AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಬೇಡ, ನಮ್ಮ ವಿರೋಧವಿದೆ: ಎಐಎಂಐಎಂ ಜಿಲ್ಲಾಧ್ಯಕ್ಷ

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶನನ್ನ ಕೂರಿಸುತ್ತೇವೆ, ಯಾರು ವಿರೋಧ ಮಾಡುತ್ತಾರೆ ನೋಡುತ್ತೇವೆ ಅಂತ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಇದರ ಬೆನ್ನಲ್ಲೇ ಹೇಳಿಕೆ ನೀಡಿದ ಎಐಎಂಐಎಂ ಜಿಲ್ಲಾಧ್ಯಕ್ಷ, ಈದ್ಗಾ ಮೈದಾನದಲ್ಲಿ ಗಣೇಶ ಉತ್ಸವಕ್ಕೆ ಅನುಮತಿ ಬೇಡ, ಗ್ಲಾಸ್​ಹೌಸ್​ನಲ್ಲಿ ಆಚರಿಸಿ ಎಂದಿದ್ದಾರೆ.

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಬೇಡ, ನಮ್ಮ ವಿರೋಧವಿದೆ: ಎಐಎಂಐಎಂ ಜಿಲ್ಲಾಧ್ಯಕ್ಷ
ಎಐಎಂಐಎಂ ಜಿಲ್ಲಾಧ್ಯಕ್ಷ ನಜೀರ್ ಸಾಬ್ ಹೊನ್ಯಾಳ್ ಮತ್ತು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್
ಶಿವಕುಮಾರ್ ಪತ್ತಾರ್
| Edited By: |

Updated on: Aug 17, 2023 | 3:43 PM

Share

ಹುಬ್ಬಳ್ಳಿ, ಆಗಸ್ಟ್ 17: ಈದ್ಗಾ ಮೈದಾನದಲ್ಲಿ ಗಣೇಶನನ್ನ ಕೂರಿಸುತ್ತೇವೆ, ಯಾರು ವಿರೋಧ ಮಾಡುತ್ತಾರೆ ನೋಡುತ್ತೇವೆ ಅಂತ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ (Pramod Muthalik) ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಮಾತನಾಡಿದ ಎಐಎಂಐಎಂ (AIMIM) ಜಿಲ್ಲಾಧ್ಯಕ್ಷ ನಜೀರ್ ಸಾಬ್ ಹೊನ್ಯಾಳ್, ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ (Ganesh Chaturthi) ಮೊದಲಿನಿಂದಲೂ ವಿರೋಧ ಇದೆ. ಹೀಗಾಗಿ ಮೈದಾನದಲ್ಲಿ ಗಣೇಶ ಉತ್ಸವಕ್ಕೆ ಅನುಮತಿ ನೀಡುವುದು ಬೇಡ. ನಮ್ಮ ಪಕ್ಷ ಈದ್ಗಾ ಮೈದಾನದಲ್ಲಿ ಗಣೇಶ ಆಚರಣೆಗೆ ವಿರೋಧ ಮಾಡತ್ತದೆ ಎಂದಿದ್ದಾರೆ.

ಕಳೆದ ಬಾರಿ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ನೀಡಿತ್ತು. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ 11 ದಿನ ಅನುಮತಿ ಕೇಳುತ್ತಿದ್ದಾರೆ. ಮುಂದಿನ ಬಾರಿ ಯಾವುದೇ ಚುನಾವಣೆ ಇರಲ್ಲ, ಅನುಮತಿ ಕೇಳುವುದಿಲ್ಲ. ಈದ್ಗಾ ಮೈದಾನದಲ್ಲೇ ಯಾಕೆ ಗಣೇಶ ಉತ್ಸವ ಆಚರಣೆ ಮಾಡಬೇಕು. ಬೇರೆ ಕಡೆ ಇರುವ ಜಾಗದಲ್ಲಿ ಗಣೇಶ ಉತ್ಸವ ಆಚರಣೆ ಮಾಡಿಕೊಳ್ಳಲಿ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬುದ್ಧಿಜೀವಿಗಳಿಗೆ ಬೆದರಿಕೆ ಪತ್ರ ವಿಚಾರ; ಅವರಿಗೆ ರಕ್ಷಣೆ ಕೊಡುವ ಅಗತ್ಯವಿಲ್ಲವೆಂದ ಪ್ರಮೋದ್​ ಮುತಾಲಿಕ್

ಗ್ಲಾಸ್​ಹೌಸ್​ನಲ್ಲಿ ಗಣೇಶ ಉತ್ಸವ ಆಚರಣೆ ಮಾಡೋಣವೆಂದು ಹೇಳಿದ ನಜೀರ್, ಈದ್ಗಾ ಮೈದಾನದಲ್ಲೇ ಆಚರಣೆ ಮಾಡಬೇಕು ಎನ್ನುವುದು ಕೆಟ್ಟ ವಿಚಾರ ಎಂದರು. ವಿರೋಧಿಸಲು ಇದು ಪಾಕಿಸ್ತಾನ ಅಲ್ಲವೆಂದು ಮುತಾಲಿಕ್ ಹೇಳಿಕೆ ವಿಚಾರವಾಗಿ ಮಾತನಾಡಿದ ನಜೀರ್, ಇದು ಹಳೇ ಡೈಲಾಗ್, ವಿರೋಧಿಸಿದರೆ ನಮ್ಮನ್ನು ಪಾಕಿಸ್ತಾನಕ್ಕೆ ಕಳಿಸುತ್ತೀರಾ? ಪರ ಮಾತಾಡಿದವರನ್ನು ಅಫ್ಘಾನಿಸ್ತಾನಕ್ಕೆ ಕಳುಹಿಸುತ್ತೀರಾ ಎಂದು ಪ್ರಶ್ನಿಸಿದ ಅವರು, ನಮ್ಮ ಪಕ್ಷ ಈದ್ಗಾ ಮೈದಾನದಲ್ಲಿ ಗಣೇಶ ಆಚರಣೆಗೆ ವಿರೋಧ ಮಾಡತ್ತೆ ಎಂದರು.

ಈದ್ಗಾ ಮೈದಾನ, ಪಾಕಿಸ್ತಾನ ಅಥವಾ ಅಘ್ಗಾನಿಸ್ತಾನದಲಿಲ್ಲ. ಈ ಬಾರಿಯೂ ಈದ್ಗಾ ಮೈದಾನದಲ್ಲಿ ಗಣೇಶನನ್ನ ಕೂರಿಸುತ್ತೇವೆ ಎಂದ ಪ್ರಮೋದ್ ಮುತಾಲಿಕ್, ಇಲ್ಲಿ ಗಣೇಶನನ್ನು ಕೂರಿಸಲು ಯಾರು ವಿರೋಧ ಮಾಡುತ್ತಾರೆ ನೋಡುತ್ತೇವೆ ಎಂದು ಸವಾಲು ಹಾಕಿದ್ದರು.

ಅಲ್ಲದೆ, ನಮ್ಮ ದೇಶದಲ್ಲಿ ಗಣೇಶನನ್ನು ಕೂರಿಸಲು ವಿರೋಧ ಮಾಡಲಾಗದು. ನಾವು ಇಲ್ಲಿ ಅಲ್ಲಾಹ್​ನನ್ನು ಮತ್ತು ಏಸು ಕ್ರಿಸ್ತನ ಪ್ರಾರ್ಥನೆಗೆ ಅವಕಾಶ ಮಾಡಿಕೊಟ್ಟಿದ್ದೇವೆ. ಆದರೆ, ಗಣೇಶನನ್ನು ಕೂರಿಸಲು ಹೇಗೆ ವಿರೋಧ ಮಾಡುತ್ತೀರಿ? ಸಹನೆ ಮೀರಿ ಹೋಗಿದೆ. ಶಾಸ್ತ್ರೋತ್ತವಾಗಿ ಗಣೇಶನನ್ನು ಕೂರಿಸುತ್ತೇವೆ. ಈ ಬಗ್ಗೆ ಪಾಲಿಕೆಗೆ ಮನವಿ ಸಲ್ಲಿಸುತ್ತೇವೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?