿಷ್ಠಿತ ನಿಯತಕಾಲಿಕಗಳಲ್ಲಿ 85ಕ್ಕೂ ಹೆಚ್ಚು ಸಂಶೋಧನಾ ಲೇಖನಗಳನ್ನು ಪ್ರಕಟಿಸಿದ್ದಾರೆ. ಪರಿಸರ ಜೈವಿಕ ತಂತ್ರಜ್ಞಾನ, ಸೂಕ್ಷ್ಮ ಜೀವಿಯ ಎಲೆಕ್ಟೋ-ಸಿಂಥೆಸಿಸ್, ಜೈವಿಕ ಹೈಡೋಜನ್ ಉತ್ಪಾದನೆ ಕ್ಷೇತ್ರದಲ್ಲಿ ಸಂಶೋಧನೆ ನಡೆಸಿದ್ದಾರೆ. ಡಾ. ಶ್ವೇತಾ ಮಾಳೋದೆ ಅವರು ಸ್ಕೂಲ್ ಆಫ್ ಅಡ್ವಾನ್ಸಡ್ ಸೈನ್ಸಸ್‌ನಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿದ್ದಾರೆ. ಅವರು ತಮ್ಮ ಸಂಶೋಧನಾ ವೃತ್ತಿ ಜೀವನದಲ್ಲಿ 102ಕ್ಕೂ ಹೆಚ್ಚು ಸಂಶೋಧನಾ ಲೇಖನಗಳನ್ನು ಪ್ರಕಟಿಸಿದ್ದಾರೆ.

ವರದಿ: ಶಿವಕುಮಾರ್ ಪತ್ತರ್, ಟಿವಿ9 ಧಾರವಾಡ

Published On - 7:00 am, Fri, 21 October 22

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ