ಇಂದಿನಿಂದ ಧಾರವಾಡದಲ್ಲಿ 4 ದಿನ ಕೃಷಿ ಮೇಳ: ರೈತರ ಜಾತ್ರೆಯಲ್ಲಿ ಸ್ಟಾರ್ಟ್ ಅಪ್ ಪೆವಿಲಿಯನ್ ವ್ಯವಸ್ಥೆ​

ಧಾರವಾಡ ಕೃಷಿ ಮೇಳ 2024 ಇಂದಿನಿಂದ (ಸೆ.21 ರಿಂದ 24)ರವರೆಗೆ ನಾಲ್ಕು ದಿನ ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯಲಿದೆ. ನಾಲ್ಕು ದಿನಗಳ ಕಾಲ ಆಯೋಜಿಸಿರುವ ಕೃಷಿ ಮೇಳದ ಮೂಲಕ ಅಲ್ಪ ಸಮಯದಲ್ಲಿ ಹೆಚ್ಚಿನ ಸಂಖ್ಯೆಯ ರೈತರಿಗೆ ಕೃಷಿ ತಂತ್ರಜ್ಞಾನಗಳನ್ನು ತಲುಪಿಸುವುದು ಮೇಳದ ಮುಖ್ಯ ಉದ್ದೇಶವಾಗಿದೆ.

ಇಂದಿನಿಂದ ಧಾರವಾಡದಲ್ಲಿ 4 ದಿನ ಕೃಷಿ ಮೇಳ: ರೈತರ ಜಾತ್ರೆಯಲ್ಲಿ ಸ್ಟಾರ್ಟ್ ಅಪ್ ಪೆವಿಲಿಯನ್ ವ್ಯವಸ್ಥೆ​
ಧಾರವಾಡ ಕೃಷಿ ಮೇಳ
Follow us
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Updated By: ವಿವೇಕ ಬಿರಾದಾರ

Updated on: Sep 21, 2024 | 10:02 AM

ಧಾರವಾಡ, ಸೆಪ್ಟೆಂಬರ್​ 21: “ಹವಾಮಾನ ವೈಪರೀತ್ಯ ನಿರ್ವಹಣೆಗೆ ಕೃಷಿ ತಾಂತ್ರಿಕತೆಗಳು” ಈ ಬಾರಿಯ ಕೃಷಿ ಮೇಳದ ಘೋಷವಾಕ್ಯವಾಗಿದೆ. ಹವಾಮಾನ ವೈಪರೀತ್ಯ ನಿರ್ವಹಣೆಗೆ ಕೃಷಿ ತಾಂತ್ರಿಕತೆಗಳು ಹೆಸರಿನ ಘೋಷವಾಕ್ಯದಲ್ಲಿ ರೈತರ ಜಾತ್ರೆ ಎನಿಸಿರುವ ಧಾರವಾಡ ಕೃಷಿ ಮೇಳ (Dharwad Krishi Mela 2024) ಇಂದಿನಿಂದ (ಸೆ.21 ರಿಂದ 24)ರವರೆಗೆ ನಾಲ್ಕು ದಿನ ಧಾರವಾಡದ ಕೃಷಿ ವಿಶ್ವವಿದ್ಯಾಲಯ (Dharwad Agriculture University)ದ ಆವರಣದಲ್ಲಿ ನಡೆಯಲಿದೆ. ಕಳೆದ ಎರಡು ತಿಂಗಳಿಂದ ಈ ಮೇಳಕ್ಕಾಗಿ ಸಿದ್ಧತೆ ನಡೆದಿದೆ.

ನಾಲ್ಕು ದಿನಗಳ ಕಾಲ ಆಯೋಜಿಸಿರುವ ಕೃಷಿ ಮೇಳದ ಮೂಲಕ ಅಲ್ಪ ಸಮಯದಲ್ಲಿ ಹೆಚ್ಚಿನ ಸಂಖ್ಯೆಯ ರೈತರಿಗೆ ಕೃಷಿ ತಂತ್ರಜ್ಞಾನಗಳನ್ನು ತಲುಪಿಸುವುದು ಮೇಳದ ಮುಖ್ಯ ಉದ್ದೇಶವಾಗಿದೆ. ಮೇಳದಲ್ಲಿ 15 ಲಕ್ಷಕ್ಕೂ ಹೆಚ್ಚು ರೈತರು ಭಾಗವಹಿಸುವ ನಿರೀಕ್ಷೆಯಿದೆ. ಮೊದಲ ಬಾರಿಗೆ ಕ್ಯೂಆರ್‌ ಕೋಡ್ ಮೂಲಕ ಮೂಲಕ ನೋಂದಣಿ ಮಾಡುವ ವ್ಯವಸ್ಥೆ ಕಲ್ಪಿಸಲಾಗಿದೆ.

ಏನೇನು ಪ್ರದರ್ಶನ?

ಮೇಳದ ಪ್ರಮುಖ ಆಕರ್ಷಣೆ ಕೃಷಿ ವಸ್ತು ಪ್ರದರ್ಶನ. ಇದರಲ್ಲಿ 150 ಹೈಟೆಕ್ ಮಳಿಗೆ, 241 ಸಾಮಾನ್ಯ ಮಳಿಗೆ, 110 ಯಂತ್ರೋಪಕರಣ ಮಳಿಗೆ, 27 ಟ್ರ್ಯಾಕ್ಟರ್, ಭಾರಿ ಯಂತ್ರೋಪಕರಣಗಳ ಮಳಿಗೆ ಹಾಗೂ 28 ಆಹಾರ ಮಳಿಗೆಗಳು ಇರಲಿವೆ. ಹವಾಮಾನ ವೈಪರೀತ್ಯ ನಿರ್ವಹಣೆಯಲ್ಲಿ ಕೈಗೊಳ್ಳಬೇಕಾದ ಬೆಳೆ ಪದ್ಧತಿ ಹಾಗೂ ಕೃಷಿ ತಾಂತ್ರಿಕತೆಗಳು ಸಮಗ್ರ ಬೆಳೆ ನಿರ್ವಹಣೆ, ಜೈವಿಕ ಗೊಬ್ಬರ ಹಾಗೂ ಪೀಡೆನಾಶಕಗಳು, ಎಣ್ಣೆಕಾಳು, ದ್ವಿದಳ ಧಾನ್ಯಗಳು ಮತ್ತು ಹಿಂಗಾರು ಬೆಳೆಗಳ ತಾಂತ್ರಿಕತೆಗಳು, ಮಳೆ ನೀರು ಕೊಯ್ಲು ಮತ್ತು ಅಂತರ್ಜಲ ಮರುಪೂರಣ, ನೈಸರ್ಗಿಕ ಕೃಷಿ, ಸಾವಯವ ಕೃಷಿ ಮತ್ತು ಮಣ್ಣಿನ ಫಲವತ್ತತೆ ಸಂರಕ್ಷಣೆ, ಹೈಟೆಕ್ ತೋಟಗಾರಿಕೆ, ಫಲ-ಪುಷ್ಪ ಪ್ರದರ್ಶನ ಇರುತ್ತದೆ.

ಇಷ್ಟೇ ಅಲ್ಲದೇ, ಕೀಟ ಪ್ರಪಂಚ, ಸುಧಾರಿತ ಕೃಷಿ ಯಂತ್ರೋಪಕರಣ ಹಾಗೂ ಕಿಸಾನ್ ಡ್ರೋನ್​ ಪ್ರದರ್ಶನ, ಕೃಷಿ ತಜ್ಞರೊಂದಿಗೆ ಸಮಾಲೋಚನೆ, ರೈತರ ಆವಿಷ್ಕಾರಗಳು, ವಿಶೇಷ ಸಾಧನೆಗೈದ ರೈತರೊಂದಿಗೆ ಸಂವಾದ ಸೇರಿದಂತೆ ಕೃಷಿ ತಂತ್ರಜ್ಞಾನವನ್ನು ರೈತರಿಗೆ ತೋರಿಸಲಾಗುತ್ತದೆ. ಜಾನುವಾರುಗಳ ಪ್ರದರ್ಶನ ರೈತರ ಗಮನ ಸೆಳೆಯಲಿದೆ. ಇದೇ ವೇಳೆ ಹಿಂಗಾರು ಬಿತ್ತನೆಗಾಗಿ ಬೀಜ ಮೇಳವೂ ಇರಲಿದೆ.

ಇದನ್ನೂ ಓದಿ: ಭಾವೈಕ್ಯತೆ ಮೆರೆದ ಎರಡೂ ಕೋಮಿನ ಜನ; ವಿಗ್ರಹ, ಬೋರ್ಡ್​ ತೆರವುಗೊಳಿಸಲು ನಿರ್ಧಾರ

ರವಿವಾರ ಮೇಳದ ಉದ್ಘಾಟನೆ:

ರಾಜ್ಯ ಹಾಗೂ ಹೊರ ರಾಜ್ಯಗಳ ರೈತರ ಅನುಕೂಲಕ್ಕಾಗಿ ಮೇಳದಲ್ಲಿ ಹಲವು ಸೌಲಭ್ಯ ಕಲ್ಪಿಸಲಾಗಿದೆ. ರೈತರಿಗೆ ಕ್ಷೇತ್ರ ಪ್ರಾತ್ಯಕ್ಷಿಕೆಗಳಿಗೆ ಭೇಟಿ, ಉಚಿತ ವೈದ್ಯಕೀಯ ಸಲಹಾ ಕೇಂದ್ರ, ಸಾರಿಗೆ ನಿರ್ವಹಣಾ ವ್ಯವಸ್ಥೆ ಮತ್ತು ಪೊಲೀಸ್ ಸಹಾಯ ಕೇಂದ್ರ ಸ್ಥಾಪಿಸಲಾಗಿದೆ. ಮೇಳದ ಮೊದಲ ದಿನ ಶನಿವಾರ ಕೃಷಿಮೇಳ ವೇದಿಕೆಯಲ್ಲಿ ಬೀಜ ಮೇಳ ಉದ್ಘಾಟನೆ ಹಾಗೂ ವಿಚಾರಗೋಷ್ಠಿ ನಡೆಯಲಿದೆ. 2ನೇ ದಿನ ಭಾನುವಾರ ಮೇಳದ ಉದ್ಘಾಟನೆ ಹಾಗೂ ಶ್ರೇಷ್ಠ ಕೃಷಿಕ ಪ್ರಶಸ್ತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರದಾನ ಮಾಡಲಿದ್ದಾರೆ. 3ನೇ ದಿನ ಸೋಮವಾರ ರೈತರಿಂದ ರೈತರಿಗಾಗಿ ಕಾರ್ಯಕ್ರಮ, ಪ್ರಗತಿಪರ ರೈತರ ಅನಿಸಿಕೆಗಳ ಕಾರ್ಯಕ್ರಮ ಇರಲಿದೆ. ಇನ್ನು ಕೊನೆ ದಿನ ಮಂಗಳವಾರ ಚರ್ಚಾಗೋಷ್ಠಿ ಹಾಗೂ ಸಮಾರೋಪ ನಡೆಯಲಿದೆ.

ಎರಡನೇ ದಿನದ ಕಾರ್ಯಕ್ರಮ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ (ಸೆ.22) ಬೆಳಿಗ್ಗೆ 10.30ಕ್ಕೆ ಕೃಷಿ ಮೇಳವನ್ನು ಉದ್ಘಾಟಿಸುವರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾ‌ರ್, ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ, ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಲಾದ ಜೋಶಿ, ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಎಸ್.ಲಾಡ್, ಪಾಲ್ಗೊಳ್ಳುವರು. ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಕೃಷಿ ಪ್ರಕಟಣೆಗಳನ್ನು ಬಿಡುಗಡೆಗೊಳಿಸುವರು. ಮಧ್ಯಾಹ್ನ 2.30ಕ್ಕೆ ‘ಹವಾಮಾನ ವೈಪರೀತ್ಯ ನಿರ್ವಹಣೆಯಲ್ಲಿ ಸಾವಯವ ಮತ್ತು ನೈಸರ್ಗಿಕ ಕೃಷಿಯ ಪಾತ್ರ’ ಗೋಷ್ಠಿ ನಡೆಯಲಿದೆ.

ಸ್ಟಾರ್ಟ್ ಅಪ್ ಪೆವಿಲಿಯನ್:

ಮೇಳದಲ್ಲಿ ಮೊದಲ ಬಾರಿಗೆ ‘ಸ್ಟಾರ್ಟ್ ಅಪ್ ಪೆವಿಲಿಯನ್’ ವ್ಯವಸ್ಥೆ ಮಾಡಲಾಗಿದೆ. ರೈತರ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ಮಳಿಗೆಗಳನ್ನು ಸಜ್ಜುಗೊಳಿಸಲಾಗಿದೆ. ಆಹಾರ, ಯಾಂತ್ರಿಕತೆ, ಐಒಟಿ ಹಾಗೂ ಹರ್ಬಲ್ ಮೆಡಿಸಿನ್‌ಗೆ ಸಂಬಂಧಿಸಿದ ಮಳಿಗೆಗಳು ಈ ಪೆವಿಯಲಿಯನ್‌ನಲ್ಲಿ ಇರಲಿವೆ. ಕರ್ನಾಟಕ, ಗುಜರಾತ್ ಹಾಗೂ ಮಹಾರಾಷ್ಟ್ರ ರಾಜ್ಯಗಳ 22 ಮಳಿಗೆಗಳು ಸ್ಟಾರ್ಟ್ ಅಪ್‌ಗಳು ಪಾಲ್ಗೊಳ್ಳಲಿವೆ. ಕೇಂದ್ರ ಸರ್ಕಾರದ ಆರ್‌ಕೆವಿವೈ ಇನ್ನೋವೇಷನ್ ಹಾಗೂ ಅಗ್ರಿಪ್ರಿನಿಯರ್‌ಷಿಪ್ ಕಾರ್ಯಕ್ರಮದಡಿ ಪ್ರೋತ್ಸಾಹ ನೀಡಿರುವ ಸ್ಟಾರ್ಟ್ ಅಪ್‌ಗಳು ಇವಾಗಿವೆ.

ಸ್ಟಾರ್ಟ್ ಅಪ್ ಸ್ಥಾಪನೆಗೆ ಮೊದಲ ಹಂತದಲ್ಲಿ ₹5 ಲಕ್ಷ ನೀಡಲಾಗುವುದು. ಅನ್ವೇಷಣೆ ಯೋಜನೆ ಅನುಷ್ಠಾನ ಹಂತ ಇದು. ಸ್ಪಾರ್ಟ್ ಅಪ್ ಸ್ಥಾಪಿಸಿ ಯಶಸ್ವಿಯಾಗಿ ಮುನ್ನಡೆಸಿದರೆ ಎರಡನೇ ಹಂತದಲ್ಲಿ ರೂ. 25 ಲಕ್ಷ ನೀಡಲಾಗುವುದು. ಕಬ್ಬು ಕಟಾವು ಯಂತ್ರ, ಕಡಲೆ ಗಿಡದ ತುದಿ ಚಿವುಟುವ ಸೌರಚಾಲಿತ ಯಂತ್ರ ಮೊದಲಾದ ಸ್ಟಾರ್ಟ್ ಅಪ್ ಮಳಿಗೆಗಳು ಮೇಳದಲ್ಲಿ ಇರಲಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ