ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ದಾನ: ದುಃಖದ ನಡುವೆ ಕುಟುಂಬಸ್ಥರ ಮಾನವೀಯತೆ

ಮಕ್ಕಳನ್ನು ಬೈಕಿನಲ್ಲಿ ಕೂರಿಸಿಕೊಂಡು ಮಾರುಕಟ್ಟೆಯಿಂದ‌ ಮನೆ ಕಡೆಗೆ ವಾಪಸ್ ಆಗುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಧಾರವಾಡದಲ್ಲಿ ನಡೆದಿದೆ. ಘಟನೆಯಲ್ಲಿ ಮಕ್ಕಳಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಮೃತನ ಕಣ್ಣುಗಳನ್ನು ಕುಟುಂಬಸ್ಥರು ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ.

ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ದಾನ: ದುಃಖದ ನಡುವೆ ಕುಟುಂಬಸ್ಥರ ಮಾನವೀಯತೆ
ಅಪಘಾತದಲ್ಲಿ ಮೃತಪಟ್ಟ ಚನ್ನಬಸಪ್ಪ ಅವರ ಕಣ್ಣುಗಳನ್ನು ದಾನ ಮಾಡಿದ ಕುಟುಂಬಸ್ಥರು
Follow us
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Updated By: Rakesh Nayak Manchi

Updated on:Aug 21, 2023 | 5:23 PM

ಧಾರವಾಡ, ಆಗಸ್ಟ್ 21: ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣುಗಳನ್ನು ಕುಟುಂಬಸ್ಥರು ದಾನ ಮಾಡಿ ಮಾನವೀಯತೆ ಮೆರೆದ ಘಟನೆ ಧಾರವಾಡದಲ್ಲಿ (Dharwad) ನಡೆದಿದೆ. ಮಕ್ಕಳನ್ನು ಬೈಕಿನಲ್ಲಿ ಕೂರಿಸಿಕೊಂಡು ಮಾರುಕಟ್ಟೆಯಿಂದ‌ ಮನೆ ಕಡೆಗೆ ವಾಪಸ್ ಆಗುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ (Accident) ನಗರದ ಸಂಗೊಳ್ಳಿ ರಾಯಣ್ಣ ಬಡಾವಣೆಯ ನಿವಾಸಿ ಚೆನ್ನಬಸಪ್ಪ ಶಿವಪ್ಪ ಹುಲ್ಲಲ್ಲಿ (35) ಸಾವನ್ನಪ್ಪಿದ್ದರು. ಇವರ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದರು.

ಟಾಟಾ ಮಾರ್ಕೋಪೋಲ್ ಕಂಪನಿಯ ಉದ್ಯೋಗಿಯಾಗಿದ್ದ ಮೂಲತಃ ಲಕ್ಷ್ಮೇಶ್ವರದ‌ ನಿವಾಸಿ ಚೆನ್ನಬಸಪ್ಪ ಶಿವಪ್ಪ ಹುಲ್ಲಲ್ಲಿ ತನ್ನ ಇಬ್ಬರು ಮಕ್ಕಳನ್ನು ಬೈಕಿನಲ್ಲಿ ಕೂರಿಸಿಕೊಂಡು ಮಾರುಕಟ್ಟೆಯಿಂದ‌ ಮನೆ ಕಡೆಗೆ ಹೋಗುತ್ತಿದ್ದರು. ಈ ವೇಳೆ ತೇಜಸ್ವಿ ನಗರ ಬಡಾವಣೆ ಬಳಿ ಮುಂಭಾಗದಿಂದ ವೇಗವಾಗಿ ಬಂದ ಬೈಕ್ ಸವಾರ ಚೆನ್ನಬಸಪ್ಪ ಅವರ ಬೈಕ್‌ಗೆ ಡಿಕ್ಕಿ ಹೊಡೆದಿದ್ದಾನೆ. ಘಟನೆಯಲ್ಲಿ ಚೆನ್ನಬಸಪ್ಪ ಮತ್ತು ಇವರ ಮಕ್ಕಳಾದ‌ ಅಥರ್ವ (7), ಅಪೂರ್ವ (4) ಗಂಭೀರವಾಗಿ ಗಾಯಗೊಂಡಿದ್ದರು.

ಇದನ್ನೂ ಓದಿ: ಚಿಕ್ಕಮಗಳೂರು: ಶಾಸಕ ಶಿವಲಿಂಗೇಗೌಡ ಆಪ್ತನ ಕಾರು, ಬೈಕ್ ನಡುವೆ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ಸಾವು

ಕೂಡಲೇ ಗಾಯಾಳುಗಳನ್ನು ಎಸ್‌ಡಿಎಂ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಚೆನ್ನಬಸಪ್ಪ ಮೃತಪಟ್ಟಿದ್ದಾರೆ. ಘಟನೆಯಿಂದ ಕುಟುಂಬಸ್ಥರು ಅತೀವ ದುಃಖದಲ್ಲಿದ್ದರೂ ಚೆನ್ನಬಸಪ್ಪ ಅವರ ಆಸೆಯಂತೆ ಕಣ್ಣು ದಾನ ಮಾಡಲು ನಿರ್ಧರಿಸಿದರು. ಕೂಡಲೇ ಎಸ್​​ಡಿಎಂ ಆಸ್ಪತ್ರೆಗೆ ಕಣ್ಣು ದಾನದ ಕುರಿತು ಮಾಹಿತಿ ನೀಡಿದ್ದಾರೆ.

ಕುಟುಂಬಸ್ಥರು ಕೋರಿಕೆ ಮೇರೆಗೆ ಎಸ್​​ಡಿಎಂ ಆಸ್ಪತ್ರೆ ವೈದ್ಯರು ಚೆನ್ನಬಸಪ್ಪ ಅವರ ಕಣ್ಣುಗಳನ್ನು ಪಡೆದಿದ್ದಾರೆ. ಇಂತಹ ನೋವಿನ ಸಮಯದಲ್ಲಿಯೂ ಕಣ್ಣು ದಾನ ಮಾಡಿ ಮಾನವೀಯತೆ ಮೆರೆದ ಕುಟುಂಬಸ್ಥರ ಬಗ್ಗೆ ಪ್ರಶಂಸೆ ವ್ಯಕ್ತವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:21 pm, Mon, 21 August 23

ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ