ಕೊನೆಗೂ ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ಫಿಕ್ಸ್! ಆಯುಕ್ತರಿಂದ ಅಧಿಕೃತ ಘೋಷಣೆ

| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 15, 2023 | 10:40 PM

ಪಾಲಿಕೆ ಆಯುಕ್ತರು ಅನುಮತಿ ಕೊಡಲು ವಿಳಂಭ ಮಾಡುತ್ತಿದ್ದಾರೆ ಎಂದು ಆರೋಪಿಸಿ ಶಾಸಕ ಅರವಿಂದ ಬೆಲ್ಲದ್ ಮತ್ತು ಮಹೇಶ್ ಟೆಂಗಿನಕಾಯಿ ನೇತ್ರತ್ವದಲ್ಲಿ ಎರಡು ದಿನಗಳಿಂದ ಹೋರಾಟ ನಡೆಸಿದ್ದರು. ಇದೀಗ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ಫಿಕ್ಸ್ ಆಗಿದೆ.

ಕೊನೆಗೂ ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ಫಿಕ್ಸ್! ಆಯುಕ್ತರಿಂದ ಅಧಿಕೃತ ಘೋಷಣೆ
ಹುಬ್ಬಳ್ಳಿ
Follow us on

ಹುಬ್ಬಳ್ಳಿ, ಸೆ.15: ಹುಬ್ಬಳ್ಳಿಯ ಈದ್ಗಾ ಮೈದಾನ (Idgah Maidan)ದಲ್ಲಿ ಗಣೇಶೋತ್ಸವಕ್ಕೆ ಅವಕಾಶ ನೀಡುವಂತೆ ಮೇಯರ್ ಅವರು ಪಾಲಿಕೆ ಆಯುಕ್ತರಿಗೆ ಸೂಚಿಸಿದ್ದರು. ಈ ನಡುವೆ ಪಾಲಿಕೆ ಆಯುಕ್ತರು ಅನುಮತಿ ಕೊಡಲು ವಿಳಂಭ ಮಾಡುತ್ತಿದ್ದಾರೆ ಎಂದು ಆರೋಪಿಸಿ ಶಾಸಕ ಅರವಿಂದ ಬೆಲ್ಲದ್ ಮತ್ತು ಮಹೇಶ್ ಟೆಂಗಿನಕಾಯಿ ನೇತ್ರತ್ವದಲ್ಲಿ ಎರಡು ದಿನಗಳಿಂದ ಹೋರಾಟ ನಡೆಸಿದ್ದರು. ಇದೀಗ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ಫಿಕ್ಸ್ ಆಗಿದ್ದು, ಪಾಲಿಕೆ ಆಯುಕ್ತರು ಅಧಿಕೃತ ಘೋಷಣೆಯಾಗಿದೆ.

ಬಿಜೆಪಿ ಪ್ರತಿಭಟನೆ ಬೆನ್ನಲ್ಲೆ‌ ಗಣೇಶ ಉತ್ಸವಕ್ಕೆ ಅನುಮತಿ ಕೊಡಲು ನಿರ್ಧಾರ

ಹುಬ್ಬಳ್ಳಿ- ಧಾರವಾಡ‌ ಮಹಾನಗರ ಪಾಲಿಕೆ ಬಿಜೆಪಿ ಆಡಳಿತದಲ್ಲಿದೆ. ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಕಳೆದ ವರ್ಷ ಠರಾವು‌ ಪಾಸ್ ಮಾಡಿ ಗಣೇಶೊತ್ಸವಕ್ಕೆ ಅನುಮತಿ ನೀಡಲಾಗಿತ್ತು. ಅಂಜುಮನ್ ಸಂಸ್ಥೆ ಗಣೇಶೋತ್ಸವಕ್ಕೆ ಅವಕಾಶ ಕೊಡದಂತೆ ಹೈಕೋರ್ಟ್ ಮೊರೆ ಹೋಗಿತ್ತು. ಆದರೆ, ಮೈದಾನ ಪಾಲಿಕೆ ಆಸ್ತಿಯಾಗಿದ್ದು ಸಾರ್ವಜನಿಕ ಬಳಕೆಗೆ ಕೊಡಬಹುದು ಎಂದು ಕೋರ್ಟ್ ಆದೇಶಿಸಿತ್ತು. ಅರ್ಜಿ ತಿರಸ್ಕಾರ ಆದ ಹಿನ್ನಲೆ ಗಣೇಶ ಪ್ರತಿಷ್ಠಾಪನೆಗೆ ಅನುಮತಿ ಕೊಡಬೇಕೆಂದು ಬಿಜೆಪಿ ಶಾಸಕರು ಕಾರ್ಯಕರ್ತರು ಅನುಮತಿಗೆ ಪಟ್ಟು ಹಿಡದಿದ್ದರು. ಇನ್ನು ಕೆಲವೇ ಕ್ಷಣಗಳಲ್ಲಿ ಪಾಲಿಕೆ ಆಯುಕ್ತರಿಂದ ಅಧಿಕೃತ ಅನುಮತಿ ಆದೇಶ ಬಂದಿದೆ.

ಇದನ್ನೂ ಓದಿ:ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅನುಮತಿ; ಈಗಾಗಲೇ ಸಿದ್ದವಾದ ವಿನಾಯಕ

ಅವಕಾಶ ನೀಡಿದ ಬೆನ್ನಲ್ಲೇ ಈ ಕುರಿತು ಮಾತನಾಡಿದ  ಶಾಸಕ ಮಹೇಶ್ ಟೆಂಗಿನಕಾಯಿ ‘ ಕಾಂಗ್ರೆಸ್ ಹಿಂಬಾಗಿಲಿನಿಂದ ಅಂಜುಮನ್ ಸಂಸ್ಥೆ ಮೂಲಕ ಕೋರ್ಟ್ ರೀಟ್ ಅರ್ಜಿ ಸಲ್ಲಿಸಿದೆ. ಕೊನೆ ಕ್ಷಣದಲ್ಲಿಯಾದ್ರೂ ಸರ್ಕಾರ ಎಚ್ಚೆತ್ತುಕೊಂಡು ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನೀಡಿದೆ. ಮುಂದೆ ಕೂಡ ಹಿಂದೂ ಹಬ್ಬಗಳ ಆಚರಣೆಗೆ ಅಡೆತಡೆಗಳ ಒಡ್ಡಬಾರದು. ನ್ಯಾಯಾಲಯ ಅತ್ಯುತ್ತಮ ತೀರ್ಪು ಕೊಟ್ಟಿದೆ, ನಮಗೆ ದೊಡ್ಡ ಜಯ ಸಿಕ್ಕಿದೆ. ಈದ್ಗಾ ಮೈದಾನದಲ್ಲಿ ವಿಜ್ರಂಭಣೆಯಿಂದ ಹಬ್ಬ ಆಚರಣೆ ಮಾಡುತ್ತೇವೆ. ಮೂರು ದಿನ ಅನುಮತಿ ಕೊಟ್ಟಿದೆ. ನಾವು ಮೂರು ದಿನ ಅತ್ಯಂತ ಸಡಗರದಿಂದ ಹಬ್ಬ ಆಚರಣೆ ಮಾಡ್ತೀವಿ ಎಂದು ಹೇಳಿದರು.

ಇನ್ನು ಕಳೆದ ಹುಬ್ಬಳ್ಳಿಯ ಚೆನ್ನಮ್ಮ ವೃತ್ತದ ಬಳಿಯಿರುವ ಈದ್ಗಾ ಮೈದಾನದಲ್ಲಿ ಕಳೆದ ವರ್ಷದಿಂದ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗುತ್ತಿದೆ. ಈದ್ಗಾ ಮೈದಾನ ಪಾಲಿಕೆಯ ಆಸ್ತಿ. ಇನ್ನೊಂದೆಡೆ ಅಂಜುಮನ್ ಸಂಸ್ಥೆ ಮತ್ತೆ ಕೋರ್ಟ್ ಮೊರೆ ಹೋಗಿತ್ತು. ಈ ನಡುವೆ ಪಾಲಿಕೆ ಆಯುಕ್ತರು ಅನುಮತಿ ಕೊಡಲು ವಿಳಂಭ ಮಾಡುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡರು ಪ್ರತಿಭಟನೆ ಮಾಡಿದ್ದರು. ಇದಕ್ಕೆ ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಸಾಥ್ ನೀಡಿದ್ರು. ಪಾಲಿಕೆ ಆಯುಕ್ತರ ಕಚೇರಿ ಎದುರು ಲೋಹದ ಗಣೇಶ ಮೂರ್ತಿ ಇಟ್ಟು ಧರಣಿ ನಡೆಸಿದ್ದು, ಇದೀಗ ಫಲ ಸಿಕ್ಕಂತಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:17 pm, Fri, 15 September 23