ಧಾರವಾಡ: ಮನೆ ಹೊಕ್ಕು RSS ಮುಖಂಡನ ಮೇಲೆ ಮುಸ್ಲಿಂ ಯುವಕರಿಂದ ಹಲ್ಲೆ

ರಾಷ್ಟ್ರೀಯ ಸ್ವಯಂಸೇವಕ ಸಂಘಟನೆ (ಆರ್‌ಎಸ್‌ಎಸ್) ಮುಖಂಡ ಸಿರೀಶ್ ಬಳ್ಳಾರಿ ಅವರ ಮನೆಗೆ ನಾಲ್ವರು ಮುಸ್ಲಿಂ ಯುವಕರು ನುಗ್ಗಿ ಹಲ್ಲೆ ನಡೆಸಿದ್ದಾರೆ. ಧಾರವಾಡದಲ್ಲಿ ಘಟನೆ ನಡೆದಿದೆ. ಸಿರೀಶ್ ಅವರಿಗೆ ಕೈ ಮತ್ತು ಮುಖಕ್ಕೆ ಗಾಯಗಳಾಗಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆಯಿಂದ ಹಿಂದೂಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದು, ಆರೋಪಿಗಳ ಬಂಧನಕ್ಕೆ ಒತ್ತಾಯಿಸುತ್ತಿವೆ.

ಧಾರವಾಡ: ಮನೆ ಹೊಕ್ಕು RSS ಮುಖಂಡನ ಮೇಲೆ ಮುಸ್ಲಿಂ ಯುವಕರಿಂದ ಹಲ್ಲೆ
ಧಾರವಾಡ ನಗರ ಪೊಲೀಸ್​ ಠಾಣೆ
Edited By:

Updated on: Apr 23, 2025 | 10:07 PM

ಧಾರವಾಡ, ಏಪ್ರಿಲ್​ 23: ಮನೆ ಹೊಕ್ಕು ರಾಷ್ಟ್ರೀಯ ಸ್ವಯಂಸೇವಕ ಸಂಘಟನೆ (RSS) ಮುಖಂಡನಿಗೆ ನಾಲ್ವರು ಮುಸ್ಲಿಂ ಯುವಕರು ಹಲ್ಲೆ ಮಾಡಿರುವ ಘಟನೆ ಧಾರವಾಡ (Dharwad) ನಗರದ ಹಳೆ ತಹಸೀಲ್ದಾರ್ ಕಚೇರಿ ಓಣಿಯಲ್ಲಿ ನಡೆದಿದೆ. ಸಿರೀಶ್ ಬಳ್ಳಾರಿ ಹಲ್ಲೆಗೊಳಗಾದ ಆರ್​ಎಸ್​ಎಸ್​ ಮುಖಂಡ. ಯುವಕರು ಸಿಗರೇಟ್ ಸೇದುತ್ತಾ ನಿಂತಿದ್ದರು. ಈ ವೇಳೆ, ಸಿರೀಶ್​ ಬಳ್ಳಾರಿಯವರು ದೂರಕ್ಕೆ ಹೋಗಿ ಸಿಗರೇಟು ಸೇದುವಂತೆ ಹೇಳಿದ್ದಾರೆ. ಇಷ್ಟಕ್ಕೆ ಆಕ್ರೋಶಗೊಂಡ ನಾಲ್ವರು ಮುಸ್ಲಿಂ ಯುವಕರು, ಸಿರೀಶ್​ ಬಳ್ಳಾರಿಯವರ ಮನೆಯೊಳಗೆ ಹೊಕ್ಕು ಹಲ್ಲೆ ಮಾಡಿದ್ದಾರೆ. ಇದರಿಂದ, ಸಿರೀಶ್​ ಬಳ್ಳಾರಿಯವರ ಕೈ ಹಾಗೂ ಮುಖಕ್ಕೆ ತೀವ್ರ ಗಾಯವಾಗಿದೆ.

ಸಿರೀಶ್​ ಬಳ್ಳಾರಿಯವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಧಾರವಾಡ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಆರೋಪಿಗಳನ್ನು ಬಂಧಿಸುವಂತೆ ಹಿಂದೂಪರ ಸಂಘಟನೆಗಳಿಂದ ಒತ್ತಾಯಿಸಿದ್ದು, ನೂರಾರು ಕಾರ್ಯಕರ್ತರು ಠಾಣೆಯ ಮುಂದೆ ಜಮಾಯಿಸಿದ್ದಾರೆ.

(ಹೆಚ್ಚಿನ ಮಾಹಿತಿ ಅಪ್ಡೇಟ್​ ಆಗುತ್ತಿದೆ…)