S.M.ಕೃಷ್ಣ ಸಂಪುಟದಲ್ಲಿ ಕ್ರೀಡಾ ಸಚಿವರಾಗಿದ್ದ ಜಬ್ಬಾರ್​ ಖಾನ್ ಹೊನ್ನಳ್ಳಿ ನಿಧನ

ಇತ್ತೀಚೆಗೆ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಕುಟುಂಬಸ್ಥರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದರು. ಆದರೆ ಇಂದು ಮುಂಜಾನೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

S.M.ಕೃಷ್ಣ ಸಂಪುಟದಲ್ಲಿ ಕ್ರೀಡಾ ಸಚಿವರಾಗಿದ್ದ ಜಬ್ಬಾರ್​ ಖಾನ್ ಹೊನ್ನಳ್ಳಿ ನಿಧನ
ಮಾಜಿ ಸಚಿವ ಜಬ್ಬಾರ್​ ಖಾನ್ ಹೊನ್ನಳ್ಳಿ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Oct 07, 2022 | 3:35 PM

ಹುಬ್ಬಳ್ಳಿ: ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಜಬ್ಬಾರ್​ ಖಾನ್ ಹೊನ್ನಳ್ಳಿ (80) ಇಂದು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. S.M.ಕೃಷ್ಣ ಸರ್ಕಾರದಲ್ಲಿ ಜಬ್ಬಾರ್​ ಖಾನ್ ಕ್ರೀಡಾ  ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಇತ್ತೀಚೆಗೆ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಕುಟುಂಬಸ್ಥರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದರು. ಆದರೆ ಇಂದು ಮುಂಜಾನೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಜಬ್ಬಾರ್​ ಖಾನ್ ಸಚಿವರಾಗಿದ್ದಾಗ ಸಾಕಷ್ಟು ರಾಜಕೀಯ ಅನುಭವವನ್ನು ಪಡೆದುಕೊಂಡಿದ್ದರು. ಅವರ ನಿಧನಕ್ಕೆ ರಾಜಕೀಯ ನಾಯಕರುಗಳು, ಗಣ್ಯರು ಸಂತಾಪ ಸೂಚಿಸಿದ್ದಾರೆ.

ಬಿಜೆಪಿ ನಾಯಕ ಬಿ. ಎಸ್ ಯಡಿಯೂರಪ್ಪ ಟ್ವೀಟ್​ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ. ಹಿರಿಯ ರಾಜಕಾರಣಿ, ಸರಳ, ಸಜ್ಜನಿಕೆಯ ವ್ಯಕ್ತಿತ್ವ ಹೊಂದಿದ್ದ ಮಾಜಿ ಸಚಿವ ಶ್ರೀ ಜಬ್ಬಾರಖಾನ್ ಹೊನ್ನಳ್ಳಿ ಅವರು ನಿಧನರಾದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ. ಅವರ ಆತ್ಮಕ್ಕೆ ಸದ್ಗತಿಯನ್ನು ಪ್ರಾರ್ಥಿಸುತ್ತಾ, ಅವರ ಕುಟುಂಬದವರಲ್ಲಿ ನನ್ನ ತೀವ್ರ ಸಂತಾಪಗಳನ್ನು ವ್ಯಕ್ತಪಡಿಸುತ್ತೇನೆ. ಓಂ ಶಾಂತಿ.