AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭರದಿಂದ ಸಾಗಿದೆ ರೈಲ್ವೆ ಡಬ್ಲಿಂಗ್ ಕಾಮಗಾರಿ: ಈ ರೈಲುಗಳ ಮಾರ್ಗ ಬದಲಾವಣೆಯಾಗಿದೆ, ಗಮನಿಸಿ

ಹುಬ್ಬಳ್ಳಿ: ಸೊಲ್ಲಾಪುರ ವಿಭಾಗದ ದೌಂಡ್-ಮನ್ಮಾಡ್ ವಿಭಾಗದ ವಿಸಾಪುರ-ಬೆಳವಂಡಿ ನಿಲ್ದಾಣಗಳ ಡಬ್ಲಿಂಗ್‌ಗೆ ಸಂಬಂಧಿಸಿದಂತೆ ಇಂಟರ್‌ಲಾಕ್ ಮಾಡದ ಕಾರಣ (non-interlocking working) ರೈಲುಗಳ ಮಾರ್ಗವನ್ನು ಬದಲಾಯಿಸಲಾಗಿದೆ ಎಂದು ಮಧ್ಯ ರೈಲ್ವೆ ಸೂಚನೆ ನೀಡಿದೆ.

ಭರದಿಂದ ಸಾಗಿದೆ ರೈಲ್ವೆ ಡಬ್ಲಿಂಗ್ ಕಾಮಗಾರಿ: ಈ ರೈಲುಗಳ ಮಾರ್ಗ ಬದಲಾವಣೆಯಾಗಿದೆ, ಗಮನಿಸಿ
ರೈಲ್ವೆ ಡಬ್ಲಿಂಗ್ ಕಾಮಗಾರಿ: ಈ ರೈಲುಗಳ ಮಾರ್ಗ ಬದಲಾವಣೆಯಾಗಿದೆ
TV9 Web
| Edited By: ಸಾಧು ಶ್ರೀನಾಥ್​|

Updated on: Nov 09, 2023 | 12:10 PM

Share

ಹುಬ್ಬಳ್ಳಿ: ಸೊಲ್ಲಾಪುರ ವಿಭಾಗದ ದೌಂಡ್-ಮನ್ಮಾಡ್ ವಿಭಾಗದ ವಿಸಾಪುರ-ಬೆಳವಂಡಿ ನಿಲ್ದಾಣಗಳ ಡಬ್ಲಿಂಗ್‌ಗೆ ಸಂಬಂಧಿಸಿದಂತೆ ಇಂಟರ್‌ಲಾಕ್ ಮಾಡದ ಕಾರಣ (non-interlocking working) ರೈಲುಗಳ ಮಾರ್ಗವನ್ನು ಬದಲಾಯಿಸಲಾಗಿದೆ ಎಂದು ಮಧ್ಯ ರೈಲ್ವೆ ಸೂಚನೆ ನೀಡಿದೆ. ರೈಲು ಸಂಖ್ಯೆ 12780 – ಹಜರತ್ ನಿಜಾಮುದ್ದೀನ್-ವಾಸ್ಕೋ ಡ ಗಾಮಾ ಗೋವಾ ಡೈಲಿ ಎಕ್ಸ್‌ಪ್ರೆಸ್ ಹಜರತ್ ನಿಜಾಮುದ್ದೀನ್‌ನಿಂದ ಹೊರಡುವುದನ್ನು ಮನ್ಮಾಡ್, ಇಗತ್‌ಪುರಿ, ಕಲ್ಯಾಣ್, ಪನ್ವೇಲ್, ಕರ್ಜತ್ ಮತ್ತು ಲೋನಾವಾಲಾ ನಿಲ್ದಾಣಗಳ ಮೂಲಕ ಓಡಿಸಲು ಡೈವರ್ಟ್​​​ ಮಾಡಲಾಗುತ್ತಿದೆ.

ಯಶವಂತಪುರದಿಂದ ಹೊರಡುವ ಯಶವಂತಪುರ-ಚಂಡೀಗಢ ಬೈ-ವೀಕ್ಲಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಅನ್ನು ಪುಣೆ, ಲೋನಾವಾಲಾ, ಪನ್ವೇಲ್, ಕಲ್ಯಾಣ್, ಇಗತ್‌ಪುರಿ ಮತ್ತು ಮನ್ಮಾಡ್ ನಿಲ್ದಾಣಗಳ ಮೂಲಕ ಡೈವರ್ಟ್​​​ ಮಾಡಲಾಗುತ್ತದೆ. ದಕ್ಷಿಣ ಮಧ್ಯ ರೈಲ್ವೆಯು ವಿಜಯವಾಡ ಮತ್ತು ಗುಂಟೂರು ವಿಭಾಗಗಳಲ್ಲಿ ಸುರಕ್ಷತೆಗೆ ಸಂಬಂಧಿಸಿದ ನಿರ್ವಹಣಾ ಕಾರ್ಯಗಳ ಕಾರಣದಿಂದ ಈ ಕೆಳಗಿನ ರೈಲು ಸೇವೆಗಳ ರದ್ದತಿ ಮತ್ತು ತಿರುವುಗಳಿಗೆ ಸೂಚನೆ ನೀಡಿದೆ.

ರೈಲು ನಂ. 17329 ಎಸ್‌ಎಸ್‌ಎಸ್ ಹುಬ್ಬಳ್ಳಿ-ವಿಜಯವಾಡ ಡೈಲಿ ಎಕ್ಸ್‌ಪ್ರೆಸ್ ಪ್ರಯಾಣವನ್ನು ನವೆಂಬರ್ 13 ರಿಂದ 19 ರವರೆಗೆ ರದ್ದುಗೊಳಿಸಲಾಗುತ್ತದೆ. ರೈಲು ನಂ. 17330 ಎಸ್‌ಎಸ್‌ಎಸ್ ಹುಬ್ಬಳ್ಳಿ ಡೈಲಿ ಎಕ್ಸ್‌ಪ್ರೆಸ್ ವಿಜಯವಾಡ- ಪ್ರಯಾಣವನ್ನು ನವೆಂಬರ್ 14 ರಿಂದ 20 ರವರೆಗೆ ರದ್ದುಗೊಳಿಸಲಾಗುತ್ತದೆ.

ರೈಲು ನಂ. 12509 SMVT ಬೆಂಗಳೂರಿನಿಂದ ಹೊರಡುವ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ (Sir M Visvesvaraya Terminal Bengaluru-Guwahati ) ಬೆಂಗಳೂರು-ಗುವಾಹಟಿ ಟ್ರೈ-ವೀಕ್ಲಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಅನ್ನು ವಿಜಯವಾಡ, ಗುಡಿವಾಡ, ಭೀಮಾವರಂ ಟೌನ್ ಮತ್ತು ನಿಡದವೋಲು ನಿಲ್ದಾಣಗಳ ಮೂಲಕ ನವೆಂಬರ್ 15 ಮತ್ತು 17 ರಂದು ಡೈವರ್ಟ್​​ ಮಾಡಲಾಗುತ್ತದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್