ಚುನಾವಣೆ ಭಾಷಣದ ವೇಳೆ ಎಡವಟ್ಟು; ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಎಫ್‌ಐಆರ್ ದಾಖಲು
ಲೋಕಸಭಾ ಚುನಾವಣೆ ಕಾವು ಜೋರಾಗಿದ್ದು, ಈ ಮಧ್ಯೆ ಚುನಾವಣೆ ಭಾಷಣದ ವೇಳೆ ವಿಭಿನ್ನ ವರ್ಗಗಳ ಮಧ್ಯೆ ದ್ವೇಷ ಭಾವನೆ ಉಂಟು ಮಾಡುವ ಹೇಳಿಕೆ ಆರೋಪದ ಹಿನ್ನಲೆ ದಿಂಗಾಲೇಶ್ವರ ಸ್ವಾಮೀಜಿ(Dingaleshwar Swamiji)ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ.
ಧಾರವಾಡ, ಮೇ.04: ಲೋಕಸಭಾ ಚುನಾವಣೆ ಕಾವು ಜೋರಾಗಿದ್ದು, ಈ ಮಧ್ಯೆ ಚುನಾವಣೆ ಭಾಷಣದ ವೇಳೆ ವಿಭಿನ್ನ ವರ್ಗಗಳ ಮಧ್ಯೆ ದ್ವೇಷ ಭಾವನೆ ಉಂಟು ಮಾಡುವ ಹೇಳಿಕೆ ಆರೋಪದ ಹಿನ್ನಲೆ ದಿಂಗಾಲೇಶ್ವರ ಸ್ವಾಮೀಜಿ(Dingaleshwar Swamiji)ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ. ಹೌದು, ಧಾರವಾಡ(Dharwad) ಜಿಲ್ಲೆಯ ನವಲಗುಂದ ಠಾಣೆಯಲ್ಲಿ ಚುನಾಚಣಾಧಿಕಾರಿಗಳು ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಲಾಗಿದೆ.
ಘಟನೆ ವಿವರ
ನವಲಗುಂದ ಮಾರ್ಕೆಟ್ನಲ್ಲಿ ನಡೆದಿದ್ದ ಸ್ವಾಭಿಮಾನಿ ಮತದಾರರ ಸಮಾವೇಶದಲ್ಲಿ ಮಾತನಾಡಿದ್ದ ಸ್ವಾಮೀಜಿ, ‘ಭಸ್ಮ ಹೋಗಿ ಕುಂಕುಮ ಬಂತು ಹಾಗೂ ಭಂಡಾರ ಹೋಗಿ ಕುಂಕುಮ ಬಂತು. ಶರಣು ಶರಣಾರ್ಥಿ ಹೋಗಿ ಹರಿ ಓಂ ಬಂತು ಎಂದು ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಈ ಆರೋಪದಡಿ ದಿಂಗಾಲೇಶ್ವರ ಸ್ವಾಮೀಜಿ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.
ಇನ್ನು ಕಳೆದ ಏ.09ರಂದು ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಪ್ರಲ್ಹಾದ್ ಜೋಶಿ ವಿರುದ್ಧ ದಿಂಗಾಲೇಶ್ವರ ಸ್ವಾಮೀಜಿ ನೀಡುತ್ತಿರುವ ಕಾಮೆಂಟ್ ಗಳ ಬಗ್ಗೆ ಮಾತಾಡಿದ್ದ ಶಾಸಕ ಯತ್ನಾಳ್, ‘ಅವರ ಮೂಲಕ ಯಾರು ಜೋಶಿ ಅವರ ವಿರುದ್ಧ ಹೇಳಿಕೆಗಳನ್ನು ನೀಡಿಸುತ್ತಿದ್ಧಾರೆ ಎಂದು ಚೆನ್ನಾಗಿ ಗೊತ್ತಿದೆ. ಆದರೆ, ದೇಶದ ಜನರಿಗೆ ನರೇಂದ್ರ ಮೋದಿಯವರು ಪುನಃ ಪ್ರಧಾನ ಮಂತ್ರಿ ಅಗುವುದು ಬೇಕಿದೆ. ಹಾಗಾಗಿ ಯಾರೇನೇ ಅಪಪ್ರಚಾರ ಮಾಡಿದರೂ ಜೋಶಿ ಗೆಲ್ಲುತ್ತಾರೆ ಎಂದಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:49 pm, Sat, 4 May 24