ಹುಬ್ಬಳ್ಳಿ: ಬಾಲಕಿಯನ್ನು ಕೊಲೆಗೈದಿದ್ದ ಆರೋಪಿ ತಪ್ಪಿಸಿಕೊಳ್ಳಲು ಯತ್ನ, ಪೊಲೀಸ್​ ಗುಂಡಿಗೆ ಬಲಿ

| Updated By: ವಿವೇಕ ಬಿರಾದಾರ

Updated on: Apr 13, 2025 | 9:31 PM

ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿಯ ಹತ್ಯೆ ನಡೆದಿದೆ. ಬಿಹಾರ ಮೂಲದ ಯುವಕ ಆರೋಪಿಯಾಗಿದ್ದು, ಸಿಸಿಟಿವಿ ಕ್ಯಾಮೆರಾದಲ್ಲಿ ಆರೋಪಿ ಬಾಲಕಿಯನ್ನು ಎತ್ತುಕೊಂಡು ಹೋಗಿರುವ ದೃಶ್ಯ ಸೆರೆಯಾಗಿದೆ. ಬಾಲಕಿಯ ಪೋಷಕರು ಕೂಲಿ ಕಾರ್ಮಿಕರಾಗಿದ್ದು, ಕೆಲಸಕ್ಕೆ ಹೋಗಿದ್ದ ಸಮಯದಲ್ಲಿ ಘಟನೆ ನಡೆದಿದೆ. ಆರೋಪಿಯನ್ನು ಬಂಧಿಸಲಾಗಿದ್ದು, ಕಠಿಣ ಶಿಕ್ಷೆಗೆ ಆಗ್ರಹಿಸಿ ಪ್ರತಿಭಟನೆಗಳು ನಡೆದವು.

ಹುಬ್ಬಳ್ಳಿ, ಏಪ್ರಿಲ್​ 13: ಐದು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆಗೈದಿದ್ದ ಆರೋಪಿ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ.  ಬಿಹಾರ (Bihar) ಮೂಲದ ರಿತೇಶ್​ ಕುಮಾರ್​ ಮೃತ ಆರೋಪಿ. ಹುಬ್ಬಳ್ಳಿಯ (Hubballi) ವಿಜಯನಗರದಲ್ಲಿನ ಮನೆಯೊಂದರ ಮುಂದೆ ಆಟವಾಡುತ್ತಿದ್ದ ಬಾಲಕಿಗೆ ಆರೋಪಿ ರಕ್ಷಿತ್ ಚಾಕೊಲೇಟ್ ಆಸೆ ತೋರಿಸಿ ಕರೆದೊಯ್ದಿದ್ದಾನೆ. ಆರೋಪಿ ರಿತೇಶ್​ ಕುಮಾರ್ ಬಾಲಕಿಯನ್ನು ಎತ್ತಿಕೊಂಡು ಹೋಗುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಬಾಲಕಿ ಹೆತ್ತವರು ಕೂಲಿ ಕಾರ್ಮಿಕರಾಗಿದ್ದಾರೆ. ತಂದೆ ಪೇಂಟಿಂಗ್​ ಕೆಲಸ ಮಾಡುತ್ತಿದ್ದು, ತಾಯಿ ಮನೆಗೆಲಸ ಮಾಡುತ್ತಿದ್ದಾರೆ. ಮೃತ ಬಾಲಕಿಯ ತಾಯಿ ರವಿವಾರ (ಏ.13) ಮನೆಗೆಲಸಕ್ಕೆಂದು ವಿಜಯನಗರಕ್ಕೆ ಹೋಗಿದ್ದಾರೆ. ತಾಯಿ ಜೊತೆ ಬಾಲಕಿ ಕೂಡ ಹೋಗಿದ್ದಾಳೆ. ತಾಯಿ ಮನೆಯೊಳಗೆ ಕೆಲಸ ಮಾಡುತ್ತಿದ್ದಾಗ, ಬಾಲಕಿ ಮನೆಯ ಹೊರಗಡೆ ಆಟವಾಡುತ್ತಿದ್ದಳು. ಈ ವೇಳೆ, ಇಲ್ಲಿಗೆ ಬಂದ ಆರೋಪಿ ರಿತೇಶ್​ ಕುಮಾರ್ ಬಾಲಕಿಗೆ ಚಾಕೊಲೇಟ್​ ಆಸೆ ತೋರಿಸಿ ಕರೆದೊಯ್ದಿದ್ದಾನೆ.  ಬಾಲಕಿ ಕಾಣದಿದ್ದಾಗ ಪೋಷಕರು ಹುಡುಕಾಟ ನಡೆಸಿದ್ದಾರೆ. ಆಗ, ಅಧ್ಯಾಪಕ ನಗರದಲ್ಲಿನ ಖಾಲಿ ಜಾಗದಲ್ಲಿ ಬಾಲಕಿ ಶವ ಪತ್ತೆಯಾಗಿದೆ.

ಇದನ್ನೂ ಓದಿ
KSRTC ಚಾಲಕನಿಗೆ ಹೃದಯಾಘಾತ: ನಿಯಂತ್ರಣ ತಪ್ಪಿ ಮಹಿಳೆಗೆ ಗುದ್ದಿದ ಬಸ್
ಸಿರಾಜ್​​ ಕಾಟಕ್ಕೆ ಬೇಸತ್ತು ವಿದ್ಯಾ ಆತ್ಮಹತ್ಯೆಗೆ ಯತ್ನ!
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಅತ್ತಿಗೆಯನ್ನ ಮಂಚಕ್ಕೆ ಕರೆದ ಮೈದುನ: ಒಪ್ಪದಿದ್ದಕ್ಕೆ ಎಲ್ಲೆಂದರಲ್ಲಿ ಕಚ್ಚಿದ

ಬಾಲಕಿ ಹತ್ಯೆ ಖಂಡಿಸಿ ಅಶೋಕನಗರ ಠಾಣೆ ಎದುರು, ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಸ್ಥಳೀಯರು ಧರಣಿ ನಡೆಸಿದರು. ಪ್ರತಿಭಟನಾ ಸ್ಥಳಕ್ಕೆ ಹುಬ್ಬಳ್ಳಿ-ಧಾರವಾಡ ಪೊಲೀಸ್​ ಆಯುಕ್ತ ಎನ್​. ಶಶಿಕುಮಾರ್ ಭೇಟಿ ನೀಡಿ ಬಾಲಕಿ ಪೋಷಕರಿಂದ ಮಾಹಿತಿ ಪಡೆದರು. ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೊಲೀಸರ ಗುಂಡೇಟಿಗೆ ಆರೋಪಿ ಬಲಿ

ಆರೋಪಿಯನ್ನು ಬಂಧಿಸಲು ಹುಬ್ಬಳ್ಳಿ ಪೊಲೀಸರು ಬಲೆ ಬೀಸಿದರು. ಆರೋಪಿ ಅಡಗಿರುವ ಸ್ಥಳದ ಮಾಹಿತಿ ತಿಳಿದ ಪೊಲೀಸರು ಆತನನ್ನು ಬಂಧಿಸಲು ತೆರಳಿದರು. ಈ ವೇಳೆ ಆರೋಪಿ ರಿತೇಶ್​ ಕುಮಾರ್  ಪೊಲೀಸರ ಮೇಲೆ ದಾಳಿ ಮಾಡಿ, ಓಡಿ ಹೋಗಲು ಯತ್ನಸಿದನು. ಆತ್ಮರಕ್ಷಣೆಗಾಗಿ ಪೊಲೀಸ್​ ಸಿಬ್ಬಂದಿ ಗುಂಡು ಹಾರಿಸಿದ್ದಾರೆ. ಪೊಲೀಸರು ಹಾರಿಸಿದ ಗುಂಡು ಆರೋಪಿ ರಿತೇಶ್​ ಕುಮಾರ್​ ಬೆನ್ನಿಗೆ ತಗುಲಿದೆ. ಕೂಡಲೆ, ಪೊಲೀಸರು ಆರೋಪಿ ರಿತೇಶ್​ ಕುಮಾರ್​​ನನ್ನು ಕಿಮ್ಸ್​ ಆಸ್ಪತ್ರೆಗೆ ದಾಖಲಿಸಿದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆರೋಪಿ ರಿತೇಶ್​ ಕುಮಾರ್​​ ​ಮೃತಪಟ್ಟಿದ್ದಾನೆ.

ಆರೋಪಿ ಓಡಿ ಹೋಗಲು ಯತ್ನಿಸಿದಾಗ ಫೈರಿಂಗ್: ಶಶಿಕುಮಾರ್​

ಪ್ರಕರಣ ಸಂಬಂಭ ಪೊಲೀಸ್ ಆಯುಕ್ತ ಎನ್​. ಶಶಿಕುಮಾರ್ ಮಾತನಾಡಿ, “ಕೊಪ್ಪಳ ಮೂಲದ ಕುಟುಂಬ ಮನೆಗೆಲಸ, ಪೇಂಟಿಂಗ್ ಕೆಲಸ ಮಾಡುವ ಸಲುವಾಗಿ ಹುಬ್ಬಳ್ಳಿಗೆ ಬಂದು ನೆಲೆಸಿದೆ. ಮೃತಪಟ್ಟಿರುವ ಬಾಲಕಿಯ ತಂದೆ ಪೇಂಟಿಂಗ್ ಕೆಲಸ ಮಾಡುತ್ತಿದ್ದಾರೆ. ಬಾಲಕಿ ತಾಯಿ ಮನೆಗೆಲಸಕ್ಕೆ ತೆರಳುವಾಗ ಜೊತೆಯಲ್ಲೇ ಕರೆದೊಯ್ದಿದ್ದರು. ತಾಯಿ ಮನೆಯೊಳಗೆ ತೆರಳಿದ್ದಾಗ ಮಗು ಹೊರಗಡೆ ಆಟವಾಡುತ್ತಿತ್ತು. ಈ ಸಂದರ್ಭದಲ್ಲಿ ಮಗುವನ್ನು ಆರೋಪಿ ರಿತೇಶ್​ ಕುಮಾರ್​​ ಎತ್ತಿಕೊಂಡು ಹೋಗಿದ್ದಾನೆ” ಎಂದು ತಿಳಿಸಿದರು.

ಇದನ್ನೂ ಓದಿ: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ, ಆರೋಪಿ ಜೈಲಿನಲ್ಲೇ ಆತ್ಮಹತ್ಯೆ

“ಸಿಸಿಟಿವಿ ದೃಶ್ಯಾವಗಳಿಗಳನ್ನ ಆಧರಿಸಿ ಆರೋಪಿ ಕೃತ್ಯವೆಸಗಿದ್ದು ಪತ್ತೆಯಾಗಿತ್ತು.  ಆರೋಪಿ ಹುಬ್ಬಳ್ಳಿ ಹೊರವಲಯದ ತಾರಿಹಾಳ ಬಳಿ ವಾಸವಿದ್ದನು. ಈ ಮಾಹಿತಿ ಆಧರಿಸಿ, ಆರೋಪಿಯನ್ನು ಬಂಧಿಸಲು ತೆರಳಿದಾಗ ನಮ್ಮ ಸಿಬ್ಬಂದಿ ಮೇಲೆ ದಾಳಿ ಮಾಡಿದನು. ಈ ವೇಳೆ, ಪಿಎಸ್​ಐ ಅನ್ನಪೂರ್ಣ ಅವರು ಗಾಳಿಯಲ್ಲಿ ಗುಂಡು ಹಾರಿಸಿದರು. ಆರೋಪಿ ಓಡಿ ಹೋಗಲು ಯತ್ನಿಸಿದಾಗ ಆತನ ಮೇಲೆ ಫೈರಿಂಗ್ ಮಾಡಿದರು.  ಆರೋಪಿಯ ಬೆನ್ನಿಗೆ ಗುಂಡು ತಗುಲಿತ್ತು, ಆಸ್ಪತ್ರೆಗೆ ದಾಖಲಿಸಿದ್ವಿ. ಆದರೆ, ​ಚಿಕಿತ್ಸೆ ಫಲಕಾರಿಯಾಗದೆ ಆರೋಪಿ ರಿತೇಶ್​ ಕುಮಾರ್ ಮೃತಪಟ್ಟಿದ್ದಾನೆ. ಇಂತಹ ಗಂಭೀರ ಪ್ರಕರಣದಲ್ಲಿ ಆರೋಪಿಯನ್ನು ತಪ್ಪಿಸಿಕೊಳ್ಳಲು ಬಿಡಲ್ಲ” ಎಂದು ಹೇಳಿದರು.

ಪ್ರಹ್ಲಾದ್​ ಜೋಶಿ ಸಂತಾಪ

“ಹುಬ್ಬಳ್ಳಿಯಲ್ಲಿ ಐದು ವರ್ಷದ ಮಗುವಿನ ಕೊಲೆಯ ಬಗ್ಗೆ ತಿಳಿದು ಅತೀವ ದುಃಖವಾಗಿದೆ. ಚಿಕ್ಕ ಮಗುವಿನ ಜೀವವನ್ನು ಅಮಾನವೀಯವಾಗಿ ಕೊಂದು ಪರಾರಿಯಾಗಿರುವನನ್ನು ಕೂಡಲೇ ಬಂಧಿಸಿ ಅತ್ಯಂತ ಕಠಿಣ ಶಿಕ್ಷೆ ಕೊಡಬೇಕೆಂದು ನಾನು ಆಗ್ರಹಿಸುತ್ತೇನೆ. ಮೃತ ಬಾಲಕಿಯ ಕುಟುಂಬಕ್ಕೆ ಸಾಂತ್ವನ ‌ಕೊರುತ್ತೇನೆ ಹಾಗೂ ಅವರ ಆತ್ಮಕ್ಕೆ ಶಾಂತಿ‌‌ ಸಿಗಲೆಂದು ನಾನು ಪ್ರಾರ್ಥಿಸುತ್ತೇನೆ” ಎಂದು ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಟ್ವೀಟ್​ ಮಾಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:17 pm, Sun, 13 April 25