Hubballi: ಸಿಎಂ ಬೊಮ್ಮಾಯಿ ಬೆಂಗಾವಲು ವಾಹನಕ್ಕೆ ಡಿಕ್ಕಿ ಹೊಡೆದ ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಕಾರು!

Shivaram Hebbar: ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಅವರ ಕಾರು ಅಪಗಾತಕ್ಕೀಡಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರ ಕಾರನ್ನು ಹಿಂಬಾಲಿಸುವ ಭರದಲ್ಲಿ ಅವರ ಕಾರು ಮುಖ್ಯಮಂತ್ರಿ ಬೆಂಗಾವಲು ಪಡೆಯ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯ ಸಂದರ್ಭದಲ್ಲಿ ಶಿವರಾಮ್ ಹೆಬ್ಬಾರ್ ಅವರು ಮುಖ್ಯಮಂತ್ರಿಯವರ ಕಾರಿನಲ್ಲಿದ್ದರು ಎಂದು ವರದಿಯಾಗಿದೆ

Hubballi: ಸಿಎಂ ಬೊಮ್ಮಾಯಿ ಬೆಂಗಾವಲು ವಾಹನಕ್ಕೆ ಡಿಕ್ಕಿ ಹೊಡೆದ ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಕಾರು!
ಡಿಕ್ಕಿಯಾಗಿರುವ ಮಾಜಿ ಸಚಿವ ಶಿವರಾಂ ಹೆಬ್ಬಾರ್ ಕಾರು ಮತ್ತು ಸಿಎಂ ಬೆಂಗಾವಲು ಪಡೆಯ ವಾಹನ
Follow us
TV9 Web
| Updated By: shivaprasad.hs

Updated on:Jul 29, 2021 | 1:14 PM

ಹುಬ್ಬಳ್ಳಿ: ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಅವರ ಕಾರು ಅಪಘಾತಕ್ಕೀಡಾಗಿದೆ. ಹುಬ್ಬಳ್ಳಿಯ ವಿಮಾನ ನಿಲ್ದಾಣದ ಮುಂಭಾಗ ಘಟನೆ ಸಂಭವಿಸಿದೆ. ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾರಿಗೂ ಗಂಭೀರ ಸ್ವರೂಪದ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.  ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಘಟನೆ ನಡೆಯುವಾಗ ಮುಖ್ಯಮಂತ್ರಿಯವರ ಕಾರಿನಲ್ಲಿದ್ದರು ಎಂದು ವರದಿಯಾಗಿದೆ.

ಘಟನೆಯ ವಿವರ:

ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಶಿವರಾಮ್ ಹೆಬ್ಬಾರ್ ಇದ್ದರು. ವಿಮಾನ ನಿಲ್ದಾಣದಿಂದ ಹೊರ ತೆರಳುವಾಗ ಸಿಎಂ ಅವರಿದ್ದ ಕಾರನ್ನು ಹಿಂಬಾಲಿಸುವ ಭರದಲ್ಲಿ ಬೆಂಗಾವಲು ಪಡೆಗೆ ಕಾರು ಡಿಕ್ಕಿಯಾಗಿದೆ. ಘಟನೆ ನಡೆಯುವಾಗ ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಮುಖ್ಯಮಂತ್ರಿಯವರ ಕಾರಿನಲ್ಲಿದ್ದರು. ಅಪಘಾತದ ಸಂದರ್ಭದಲ್ಲಿ ಮಾಜಿ ಸಚಿವರ ಕಾರಿನಲ್ಲಿ ಇದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ವರದಿಯಾಗಿದೆ.

ಹುಬ್ಬಳ್ಳಿ ತಲುಪಿದ ಮುಖ್ಯಮಂತ್ರಿ ಬೊಮ್ಮಾಯಿ:

ನೂತನ ಸಿಎಂ ಬಸವರಾಜ ಬೊಮ್ಮಾಯಿ ಇಂದು ಉತ್ತರ ಕನ್ನಡ ಪ್ರವಾಹ ಪ್ರವಾಸ ಕೈಗೊಂಡಿದ್ದಾರೆ. ಸದ್ಯ ಅವರು ಹುಬ್ಬಳ್ಳಿಯಲ್ಲಿದ್ದು ಸ್ವಾಮೀಜಿಗಳ ಆಶೀರ್ವಾದ ಪಡೆಯುತ್ತಿದ್ದಾರೆ. ಮುಖ್ಯಮಂತ್ರಿಯವರ ಸಮಯ ಪಾಲನೆಯ ಕುರಿತು ಕೆಲವರು ಅಸಮಾಧಾನ ವ್ಯಕ್ತಪಡಿಸುತ್ತಿದ್ದು, ಅವರು ಬೆಳಗ್ಗೆ 11.45ಕ್ಕೆ ಅಂಕೋಲಾದಲ್ಲಿರಬೇಕಿತ್ತು, ಇನ್ನೂ ಹುಬ್ಬಳ್ಳಿಯಲ್ಲೇ ಇದ್ದಾರೆ ಎಂದು ದೂರಿದ್ದಾರೆ. ಹುಬ್ಬಳ್ಳಿಯ ಭೇಟಿ ಕಾರ್ಯಕ್ರಮ ಮುಗಿದ ನಂತರ ಅವರು ಉತ್ತರ ಕನ್ನಡಕ್ಕೆ ತೆರಳುವ ನಿರೀಕ್ಷೆ ಇದೆ.

ಉತ್ತರ ಕನ್ನಡ ಜಿಲ್ಲೆಗೆ ಭೇಟಿ ನೀಡಲಿರುವ ಸಿಎಂ ಬೊಮ್ಮಾಯಿ ಅವರ ಭೇಟಿಗೆ ಹೋಗಲ್ಲವೆಂದು ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಕೊಡಸಣೆ ಜನರು ಆಕ್ರೋಶ ಹೊರ ಹಾಕಿದ್ದಾರೆ. ಸಿಎಂ ಬರಲಿ, ಪ್ರಧಾನಿ ಬರಲಿ ನಮ್ಮ ಪರಿಸ್ಥಿತಿ ಬದಲಾಗಲ್ಲ. ನೆರೆ ಬಂದಾಗ ಬರುತ್ತಾರೆ, ಭರವಸೆ ಕೊಟ್ಟು ಹೋಗುತ್ತಾರೆ.ಪರಿಹಾರ ಮಾತ್ರ ಸೂಕ್ತವಾಗಿ ಸಿಗೋದಿಲ್ಲ ಎಂದು ಜನಪ್ರತಿನಿಧಿಗಳ ವಿರುದ್ಧ ಕೊಡಸಣೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Kerala Lockdown: ಕೇರಳದಲ್ಲಿ ಕೊರೊನಾ ಮತ್ತೆ ಹೆಚ್ಚಳ; ವಾರಾಂತ್ಯದಲ್ಲಿ ಸಂಪೂರ್ಣ ಲಾಕ್​ಡೌನ್ ಘೋಷಿಸಿದ ರಾಜ್ಯ ಸರ್ಕಾರ

ಇದನ್ನೂ ಓದಿ: Karnataka Breaking News LIVE: ಉತ್ತರ ಕನ್ನಡ ಪ್ರವಾಸದತ್ತ ಹೊರಟ ಸಿಎಂ ಬೊಮ್ಮಾಯಿ; ಸಚಿವ ಸ್ಥಾನಕ್ಕೆ ಲಾಬಿ ಜೋರು, ಯಾರೆಲ್ಲಾ ಫೀಲ್ಡ್​​ಗೆ ಇಳಿದಿದ್ದಾರೆ?

(former minister Shivaram Hebbar’s car was accident with the CM Security Vehicle)

Published On - 1:07 pm, Thu, 29 July 21

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್