ಏನೇ ಅಡ್ಡಿ ಬಂದರೂ ಡಿಕೆ ಶಿವಕುಮಾರ್ ಸಿಎಂ ಆಗುವುದು ಖಚಿತ; ಭವಿಷ್ಯ ನುಡಿದ ವರೂರಿನ ಜೈನ ಮುನಿ

ಮಹಾಮಸ್ತಕಾಭಿಷೇಕ ಕಾರ್ಯಕ್ರಮದ ವೇದಿಕೆಯ ಮೇಲೆ ಮುಖ್ಯಮಂತ್ರಿ ಬದಲಾವಣೆ ಮಾತು ಕೇಳಿಬಂದಿದೆ. ಡಿ.ಕೆ. ಶಿವಕುಮಾರ್ ಮುಂದಿನ ಮುಖ್ಯಮಂತ್ರಿಯಾಗಬೇಕೆಂದು ಗುಣಧರನಂದಿ ಸ್ವಾಮೀಜಿ ಹೇಳಿದ್ದಾರೆ. ಜೈನರಿಗೆ ನಿಗಮ ಮಂಡಳಿ ಆಗಬೇಕು, ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಬೇಕು. ಇದೇ ನನ್ನ ಕನಸು ಎಂದು ಜೈನ ಮುನಿ ಹೇಳಿದ್ದಾರೆ.

ಏನೇ ಅಡ್ಡಿ ಬಂದರೂ ಡಿಕೆ ಶಿವಕುಮಾರ್ ಸಿಎಂ ಆಗುವುದು ಖಚಿತ; ಭವಿಷ್ಯ ನುಡಿದ ವರೂರಿನ ಜೈನ ಮುನಿ
Dk Shivakumar
Follow us
ಶಿವಕುಮಾರ್ ಪತ್ತಾರ್. ಹುಬ್ಬಳ್ಳಿ
| Updated By: ಸುಷ್ಮಾ ಚಕ್ರೆ

Updated on:Jan 21, 2025 | 10:12 PM

ಹುಬ್ಬಳ್ಳಿ: ಕರ್ನಾಟಕದ ಉಪಮುಖ್ಯಮಂತ್ರಿಯಾಗಿರುವ ಡಿ.ಕೆ. ಶಿವಕುಮಾರ್‌ ಸಿಎಂ ಆಗಬೇಕೆನ್ನುವುದು ನನ್ನ ಕನಸು ಎಂದು ಹುಬ್ಬಳ್ಳಿಯ ವರೂರಿನ ಗುಣಧರನಂದಿ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ. ವರೂರಿನ ನವಗ್ರಹ ತೀರ್ಥಂಕರ ಮಹಾಮಸ್ತಕಾಭಿಷೇಕ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಡಿ.ಕೆ ಶಿವಕುಮಾರ್ ಸಿಎಂ ಆಗುವುದು, ಜೈನ ನಿಗಮ ಸ್ಥಾಪನೆ ಇವರೆಡೂ ನನ್ನ ಕನಸು. ಎಷ್ಟೇ ಕಾಟ ಇರಲಿ, ಎಷ್ಟೇ ಸಂಕಟ ಇರಲಿ ಡಿಕೆಶಿ ಸಿಎಂ ಆಗುತ್ತಾರೆ. ಇದು ನಮ್ಮ ಭವಿಷ್ಯವಾಣಿ ಎಂದ ವರೂರಿನ ಗುಣಧರನಂದಿ ಸ್ವಾಮೀಜಿ ಹೇಳಿದ್ದಾರೆ.

ಮುಂದಿನ ಅವಧಿಗೆ ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಡಿ.ಕೆ. ಶಿವಕುಮಾರ್‌ ಕಾಂಗ್ರೆಸ್‌ ಪಕ್ಷಕ್ಕೆ ಕಷ್ಟಪಟ್ಟಷ್ಟು ಯಾರೂ ಪಟ್ಟಿಲ್ಲ. ಕಾಂಗ್ರೆಸ್‌ಗೆ ಮರುಜೀವ ಕೊಟ್ಟಿದ್ದಾರೆ, ಇದನ್ನು ಕರ್ನಾಟಕ ಜನರು ಮರೆತಿಲ್ಲ. ಡಿ.ಕೆ. ಶಿವಕುಮಾರ್‌ ಸಿಎಂ ಆಗುವುದು ನಮ್ಮ ಕನಸು ಎಂದು ಜೈನಮುನಿ ಗುಣಧರನಂದಿ ಸ್ವಾಮೀಜಿ ಹೇಳಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ ತವರು ವರುಣಾ ಕ್ಷೇತ್ರದ ಗ್ರಾಮಸ್ಥರಿಂದ ಕಾಂಗ್ರೆಸ್ ಮುಖಂಡರಿಗೆ ಬಹಿಷ್ಕಾರ

ಜೈನ ಸಮುದಾಯಕ್ಕೆ ಕೊಡುವುದು ಗೊತ್ತು, ಬೇಡುವುದು ಗೊತ್ತಿಲ್ಲ. ಆದರೆ, ಈಗ ನಿಗಮ ಮಂಡಳಿಗೆ ಬೇಡುತ್ತಿದ್ದೇವೆ, ಇದು ಸಮಾಜದ ಅಪೇಕ್ಷೆ ಎಂದು ಹುಬ್ಬಳ್ಳಿಯ ವರೂರಿನ ಗುಣಧರನಂದಿ ಸ್ವಾಮೀಜಿ ಹೇಳಿದ್ದಾರೆ. ಈ ವೇಳೆ ವೇದಿಕೆ ಮೇಲಿನ ಎಲ್ಲಾ ಆಚಾರ್ಯರು, ಜೈನಮುನಿಗಳು ಕೈ ಮೇಲೆ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಆಶೀರ್ವದಿಸಿದ್ದಾರೆ.

ಈ ವೇಳೆ ವರೂರಿನ ನವಗ್ರಹ ತೀರ್ಥಂಕರ ಮಹಾಮಸ್ತಕಾಭಿಷೇಕ ಕಾರ್ಯಕ್ರಮದಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​, ನಾನು ಸಿಎಂ ಆಗಲೆಂದು ಗುಣಧರನಂದಿ ಶ್ರೀಗಳು ಆಶೀರ್ವದಿಸಿದ್ದಾರೆ. ನೀವು ಆಶೀರ್ವಾದಿಸಿದಾಗಲೆಲ್ಲಾ ನಮಗೆ ಏಟು ಕೊಡುತ್ತಿರುತ್ತಾರೆ. ವಿನಯ್ ಗುರೂಜಿ ಈ ಮಾತನ್ನು ಮೊದಲೇ ಹೇಳಿದ್ದರು ಎಂದು ಜೈನ ಮುನಿಗಳ ಆಶೀರ್ವಾದಕ್ಕೆ ಡಿಕೆಶಿ ಮಾರ್ಮಿಕ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: ಆರ್​ಎಸ್​ಎಸ್​ ಸಿದ್ಧಾಂತವನ್ನು ಬಿಜೆಪಿ ಭಾರತೀಯರ ಮೇಲೆ ಹೇರುತ್ತಿದೆ; ಸಿಎಂ ಸಿದ್ದರಾಮಯ್ಯ ಆರೋಪ

ಅಹಿಂಸೆ, ಸತ್ಯ, ತ್ಯಾಗಕ್ಕೆ ಮತ್ತೊಂದು ಹೆಸರು ಜೈನ ಧರ್ಮ. ಈ ಡಿಕೆಶಿ ನಿಮ್ಮ ಧರ್ಮದ ಜೊತೆ ಇರುತ್ತಾನೆ. ನನ್ನ ಮೇಲೆ ನಂಬಿಕೆ ಇಡಿ. ಜೈನ ಅಭಿವೃದ್ಧಿ ನಿಗಮ ಮಾಡಲು ಮನವಿ ಮಾಡಿದ್ದಾರೆ. ಈ ಬಗ್ಗೆ ಸಿಎಂ ಜೊತೆ ಮಾತನಾಡಿ, ಮುಂಬರುವ ಬಜೆಟ್​ನಲ್ಲಿಯೇ ರಚನೆ ಮಾಡಲು ಮನವಿ ಮಾಡ್ತೇನೆ. ಜೈನರಿಗೆ ಅಲ್ಪಸಂಖ್ಯಾತ ಸ್ಥಾನಮಾನ ಕೊಟ್ಟಿದ್ದು ನಮ್ಮ ಕಾಂಗ್ರೆಸ್. ಮನಮೋಹನ್ ಸಿಂಗ್ ಪ್ರಧಾನಿ ಇದ್ದಾಗ ಅಲ್ಪಸಂಖ್ಯಾತ ಸ್ಥಾನಮಾನ ಕೊಡಲಾಗಿದೆ. ನಮ್ಮ ಸರ್ಕಾರ, ನಮ್ಮ ಪಕ್ಷ ನಿಮ್ಮ ಜೊತೆಗೆ ಇರುತ್ತದೆ ಎಂದು ಡಿಕೆ ಶಿವಕುಮಾರ್ ಭರವಸೆ ನೀಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:12 pm, Tue, 21 January 25

ದರೋಡೆಕೋರನಿಂದ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನ
ದರೋಡೆಕೋರನಿಂದ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನ
ವರಿಷ್ಠರು ದೆಹಲಿಗೆ ತೆರಳಬೇಕಿದ್ದರಿಂದ ಬೇಗ ಭಾಷಣ ಮುಗಿಸಿದ ಸಿದ್ದರಾಮಯ್ಯ
ವರಿಷ್ಠರು ದೆಹಲಿಗೆ ತೆರಳಬೇಕಿದ್ದರಿಂದ ಬೇಗ ಭಾಷಣ ಮುಗಿಸಿದ ಸಿದ್ದರಾಮಯ್ಯ
ಅಮೆರಿಕದಲ್ಲಿನ ಅಭಿಮಾನಿಗಳ ಎದುರು ಹಾಡು ಹೇಳಿ ರಂಜಿಸಿದ ಶಿವರಾಜ್​ಕುಮಾರ್
ಅಮೆರಿಕದಲ್ಲಿನ ಅಭಿಮಾನಿಗಳ ಎದುರು ಹಾಡು ಹೇಳಿ ರಂಜಿಸಿದ ಶಿವರಾಜ್​ಕುಮಾರ್
ಪ್ರಧಾನ ಮಂತ್ರಿ ಹುದ್ದೆಯನ್ನೇ ಸೋನಿಯಾ ಗಾಂಧಿ ತ್ಯಾಗ ಮಾಡಿದ್ದರು: ಖರ್ಗೆ
ಪ್ರಧಾನ ಮಂತ್ರಿ ಹುದ್ದೆಯನ್ನೇ ಸೋನಿಯಾ ಗಾಂಧಿ ತ್ಯಾಗ ಮಾಡಿದ್ದರು: ಖರ್ಗೆ
ಎಐಸಿಸಿ ಕಟ್ಟಡಕ್ಕೆ ಗಾಂಧಿ ಭವನ ಅಂತ ಯಾಕೆ ಹೆಸರಿಟ್ಟಿಲ್ಲ? ಆರ್ ಅಶೋಕ
ಎಐಸಿಸಿ ಕಟ್ಟಡಕ್ಕೆ ಗಾಂಧಿ ಭವನ ಅಂತ ಯಾಕೆ ಹೆಸರಿಟ್ಟಿಲ್ಲ? ಆರ್ ಅಶೋಕ
ಪಕ್ಷದ ವಿದ್ಯಮಾನಗಳಿಂದ ತಳಮಟ್ಟದ ಕಾರ್ಯಕರ್ತ ನೊಂದಿದ್ದಾನೆ: ಸುನೀಲ ಕುಮಾರ್
ಪಕ್ಷದ ವಿದ್ಯಮಾನಗಳಿಂದ ತಳಮಟ್ಟದ ಕಾರ್ಯಕರ್ತ ನೊಂದಿದ್ದಾನೆ: ಸುನೀಲ ಕುಮಾರ್
ಬಿಗ್​ಬಾಸ್ ಮನೆಯಲ್ಲಿ ‘ಯಜಮಾನ’, ಝಾನ್ಸಿ ಆವಾಜ್​ಗೆ ತಲೆತಗ್ಗಿಸಿದ ರಜತ್
ಬಿಗ್​ಬಾಸ್ ಮನೆಯಲ್ಲಿ ‘ಯಜಮಾನ’, ಝಾನ್ಸಿ ಆವಾಜ್​ಗೆ ತಲೆತಗ್ಗಿಸಿದ ರಜತ್
ಭೈರತಿ ಸುರೇಶ್ ಕಾರಿಗೆ ಎಸ್ಕಾರ್ಟ್ ವಾಹನ ಟಚ್: ಪೊಲೀಸರಿಗೆ ಬೈಯ್ದ ಸಚಿವ
ಭೈರತಿ ಸುರೇಶ್ ಕಾರಿಗೆ ಎಸ್ಕಾರ್ಟ್ ವಾಹನ ಟಚ್: ಪೊಲೀಸರಿಗೆ ಬೈಯ್ದ ಸಚಿವ
Video: ರಿಯಲ್ ಎಸ್ಟೇಟ್ ಬ್ರೋಕರ್​ ಕೆನ್ನೆಗೆ ಬಾರಿಸಿದ ಬಿಜೆಪಿ ಸಂಸದ
Video: ರಿಯಲ್ ಎಸ್ಟೇಟ್ ಬ್ರೋಕರ್​ ಕೆನ್ನೆಗೆ ಬಾರಿಸಿದ ಬಿಜೆಪಿ ಸಂಸದ
ನೆಲಮಂಗಲ: ಚೆನ್ನಾಗಿದ್ದ ರಸ್ತೆಯನ್ನು ಅಗೆದ ಜಮೀನ್ದಾರರು, ಗ್ರಾಮಸ್ಥರ ಆಕ್ರೋಶ
ನೆಲಮಂಗಲ: ಚೆನ್ನಾಗಿದ್ದ ರಸ್ತೆಯನ್ನು ಅಗೆದ ಜಮೀನ್ದಾರರು, ಗ್ರಾಮಸ್ಥರ ಆಕ್ರೋಶ