AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dharwad Double Murder: ರಿಯಲ್ ಎಸ್ಟೇಟ್ ಉದ್ಯಮಿ ಸೇರಿ ಇಬ್ಬರ ಬರ್ಬರ ಹತ್ಯೆ, ಮನೆ ಎದುರೇ ಕೊಚ್ಚಿ ಕೊಲೆ

ಧಾರವಾಡದಲ್ಲಿ ಡಬಲ್ ಮರ್ಡರ್ ಆಗಿದೆ. ರಿಯಲ್ ಎಸ್ಟೇಟ್ ಉದ್ಯಮಿಯನ್ನು ಮನೆ ಮುಂದೆಯೇ ಕೊಚ್ಚಿ ಕೊಲೆ ಮಾಡಲಾಗಿದ್ದು ಕುಡಚಿ ನಿವಾಸದ ಅನತಿ ದೂರದಲ್ಲೇ ಮತ್ತೊಂದು ಶವ ಪತ್ತೆಯಾಗಿದೆ. ಕುಡಚಿ ಮನೆಯಿಂದಲೇ ಓಡಿ ಹೋಗಿ ಬೇರೆ ಜಾಗದಲ್ಲಿ ಪ್ರಾಣ ಬಿಟ್ಟಿದ್ದಾರೆ. ದಾರಿಯುದ್ದಕ್ಕೂ ರಕ್ತ ಚೆಲ್ಲಿದೆ.

Dharwad Double Murder: ರಿಯಲ್ ಎಸ್ಟೇಟ್ ಉದ್ಯಮಿ ಸೇರಿ ಇಬ್ಬರ ಬರ್ಬರ ಹತ್ಯೆ, ಮನೆ ಎದುರೇ ಕೊಚ್ಚಿ ಕೊಲೆ
ರಿಯಲ್ ಎಸ್ಟೇಟ್ ಉದ್ಯಮಿ ಮಹಮ್ಮದ್​ ಕುಡಚಿ
ಆಯೇಷಾ ಬಾನು
|

Updated on: May 26, 2023 | 7:02 AM

Share

ಧಾರವಾಡ: ರಿಯಲ್ ಎಸ್ಟೇಟ್ ಉದ್ಯಮಿ ಸೇರಿ ಇಬ್ಬರ ಬರ್ಬರ ಹತ್ಯೆಯಾಗಿರುವ ಅಘಾತಕಾರಿ ಘಟನೆ ಧಾರವಾಡ ನಗರದ ಕಮಲಾಪುರ ಹೊರವಲಯದಲ್ಲಿ ನಡೆದಿದೆ(Dharwad Double Murder). ರಿಯಲ್ ಎಸ್ಟೇಟ್ ಉದ್ಯಮಿ ಮಹಮ್ಮದ್​ ಕುಡಚಿ ಸೇರಿ ಇಬ್ಬರನ್ನು ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದು ಇದರಿಂದ ಧಾರವಾಡದಲ್ಲಿ(Dharwad)ಆತಂಕದ ವಾತಾವರಣ ನಿರ್ಮಾಣವಾಗಿದೆ.

ರಿಯಲ್ ಎಸ್ಟೇಟ್ ಉದ್ಯಮಿ ಮಹಮ್ಮದ್​ ಕುಡಚಿ ತಮ್ಮ ಮನೆ ಮುಂದೆ ಕುಳಿತಿದ್ದ ವೇಳೆ ದುಷ್ಕರ್ಮಿಗಳು ದಾಳಿ ನಡೆಸಿ ಮಚ್ಚಿನಿಂದ ಹಲ್ಲೆ ನಡೆಸಿ ಕೊಚ್ಚಿ ಕೊಲೆ ಮಾಡಿದ್ದಾರೆ. ಮಹಮ್ಮದ್​ ಕುಡಚಿ ಮನೆ ಮುಂದೆ ಕುಳಿತಿದ್ದಾಗ ದುಷ್ಕರ್ಮಿಗಳ ಗುಂಪು ಏಕಾಏಕಿ ದಾಳಿ ನಡೆಸಿ ಮನೆ ಎದುರೇ ಭೀಕರವಾಗಿ ಕೊಲೆ ಮಾಡಿದ್ದಾರೆ.

ಇದನ್ನೂ ಓದಿ: Kalaburagi News: ಹಾಡಹಗಲೇ ಬಸ್​ ಚಾಲಕನ ಹತ್ಯೆ; ಇಬ್ಬರು ಆರೋಪಿಗಳು ಅರೆಸ್ಟ್​, ಕೊಲೆಗೆ ಕಾರಣ ಕೇಳಿ ದಂಗಾದ ಪೋಲಿಸರು​

ರಕ್ತಸಿಕ್ತ ಸ್ಥಿತಿಯಲ್ಲಿ ಮತ್ತೊಂದು ಶವ ಪತ್ತೆ

ಇನ್ನು ಕುಡಚಿ ನಿವಾಸದ ಅನತಿ ದೂರದಲ್ಲೇ ಮತ್ತೊಂದು ಶವ ಪತ್ತೆಯಾಗಿದೆ. ರಕ್ತಸಿಕ್ತ ಸ್ಥಿತಿಯಲ್ಲಿ ಶವ ಸಿಕ್ಕಿದೆ. ಆತನ ಹೆಸರು ಇನ್ನೂ ತಿಳಿದುಬಂದಿಲ್ಲ. ಆತನೂ ಸಹ ಕುಡಚಿ ಮನೆಯಿಂದಲೇ ಓಡಿ ಹೋಗಿ ಬೇರೆ ಜಾಗದಲ್ಲಿ ಪ್ರಾಣ ಬಿಟ್ಟಿದ್ದಾರೆ. ದಾರಿಯುದ್ದಕ್ಕೂ ರಕ್ತ ಚೆಲ್ಲಿದೆ. ಘಟನಾ ಸ್ಥಳಕ್ಕೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ರಮಣಗುಪ್ತ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಧಾರವಾಡದ ಉಪನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ರಮಣಗುಪ್ತ, ಕಮಲಾಪುರ ಬಡಾವಣೆಯಲ್ಲಿ ಡಬಲ್ ಮರ್ಡರ್ ಆಗಿದೆ. ನಾನು‌ ಸೇರಿ ಹಿರಿಯ ಅಧಿಕಾರಿಗಳು ವೈಜ್ಞಾನಿಕ ತಳಹದಿಯಲ್ಲಿ ತನಿಖೆ ಮಾಡುತ್ತಿದ್ದೇವೆ. ಎಲ್ಲ ಆಯಾಮದಲ್ಲೂ ತನಿಖೆ ಆಗುತ್ತಿದೆ. ಪ್ರಕರಣ ಸಂಬಂಧ ಮೂರು ಮಾರಕಾಸ್ತ್ರಗಳು ಸಿಕ್ಕಿವೆ. ಆದಷ್ಟು ಬೇಗ ಆರೋಪಿಗಳನ್ನು ಪತ್ತೆ ಮಾಡಲಾಗುವುದು. ಇದಕ್ಕಾಗಿ ತನಿಖಾ ತಂಡವು ರಚನೆಯಾಗಿದೆ ಎಂದು ಮಾಹಿತಿ ನೀಡಿದರು.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!