AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2023ಕ್ಕೆ ಸಂಪೂರ್ಣ ವಿದ್ಯುತ್ ಚಾಲಿತ ರೈಲು ಸಂಚಾರ; ನೈಋತ್ಯ ರೈಲ್ವೆಯಿಂದ ಆಧುನೀಕರಣದತ್ತ ಚಿಂತನೆ

ಈಗಾಗಲೇ ಎಲೆಕ್ಟ್ರಿಕ್ ಕಾಮಗಾರಿ ಚುರುಕುಗೊಂಡಿದ್ದು, 2023 ಮಾರ್ಚ್ ಅಂತ್ಯದೊಳಗೆ ನೈಋತ್ಯ ರೈಲ್ವೆ ಸಂಪೂರ್ಣ ವಿದ್ಯುತ್ ಚಾಲಿತ ರೈಲುಗಳಾಗಿ ಪರಿವರ್ತನೆಗೊಳ್ಳಲಿದೆ. ಇದರಿಂದ ಇಂಧನದ ಬಹುದೊಡ್ಡ ಆರ್ಥಿಕ ಹೊರೆ ನೈಋತ್ಯ ರೈಲ್ವೆಗೆ ತಪ್ಪಲಿದೆ.

2023ಕ್ಕೆ ಸಂಪೂರ್ಣ ವಿದ್ಯುತ್ ಚಾಲಿತ ರೈಲು ಸಂಚಾರ; ನೈಋತ್ಯ ರೈಲ್ವೆಯಿಂದ ಆಧುನೀಕರಣದತ್ತ ಚಿಂತನೆ
ನೈಋತ್ಯ ರೈಲ್ವೆ
TV9 Web
| Updated By: preethi shettigar|

Updated on:Oct 13, 2021 | 10:14 AM

Share

ಹುಬ್ಬಳ್ಳಿ: ಪ್ರಯಾಣಿಕರಿಗೆ ಹಾಗೂ ಗ್ರಾಹಕರಿಗೆ ಉತ್ತಮ ಸೇವೆಯನ್ನು ನೀಡುವ ಮೂಲಕ ಹೆಸರುವಾಸಿಯಾಗಿರುವ ನೈಋತ್ಯ ರೈಲ್ವೆ ಈಗ ಮತ್ತಷ್ಟು ಆಧುನೀಕರಣದತ್ತ ಚಿಂತನೆ ನಡೆಸಿದ್ದು, ಈ ಚಿಂತನೆ ಪ್ರಯಾಣಿಕರ ಚಿಂತೆಯನ್ನು ದೂರ ಮಾಡಲಿದೆ. ಅಲ್ಲದೇ ಸಾಕಷ್ಟು ಪ್ರಮಾಣದಲ್ಲಿ ನೈಋತ್ಯ ರೈಲ್ವೆಗೆ ಆರ್ಥಿಕ ಹೊರೆ ತಗ್ಗಲಿದೆ. ಇಷ್ಟು ದಿನ ಡಿಸೇಲ್ ಮೂಲಕ ಚಲಿಸುತ್ತಿದ್ದ ರೈಲು ಇನ್ನು ಮುಂದೆ ಸಂಪೂರ್ಣ ವಿದ್ಯುತ್ ಚಾಲಿತ ರೈಲುಗಳಾಗಿ ಪರಿವರ್ತನೆ ಆಗುವ ಮೂಲಕ ಪರಿಸರ ಸಂರಕ್ಷಣೆಯಲ್ಲಿ ಪ್ರಮುಖ ಪಾತ್ರವಹಿಸಲಿವೆ.

ಈಗಾಗಲೇ ಎಲೆಕ್ಟ್ರಿಕ್ ಕಾಮಗಾರಿ ಚುರುಕುಗೊಂಡಿದ್ದು, 2023 ಮಾರ್ಚ್ ಅಂತ್ಯದೊಳಗೆ ನೈಋತ್ಯ ರೈಲ್ವೆ ಸಂಪೂರ್ಣ ವಿದ್ಯುತ್ ಚಾಲಿತ ರೈಲುಗಳಾಗಿ ಪರಿವರ್ತನೆಗೊಳ್ಳಲಿದೆ. ಇದರಿಂದ ಇಂಧನದ ಬಹುದೊಡ್ಡ ಆರ್ಥಿಕ ಹೊರೆ ನೈಋತ್ಯ ರೈಲ್ವೆಗೆ ತಪ್ಪಲಿದೆ.

ಈಗಾಗಲೇ ಕೊವಿಡ್ ಸಂದರ್ಭದಲ್ಲಿ ಕೊವಿಡ್ ಎಕ್ಸ್‌ಪ್ರೆಸ್‌, ವಿಶ್ವದ ಅತಿದೊಡ್ಡ ರೈಲ್ವೆ ಪ್ಲಾಟ್ ಫಾರಂ ಹಾಗೂ ಹಲವಾರು ಯೋಜನೆ ಮತ್ತು ಜನಪರ ಕಾರ್ಯದ ಮೂಲಕ ಜನರಿಗೆ ಉತ್ಕೃಷ್ಟ ಮಟ್ಟದ ಸಾರಿಗೆ ಸೇವೆಯನ್ನು ನೀಡುತ್ತ ಬಂದಿರುವ ರೈಲ್ವೆ 2023ರ ಹೊತ್ತಿಗೆ ಜೀರೋ ಕಾರ್ಬನ್ ಎಮಿಟರ್ ಚಿಂತನೆಯನ್ನು ನಡೆಸಿದ್ದು, ಪರಿಸರ ಸಂರಕ್ಷಣೆ ಬಹುದೊಡ್ಡ ಹೊಣೆಯನ್ನು ನೈಋತ್ಯ ರೈಲ್ವೆ ಹೊಂದಿದೆ. ಅದಕ್ಕೆ ತಕ್ಕನಾಗಿ ಕಾರ್ಯವೈಖರಿಯನ್ನು ಮೈಗೂಡಿಸಿಕೊಂಡಿದೆ.

2030ರ ಹೊತ್ತಿಗೆ ಭಾರತೀಯ ರೈಲ್ವೆ ಸಂಪೂರ್ಣವಾಗಿ ವಿದ್ಯುತ್ತೀಕರಣಗೊಳ್ಳಲಿದೆ. ಈ ನಿಟ್ಟಿನಲ್ಲಿ ನೈಋತ್ಯ ರೈಲ್ವೆ ಈಗಾಗಲೇ ಕಾರ್ಯ ಪ್ರವೃತ್ತವಾಗಿದ್ದು, 2023ರ ಹೊತ್ತಿಗೆ ನಮ್ಮ ವಿಭಾಗ ಸಂಪೂರ್ಣವಾಗಿ ವಿದ್ಯುತ್ತೀಕರಣಗೊಳ್ಳಲಿದೆ. ಇದರಿಂದ ಪರಿಸರ ಸಂರಕ್ಷಣೆ ಆಗಲಿದೆ ಎಂದು ನೈಋತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಅನೀಶ್ ಹೆಗ್ಡೆ ಹೇಳಿದ್ದಾರೆ.

ಒಟ್ಟಿನಲ್ಲಿ ಮೇಕ್ ಇನ್ ಇಂಡಿಯಾ ಯೋಜನೆಯಲ್ಲಿ ಈಗಾಗಲೇ ಎಲೆಕ್ಟ್ರಿಕ್ ರೈಲುಗಳು ಸಿದ್ಧವಾಗುತ್ತಿವೆ. ಅಲ್ಲದೇ ಎಲೆಕ್ಟ್ರಿಕ್ ಕಾಮಗಾರಿ ಕೂಡ ಪೂರ್ಣಗೊಳ್ಳುವ ಹಂತದಲ್ಲಿವೆ. ಈ ನಿಟ್ಟಿನಲ್ಲಿ ಕೂಡಲೇ ಎಲೆಕ್ಟ್ರಿಕ್ ಕಾಮಗಾರಿ ಪೂರ್ಣಗೊಂಡು ಭಾರತೀಯ ರೈಲ್ವೆಯ ಪರಿಸರ ಸಂರಕ್ಷಣೆ ಕನಸು ನನಸಾಗಲಿ ಎಂಬುವುದು ನಮ್ಮ ಆಶಯ.

ವರದಿ: ರಹಮತ್ ಕಂಚಗಾರ್

ಇದನ್ನೂ ಓದಿ: ವಿದ್ಯುತ್​ ವ್ಯತ್ಯಯ ತಪ್ಪಿಸಲು ಮಹತ್ವದ ಹೆಜ್ಜೆ; 24ಗಂಟೆಯೂ ಕಲ್ಲಿದ್ದಲು ಪೂರೈಕೆಗಾಗಿ ರೈಲು ಸಂಚಾರ

ರಾಮನಗರ, ಮಾಗಡಿ ಕಡೆಗೆ ನಮ್ಮ ಮೆಟ್ರೋ; 4ನೇ ಹಂತದಲ್ಲಿ ಬಿಡದಿಗೂ ಸಿಗಲಿದೆ ಮೆಟ್ರೋ ರೈಲು ಸಂಚಾರ ಭಾಗ್ಯ

Published On - 9:55 am, Wed, 13 October 21

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?