AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿಯಲ್ಲೂ ಬ್ಯಾಂಕ್​ ದರೋಡೆಗೆ ಯತ್ನಿಸಿದ ಕಳ್ಳರು: ಖದೀಮರಿಗೆ ಬಲೆ ಬೀಸಿದ ಪೊಲೀಸ್​

ಕರ್ನಾಟಕದಲ್ಲಿ ಸಾಲು ಸಾಲು ದರೋಡೆ ಪ್ರಕರಣದಿಂದ ಜನರು ಬೆಚ್ಚಿಬೀಳುವಂತೆ ಮಾಡಿದೆ. ನಡೆದಿರುವ ದರೋಡೆಯಲ್ಲಿ ಇನ್ನೂ ಆರೋಪಿಗಳ ಸುಳಿವೇ ಸಿಕ್ಕಿಲ್ಲ. ಹೀಗಿರುವಾಗ ಹುಬ್ಬಳ್ಳಿಯ ನವನಗರದಲ್ಲಿರುವ ಕೆನರಾ ಬ್ಯಾಂಕ್ ಶಾಖೆಯಲ್ಲಿ ಖದೀಮರು ದರೋಡೆಗೆ ಯತ್ನಿಸಿರುವಂತಹ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಹುಬ್ಬಳ್ಳಿಯಲ್ಲೂ ಬ್ಯಾಂಕ್​ ದರೋಡೆಗೆ ಯತ್ನಿಸಿದ ಕಳ್ಳರು: ಖದೀಮರಿಗೆ ಬಲೆ ಬೀಸಿದ ಪೊಲೀಸ್​
ಹುಬ್ಬಳ್ಳಿಯಲ್ಲೂ ಬ್ಯಾಂಕ್​ ದರೋಡೆಗೆ ಯತ್ನಿಸಿದ ಕಳ್ಳರು: ಖದೀಮರಿಗೆ ಬಲೆ ಬೀಸಿದ ಪೊಲೀಸ್​
ಶಿವಕುಮಾರ್ ಪತ್ತಾರ್
| Edited By: |

Updated on:Jan 20, 2025 | 5:29 PM

Share

ಹುಬ್ಬಳ್ಳಿ, ಜನವರಿ 20: ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಸಾಲು ಸಾಲು ರಾಬರಿ (robbery), ಕಳ್ಳತನ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿವೆ. ಕೇವಲ ಒಂದೇ ಒಂದು ವಾರದಲ್ಲಿ 5 ದರೋಡೆ ಪ್ರಕರಣ ನಡೆದಿದ್ದು, ಇಡೀ ರಾಜ್ಯವೇ ಬೆಚ್ಚಿಬೀಳುವಂತೆ ಮಾಡಿದೆ. ಹೀಗಿರುವಾಗ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲೂ ಬ್ಯಾಂಕ್​ ದರೋಡೆಗೆ ಕಳ್ಳರು ಯತ್ನಿಸಿರುವಂತಹ ಘಟನೆ ನಡೆದಿದೆ. ಕಳ್ಳರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ನಿನ್ನೆ ರಾತ್ರಿ ಹುಬ್ಬಳ್ಳಿಯ ಎಪಿಎಂಸಿ‌ ಆವರಣದಲ್ಲಿರುವ ಕೆನರಾ‌ ಬ್ಯಾಂಕ್ ಶಾಖೆಯ ದರೋಡೆಗೆ ಖದೀಮರು ಯತ್ನಿಸಿದ್ದಾರೆ. ಬ್ಯಾಂಕ್​ನ ಶೆಲ್ಟರ್ ಬೀಗ ಮುರಿದು ಕನ್ನ ಹಾಕಲು ಯತ್ನಿಸಿದ್ದು, ಆದರೆ ವಿಫಲರಾಗಿದಾರೆ. ಸದ್ಯ ಬ್ಯಾಂಕ್​ ಸಿಬ್ಬಂದಿ ಶೆಲ್ಟರ್​ಗೆ ವೆಲ್ಡಿಂಗ್ ಮಾಡಿಸಿದ್ದಾರೆ. ಘಟನಾ ಸ್ಥಳಕ್ಕೆ ನವನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ದಾವಣಗೆರೆ ಎಸ್​ಬಿಐ ಬ್ಯಾಂಕ್​​ನ 13 ಕೋಟಿ ರೂ ಮೌಲ್ಯದ ಚಿನ್ನ ಕಳ್ಳತನ

ದಾವಣಗೆರೆ ಜಿಲ್ಲೆಯ ನ್ಯಾಮತಿಯ ನೆಹರು ರಸ್ತೆಯಲ್ಲಿ ಇರುವ ಎಸ್​ಬಿಐ ಬ್ಯಾಂಕ್​​ನಲ್ಲೂ ಕಳ್ಳತನ ನಡೆದಿದೆ. ಬರೋಬರಿ 13 ಕೋಟಿ ರೂಪಾಯಿ ಮೌಲ್ಯದ ಚಿನ್ನ ಕಳ್ಳತನವಾಗಿದೆ. ಕಳ್ಳತನವಾದ ದಿನ ಬ್ಯಾಂಕ್ ಸೇವಾ ಕೇಂದ್ರದ ಸಿಸಿ ಕ್ಯಾಮೆರಾ ಕೂಡ ಬಂದ್ ಆಗಿತ್ತು. ಇದು ಬ್ಯಾಂಕ್ ಪಕ್ಕದಲ್ಲಿಯೇ ಇರುವ ಬ್ಯಾಂಕಿನ ಸೇವಾ ಕೇಂದ್ರವಾಗಿದೆ. ಸೇವಾ ಕೇಂದ್ರದ ಬಳಿಯೇ ಬ್ಯಾಂಕಿನ ಕಿಡಕಿ ಮುರಿದು ಕಳ್ಳತನವೆಸಗಲಾಗಿದೆ.

ಇದನ್ನೂ ಓದಿ: ಮೈಸೂರು: ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು

ಇಡಿ ಬ್ಯಾಂಕ್ ತುಂಬ ಕಾರದ ಪುಡಿ ಹಾಕಿ ಸಾಕ್ಷಿ ನಾಶಕ್ಕೆ ಯತ್ನಿಸಿದ್ದಾರೆ. ಕೃತ್ಯಕ್ಕೆ ಬಳಸಿದ ಕಾರದ ಪುಡಿ ಹೊರ ರಾಜ್ಯಕ್ಕೆ ಸೇರಿದ ಕಂಪನಿಯದು ಎಂಬ ವಿಚಾರ ತನಿಖೆಯಿಂದ ಪತ್ತೆ ಆಗಿದೆ. ಅಕ್ಟೋಬರ್ 25 ರಾತ್ರಿ 8.10 ಕ್ಕೆ ಬ್ಯಾಂಕ್ ಬಾಗಿಲು ಮುಚ್ಚಲಾಗಿತ್ತು. ಅಕ್ಟೋಬರ್ 28ಕ್ಕೆ ಬೆಳಿಗ್ಗೆ 7.10 ಕ್ಕೆ ಬ್ಯಾಂಕ್ ಓಪನ್ ಮಾಡಲಾಗಿದೆ. ಅಕ್ಟೋಬರ್ 27 ರಂದು ರಾತ್ರಿ 11.45ಕ್ಕೆ ರಾತ್ರಿ ಮಾರುತಿ ವ್ಯಾನ್ ರೀತಿಯ ವಾಹನ ಬ್ಯಾಂಕ್​ನ ಮುಂದೆ ನಿಂತಿರುವುದು ಪೊಲೀಸ್ ತನಿಖೆಯಿಂದ ಪತ್ತೆ ಆಗಿದೆ. ಆದರೆ ಅಲ್ಲಿಂದ ಇಲ್ಲಿಯ ತನಕ ಆರೋಪಿಗಳ ಸುಳಿವು ಸಿಕ್ಕಿಲ್ಲ. ಇದರ ಬೆನ್ನಲ್ಲೇ ಉಳಿದ ಬ್ಯಾಂಕ್​​ ಎಚ್ಚೆತ್ತುಕೊಂಡಿದ್ದು, ಪೊಲೀಸರು ಕೂಡ ಅಲರ್ಟ್ ಆಗಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:28 pm, Mon, 20 January 25

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್