AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

NWKRTC ಕೈ ಸುಡುತ್ತಿರುವ ಚಿಗರಿ ಬಸ್​​ಗಳು: ಸಂಸ್ಥೆಗೆ ಪ್ರತಿ ತಿಂಗಳು ಎರಡೂವರೆ ಕೋಟಿ ನಷ್ಟ!

Chigari BRTS Buses: ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳ ನಡುವೆ ಸಂಚರಿಸುವ 'ಚಿಗರಿ' ಬಿಆರ್‌ಟಿಎಸ್ ಎಸಿ ಬಸ್‌ಗಳು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಆರ್ಥಿಕವಾಗಿ ಭಾರಿ ಹೊರೆಯಾಗಿ ಪರಿಣಮಿಸಿವೆ. ಸಂಸ್ಥೆಗೆ ಪ್ರತಿ ತಿಂಗಳು ಕೋಟ್ಯಂತರ ರೂಪಾಯಿ ನಷ್ಟವಾಗುತ್ತಿದ್ದು, ಈ ಬಗ್ಗೆ ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆಯಾದರೂ, ಈವರೆಗೂ ಯಾವುದೇ ಕ್ರಮ ಆಗಿಲ್ಲ ಎನ್ನಲಾಗಿದೆ.

NWKRTC ಕೈ ಸುಡುತ್ತಿರುವ ಚಿಗರಿ ಬಸ್​​ಗಳು: ಸಂಸ್ಥೆಗೆ ಪ್ರತಿ ತಿಂಗಳು ಎರಡೂವರೆ ಕೋಟಿ ನಷ್ಟ!
ಚಿಗರಿ ಬಸ್​​ಗಳುImage Credit source: Tv9 Kannada
ಸಂಜಯ್ಯಾ ಚಿಕ್ಕಮಠ
| Edited By: |

Updated on: Aug 04, 2026 | 8:32 PM

Share

ಮುಖ್ಯಾಂಶಗಳು

  • ಭಾರಿ ನಷ್ಟಕ್ಕೆ ಕಾರಣವಾದ ಚಿಗರಿ ಬಸ್​​ಗಳ ಓಡಾಟ
  • NWRTCಗೆ ಪ್ರತಿ ತಿಂಗಳು 2.5 ಕೋಟಿ ರೂ. ನಷ್ಟ
  • ಕಿಲೋ ಮೀಟರ್​​ಗೆ 80 ರೂ. ವೆಚ್ಚ, 50 ರೂ. ಆದಾಯ!

ಹುಬ್ಬಳ್ಳಿ, ಆಗಸ್ಟ್​​ 04: ದಕ್ಷಿಣ ಭಾರತದಲ್ಲಿಯೇ ಮೊದಲ ಯೋಜನೆ ಅನ್ನೋ ಖ್ಯಾತಿಯನ್ನು ಪಡೆದಿರುವ ಬಿಆರ್​​ಟಿಎಸ್​​ ಅಡಿ ಹುಬ್ಬಳ್ಳಿ-ಧಾರವಾಡ ನಡುವೆ ಸಂಚರಿಸುವ ಚಿಗರಿ ಬಸ್​​ಗಳಲ್ಲಿ ಪ್ರತಿನಿತ್ಯ ಸಾವಿರಾರು ಮಂದಿ ಪ್ರಯಾಣ ಮಾಡುತ್ತಾರೆ. ಹುಬ್ಬಳ್ಳಿ ರೈಲ್ವೇ ನಿಲ್ದಾಣದಿಂದ ಧಾರವಾಡ ಹೊಸ ಬಸ್ ನಿಲ್ದಾಣದ ವರಗೆ ಸಂಪರ್ಕ ಕಲ್ಲಿಸುವ ಈ ಬಸ್​​ಗೆ ಬರೋಬ್ಬರಿ 22.5 ಕಿ.ಮೀ. ಪ್ರತ್ಯೇಕ ರಸ್ತೆ ಕೂಡ ಕಲ್ಪಿಸಲಾಗಿದೆ. ಆದರೆ ಇದೇ BRTS ಚಿಗರಿ ಬಸ್​​ಗಳಿಂದ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಪ್ರತಿ ತಿಂಗಳು ಎರಡೂವರೆ ಕೋಟಿ ಲಾಸ್ ಆಗುತ್ತಿದೆಯಂತೆ. ಆದಾಯ ಮತ್ತು ಖರ್ಚಿಗೂ ಹೆಚ್ಚಿನ ವ್ಯತ್ಯಾಸವಾಗುತ್ತಿರುವದರಿಂದ ಸಂಸ್ಥೆಗೆ ಪ್ರತಿ ತಿಂಗಳು ಹೆಚ್ಚುವರಿ ಹೊರೆ ಬೀಳುತ್ತಿದೆ ಎನ್ನಲಾಗಿದೆ.

ಒಂದು ಕಿಲೋ ಮೀಟರ್​​ಗೆ 80 ರೂಪಾಯಿ ಖರ್ಚಾದ್ರೆ, ಆದಾಯ ಸರಿಸುಮಾರು ಐವತ್ತು ರೂಪಾಯಿ ಬರ್ತಿದೆಯಂತೆ. ಅಂದ್ರೆ ಕಿಲೋ ಮೀಟರ್​​ಗೆ ಸರಿಸುಮಾರು 30 ರೂಪಾಯಿ ಲಾಸ್ ಆಗುತ್ತಿದೆ. ಹೀಗಾಗಿ ನಷ್ಟವಾಗುತ್ತಿರುವ ಹಣವನ್ನು ನಗರಾಭಿವೃದ್ದಿ ಇಲಾಖೆ ಭರಿಸುವಂತೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅನೇಕ ಬಾರಿ ಮನವಿ ಮಾಡಿಕೊಂಡಿದೆಯಂತೆ. 2018ರಿಂದ ಇಲ್ಲಿಯವರಗೆ ನಗರಾಭಿವೃದ್ಧಿಇಲಾಖೆ NWKRTCಗೆ 150 ಕೋಟಿಗೂ ಹೆಚ್ಚಿನ ಹಿಂಬಾಕಿ ಹಣ ಬಾಕಿ ನೀಡಬೇಕಿದೆ. ಈ ಬಗ್ಗೆ ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆಯಾದರೂ, ಈವರೆಗೂ ಯಾವುದೇ ಕ್ರಮ ಆಗಿಲ್ಲ ಎನ್ನಲಾಗಿದೆ.

ಇದನ್ನೂ ಓದಿ: KSRTC, BMTC ಸೇರಿದಂತೆ 4 ನಿಗಮಗಳ ಬಸ್ ಟಿಕೆಟ್ ‌ದರ ಏರಿಕೆ ಫಿಕ್ಸ್: ಎಷ್ಟು, ಯಾವಾಗಿನಿಂದ?

2018ರಲ್ಲಿ ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿತ್ತು. ಅಂದಿನಿಂದ ಪ್ರತಿನಿತ್ಯ ನೂರು ಚಿಗರಿ ಹೆಸರಿನ ಎಸಿ ಬಸ್​​ಗಳು ಹುಬ್ಬಳ್ಳಿ-ಧಾರವಾಡ ನಡುವೆ ಸಂಚಾರ ಮಾಡುತ್ತಿವೆ. ಇನ್ನು ರಸ್ತೆ ಸೇರಿದಂತೆ ಕೆಲ ನಿರ್ವಹಣೆಯನ್ನು BRTS ಮಾಡಿದ್ರೆ, ಬಸ್​​ಗಳನ್ನು ಓಡಿಸೋದು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ. ಲಾಸ್​​ ಜೊತೆಗೆಗೆ ಬಸ್​​ನಲ್ಲಿ ಇತ್ತೀಚೆಗೆ ತಾಂತ್ರಿಕ ಸಮಸ್ಯೆಗಳೂ ಹೆಚ್ಚಿದ್ದು, ಎಲ್ಲೆಂದರಲ್ಲಿ ಕೆಟ್ಟುನಿಲ್ಲುತ್ತಿವೆ. ಅಪಘಾತಗಳೂ ಹೆಚ್ಚಿರುವ ಕಾರಣ ಜನ ಸಾಮಾನ್ಯರಿಂದಲೂ ಈ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಗಣಪತಿ ಮೆರವಣಿಗೆಗೆ ಇರುವ ಕಂಡೀಷನ್​​, ಈದ್​ ಮಿಲಾದ್​ಗೆ ಯಾಕಿಲ್ಲ?: ಅಶೋಕ್​
ಗಣಪತಿ ಮೆರವಣಿಗೆಗೆ ಇರುವ ಕಂಡೀಷನ್​​, ಈದ್​ ಮಿಲಾದ್​ಗೆ ಯಾಕಿಲ್ಲ?: ಅಶೋಕ್​
ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ
ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ
ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ಪಕ್ಕದ ರಾಜ್ಯದಿಂದ ವಿದ್ಯತ್ ಖರೀದಿ ಅನಿವಾರ್ಯತೆ ಸೃಷ್ಟಿ: ಸಿಎಂ ಡಿಕೆಶಿ
ಪಕ್ಕದ ರಾಜ್ಯದಿಂದ ವಿದ್ಯತ್ ಖರೀದಿ ಅನಿವಾರ್ಯತೆ ಸೃಷ್ಟಿ: ಸಿಎಂ ಡಿಕೆಶಿ