ಬಿಎಸ್ ಯಡಿಯೂರಪ್ಪ ಕಣ್ಣೀರಿನಲ್ಲಿ ಬಿಜೆಪಿ ಸರ್ಕಾರ ಕೊಚ್ಚಿ ಹೋಗಿದೆ: ದಿಂಗಾಲೇಶ್ವರ ಸ್ವಾಮೀಜಿ

|

Updated on: May 15, 2023 | 12:21 PM

ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಕಣ್ಣೀರಿನಲ್ಲಿ ಬಿಜೆಪಿ ಸರ್ಕಾರ ಕೊಚ್ಚಿ ಹೋಗತ್ತೆ ಅಂತ ನಾನು ಈ ಹಿಂದೆ ಹೇಳಿದ್ದೆ. ಈಗ ಆ ಪಕ್ಷದ ನಾಯಕರಿಗೆ ಇದು ಅರಿವಾಗಿದೆ. ಅಧಿಕಾರ ಬಂದ ಸಂದರ್ಭದಲ್ಲಿ ಆ ಪಕ್ಷದ ನಾಯಕರನ್ನು ನಿರ್ಲಕ್ಷ್ಯ ಮಾಡಿದರೇ ತಿನ್ನಬಾರದ ಪೆಟ್ಟು ತಿಂತಾರೆ ಎಂದು ಶಿರಹಟ್ಟಿಯ ಫಕೀರೇಶ್ವರ ಮಠದ ಶ್ರೀ ದಿಂಗಾಲೇಶ್ವರ ಸ್ವಾಮೀಜಿ ಹೇಳಿದ್ದಾರೆ.

ಬಿಎಸ್ ಯಡಿಯೂರಪ್ಪ ಕಣ್ಣೀರಿನಲ್ಲಿ ಬಿಜೆಪಿ ಸರ್ಕಾರ ಕೊಚ್ಚಿ ಹೋಗಿದೆ: ದಿಂಗಾಲೇಶ್ವರ ಸ್ವಾಮೀಜಿ
ದಿಂಗಾಶ್ವೇರ ಸ್ವಾಮೀಜಿ
Follow us on

ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ (BS Yediyurappa) ಕಣ್ಣೀರಿನಲ್ಲಿ ಬಿಜೆಪಿ (BJP) ಸರ್ಕಾರ ಕೊಚ್ಚಿ ಹೋಗತ್ತೆ ಅಂತ ನಾನು ಈ ಹಿಂದೆ ಹೇಳಿದ್ದೆ. ಈಗ ಆ ಪಕ್ಷದ ನಾಯಕರಿಗೆ ಇದು ಅರಿವಾಗಿದೆ. ಅಧಿಕಾರ ಬಂದ ಸಂದರ್ಭದಲ್ಲಿ ಪಕ್ಷದ ನಾಯಕರನ್ನು ನಿರ್ಲಕ್ಷ್ಯ ಮಾಡಿದರೇ ತಿನ್ನಬಾರದ ಪೆಟ್ಟು ತಿಂತಾರೆ. ನಾನು ಅವತ್ತು ಒಬ್ಬ ವ್ಯಕ್ತಿಯನ್ನು ಉದ್ದೇಶಿಸಿ ಮಾತನಾಡಿರಲಿಲ್ಲ. ಬಿ.ಎಸ್​​ ಯಡಿಯೂರಪ್ಪ ಅವರು ಎಲ್ಲರಿಗೂ ಬೇಕಾದ ನಾಯಕರು. ಅವತ್ತು ಎಲ್ಲ ಸಮಾಜದ ನಾಯಕರು ಬಿ.ಎಸ್​ ಯಡಿಯೂರಪ್ಪ ಅವರನ್ನು ಮುಂದುವರೆಸಬೇಕು ಎಂದಿದ್ದರು. ಯಾವದೋ ಕೆಟ್ಟ ಉದ್ದೇಶ, ಅಥವಾ ಸ್ವಾರ್ಥಕ್ಕೆ ತಗೆದುಕೊಂಡ ನಿರ್ಣಯ ಇಂದಿನ ಹೀನಾಯ ಪರಸ್ಥಿಗೆ ಕಾರಣ ಎಂದು ಶಿರಹಟ್ಟಿಯ ಫಕೀರೇಶ್ವರ ಮಠದ ಶ್ರೀ ದಿಂಗಾಲೇಶ್ವರ ಸ್ವಾಮೀಜಿ (Dingaleshwar Swamiji) ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಬಿ.ಎಸ್​​ ಯಡಿಯೂರಪ್ಪ ಅವರನ್ನು ಬದಾಲಿಯಸದ್ದೇ ಈ‌ ಪರಸ್ಥಿತಿಗೆ ಕಾರಣ. ನನ್ನ ಬಗ್ಗೆ ಈ ಹಿಂದೆ ಪರ್ಸೆಂಟೇಜ್ ಬಗ್ಗೆ ದುರಹಂಕಾರಿಯಾಗಿ ಮಾತನಾಡಿದರು. ಗುಂಡಾ ವೃತ್ತಿಯಲ್ಲಿ ದಾಳಿ ಮಾಡಿದರು. ಅದರ ಪರಿಣಾಮವೇ ಇಂದಿನ ಬಿಜೆಪಿ ಪರಿಸ್ಥಿತಿ. ಸ್ವಾಮೀಜಿಯೊಬ್ಬರು ಗಂಭಿರ ಹೇಳಿಕೆ ನೀಡಿದಾಗ, ಚಿಂತನ‌ ಮಂಥನ ಮಾಡಬೇಕು. ಕೇಸರಿ ಪಡೆ ಎಂದು ಹೇಳಿ ಅಧಿಕಾರಕ್ಕೆ ಬಂದು, ಖಾವಿ ಧಾರಿಗಳನ್ನು ಸರಿಯಾಗಿ ನಡೆಸುಕೊಳ್ಳಲಿಲ್ಲ. ಖಾವಿ ದಾರಿಗಳು ಪಾಠ ಮಾಡಿದರೂ, ಅವರು ಪಾಠ ಕಲಿಲ್ಲ ಎಂದು ಆಕ್ರೋಶ ವ್ಯಕ್ತಪಿಡಿಸಿದರು.

ಇದನ್ನೂ ಓದಿ: Mahesh Tenginkai: ಹುಬ್ಬಳ್ಳಿ ಧಾರವಾಡ ಸೆಂಟ್ರಲ್​ನಲ್ಲಿ ಗೆಲುವಿನ ನಗೆ ಬೀರಿದ ಮಹೇಶ್​ ಟೆಂಗಿನಕಾಯಿ ವ್ಯಕ್ತಿಚಿತ್ರ

ರಾಜ್ಯದ ಹಿರಿಯ ನಾಯಕರನ್ನು ಕಡೆಗಣಿಸಿದ್ದೆ ಬಿಜೆಪಿ ‌ಇಂದಿನ ಸ್ಥಿತಿಗೆ ಕಾರಣವಾಗಿದೆ. ಬಿ.ಎಸ್​ ಯಡಿಯೂರಪ್ಪ, ಲಕ್ಷ್ಮಣ ಸವದಿ, ಜಗದೀಶ್​ ಶೆಟ್ಟರ್, ಕೆ.ಎಸ್​ ಈಶ್ವರಪ್ಪ ಕಡೆಗಣಸಿರುವುದೇ ಇದಕ್ಕೆಲ್ಲ ‌ಕಾರಣ. ಪಕ್ಷ ಕಟ್ಟದ ವ್ಯಕ್ತಿ ಮಾತು ಕೇಳಬೇಕು ಅಂದ್ರೆ ಏನು..? ಎಂದು ಪರೋಕ್ಷವಾಗಿ ಬಿಎಲ್ ಸಂತೋಷ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಿಎಸ್​ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವಾಗ ಹೇಗೆ ನಡೆಕೊಂಡರು ಅಂತ ರಾಜ್ಯಕ್ಕೆ ಗೊತ್ತಿದೆ ಎಂದು ಹೇಳಿದರು.

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿಯವರನ್ನು ಗೌರವಯುತವಾಗಿ ನಡೆಸಿಕೊಳ್ಳಬೇಕು. ಬ್ರಾಹ್ಮಣ ವಿಚಾರವಾಗಿ ನಾನು 6 ತಿಂಗಳ ನಂತರ ಸುದ್ದಿಗೋಷ್ಠಿ ಮಾಡುತ್ತೇನೆ. ರಾಜ್ಯದಲ್ಲಿ ಏನಾಗಿದೆ ಎನ್ನುವ ದಾಖಲೆ ಇದೆ. ಬ್ರಾಹ್ಮಣರ ಬಗ್ಗೆ ಮಾತಾಡೋಕೆ ನನಗೆ ಭಯ ಇಲ್ಲ. ನನಗೆ ಯಾರ ಅಂಕುಶವೂ ಇಲ್ಲ. ಬಹಳ ಮಾತಾಡಿ ಉಪಯೋಗ ಇಲ್ಲ ಎಂದರು.

ದಕ್ಷಿಣದ ಭಾರತದ ಕುದುರೆಗಳನ್ನು ಕತ್ತೆ ಅಂದುಕೊಂಡಿದ್ದೇ ಇದಕ್ಕೆಲ್ಲ ಕಾರಣ

ದಕ್ಷಿಣದ ಭಾರತದ ಕುದುರೆಗಳನ್ನು, ಕತ್ತೆ ಅಂದುಕೊಂಡಿದ್ದೇ ಇದಕ್ಕೆಲ್ಲ ಕಾರಣ. ಕರ್ನಾಟಕದ ನಾಯಕರನ್ನು ಬಿಟ್ಟು ಏನಾದರೂ ಮಾಡುತ್ತೇನೆ ಅಂದುಕೊಂಡರು. ರಾಜ್ಯದ ಮತದಾರರು ಬುದ್ದಿಗೇಡಿಗಳಾ? ರಾಷ್ಟ್ರ ನಾಯಕರಿಗೆ ಸರಿಯಾದ ಪಾಠ ಕಲಿಸಿದರು ಎಂದು ಬಿಜೆಪಿ ಕೇಂದ್ರ ನಾಯಕರ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ಮಾಡಿದರು.

ಲಿಂಗಾಯತ ನಾಯಕನಿಗೆ ಉಪಮುಖ್ಯಮಂತ್ರಿ ‌ನೀಡಬೇಕು

ರಾಜ್ಯವನ್ನು ಸರಿಯಾದ ರೀತಿ ನಡೆಸುವ, ಸಮರ್ಥ, ಯೋಗ್ಯ ಮತ್ತು ಇಡೀ ಕರ್ನಾಟಕ‌ವನ್ನು ಒಂದೇ ದೃಷ್ಟಿಕೋನದಲ್ಲಿ ನೋಡುವವರು ಮುಖ್ಯಮಂತ್ರಿಯಾಗಬೇಕು ಎಂದು ಕಿವಿ ಮಾತು ಹೇಳಿದರು. ಲಿಂಗಾಯತ ಉತ್ತರ ಕರ್ನಾಟಕದ ನಾಯಕರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು. ಇದು ನಮ್ಮ ಅಭಿಪ್ರಾಯ. ಸಾಕಷ್ಟು ಬುದ್ದಿಜೀವಿಗಳು ಇದ್ದಾರೆ, ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ