
ಧಾರವಾಡ, (ಡಿಸೆಂಬರ್ 04): ಕಾರೊಂದು ಡಿವೈಡರ್ಗೆ ಡಿಕ್ಕಿಯಾಗಿ ಬಳಿಕ ನಡುರಸ್ತೆಯಲ್ಲೇ ಹೊತ್ತಿ ಉರಿದಿದ್ದು, ಇದರಲ್ಲಿ ಲೋಕಾಯುಕ್ತ ಇನ್ಸ್ಪೆಕ್ಟರ್ (Lokayukta Inspector) ಸಜೀವ ದಹನವಾಗಿದ್ದಾರೆ. ಧಾರವಾಡ (Dharwad) ಜಿಲ್ಲೆ ಅಣ್ಣಿಗೇರಿ ಪಟ್ಟಣದ ಹೊರವಲಯದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಹಾವೇರಿ ಲೋಕಾಯುಕ್ತ ಇನ್ಸ್ಪೆಕ್ಟರ್ ಆಗಿದ್ದ ಪಂಚಾಕ್ಷರಿ ಸಾಲಿಮಠ ಅವರು ಕಾರಿನೊಳಗೆ ಸುಟ್ಟು ಕರಕಲಾಗಿದ್ದಾರೆ. ಲೋಕಾಯುಕ್ತ ಇನ್ಸ್ಪೆಕ್ಟರ್ ಸಾಲಿಮಠ ಅವರು ಇಂದು (ಡಿಸೆಂಬರ್ 05) ಐ20 ಕಾರಿನಲ್ಲಿ ಗದಗ ಕಡೆ ಹೊರಟ್ಟಿದ್ದರು. ಈ ವೇಳೆ ಕಾರು ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಬಳಿಕ ಬೆಂಕಿ ಹೊತ್ತಿಕೊಂಡಿದೆ ಎಂದು ತಿಳಿದುಬಂದಿದೆ.
ಡಿವೈಡರ್ಗೆ ಡಿಕ್ಕಿಯಾಗಿ ಬಳಿಕ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡ ನೋಡುತ್ತಿದ್ದಂತೆಯೇ ಧಗಧಗ ಹೊತ್ತಿ ಉರಿದಿದೆ. ಇದರಿಂದ ಇನ್ಸ್ಪೆಕ್ಟರ್ PS ಸಾಲಿಮಠ ಅವರಿಗೆ ಲಾಕ್ ತೆಗೆದು ಹೊರಬರಲಾಗದೇ ಕಾರಿನೊಳಗೆ ಬೆಂಕಿಯಲ್ಲಿ ಬೆಂದು ಹೋಗಿದ್ದಾರೆ. ಬೆಂಕಿ ಹೊತ್ತಿಕೊಂಡು ನೋಡುತ್ತಿದ್ದಂತೆಯೇ ಸ್ಥಳೀಯರು ಮಾಹಿತಿ ನೀಡುತ್ತಿದ್ದಂತೆಯೇ ಸ್ಥಳಕ್ಕೆ ಅಣ್ಣಿಗೇರಿ ಪೊಲೀಸರು ಹಾಗೂ ಅಗ್ನಿಶಾಮಕ ದಳ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಆದ್ರೆ, ಅಷ್ಟರೊಳಗೆ ಇನ್ಸ್ಪೆಕ್ಟರ್ ಕಾರಿನೊಳಗೆ ಸುಟ್ಟು ಕರಕಲಾಗಿದ್ದಾರೆ.
PS ಸಾಲಿಮಠ ಅವರು ಹಾವೇರಿ ಲೋಕಾಯುಕ್ತ ಇನ್ಸ್ಪೆಕ್ಟರ್ ಆಗಿ ಕೆಲಸ ಮಾಡಿದ್ದರು. ಗದಗದಲ್ಲಿ ಇರುವ ಕುಟುಂಬವನ್ನು ಭೇಟಿ ಮಾಡುಲು ಹೋಗುತ್ತಿದ್ದರು. ಆದ್ರೆ, ವಿಧಿ ಅವರನ್ನು ಅರ್ಧ ಹಾದಿಯಲ್ಲೇ ಈ ರೀತಿ ಬಲಿಪಡೆದುಕೊಂಡಿದೆ.
ಮೊನ್ನೆ ಅಷ್ಟೇ ಕರ್ನಾಟಕ ಹಿರಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದರು. ಈ ಪ್ರಕಣ ಮಾಸುವ ಮುನ್ನೇ ಕಾರು ಅಪಘಾತದಲ್ಲಿ ಲೋಕಾಯುಕ್ತ ಇನ್ಸ್ಪೆಕ್ಟರ್ ಬಲಿಯಾಗಿದ್ದಾರೆ.
Published On - 10:42 pm, Fri, 5 December 25