ಧಾರವಾಡದಲ್ಲಿ ಎಲೆಕ್ಟ್ರಾನಿಕ್ ಉತ್ಪಾದನಾ ಕ್ಲಸ್ಟರ್ ಸ್ಥಾಪನೆ; 18 ಸಾವಿರ ಉದ್ಯೋಗ ಸೃಷ್ಟಿ -ಪ್ರಲ್ಹಾದ್ ಜೋಶಿ

ಎಲೆಕ್ಟ್ರಾನಿಕ್ ಕ್ಷೇತ್ರದಲ್ಲಿ ಬಹು ಮುಖ್ಯ ಪಾತ್ರವನ್ನ ಈ ನೂತನ ಕ್ಲಸ್ಟರ್ ವಹಿಸಲಿದ್ದು, 18 ಸಾವಿರ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಮಾಹಿತಿ ಹಂಚಿಕೊಂಡಿದ್ದಾರೆ.

ಧಾರವಾಡದಲ್ಲಿ ಎಲೆಕ್ಟ್ರಾನಿಕ್ ಉತ್ಪಾದನಾ ಕ್ಲಸ್ಟರ್ ಸ್ಥಾಪನೆ; 18 ಸಾವಿರ ಉದ್ಯೋಗ ಸೃಷ್ಟಿ -ಪ್ರಲ್ಹಾದ್ ಜೋಶಿ
ಪ್ರಲ್ಹಾದ್ ಜೋಶಿ, ನರೇಂದ್ರ ಮೋದಿ
Follow us
ಆಯೇಷಾ ಬಾನು
|

Updated on:Mar 25, 2023 | 6:58 AM

ಧಾರವಾಡ ಜಿಲ್ಲೆಯಲ್ಲಿ ಎಲೆಕ್ಟ್ರಾನಿಕ್ ಉತ್ಪಾದನಾ ಕ್ಲಸ್ಟರ್ ಘಟಕ ಮಂಜೂರು ಮಾಡಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ನಗರದ ಹೊರವಲಯದಲ್ಲಿರುವ ಕೊಟ್ಟೂರು ಹಾಗೂ ಬೇಲೂರು ಕೈಗಾರಿಕಾ ಪ್ರದೇಶದಲ್ಲಿ ಈ ನೂತನ ಕ್ಲಸ್ಟರ್ ತಲೆ ಎತ್ತಲಿದೆ. ಎಲೆಕ್ಟ್ರಾನಿಕ್ ಕ್ಷೇತ್ರದಲ್ಲಿ ಬಹು ಮುಖ್ಯ ಪಾತ್ರವನ್ನ ಈ ನೂತನ ಕ್ಲಸ್ಟರ್ ವಹಿಸಲಿದ್ದು, 18 ಸಾವಿರ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಮಾಹಿತಿ ಹಂಚಿಕೊಂಡಿದ್ದಾರೆ.

ಕ್ಲಸ್ಟರ್ ನ ಸ್ಥಾಪನೆಗಾಗಿ ಕೇಂದ್ರ ಸರಕಾರದಿಂದ 179 ಕೋಟಿ ರೂಪಾಯಿ ಅನುದಾನ ಮೀಸಲಿಡಲಾಗಿದ್ದು ಅದರಲ್ಲಿ ಈಗಾಗಲೇ 89 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ. ಮುಂಬರುವ ದಿನಗಳಲ್ಲಿ ಕ್ಲಸ್ಟರ್ ಸುಮಾರು 1500 ಕೋಟಿಗೂ ಹೆಚ್ವು ಬಂಡವಾಳ ಹೂಡಿಕೆ ಆಕರ್ಷಿಸಲು ಅಂದಾಜಿಸಲಾಗಿದೆ.

ಇದನ್ನೂ ಓದಿ: PM Modi Karnataka Visit: ಇಂದು ರಾಜ್ಯದಲ್ಲಿ ಮೋದಿ ಹವಾ; ಹಲವು ಕಾರ್ಯಕ್ರಮಗಳಲ್ಲಿ ಭಾಗಿ

ಧಾರವಾಡ ಜಿಲ್ಲೆಯಲ್ಲಿ ಕ್ಲಸ್ಟರ್ ಸ್ಥಾಪನೆಗೆ ಅಧಿಸೂಚನೆ ಹೊರಡಿಸಿದ್ದಕ್ಕಾಗಿ ಪ್ರಧಾನಿ ಮೋದಿ ಅವರಿಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಧನ್ಯವಾದ ತಿಳಿಸಿದ್ದಾರೆ. ಅಲ್ಲದೇ ಯೋಜನೆಯನ್ನ ಧಾರವಾಡಕ್ಕೆ ಮಂಜೂರು ಮಾಡುವ ಪ್ರಸ್ತಾವನೆಗೆ ಸಹಕರಿಸಿದ ಕೇಂದ್ರ ರೈಲ್ವೇ ಸಚಿವ ಅಶ್ವೀನಿ‌ ವೈಷ್ಣವ್ ಹಾಗೂ ಕೇಂದ್ರ ರಾಜ್ಯಖಾತೆ ಐಟಿ ಸಚಿವ ರಾಜೀವ್ ಚಂದ್ರಶೇಖರ್ ಅವರಿಗೆ ಪ್ರಲ್ಹಾದ್ ಜೋಶಿ ಧನ್ಯವಾದ ತಿಳಿಸಿದ್ದಾರೆ.

ಹಲವು ಹಂತಗಳಲ್ಲಿ ಈ ಕ್ಲಸ್ಟರ್ ನ ಅನುಷ್ಠಾನಗೊಳ್ಳಲಿದ್ದು , ಜಿಲ್ಲೆಯ ಹಾಗೂ ರಾಜ್ಯದ ಪ್ರಗತಿಯಲ್ಲಿ ಬಹು ಮುಖ್ಯ ಪಾತ್ರ ವಹಿಸಲಿದೆ. ಬರುವ ದಿನಗಳಲ್ಲಿ ಎಲೆಕ್ಟ್ರಾನಿಕ್ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆಗಳಾಗಲಿದ್ದು, ಧಾರವಾಡ ಜಿಲ್ಲೆಗೆ ದೊರಕಿರುವ ಈ ಕ್ಲಸ್ಟರ್ ಬದಲಾವಣೆಯ ಈ ಪರ್ವದಲ್ಲಿ ತನ್ನ ವಿಶಿಷ್ಟ ಕೊಡುಗೆ ನೀಡಲಿದೆ ಎಂದು ಪ್ರಲ್ಹಾದ್ ಜೋಶಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ಐಟಿ ಹಬ್ ಎಂಬ ಖ್ಯಾತಿಯನ್ನು ಪಡೆದು ವಿಶ್ವದ ಗಮನ ಸೆಳೆದಿದೆ, ಬರುವ ದಿನಗಳಲ್ಲಿ ಧಾರವಾಡವು ಎಲೆಕ್ಟ್ರಾನಿಕ್ ಹಬ್ ಎಂದು ಗುರುತಿಸಿಕೊಂಡು ದೇಶದ ಕೀರ್ತಿ ಹೆಚ್ಚಿಸಲಿದೆ ಪ್ರಲ್ಹಾದ್ ಜೋಶಿ ಆಶಯ ವ್ಯಕ್ತಪಡಿಸಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 6:58 am, Sat, 25 March 23

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ