ಧಾರವಾಡ: ಜಲ ಜೀವನ ಯೋಜನೆ ಪೈಪ್‌ಗಳಿಗೆ ಬೆಂಕಿ; ಸುಮಾರು 1 ಕೋಟಿ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಯೋಜನೆ ಇದಾಗಿದ್ದು, ಗ್ರಾಮದ ಹೊರಭಾಗದಲ್ಲಿ ಸಂಗ್ರಹಿಸಿಡಲಾಗಿದ್ದ ಪೈಪ್‌ಗಳು ಸದ್ಯ ಬೆಂಕಿಗಾಹುತಿಯಾಗಿದೆ.

ಧಾರವಾಡ: ಜಲ ಜೀವನ ಯೋಜನೆ ಪೈಪ್‌ಗಳಿಗೆ ಬೆಂಕಿ; ಸುಮಾರು 1 ಕೋಟಿ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮ
1 ಕೋಟಿ ರೂಪಾಯಿ ಮೌಲ್ಯದ ಪೈಪ್ಗಳು ಸುಟ್ಟು ಕರಕಲಾಗಿವೆ
Follow us
TV9 Web
| Updated By: preethi shettigar

Updated on:Feb 26, 2022 | 1:29 PM

ಧಾರವಾಡ: ಜಲ ಜೀವನ ಯೋಜನೆ (jal jeevan mission) ಪೈಪ್‌ಗಳಿಗೆ ಬೆಂಕಿ ತಗುಲಿದ್ದು, ಸುಮಾರು 1 ಕೋಟಿ ರೂಪಾಯಿ ಮೌಲ್ಯದ ಪೈಪ್​ಗಳು ಸುಟ್ಟು ಕರಕಲಾಗಿವೆ. ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದ ಬಳಿ ಈ ಘಟನೆ ನಡೆದಿದೆ. ಇನ್ನೂ ಈ ವೇಳೆ ಅಲ್ಲಿಯೇ ಇದ್ದ ಕೆಲವು ಯಂತ್ರೋಪಕರಗಳು ಕೂಡ ಭಸ್ಮವಾಗಿದೆ. ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಯೋಜನೆ ಇದಾಗಿದ್ದು, ಗ್ರಾಮದ ಹೊರಭಾಗದಲ್ಲಿ ಸಂಗ್ರಹಿಸಿಡಲಾಗಿದ್ದ ಪೈಪ್‌ಗಳು(Pipes) ಸದ್ಯ ಬೆಂಕಿಗಾಹುತಿಯಾಗಿದೆ (Fire). ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದ್ದು, ಧಾರವಾಡ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇತ್ತೀಚಿಗೆ ಗ್ರಾಮೀಣ ಪ್ರದೇಶದಲ್ಲಿ ಜಲ ಜೀವನ ಯೋಜನೆಯಡಿ ಎಲ್ಲ ಕಡೆ ಪೈಪ್ ಲೈನ್ ಅಳವಡಿಸಲಾಗುತ್ತಿದೆ. ಪ್ರತಿ ಮನೆಗೂ ದಿನದ 24 ಗಂಟೆ ನೀರು ಪೂರೈಸುವ ಉದ್ದೇಶದಿಂದ ಈ ಯೋಜನೆಯನ್ನು ಕೇಂದ್ರ ಸರಕಾರ ಜಾರಿಗೆ ತಂದಿದೆ. ಈ ಯೋಜನೆಯಡಿ ನಲ್ಲಿಯ ಸಂಪರ್ಕ ಪಡೆದವರು ನೀರಿನ ಬಳಕೆಯ ಆಧಾರದ ಮೇಲೆ ಬಿಲ್ ಪಾವತಿ ಮಾಡಬೇಕು. ಈ ಯೋಜನೆಯ ಕಾಮಗಾರಿ ಎಲ್ಲ ಕಡೆಗಳಲ್ಲಿ ಜೋರಾಗಿ ನಡೆದಿದೆ. ಇಂಥ ಯೋಜನೆಗಾಗಿ ಸಂಗ್ರಹಿಸಿಟ್ಟಿದ್ದ ಕೋಟ್ಯಾಂತರ ರೂಪಾಯಿ ಮೌಲ್ಯದ ಪೈಪುಗಳಿಗೆ ಬೆಂಕಿ ತಗುಲಿ, ಸಂಪೂರ್ಣವಾಗಿ ಸುಟ್ಟು ಹೋದ ಘಟನೆ ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದಲ್ಲಿ ಈಗಾಗಲೇ ಈ ಯೋಜನೆಗಾಗಿ ಪೈಪ್ ಲೈನ್ ಅಳವಡಿಸುವ ಕಾರ್ಯ ಭರದಿಂದ ಸಾಗಿತ್ತು. ಇನ್ನು ಕೂಡ ಅನೇಕ ಕಡೆಗಳಲ್ಲಿ ಪೈಪ್ ಲೈನ್ ಅಳವಡಿಸುವ ಕೆಲಸ ನಡೆದಿತ್ತು. ಇದೇ ಕಾರಣಕ್ಕೆ ಗ್ರಾಮದ ಹೊರ ಭಾಗದಲ್ಲಿರುವ ಎಪಿಎಂಸಿ ಬಳಿಯ ಕಟ್ಟಡದ ಪಕ್ಕದಲ್ಲಿ ಸುಮಾರು ಒಂದು ಕೋಟಿ ರೂಪಾಯಿ ಮೌಲ್ಯದ ಪೈಪ್​ಗಳನ್ನು ಸಂಗ್ರಹಿಸಿ ಇಡಲಾಗಿತ್ತು. ನಡುರಾತ್ರಿಯಲ್ಲಿ ಈ ಪೈಪ್ ಲೈನ್​ಗಳಿಗೆ ಬೆಂಕಿ ತಗುಲಿದೆ. ಇದರಿಂದಾಗಿ ಎಲ್ಲ ಪೈಪ್​ಗಳು ಸಂಪೂರ್ಣವಾಗಿ ಸುಟ್ಟು ಹೋಗಿವೆ. ಘಟನೆ ನಡೆದ ಕೂಡಲೇ ಸ್ಥಳೀಯರು ಅಗ್ನಿಶಾಮಕ ದಳದ ಸಿಬ್ಬಂದಿಗೆ ಫೋನ್ ಮಾಡಿದರು. ಅಲ್ಲದೇ ಸ್ಥಳೀಯರು ಕೂಡ ಬೆಂಕಿ ನಂದಿಸಲು ಯತ್ನಿಸಿದರು. ಆದರೆ ಅದು ಸಾಧ್ಯವಾಗಲೇ ಇಲ್ಲ. ಎಲ್ಲವೂ ಪ್ಲಾಸ್ಟಿಕ್ ಪೈಪ್ ಆಗಿದ್ದರಿಂದ ಬೆಂಕಿ ಬೇಗನೇ ಹೊತ್ತಿಕೊಂಡಿತು. ನೋಡನೋಡುತ್ತಿದ್ದಂತೆಯೇ ಬೆಂಕಿ ಎಲ್ಲ ಪೈಪ್​ಗಳಿಗೂ ಹರಡಿ, ಎಲ್ಲವನ್ನು ಸುಟ್ಟು ಹಾಕಿತು. ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿ ಬಂದರಾದರೂ ಅಷ್ಟೊತ್ತಿಗಾಗಲೇ ಅಗ್ನಿ ಎಲ್ಲವನ್ನು ಸುಟ್ಟು ಹಾಕಿದ್ದರು.

ಪಕ್ಕದ ಕಟ್ಟಡದಲ್ಲಿದ್ದ ಯಂತ್ರೋಪಕರಣಕ್ಕೂ ಬೆಂಕಿ

ಇದೇ ವೇಳೆ ಬೆಂಕಿ ಪಕ್ಕದ ಕಟ್ಟಡಕ್ಕೂ ವ್ಯಾಪಿಸಿತು. ಇದರಿಂದಾಗಿ ಆ ಕಟ್ಟಡದಲ್ಲಿ ಇಡಲಾಗಿದ್ದ, ಇದೇ ಯೋಜನೆಯ ಯಂತ್ರೋಪಕರಣಗಳೂ ಸುಟ್ಟು ಹೋಗಿವೆ. ಸುಮಾರು 50 ಲಕ್ಷ ರೂಪಾಯಿ ಯಂತ್ರೋಪಕರಣಗಳು ಸುಟ್ಟು ಹೋಗಿವೆ. ಇದರಿಂದಾಗಿ ಒಟ್ಟು ಒಂದೂವರೆ ಕೋಟಿ ರೂಪಾಯಿ ಮೌಲ್ಯದ ಆಸ್ತಿ ನಷ್ಟವಾಗಿದೆ.

ಬೆಂಕಿ ಹತ್ತಿಕೊಂಡಿದ್ದು ಹೇಗೆ?

ಪೈಪುಗಳಿಗೆ ಬೆಂಕಿ ತಗುಲಿದ್ದು ಆಕಸ್ಮಿಕವೇ ಅಥವಾ ಇದೊಂದು ದುಷ್ಕರ್ಮಿಗಳ ಕೃತ್ಯವೇ ಅನ್ನೋ ಚರ್ಚೆ ಶುರುವಾಗಿದೆ. ಏಕೆಂದರೆ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಪೈಪ್​ಗಳನ್ನು ಸಂಗ್ರಹಿಸಿಟ್ಟ ಬಳಿಕ ಅಲ್ಲಿ ಭದ್ರತೆಗೆ ಯಾರನ್ನಾದರೂ ನಿಯೋಜಿಸಬೇಕಿತ್ತು. ಆದರೆ ಅಂಥ ಕೆಲಸವನ್ನು ಗುತ್ತಿಗೆದಾರರು ಮಾಡಲಿಲ್ಲ ಎನ್ನಲಾಗುತ್ತಿದೆ. ಇನ್ನು ಪಕ್ಕದಲ್ಲಿಯೇ ಇದ್ದ ಕಟ್ಟಡವನ್ನು ಇತ್ತೀಚಿಗಷ್ಟೇ ನವೀಕರಿಸಲಾಗಿತ್ತು. ಅಲ್ಲದೇ ಅದರಲ್ಲಿ ಅನೇಕ ವಸ್ತುಗಳು ಇದ್ದವು. ಅವೆಲ್ಲ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಸೇರಿದ್ದ ವಸ್ತುಗಳು. ಅವು ಕೂಡ ಇದೀಗ ಸುಟ್ಟು ಹೋಗಿವೆ.

ಇನ್ನು ಘಟನಾ ಸ್ಥಳಕ್ಕೆ ಜಿಲ್ಲಾ ಪಂಚಾಯತಿ ಸಿಇಒ ಡಾ. ಸುರೇಶ ಇಟ್ನಾಳ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಟಿವಿ9 ಡಿಜಿಟಲ್ ಜತೆಗೆ ಮಾತನಾಡಿದ ಅವರು, ಈ ಬಗ್ಗೆ ಧಾರವಾಡ ಗ್ರಾಮೀಣ ಠಾಣೆಯ ಪೊಲೀಸರಿಗೆ ದೂರು ನೀಡಲಾಗಿದೆ. ಪೈಪ್​ಗಳೆಲ್ಲಾ ಗುತ್ತಿಗೆದಾರರಿಗೆ ಸಂಬಂಧಿಸಿದ್ದವಾಗಿದ್ದವು. ಇನ್ನು ಅವುಗಳ ಪಕ್ಕದ ಕಟ್ಟಡವನ್ನು ಇತ್ತೀಚಿಗೆ ಆರು ಲಕ್ಷ ರೂಪಾಯಿ ವೆಚ್ಚದಲ್ಲಿ ನವೀಕರಿಸಲಾಗಿತ್ತು. ಇದೀಗ ಅದೆಲ್ಲ ಸುಟ್ಟು ಹೋಗಿದೆ. ಇದೀಗ ಪೊಲೀಸರಿಗೆ ದೂರು ನೀಡಲಾಗಿದ್ದು, ಈ ಘಟನೆ ಆಕಸ್ಮಿಕವೋ ಅಥವಾ ದುಷ್ಕರ್ಮಿಗಳ ಕೃತ್ಯವೋ ಅನ್ನೋದನ್ನು ಅವರು ಪತ್ತೆ ಹಚ್ಚಲಿದ್ದಾರೆ ಎಂದು ಹೇಳಿದ್ದಾರೆ.

ಬೆಳಗಾವಿ: ಭೂತರಾಮನಹಟ್ಟಿಯಲ್ಲಿ 30ಕ್ಕೂ ಹೆಚ್ಚು ಬಣವೆಗಳಿಗೆ ಬೆಂಕಿ 

ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಗ್ರಾಮದ ಹೊರ ವಲಯದಲ್ಲಿ ಕೂಡಿಟಿದ್ದ ಬಣವಿಗಳಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, 30ಕ್ಕೂ ಹೆಚ್ಚು ಬಣವಿಗಳು ಸುಟ್ಟು ಕರಕಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿದ್ದು, ಬೆಂಕಿ ನಂದಿಸಿದ್ದಾರೆ. ಕಾಕತಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ನಿನ್ನೆ(ಫೆಬ್ರವರಿ 25) ಸಂಜೆ ಈ ಘಟನೆ ನಡೆದಿದ್ದು, ಭೂತರಾಮನಹಟ್ಟಿ ಗ್ರಾಮದ ಹತ್ತಕ್ಕೂ ಅಧಿಕ ರೈತರಿಗೆ ಸೇರಿದ ಬಣವಿಗಳು ಸುಟ್ಟು ಕರಕಲಾಗಿದೆ. ಬೇಸಿಗೆ ಸಮಯದಲ್ಲಿ ಜಾನುವಾರುಗಳಿಗೆ ಸಂಗ್ರಹಿಸಿಟ್ಟಿದ್ದ ಮೇವು ಬೆಂಕಿಗಾಹುತಿಯಾಗಿದೆ. ಕಿಡಗೇಡಿಗಳು ಬೆಂಕಿ ಹಚ್ಚಿರುವ ಬಗ್ಗೆ ‌ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿಗಳಲ್ಲಿ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ: ಶಿವಮೊಗ್ಗದಲ್ಲಿ ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ: ಮೂರು ದಿನಗಳ ಅವಧಿಗೆ ನಿಷೇಧಾಜ್ಞೆ ಜಾರಿ

ಬೆಂಕಿಯಿಂದ ಹೊತ್ತಿ ಉರಿಯಿತು ಸ್ಟೇಶನ್​ನಲ್ಲಿ ನಿಂತಿದ್ದ ರೈಲು; ದಟ್ಟ ಹೊಗೆ, ಭಯಹುಟ್ಟಿಸುವ ವಿಡಿಯೋ ಇಲ್ಲಿದೆ ನೋಡಿ

Published On - 10:56 am, Sat, 26 February 22

ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು