ಹುಬ್ಬಳ್ಳಿ: ಡೆಪಾಸಿಟ್​ ಹಿಂದಿರುಗಿಸದ ಸರಸ್ವತಿ ಕೋ ಆಪ್​​ ಸೊಸೈಟಿಗೆ 11 ಲಕ್ಷ ರೂ ದಂಡ ವಿಧಿಸಿದ ಕೋರ್ಟ್​​

ದೂರಿನ ಬಗ್ಗೆ ಕೂಲಂಕಷವಾಗಿ ವಿಚಾರಣೆ ನಡೆಸಿದ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗವು ಠೇವಣಿ ಅವಧಿ ಮುಗಿದರೂ ದೂರುದಾರರ ಹಣ ಹಿಂದಿರುಗಿಸದೇ ಇರುವುದು ಗ್ರಾಹಕರ ರಕ್ಷಣಾ ಕಾಯ್ದೆ ಅಡಿ ಸೇವಾ ನ್ಯೂನ್ಯತೆ ಆಗುತ್ತದೆ ಅಂತಾ ಅಭಿಪ್ರಾಯಪಟ್ಟು ದೂರುದಾರರಿಗೆ ಅವರ ಠೇವಣಿ ಹಣ ರೂ. 10,50,756 ಮತ್ತು ಉಳಿತಾಯ ಖಾತೆಯಲ್ಲಿರುವ ರೂ.1,35,320 ಹಣವನ್ನು ನೀಡುವಂತೆ ಹುಬ್ಬಳ್ಳಿಯ ಸರಸ್ವತಿ ಕೋ ಆಪ್​​ ಸೊಸೈಟಿಗೆ ಆದೇಶ ನೀಡಿದೆ.

ಹುಬ್ಬಳ್ಳಿ: ಡೆಪಾಸಿಟ್​ ಹಿಂದಿರುಗಿಸದ ಸರಸ್ವತಿ ಕೋ ಆಪ್​​ ಸೊಸೈಟಿಗೆ 11 ಲಕ್ಷ ರೂ ದಂಡ ವಿಧಿಸಿದ ಕೋರ್ಟ್​​
ವಿಮೆ ತಿರಸ್ಕರಿಸಿದ ಅಂಚೆ ಇಲಾಖೆಗೆ 3.03 ಲಕ್ಷ ದಂಡ
Follow us
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Updated By: ಸಾಧು ಶ್ರೀನಾಥ್​

Updated on:Sep 02, 2023 | 7:36 PM

ಹುಬ್ಬಳ್ಳಿಯ ವಿಕಾಸ ನಗರದ ನಿವಾಸಿಗಳಾದ ಸುಲೋಚನಾ ಪೈ ಮತ್ತು ಶಾರದಾ ಪೈ ಅನ್ನುವವರು ಹುಬ್ಬಳ್ಳಿಯ ಕ್ವಾಯಿನ್ ರಸ್ತೆಯಲ್ಲಿರುವ ಸರಸ್ವತಿ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿಯ ಸದಸ್ಯರಾಗಿ ಖಾಯಂ ಠೇವಣಿ (Deposit) ಇಟ್ಟು ಉಳಿತಾಯ ಖಾತೆ ಹೊಂದಿದ್ದರು. ಅವರಿಬ್ಬರೂ ಈ ಸೊಸೈಟಿಯಲ್ಲಿ ಒಟ್ಟು ರೂ.10,50,756 ಮೊತ್ತದ ವಿವಿಧ ಠೇವಣಿಯನ್ನು ಒಂದು ವರ್ಷದ ಅವಧಿಗೆ ಇಟ್ಟಿದ್ದರು. ಜೊತೆಗೆ ಅವರ ಉಳಿತಾಯ ಖಾತೆಯಲ್ಲಿ ರೂ. 1,35,320/- ಹಣ ಇತ್ತು.

ಅವಧಿ ಮುಗಿದಿದ್ದರಿಂದ ಠೇವಣಿ ಹಣ ಮತ್ತು ತಮ್ಮ ಉಳಿತಾಯ ಖಾತೆಯಲ್ಲಿರುವ ಹಣ ಕೊಡುವಂತೆ ದೂರುದಾರರು ಹಲವು ಬಾರಿ ವಿನಂತಿಸಿದರೂ ಸೊಸೈಟಿಯವರು ಅವರ ಡೆಪಾಸಿಟ್​ ಹಣ ಮತ್ತು ಬಡ್ಡಿಯನ್ನು ಕೊಟ್ಟಿರಲಿಲ್ಲ. ಇದರಿಂದಾಗಿ ತಮಗೆ ಮೋಸವಾಗಿದೆ ಮತ್ತು ಸೊಸೈಟಿಯವರು ಗ್ರಾಹಕರ ರಕ್ಷಣಾ ಕಾಯ್ದೆ ಅಡಿ ಸೇವಾ ನ್ಯೂನ್ಯತೆ ಎಸಗಿದ್ದಾರೆಂದು ಹೇಳಿ, ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಧಾರವಾಡ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ (District Consumer Disputes Redressal Commission -DCDRC) ದೂರು ಸಲ್ಲಿಸಿದ್ದರು.

ದೂರಿನ ಬಗ್ಗೆ ಕೂಲಂಕಷವಾಗಿ ವಿಚಾರಣೆ ನಡೆಸಿದ ಆಯೋಗದ ಅಧ್ಯಕ್ಷ ಈಶಪ್ಪ ಭೂತೆ ಹಾಗೂ ಸದಸ್ಯರಾದ ವಿಶಾಲಾಕ್ಷಿ ಬೋಳಶೆಟ್ಟಿ ಮತ್ತು ಪ್ರಭು ಹಿರೇಮಠ, ಠೇವಣಿ ಅವಧಿ ಮುಗಿದರೂ ದೂರುದಾರರ ಹಣ ಹಿಂದಿರುಗಿಸದೇ ಇರುವುದು ಗ್ರಾಹಕರ ರಕ್ಷಣಾ ಕಾಯ್ದೆ ಅಡಿ ಸೇವಾ ನ್ಯೂನ್ಯತೆ ಆಗುತ್ತದೆ ಅಂತಾ ಅಭಿಪ್ರಾಯಪಟ್ಟು ತೀರ್ಪು ನೀಡಿದ್ದಾರೆ.

ದೂರುದಾರರಿಗೆ ಅವರ ಠೇವಣಿ ಹಣ ರೂ. 10,50,756 ಮತ್ತು ಉಳಿತಾಯ ಖಾತೆಯಲ್ಲಿರುವ ರೂ.1,35,320 ಹಣವನ್ನು ಅದರ ಮೇಲೆ ಶೇ. 9 ರಂತೆ ಠೇವಣಿ ಇಟ್ಟ ದಿನಾಂಕದಿಂದ ಲೆಕ್ಕ ಹಾಕಿ ತೀರ್ಪು ನೀಡಿದ ಒಂದು ತಿಂಗಳ ಒಳಗಾಗಿ ಹಿಂದಿರುಗಿಸುವಂತೆ ಆಯೋಗ ನಿರ್ದೇಶನ ನೀಡಿದೆ. ಜೊತೆಗೆ ದೂರುದಾರರು ಅನುಭವಿಸಿದ ಮಾನಸಿಕ ಹಿಂಸೆಗೆ 50 ಸಾವಿರ ರೂ ಪರಿಹಾರ ಮತ್ತು ಪ್ರಕರಣದ ಖರ್ಚುವೆಚ್ಚ ಅಂತಾ 10 ಸಾವಿರ ರೂ. ಈ ತೀರ್ಪು ನೀಡಿದ ಒಂದು ತಿಂಗಳೊಳಗಾಗಿ ನೀಡುವಂತೆ ಆಯೋಗ ಆದೇಶಿಸಿದೆ.

ಮತ್ತಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:34 pm, Sat, 2 September 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್