AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಲಕರೇ ಗಮನಿಸಿ: ಮಕ್ಕಳಲ್ಲಿ ಹೆಚ್ಚುತ್ತಿದೆ ‘ಕೈ, ಕಾಲು, ಬಾಯಿ’ ಸೋಂಕು!

ರಾಜ್ಯದಲ್ಲಿ ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಐದು ವರ್ಷದೊಳಗಿನ ಮಕ್ಕಳಲ್ಲಿ 'ಕೈ, ಕಾಲು ಮತ್ತು ಬಾಯಿ ರೋಗ' (HFMD) ತೀವ್ರವಾಗಿ ಹರಡುತ್ತಿದ್ದು, ಪಾಲಕರಲ್ಲಿ ಭೀತಿ ಮೂಡಿಸಿದೆ. ಹುಬ್ಬಳ್ಳಿ-ಧಾರವಾಡ ಅವಳಿ ನಗರದ ಕಿಮ್ಸ್ ಸೇರಿದಂತೆ ಪ್ರಮುಖ ಆಸ್ಪತ್ರೆಗಳಿಗೆ ನೂರಾರು ಮಕ್ಕಳು ದಾಖಲಾಗುತ್ತಿದ್ದಾರೆ. ಕಿಮ್ಸ್ ತಜ್ಞ ವೈದ್ಯರು ಈ ಸೋಂಕಿನ ಲಕ್ಷಣಗಳು, ಮುನ್ನೆಚ್ಚರಿಕಾ ಕ್ರಮಗಳು ಹಾಗೂ ಪ್ರಮುಖ ಸಲಹೆಗಳನ್ನು ನೀಡಿದ್ದಾರೆ.

ಪಾಲಕರೇ ಗಮನಿಸಿ: ಮಕ್ಕಳಲ್ಲಿ ಹೆಚ್ಚುತ್ತಿದೆ 'ಕೈ, ಕಾಲು, ಬಾಯಿ' ಸೋಂಕು!
ಮಕ್ಕಳಲ್ಲಿ ಹೆಚ್ಚಾದ ಕೈ, ಕಾಲು, ಬಾಯಿ ರೋಗ
ಸಂಜಯ್ಯಾ ಚಿಕ್ಕಮಠ
| Edited By: |

Updated on: Jul 14, 2026 | 10:35 AM

Share

ಮುಖ್ಯಾಂಶಗಳು

  • ಹವಾಮಾನ ವೈಪರೀತ್ಯದಿಂದಾಗಿ ಮಕ್ಕಳಲ್ಲಿ ಕೈ ಕಾಲು ಬಾಯಿ ರೋಗ ತೀವ್ರವಾಗಿ ಹರಡುತ್ತಿದೆ.
  • ಆರಂಭದಲ್ಲಿ ಚಿಕನ್ ಪಾಕ್ಸ್ ನಂತೆ ಕಾಣುವ ಈ ಸೋಂಕು ಪ್ರಾಣಾಪಾಯಕಾರಿಯಲ್ಲ ಎಂದು ವೈದ್ಯರು ಹೇಳಿದ್ದಾರೆ.
  • ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ಪ್ರತಿದಿನ ನೂರಾರು ಪಾಲಕರು ಧಾವಿಸುತ್ತಿದ್ದಾರೆ.

ಹುಬ್ಬಳ್ಳಿ, ಜುಲೈ 14: ರಾಜ್ಯದಲ್ಲಿ ಹವಾಮಾನ ವೈಪರೀತ್ಯಕ್ಕೆ ಇತ್ತೀಚೆಗೆ ಹಲವು ರೋಗಗಳು ಬರುತ್ತಿವೆ. ಮಲೆನಾಡು, ಕರಾವಳಿಯಲ್ಲಿ ಮುಂಗಾರು ಮಳೆಯ ಆರ್ಭಟವಿದ್ದರೆ, ಕಲ್ಯಾಣ ಕರ್ನಾಟಕದ ಹಲವು ಜಿಲ್ಲೆಗಳು ಮಳೆ-ಬೆಳೆ ಇಲ್ಲದೆ ತತ್ತರಿಸುತ್ತಿವೆ. ಇದರ ಪರಿಣಾಮವಾಗಿ ಸಾಂಕ್ರಾಮಿಕ ರೋಗಗಳು ಕಾಣಿಸಿಕೊಳ್ಳುತ್ತಿದ್ದು, ಪ್ರಮುಖವಾಗಿ ಐದು ವರ್ಷದೊಳಗಿನ ಮಕ್ಕಳಲ್ಲಿ ತೀವ್ರವಾಗಿ ಹರಡುತ್ತಿರುವಕೈ, ಕಾಲು ಮತ್ತು ಬಾಯಿ ರೋಗ (HFMD) ಈಗ ಪಾಲಕರಲ್ಲಿ ಭೀತಿ ಮೂಡಿಸಿದೆ.

ಚಿಕನ್ ಪಾಕ್ಸ್ ಅಲ್ಲ, ಇದು HFMD!

ಸಾಮಾನ್ಯವಾಗಿ ಈ ಹಿಂದೆ ಮಕ್ಕಳಲ್ಲಿ ಮೈ ತುಂಬಾ ಗುಳ್ಳೆಗಳು ಏಳುವ ಚಿಕನ್ ಪಾಕ್ಸ್ ಕಾಣಿಸಿಕೊಳ್ಳುತ್ತಿತ್ತು. ಆದರೆ, ಇತ್ತೀಚೆಗೆ ಕಾಣಿಸಿಕೊಳ್ಳುತ್ತಿರುವ ಈ ಹೊಸ ಸೋಂಕಿನಲ್ಲಿ ಮಕ್ಕಳ ಕೈ, ಕಾಲು ಹಾಗೂ ಬಾಯಿಯ ಸುತ್ತ ನೋವು ಭರಿತ ಗುಳ್ಳೆಗಳು ಏಳುತ್ತಿದೆ ಮತ್ತು ಜ್ವರ ಕಾಣಿಸಿಕೊಳ್ಳುತ್ತಿದೆ. ಆರಂಭದಲ್ಲಿ ಈ ರೋಗವನ್ನು ಪಾಲಕರು ಚಿಕನ್ ಪಾಕ್ಸ್ ಎಂದೇ ಭಾವಿಸುತ್ತಿದ್ದರು. ಆದರೆ ವೈದ್ಯರ ಹೇಳುವಂತೆ ಇದು ಅಪಾಯಕಾರಿಯಲ್ಲದ ಆದರೆ ವೇಗವಾಗಿ ಹರಡುವ ಚರ್ಮದ ವೈರಲ್ ಸೋಂಕಾಗಿದೆ.

ಹುಬ್ಬಳ್ಳಿ-ಧಾರವಾಡದಲ್ಲಿ ಹೆಚ್ಚಿದ ಕೇಸ್

ಅವಳಿ ನಗರ ಹುಬ್ಬಳ್ಳಿ-ಧಾರವಾಡ ಸೇರಿದಂತೆ ಪ್ರಮುಖ ನಗರಗಳಲ್ಲಿ ಈ ಸೋಂಕು ತೀವ್ರವಾಗಿ ಹರಡುತ್ತಿದ್ದು, ಪ್ರತಿನಿತ್ಯ ನೂರಾರು ಮಕ್ಕಳು ಇದರಿಂದ ನರಳುತ್ತಿದ್ದಾರೆ. ಹುಬ್ಬಳ್ಳಿಯ ಕಿಮ್ಸ್ (KIMS) ಆಸ್ಪತ್ರೆ ಸೇರಿದಂತೆ ಪ್ರಮುಖ ಮಕ್ಕಳ ಕ್ಲಿನಿಕ್‌ಗಳಿಗೆ ಪಾಲಕರು ಚಿಕಿತ್ಸೆಗಾಗಿ ಧಾವಿಸುತ್ತಿದ್ದಾರೆ. ಜ್ವರದ ತೀವ್ರತೆ ಹೆಚ್ಚಿರುವ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿಕೊಂಡು ಚಿಕಿತ್ಸೆ ನೀಡಲಾಗುತ್ತಿದೆ.

ಈ ಬಗ್ಗೆ ಮಾತನಾಡಿರುವ ಹುಬ್ಬಳ್ಳಿ ಕಿಮ್ಸ್ ಮಕ್ಕಳ ವಿಭಾಗದ ಮುಖ್ಯಸ್ಥ ಡಾ. ವಿನೋದ್ ರಟ್ಟಿಗೇರಿ, ಈ ಸೋಂಕಿಗೆ ಯಾವುದೇ ನಿರ್ದಿಷ್ಟ ಲ್ಯಾಬ್ ಟೆಸ್ಟ್ ಅಥವಾ ಪ್ರತ್ಯೇಕ ಚಿಕಿತ್ಸೆ ಇಲ್ಲ. ಮಕ್ಕಳ ಲಕ್ಷಣಗಳನ್ನು ನೋಡಿಯೇ ಚಿಕಿತ್ಸೆ ನೀಡಲಾಗುತ್ತಿದೆ. ಆರಂಭದ ಐದು ದಿನ ತೀವ್ರ ನೋವಿರುತ್ತದೆಯಾದರೂ, ಇದು ಪ್ರಾಣಾಪಾಯ ತರುವ ವೈರಸ್ ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ ವೈರಲ್ ಫೀವರ್ ಜೊತೆಗೆ ಮಕ್ಕಳನ್ನು ಕಾಡುತ್ತಿದೆ ಕಾಲು ಬಾಯಿ ರೋಗ!

ಸೋಂಕು ತಡೆಗಟ್ಟಲು ವೈದ್ಯರ ಸಲಹೆಗಳು

ಈ ವೈರಸ್ ಸಾಂಕ್ರಾಮಿಕವಾಗಿರುವುದರಿಂದ ಶಾಲೆ ಮತ್ತು ಅಂಗನವಾಡಿಗಳಲ್ಲಿ ಮಕ್ಕಳ ಮೂಲಕ ಅತ್ಯಂತ ವೇಗವಾಗಿ ಹರಡುತ್ತದೆ. ಇದನ್ನು ನಿಯಂತ್ರಿಸಲು ವೈದ್ಯರು ಕೆಲವು ಮುನ್ನೆಚ್ಚರಿಕೆಗಳನ್ನು ಸೂಚಿಸಿದ್ದಾರೆ:

  • ಕೋವಿಡ್ ಸಮಯದಲ್ಲಿ ಪಾಲಿಸುತ್ತಿದ್ದ ಸ್ವಚ್ಛತಾ ನಿಯಮಗಳನ್ನು ಮರಳಿ ಜಾರಿಗೆ ತರಬೇಕು.
  • ಮಕ್ಕಳ ಕೈಗಳನ್ನು ಮೇಲಿಂದ ಮೇಲೆ ತೊಳೆಸಬೇಕು.
  • ಸೋಂಕಿತ ಮಕ್ಕಳನ್ನು ಇತರ ಮಕ್ಕಳೊಂದಿಗೆ ಬೆರೆಯಲು ಬಿಡದೆ ಮನೆಯಲ್ಲೇ ವಿಶ್ರಾಂತಿ ಪಡೆಯಲು ಬಿಡಬೇಕು.
  • ಸೋಂಕಿತ ಮಕ್ಕಳಲ್ಲಿ ನೀರಿನ ಅಂಶ ಕಡಿಮೆಯಾದರೆ ನೋವು ಹೆಚ್ಚಾಗುತ್ತದೆ. ಆದ್ದರಿಂದ ದೇಹವು ಡಿಹೈಡ್ರೇಟ್ (ನಿರ್ಜಲೀಕರಣ) ಆಗದಂತೆ ದ್ರವಾಹಾರ ಹಾಗೂ ನೀರನ್ನು ಯಥೇಚ್ಛವಾಗಿ ನೀಡಬೇಕು.

ಸೋಂಕು ವೇಗವಾಗಿ ಹರಡುತ್ತಿದ್ದರೂ ಪಾಲಕರು ಗಾಬರಿಪಡುವ ಅಗತ್ಯವಿಲ್ಲ. ಸೂಕ್ತ ಸ್ವಚ್ಛತೆ ಹಾಗೂ ಮುಂಜಾಗ್ರತಾ ಕ್ರಮಗಳ ಮೂಲಕ ಮಕ್ಕಳನ್ನು ಸುಲಭವಾಗಿ ಈ ಸೋಂಕಿನಿಂದ ರಕ್ಷಿಸಬಹುದಾಗಿದೆ ಎಂದು ವೈದ್ಯರು ಹೇಳಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ