ಹುಬ್ಬಳ್ಳಿ-ಪುಣೆಗೆ ನೇರ ವಿಮಾನ ಸಂಪರ್ಕ ಆರಂಭ : ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮೊದಲ ವಿಮಾನಕ್ಕೆ ಜಲಫಿರಂಗಿ ಮೂಲಕ ಆಕರ್ಷಕ ಸ್ವಾಗತ
Pralhad Joshi: ಹುಬ್ಬಳ್ಳಿ ಧಾರವಾಡ ಅವಳಿ ನಗರ ಹಾಗೂ ಇಡೀ ಉತ್ತರ ಕರ್ನಾಟಕ ಭಾಗದ ಜನರಿಗೆ ನೇರ ವಿಮಾನ ಸೇವೆ ಸಹಕಾರಿಯಾಗಲಿದ್ದು, ಜನರು ಇದರ ಲಾಭ ಪಡೆಯುವಂತೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಇದೇ ಸಂದರ್ಭದಲ್ಲಿ ಮನವಿ ಮಾಡಿದರು.
ಹುಬ್ಬಳ್ಳಿ: ಹುಬ್ಬಳ್ಳಿಯಿಂದ ದೆಹಲಿಗೆ ನೇರ ವಿಮಾನ ಸೇವೆ ಆರಂಭಗೊಂಡ ಬೆನ್ನಲ್ಲೇ, ಇದೀಗ ಹುಬ್ಬಳ್ಳಿಯಿಂದ (Hubballi) ಪುಣೆಗೆ (Pune) ನೇರವಾಗಿ ಸಂಪರ್ಕಿಸುವ ವಿಮಾನಯಾನ ಸೇವೆ (Flight) ಆರಂಭವಾಗಿದೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನಕ್ಕೆ ಜಲಫಿರಂಗಿಯ ಮೂಲಕ ಆಕರ್ಷಕ ಸ್ವಾಗತ ನೀಡಲಾಯಿತು. ಮೊದಲ ದಿನವೇ ವಿಮಾನವು ಪ್ರಯಾಣಿಕರಿಂದ ಸಂಪೂರ್ಣ ಭರ್ತಿಯಾಗುವ ಮೂಲಕ ಈ ಸೇವೆಯು ಜನರಿಗೆ ಅನುಕೂಲಕರವಾಗಿದೆ ಎಂಬುದನ್ನ ತೋರ್ಪಡಿಸುವಂತಿತ್ತು.
ಹುಬ್ಬಳ್ಳಿ ಧಾರವಾಡ ಅವಳಿ ನಗರ ಹಾಗೂ ಇಡೀ ಉತ್ತರ ಕರ್ನಾಟಕ ಭಾಗದ ಜನರಿಗೆ ನೇರ ವಿಮಾನ ಸೇವೆ ಸಹಕಾರಿಯಾಗಲಿದ್ದು, ಜನರು ಇದರ ಲಾಭ ಪಡೆಯುವಂತೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಇದೇ ಸಂದರ್ಭದಲ್ಲಿ ಮನವಿ ಮಾಡಿದರು.
ಹುಬ್ಬಳ್ಳಿ ಹಾಗು ದೆಹಲಿಗೆ ನೇರ ವಿಮಾನ ಸೇವೆ ಒದಗಿಸಿದ ಬೆನ್ನಲ್ಲೆ ಹುಬ್ಬಳ್ಳಿಯಿಂದ ಪುಣೆಗೂ ನೇರ ವಿಮಾನ ಸೇವೆ ಒದಗಿಸುವ ಕುರಿತಂತೆ ಈ ಹಿಂದೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಿಮಾನಯಾನ ಸಚಿವರಿಗೆ ಪ್ರಸ್ತಾವನೆ ಸಲ್ಲಿಸಿದ್ದರು.
ಇಂದಿನಿಂದ ಹುಬ್ಬಳ್ಳಿಯಿಂದ ಪುಣೆಗೆ ನೇರವಾಗಿ ಸಂಪರ್ಕಿಸುವ ವಿಮಾನಯಾನ ಆರಂಭವಾಗಿದ್ದು, ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನಕ್ಕೆ ಜಲಫಿರಂಗಿಯ ಮೂಲಕ ಸ್ವಾಗತ ನೀಡಲಾಯಿತು.
ಮೊದಲ ದಿನವೇ ವಿಮಾನವು ಪ್ರಯಾಣಿಕರಿಂದ ಸಂಪೂರ್ಣ ಭರ್ತಿಯಾಗುವ ಮೂಲಕ ಈ ಸೇವೆಯು ಜನರಿಗೆ ಅನುಕೂಲಕರವಾಗಿದೆ ಎಂಬುದು ಖುಷಿಯ ಸಂಗತಿ.
— Pralhad Joshi (@JoshiPralhad) February 5, 2023
ಪ್ರಸ್ತಾವನೆಗೆ ಸ್ಪಂದಿಸಿ ವಿಮಾನಯಾನ ಸೇವೆ ಆರಂಭಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಹಾಗೂ ಕೇಂದ್ರ ವಿಮಾನಯಾನ ಸಚಿವರಾದ ಜ್ಯೋತಿರಾದಿತ್ಯ ಸಿಂಧಿಯಾ ಹಾಗೂ ವಿಮಾನಯಾನ ಸೇವೆ ಆರಂಭಿಸಿದ ಇಂಡಿಗೋ ಸಂಸ್ಥೆಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು ಅನಂತ ಧನ್ಯವಾದಗಳನ್ನ ಅರ್ಪಿಸಿದ್ದಾರೆ.
Published On - 5:12 pm, Mon, 6 February 23