AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹದಾಯಿ ವಿಚಾರದಲ್ಲಿ ಅನಗತ್ಯ ಗೊಂದಲ ಸೃಷ್ಟಿಸುವುದು ಬೇಡ: ಕಾಂಗ್ರೆಸ್ಸಿಗರ ಟೀಕೆಗಳಿಗೆ ತಲೆಕೆಡಿಸಿಕೊಳ್ಳುವುದಿಲ್ಲ ಎಂದ ಸಿಎಂ ಬೊಮ್ಮಾಯಿ

ಮಹದಾಯಿ ವಿಚಾರದಲ್ಲಿ ಅನಗತ್ಯ ಗೊಂದಲ ಸೃಷ್ಟಿಸುವುದು ಬೇಡ. ಆದರೆ ಕಾಂಗ್ರೆಸ್ ಯಾವ ಉದ್ದೇಶಕ್ಕೆ ಆರೋಪಿಸುತ್ತಿದೆ ಗೊತ್ತಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಮಹದಾಯಿ ವಿಚಾರದಲ್ಲಿ ಅನಗತ್ಯ ಗೊಂದಲ ಸೃಷ್ಟಿಸುವುದು ಬೇಡ: ಕಾಂಗ್ರೆಸ್ಸಿಗರ ಟೀಕೆಗಳಿಗೆ ತಲೆಕೆಡಿಸಿಕೊಳ್ಳುವುದಿಲ್ಲ ಎಂದ ಸಿಎಂ ಬೊಮ್ಮಾಯಿ
ಸಿಎಂ ಬೊಮ್ಮಾಯಿ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Jan 01, 2023 | 12:05 PM

Share

ಹುಬ್ಬಳ್ಳಿ: ಮಹದಾಯಿ (Mahadayi) ವಿಚಾರದಲ್ಲಿ ಅನಗತ್ಯ ಗೊಂದಲ ಸೃಷ್ಟಿಸುವುದು ಬೇಡ. ಡಿಪಿಆರ್​ಗೆ ಒಪ್ಪಿಗೆ ನೀಡಿರುವ ಆದೇಶದಲ್ಲಿ ಕೆಳಗಡೆ ಸಹಿ ಇದೆ. ಕಾಂಗ್ರೆಸ್ ಯಾವ ಉದ್ದೇಶಕ್ಕೆ ಆರೋಪಿಸುತ್ತಿದೆ ಗೊತ್ತಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಮಹದಾಯಿಗಾಗಿ ನಾವು ಹೋರಾಟ ಮಾಡಿದ್ವಿ, ಅವರೂ ಮಾಡಿದ್ದರು. ಈಗ ಹೋರಾಟಕ್ಕೆ ತಾರ್ಕಿಕ ಜಯ ಸಿಕ್ಕಿದೆ. 20-25 ವರ್ಷ ಹೋರಾಟಕ್ಕೆ ಫಲ ಸಿಕ್ಕಿದೆ. ಈ ವೇಳೆ ಲೋಪದೋಷ ಹುಡುಕುವುದು ಅವರ ಮನಸ್ಥಿತಿ ತೋರಿಸುತ್ತೆ. ಕಾಂಗ್ರೆಸ್​ ನಾಯಕರ ಟೀಕೆ ಟಿಪ್ಪಣಿಗಳ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. MOF ಕ್ಲಿಯರೆನ್ಸ್ ಬಳಿಕ ಟೆಂಡರ್ ಕರೆದು ಕಾಮಗಾರಿ ಆರಂಭಿಸುತ್ತೇವೆ ಎಂದು ಹೇಳಿದರು.

ಮೀಸಲಾತಿ ನೀಡಲು ಸಂವಿಧಾನಾತ್ಮಕವಾಗಿ ಯಾವುದೇ ತೊಡಕಿಲ್ಲ

ಇನ್ನು ಪಂಚಮಸಾಲಿ, ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿ ವಿಚಾರವಾಗಿ ಅವರು ಪ್ರತಿಕ್ರಿಯೆ ನೀಡಿದ್ದು, ಮೀಸಲಾತಿ ನೀಡಲು ಸಂವಿಧಾನಾತ್ಮಕವಾಗಿ ಯಾವುದೇ ತೊಡಕಿಲ್ಲ. ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಮಧ್ಯಂತರ ವರದಿ ಸಲ್ಲಿಸಿದೆ. ಆಯೋಗದ ಅಂತಿಮ ವರದಿಯಲ್ಲಿ ಎಲ್ಲವೂ ಸ್ಪಷ್ಟವಾಗಲಿದೆ. ಮೀಸಲಾತಿ ವಿಚಾರದಲ್ಲಿ ನಮ್ಮ ಸರ್ಕಾರದ ಉದ್ದೇಶ ಹೇಳಿದ್ದೇವೆ. ಅಂತಿಮ ವರದಿಯಲ್ಲಿ ಅಂಕಿ ಅಂಶಗಳ ಬಗ್ಗೆ ಮಾಹಿತಿ ನೀಡುತ್ತೇವೆ. ಮೀಸಲಾತಿ ಜಾರಿ ವಿಚಾರದಲ್ಲಿ ಸಂಬಂಧಪಟ್ಟವರ ಜತೆ ಚರ್ಚಿಸುತ್ತೇವೆ ಎಂದರು.

ಇದನ್ನೂ ಓದಿ: Reservation: ಚುನಾವಣೆ ಹೊತ್ತಲ್ಲಿ ಮೀಸಲಾತಿ ಅಸ್ತ್ರ ಪ್ರಯೋಗ, ಪ್ರಬಲ ಸಮುದಾಯಗಳನ್ನು ಎದುರು ಹಾಕಿಕೊಳ್ಳದೇ ಜಾಣ ನಡೆ ಇಟ್ಟ ಬಿಜೆಪಿ ಸರ್ಕಾರ

ಹಿಂದುಳಿದ ವರ್ಗದವರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳುತ್ತೇವೆ. ಕೆಲ ವರ್ಗದವರಿಗೆ ಶಿಕ್ಷಣ, ಉದ್ಯೋಗದಲ್ಲಿ ಹಿನ್ನಡೆಯಾಗಿರುವುದು ನಿಜ. ಅವರಿಗೆ ನ್ಯಾಯ ಕೊಡುವ ನಿಟ್ಟಿನಲ್ಲಿ ಮೀಸಲಾತಿ ಹೆಚ್ಚಳ ಮಾಡಲಾಗಿದೆ. ಬೇಕಾದರೆ ಸ್ಪಷ್ಟೀಕರಣ ಕೊಡುತ್ತೇವೆ, ಯಾರಿಗೂ ಅನ್ಯಾಯ ಮಾಡಲ್ಲ. ವಿರೋಧ ಪಕ್ಷದವರು ತಾವು ಅಧಿಕಾರದಲ್ಲಿದ್ದಾಗ ಬೇಡಿಕೆ ಈಡೇರಿಸಲಿಲ್ಲ. ಈಗ ನಾವು ಜಾರಿ ಮಾಡುತ್ತಿರುವುದುರಿಂದ ಅವರಿಗೆ ಸಮಸ್ಯೆಯಾಗುತ್ತಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ರಾಜ್ಯ ಸರ್ಕಾರ ಬಿಳಿ ತಲೆಗೆ ಕರಿಬಣ್ಣ ಬಳಿದಿದೆ-ವೀಣಾ ಕಾಶಪ್ಪನವರ್​

ಪಂಚಮಸಾಲಿ ಸಮುದಾಯಕ್ಕೆ 2ಡಿ ಮೀಸಲಾತಿ ಘೋಷಣೆ ವಿಚಾರವಾಗಿ ಬಾಗಲಕೋಟೆಯಲ್ಲಿ ಕೆಪಿಸಿಸಿ ಮಹಿಳಾ ಘಟಕದ ಉಪಾಧ್ಯಕ್ಷೆ ವೀಣಾ ಕಾಶಪ್ಪನವರ್​ ಅವರು ಮಾತನಾಡಿ, ರಾಜ್ಯ ಸರ್ಕಾರ ಬಿಳಿ ತಲೆಗೆ ಕರಿಬಣ್ಣ ಬಳಿದಿದೆ. 3ಬಿಯನ್ನೇ 2ಡಿ ಮಾಡಿದ್ದಾರೆ, ಪಂಚಮಸಾಲಿ ಸಮುದಾಯ ಒಪ್ಪಲ್ಲ. ಪಂಚಮಸಾಲಿ ಸಮುದಾಯ 2ಎ ಮೀಸಲಾತಿಗಾಗಿ ಹೋರಾಡುತ್ತಿದೆ. 2ಡಿಯಲ್ಲೇ ಮೀಸಲಾತಿ ಪ್ರಮಾಣ ಹೆಚ್ಚಿಸಿದ್ರೆ ನಮಗೆ ಸಂತೃಪ್ತಿ ಇದೆ. ಮೀಸಲಾತಿ ಪ್ರಮಾಣ ಕಡಿಮೆ ಮಾಡಿದ್ರೆ ಹೋರಾಟಕ್ಕೆ ನಿರ್ಧಾರ. ಮುಂದಿನ ಹೋರಾಟದ ಬಗ್ಗೆ ಬಸವ ಜಯಮೃತ್ಯುಂಜಯ ಸ್ವಾಮೀಜಿ ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು.

ಇದನ್ನೂ ಓದಿ: ಕಳಸಾ ಬಂಡೂರಿ ಯೋಜನೆಗೆ ಕೇಂದ್ರ ಹಸಿರು ನಿಶಾನೆ: ಉತ್ತರ ಕರ್ನಾಟಕ ಜನರಿಗೆ ಮೋದಿ ನೀಡಿದ ಕೊಡುಗೆ ಎಂದ ಬೊಮ್ಮಾಯಿ

ಉಳಿದ ಸಮುದಾಯದ ಬಗ್ಗೆ ನಾನು ಚರ್ಚೆ ಮಾಡಲ್ಲ. ನಮ್ಮ ಬೇಡಿಕೆ ಪಂಚಮಸಾಲಿ ಸಮುದಾಯವನ್ನು 2ಎ ಸೇರಿಸಿ ಅನ್ನೋದು. ಹೋರಾಟ ಶುರು ಮಾಡಿದಾಗ 2ಎ ಕೊಡುತ್ತೇವೆ ಅಂದಿದ್ರು. ಆ ವಿಶ್ವಾಸ, ನಿಲುವು ಇಟ್ಕೊಂಡು ಎರಡು ವರ್ಷ ಹೋರಾಟ ಮಾಡಿದ್ವಿ. ಅನ್ಯ ಸಮಾಜಗಳ ಬಗ್ಗೆ ನಾವು ಚರ್ಚೆ ಮಾಡಲು ಬಯಸಲ್ಲ. ಸರ್ಕಾರ ಮೇಲೆ ಗೌರವ ಒತ್ತು. ಆದ್ರೆ‌ 2ಡಿ ಅನೌನ್ಸ್ ಮಾಡಿ ಸರ್ಕಾರ ಆ ಗೌರವವನ್ನು ಚ್ಯುತಿಗೊಳಿಸಿದೆ. 2ಡಿ ಅಲ್ಲಿ ಪಂಚಮಸಾಲಿ ಸಮುದಾಯಕ್ಕೆ ಎಷ್ಟು ಪರ್ಸೆಂಟೇಜ್ ನೀಡುತ್ತೆ ಅನ್ನೋದನ್ನು ಘೋಷಿಸಬೇಕು. ಇಲ್ಲದೇ ಇದರೆ ಹೋರಾಟ ತೀವ್ರಗೊಳ್ಳುತ್ತೆ. ಇದರ ಛಾಟಿಯ ಬಿಸಿ  2023ರ ವಿಧಾನಸಭೆ ಚುನಾವಣೆಯಲ್ಲಿ ಅನುಭವಿಸಬೇಕಾಗುತ್ತೆ ಎಂದು ಕಿಡಿಕಾರಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.