AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಂಚನೆ ಪ್ರಕರಣ: ಹುಬ್ಬಳ್ಳಿ ಮೂಲದ ಇಬ್ಬರು ಉದ್ಯಮಿಗಳ ಆಸ್ತಿ ಜಪ್ತಿ ಮಾಡಿದ ಇ.ಡಿ.

ವಂಚನೆ ಪ್ರಕರಣ ಸಂಬಂಧ ಹುಬ್ಬಳ್ಳಿ ಮೂಲದ ಇಬ್ಬರು ಉದ್ಯಮಿಗಳ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಗಳನ್ನು ಜಾರಿ ನಿರ್ದೇಶನಾಲಯವು ಮುಟ್ಟುಗೋಲು ಹಾಕಿಕೊಂಡಿದೆ.

ವಂಚನೆ ಪ್ರಕರಣ: ಹುಬ್ಬಳ್ಳಿ ಮೂಲದ ಇಬ್ಬರು ಉದ್ಯಮಿಗಳ ಆಸ್ತಿ ಜಪ್ತಿ ಮಾಡಿದ ಇ.ಡಿ.
ಉದ್ಯಮಿ ಜಿನೇಂದ್ರ ಮಗ್ದುಮ್ ಮತ್ತು ದೂರುದಾರ ಸಂಜಯ್ ಘೋಡಾವತ್
ಶಿವಕುಮಾರ್ ಪತ್ತಾರ್
| Updated By: Rakesh Nayak Manchi|

Updated on:Jul 30, 2023 | 4:18 PM

Share

ಹುಬ್ಬಳ್ಳಿ, ಜುಲೈ 30: ವಂಚನೆ ಪ್ರಕರಣ ಸಂಬಂಧ ಹುಬ್ಬಳ್ಳಿ (Hubballi) ಮೂಲದ ಇಬ್ಬರು ಉದ್ಯಮಿಗಳ 40.22 ಕೋಟಿ ಮೌಲ್ಯದ ಆಸ್ತಿಗಳನ್ನು ಜಾರಿ ನಿರ್ದೇಶನಾಲಯವು (E.D.) ಮುಟ್ಟುಗೋಲು ಹಾಕಿಕೊಂಡಿದೆ. ರಿಯಲ್ ಎಸ್ಟೇಟ್ ಉದ್ಯಮದ ಹೆಸರಿನಲ್ಲಿ ಉದ್ಯಮಿಗಳಾದ ಶೀತಲ್‌ ಕುಮಾರ್, ಜಿನೇಂದ್ರ ಮಗ್ದುಮ್ ಎಂಬವರು ಸ್ಟಾರ್ ಏರ್ಲೈನ್ ಮಾಲೀಕ ಸಂಜಯ್ ಘೋಡಾವತ್ ಅವರಿಗೆ ವಂಚಿಸಿದ್ದ ಪ್ರಕರಣ ಇದಾಗಿದೆ.

ಶೀತಲ್‌ ಕುಮಾರ್ ಮತ್ತು ಜಿನೇಂದ್ರ ಮಗ್ದುಮ್ ಎಂಬವರು ರಿಯಲ್ ಎಸ್ಟೇಟ್ ಉದ್ಯಮದ ಹೆಸರಿನಲ್ಲಿ ಬರೋಬ್ಬರಿ 525 ಕೋಟಿ ಹಣ ತಮ್ಮ ವೈಯಕ್ತಿಕ ಖಾತೆಗಳು ಹಾಗೂ ಇತರರ ಖಾತೆಗೆ ವರ್ಗಾಯಿಸಿಕೊಂಡಿದ್ದರು. ಈ ಬಗ್ಗೆ ಸಂಜಯ್ ಘೋಡಾವತ್ ಅವರು ಹುಬ್ಬಳ್ಳಿಯ ಅಶೋಕನಗರ ಠಾಣೆ ಮೆಟ್ಟಿಲೇರಿದ್ದರು. ಸಂಜಯ್ ದೂರಿನ ಅನ್ವಯ ಪೊಲೀಸರು ವಂಚನೆ ಪ್ರಕರಣ ದಾಖಲಿಸಿದ್ದರು.

ಇದನ್ನೂ ಓದಿ: Manish Sisodia: ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಮನೀಶ್ ಸಿಸೋಡಿಯಾ, ಇತರ ಆರೋಪಿಗಳ ಆಸ್ತಿ ಜಪ್ತಿ

ಬಹುಕೋಟಿ ವಂಚನೆ ಪ್ರಕರಣವಾಗಿರುವ ಕಾರಣ ಪ್ರಕರಣವನ್ನು ಅಶೋಕನಗರ ಠಾಣಾ ಪೊಲೀಸರು ಜಾರಿ ನಿರ್ದೇಶನಾಲಯಕ್ಕೆ ವರ್ಗಾಯಿಸಿದ್ದರು. ಅದರಂತೆ, ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ತನಿಖೆ ನಡೆಸುತ್ತಿರುವ ಅಧಿಕಾರಿಗಳು, ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದಲ್ಲಿ ಶೀತಲ್‌ ಕುಮಾರ್, ಜಿನೇಂದ್ರ ಅವರಿಗೆ ಸೇರಿರುವ ಮನೆ, ಅಪಾರ್ಟ್​ಮೆಂಟ್, ವಿಂಡ್​ಮಿಲ್ ಸೇರಿದಂತೆ 12 ಆಸ್ತಿಗಳನ್ನು ಜಪ್ತಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:54 pm, Sun, 30 July 23