AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಟ್ರಾಸಿಟಿ ಕೇಸ್ ದಾಖಲಿಸುವುದಾಗಿ ಬೆದರಿಕೆ: ಹೆದರಿ ಆತ್ಮಹತ್ಯೆಗೆ ಶರಣಾದ ರೈತ

ಇತ್ತೀಚೆಗೆ ಪೊಲೀಸ್ ವಿಚಾರಣೆ ಹಾಗು ಸುಳ್ಳು ಕೇಸಿಗೆ ಹೆದರಿ ಅಮಾಯಕರು ಪ್ರಾಣ ಕಳೆದುಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚತ್ತಲೇ ಇವೆ. ಅದರಂತೆ ಹುಬ್ಬಳ್ಳಿಯ ರೈತನೋರ್ವ, ಅಟ್ರಾಸಿಟಿ ಕೇಸಿಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇನ್ನೊಂದೆ ಯುವಕನೋರ್ವ ಕೃಷ್ಣಾ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಎರಡು ಪ್ರತ್ಯೇಕ ಘಟನೆಗಳ ವಿವರ ಈ ಕೆಳಗಿನಂತಿದೆ.

ಅಟ್ರಾಸಿಟಿ ಕೇಸ್ ದಾಖಲಿಸುವುದಾಗಿ ಬೆದರಿಕೆ: ಹೆದರಿ ಆತ್ಮಹತ್ಯೆಗೆ ಶರಣಾದ ರೈತ
ಸಂಜಯ್ಯಾ ಚಿಕ್ಕಮಠ
| Edited By: |

Updated on:Mar 07, 2026 | 11:04 PM

Share

ಹುಬ್ಬಳ್ಳಿ, (ಮಾರ್ಚ್ 07):  ಅಟ್ರಾಸಿಟಿ ಕೇಸ್ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದಕ್ಕೆ ಹೆದರಿ ರೈತನೋರ್ವ (Farmer) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿ (Hubballi) ತಾಲೂಕಿನ ಉಮಚಗಿ ಗ್ರಾಮದಲ್ಲಿ ನಡೆದಿದೆ. ನಿಂಗಪ್ಪ ಅಂಗಡಿ(48) ಮೃತ ರೈತ. ರಸ್ತೆ ವಿಚಾರವಾಗಿ ನಿಂಗಪ್ಪ ಗಲಾಟೆ ಮಾಡಿದ್ದು, ಈ ಸಂಬಂಧ ಗ್ರಾಮ ಪಂಚಾಯತಿ ಸದಸ್ಯರು ಅಟ್ರಾಸಿಟಿ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಇದರಿಂದ ಹೆದರಿ ನಿಂಗಪ್ಪ, ಜಮೀನಿನಲ್ಲಿ ಮರವೊಂದಕ್ಕೆ ನೇಣುಬಿಗಿದುಕೊಂಡು ಪ್ರಾಣಬಿಟ್ಟಿದ್ದಾನೆ.

ರಸ್ತೆ ಸಂಬಂಧ ಉಮಚಗಿ ಗ್ರಾಮದಲ್ಲಿ ಜಗಳವಾಗಿದ್ದು, ಈ ಸಂಬಂಧ ಗ್ರಾಮ ಪಂಚಾಯಿತಿ ಸದಸ್ಯರು, ನಿಂಗಪ್ಪ ನಡುವೆ ಗಲಾಟೆಯಾಗಿದೆ. ಬಳಿಕ ಪಂಚಾಯಿತಿ ಸದಸ್ಯರು, ಅಟ್ರಾಸಿಟಿ ಪ್ರಕರಣ ದಾಖಲಿಸುವುದಾಗಿ ನಿಂಗಪ್ಪಗೆ ಬೆದರಿಕೆ ಹಾಕಿದ್ದಾರೆ.  ಬಳಿಕ ಅಟ್ರಾಸಿಟಿ ಕೇಸ್ ಹಾಕುತ್ತಾರೆಂದು ಹೆದರಿ ನಿಂಗಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಮದು ತಿಳಿದುಬಂದಿದೆ.

ಇದನ್ನೂ ಓದಿ: 3 ದಿನದಿಂದ ಒಂದೇ ಸಾಂಬಾರು, ಗಂಡನ ಬೈಗುಳಕ್ಕೆ ದುರಂತ ಅಂತ್ಯಕಂಡ ಬೆಂಗಳೂರಿನ ಮಹಿಳೆ

ಕೃಷ್ಣಾ ನದಿಗೆ ಹಾರಿ ಯುವಕ ಆತ್ಮಹತ್ಯೆ

ಬಾಗಲಕೋಟೆ: ಯುವಕನೋರ್ವ ಜಂಬಗಿ ಸೇತುವೆಯಿಂದ ಕೃಷ್ಣಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಹುಲ್ಯಾಳ ಗ್ರಾಮದ ನಿವಾಸಿ ರಮೇಶ್ ಸೊರಗಾವಿ (25) ಆತ್ಮಹತ್ಯೆ ಮಾಡಿಕೊಂಡ ಯುವಕ. ನಿನ್ನೆಯಷ್ಟೇ (ಮಾರ್ಚ್ 06) ಸೇತುವೆ ಬಳಿ ಯುವಕನ ಬೈಕ್ ಮತ್ತು ಮೊಬೈಲ್ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದ್ದ, ಇದರ ಅನುಮಾನದ ಮೇಲೆ ಪೊಲೀಸ್ ಹಾಗೂ ಅಗ್ನಿ ಶಾಮಕ ಸಿಬ್ಬಂದಿ ನದಿಯಲ್ಲಿ ಹುಡುಕಾಡಿದಾಗ ಜಂಬಗಿ ಗ್ರಾಮದ ಬಳಿ ಶವ ಪತ್ತೆಯಾಗಿದೆ. ಆದ್ರೆ, ಅತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಜಮಖಂಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ತನಿಖೆ ಮುಂದುವರೆದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:39 pm, Sat, 7 March 26

Follow Us
ವ್ಯಾನ್ ಪುಡಿಪುಡಿ, ಮೈ ಜುಂ ಎನಿಸುವ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ವ್ಯಾನ್ ಪುಡಿಪುಡಿ, ಮೈ ಜುಂ ಎನಿಸುವ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ