AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುರ್ತು ಕಾಮಗಾರಿ: ಮೇ 25, 26ರಂದು ಧಾರವಾಡದಲ್ಲಿ ವಿದ್ಯುತ್​ ಸರಬರಾಜಿನಲ್ಲಿ ವ್ಯತ್ಯಯ

ಮೇ. 25, 26 ರಂದು ಬೆಳಿಗ್ಗೆ 10 ಗಂಟೆಯಿಂದ ಸಾಯಂಕಾಲ 4 ಗಂಟೆಯವರೆಗೆ ಧಾರವಾಡದಲ್ಲಿ ವಿದ್ಯುತ್​ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಹೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ತುರ್ತು ಕಾಮಗಾರಿ: ಮೇ 25, 26ರಂದು ಧಾರವಾಡದಲ್ಲಿ ವಿದ್ಯುತ್​ ಸರಬರಾಜಿನಲ್ಲಿ ವ್ಯತ್ಯಯ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on:May 24, 2023 | 7:40 PM

Share

ಧಾರವಾಡ: ವ್ಯಾಪಿಯಲ್ಲಿ ಬರುವ 110/11 ಕೆ.ವಿ ತಡಸಿನಕೊಪ್ಪ ವಿದ್ಯುತ್ (Power supply) ವಿತರಣಾ ಕೇಂದ್ರದಲ್ಲಿ 1ನೇ ತ್ರೈಮಾಸಿಕ ತುರ್ತು ಪಾಲನಾ ಕಾಮಗಾರಿ ಕೈಗೊಳ್ಳಲಿರುವುದರಿಂದ ಮೇ. 26 ರಂದು ಬೆಳಿಗ್ಗೆ 10 ಗಂಟೆಯಿಂದ ಸಾಯಂಕಾಲ 4 ಗಂಟೆಯವರೆಗೆ ವಿದ್ಯುತ್​ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ತಿಳಿಸಿದೆ. ಸದರಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಆಗುವ ಎಲ್ಲಾ 11ಕೆವಿ ಮಾರ್ಗಗಳಲ್ಲಿ ವಿದ್ಯುತ್​ ಕಡಿತವಾಗಲಿದೆ.

ಎಲ್ಲಿಲ್ಲಿ ಪವರ್​ ಕಟ್?​

ಮೇ.26 ರಂದು ಬೆಳಿಗ್ಗೆ 10 ಗಂಟೆಯಿಂದ ಸಾಯಂಕಾಲ 4 ಗಂಟೆಯವರೆಗೆ ತಡಸಿನಕೊಪ್ಪ, ಜೋಗೆಲ್ಲಾಪುರ, ಇಟ್ಟಿಗಟ್ಟಿ, ಕೆ.ಹೆಚ್.ಬಿ, ಉದಯಗಿರಿ, ವನಸಿರಿ ನಗರ, ರಾಜಾಜಿ ನಗರ, ಸತ್ತೂರ ವಿಲೇಜ್, ಸತ್ತೂರ, ಆಶ್ರಯ ಕಾಲೋನಿ, ಎನ್.ಜಿ.ಇ.ಎಫ್, ಎಸ್.ಡಿ.ಎಮ್ ಮೆಡಿಕಲ್ ಕಾಲೇಜ್, ಎಸ್.ಡಿ.ಎಮ್ ಡೆಂಟಲ್ ಕಾಲೇಜ್, 2ಟಿಜ ಕೆ.ಹೆಚ್.ಬಿ ಹಂತ, ಐಐಐಟಿ, ಕೆ.ಐ.ಏ.ಡಿ.ಬಿ ಇಂಡಸ್ಟ್ರಿಯಲ್ ಏರಿಯಾ ಸತ್ತೂರ, ರಾಶಿಫಾರ್ಮ, ಏರ್, ನವಲೂರ ರೇಲ್ವೆ ಸ್ಟೇಶನ್, ಸಂಜೀವಿನಿ ಪಾರ್ಕ್, ಹುಬ್ಬಳ್ಳಿ-ಧಾರವಾಡ ಡ್ಯೂರೆಬಲ್ ಗೂಡ್ಸ್ (ಏಕಸ್), ಕೆಎಂಎಫ್ ರಾಯಾಪುರ, ಲೋಕಲ್ ರಾಯಾಪುರ ಮತ್ತು ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಇದನ್ನೂ ಓದಿ: Hubballi-Dharwad: ಹುಬ್ಬಳ್ಳಿ-ಧಾರವಾಡದಲ್ಲಿ ಕುಡಿಯುವ ನೀರಿಗೆ ತತ್ವಾರ, ಶಾಶ್ವತ ಪರಿಹಾರಕ್ಕೆ ನಿವಾಸಿಗಳ ಆಗ್ರಹ

ಅದರಂತೆ, ಧಾರವಾಡ ಗ್ರಾಮೀಣ ಉಪವಿಭಾಗ ವ್ಯಾಪಿಯಲ್ಲಿ ಬರುವ 33/11 ಕೆ.ವಿ ಅರವಟಗಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ 1ನೇ ತ್ರೈಮಾಸಿಕ ತುರ್ತು ಪಾಲನಾ ಕಾಮಗಾರಿಯನ್ನು ಕೈಗೊಳ್ಳಲಿದೆ.

ಇದನ್ನೂ ಓದಿ: Karnataka Assembly Election 2023: ನಿಜವಾಯಿತೆ ಮಣ್ಣಿನ ಗೊಂಬೆಗಳು ನುಡಿದ ಆ ಭವಿಷ್ಯ?

ಸದರಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಆಗುವ ಎಲ್ಲಾ 11ಕೆವಿ ಮಾರ್ಗಗಳಲ್ಲಿ ಮೇ.25 ರಂದು ಬೆಳಿಗ್ಗೆ 10 ಗಂಟೆಯಿಂದ ಸಾಯಂಕಾಲ 6 ಗಂಟೆಯವರೆಗೆ ಎಫ್ 2 ಅಂಬೊಲಿ, ಎಫ್ 3 ಹೊನ್ನಾಪುರ, ಎಫ್ 5 ಅರವಟಗಿ, ಎಫ್ 6 ಕುಂಬಾರಕೊಪ್ಪ, ಎಫ್ 7 ಶಿವನಾಗನೂರ್ ಪಿಡರ್ ಮತ್ತು ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಹೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:39 pm, Wed, 24 May 23

Follow Us
ಗಂಗಾಧರ​ ಬ. ಸಾಬೋಜಿ
ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್