AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಟಿ ಕೋಟಿ ರೂ. ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡ ಹೆಸ್ಕಾಂ ವ್ಯಾಪ್ತಿಯ ಸರ್ಕಾರಿ ಇಲಾಖೆಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್​ ಸರ್ಕಾರದಿಂದ ರಾಜ್ಯದ ಪ್ರತಿಯೊಂದು ಮನೆಗೂ 200 ಯುನಿಟ್​ವರೆಗೆ ವಿದ್ಯುತ್ ಉಚಿತವಾಗಿ​ ನೀಡಲಾಗುತ್ತಿದೆ. ಆದರೆ ಸರ್ಕಾರಿ ಇಲಾಖೆಗಳು ವಿದ್ಯುತ್​ ಬಿಲ್​ ಪಾವತಿಸದೆ ಬಾಕಿ ಉಳಿಸಿಕೊಂಡಿವೆ. ಸರ್ಕಾರಿ ಇಲಾಖೆಗಳಿಂದ ಹೆಸ್ಕಾಂಗೆ ಬರಬೇಕಾದ 885 ಕೋಟಿ ರೂ. ವಿದ್ಯುತ್​ ಬಿಲ್​ ಬಾಕಿ ಇದೆ.

ಕೋಟಿ ಕೋಟಿ ರೂ. ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡ ಹೆಸ್ಕಾಂ ವ್ಯಾಪ್ತಿಯ ಸರ್ಕಾರಿ ಇಲಾಖೆಗಳು
ಹೆಸ್ಕಾಂ
ಶಿವಕುಮಾರ್ ಪತ್ತಾರ್
| Edited By: ವಿವೇಕ ಬಿರಾದಾರ|

Updated on: Aug 27, 2023 | 11:38 AM

Share

ಹುಬ್ಬಳ್ಳಿ: ಕರ್ನಾಟಕ ಸರ್ಕಾರ ಗೃಹಜ್ಯೋತಿ ಯೋಜನೆಯಡಿ (Gruha Jyothi) ಪ್ರತಿ ಮನೆಗೂ 200 ಯುನಿಟ್​ ಉಚಿತ ವಿದ್ಯುತ್​ ನೀಡಿದೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ ಹೊಡೆತ ಬೀಳುತ್ತದೆ ಎಂದು ತಜ್ಞರು ಅಭಿಪ್ರಯಾ ಪಟ್ಟಿದ್ದಾರೆ. ಈ ಮಧ್ಯೆಯೇ ರಾಜ್ಯ ಸರ್ಕಾರದ ಅದೆಷ್ಟೋ ಇಲಾಖೆಗಳು ಎಸ್ಕಾಂಗಳಿಗೆ (ESCOM) ವಿದ್ಯುತ್​ ಬಿಲ್​ ಕಟ್ಟದೆ ಬಾಕಿ ಉಳಿಸಿಕೊಂಡಿವೆ. ಅದೇರೀತಿ ಹೆಸ್ಕಾಂ (HESCOM) ವ್ಯಾಪ್ತಿಯ ಸರ್ಕಾರಿ ಇಲಾಖೆಗಳು 885 ಕೋಟಿ ರೂ. ವಿದ್ಯುತ್​ ಬಿಲ್ ಪಾವತಿಸಿಲ್ಲ. ಹೆಸ್ಕಾಂ‌ ವ್ಯಾಪ್ತಿಯಲ್ಲಿ ಬರುವ ಧಾರವಾಡ, ಬೆಳಗಾವಿ, ಹಾವೇರಿ, ವಿಜಯಪುರ, ಗದಗ, ಹಾವೇರಿ, ಉತ್ತರ ಕನ್ನಡ ಜಿಲ್ಲೆಗಳ ಸರ್ಕಾರಿ‌ ಇಲಾಖೆಗಳು ವಿದ್ಯುತ್​ ಬಿಲ್​​ ಕಟ್ಟಬೇಕಿವೆ.

ಗ್ರಾಮೀಣಾಭಿವೃದ್ಧಿ ಇಲಾಖೆ ಅತಿ ಹೆಚ್ಚು ಬಿಲ್ ಬಾಕಿ‌ ಉಳಿಸಿಕೊಂಡಿದ್ದು, 616 ಕೋಟಿ ರೂ. ಬಿಲ್ ಬಾಕಿ ಕಟ್ಟಬೇಕಿದೆ. ಪಟ್ಟಣ ಅಭಿವೃದ್ಧಿ ಇಲಾಖೆ 99 ಕೋಟಿ, ಸಣ್ಣ ನೀರಾವರಿ ಇಲಾಖೆ 36 ಕೋಟಿ, ಕರ್ನಾಟಕ ನೀರಾವರಿ ನಿಗಮ 19 ಕೋಟಿ, ಕೃಷ್ಣ ಭಾಗ್ಯ ನಿಗಮ 6.80 ಕೋಟಿ, ಬಹುಗ್ರಾಮ ನೀರು ಸರಬರಾಜು ಇಲಾಖೆ 48 ಕೋಟಿ, ಇತರೆ ಸರ್ಕಾರಿ ಇಲಾಖೆಗಳು 25.65 ಕೋಟಿ ರೂ. ಬಿಲ್ ಬಾಕಿ ಉಳಿಸಿಕೊಂಡಿವೆ. ಒಟ್ಟು ಸರ್ಕಾರಿ ಇಲಾಖೆಗಳಿಂದಲೇ 885 ಕೋಟಿ ರೂ. ವಿದ್ಯುತ್ ಬಿಲ್ ಹೆಸ್ಕಾಂಗೆ ಬರಬೇಕಿದೆ. ಇನ್ನೂ ಹೆಸ್ಕಾಂ ಬಾಕಿ ಬಿಲ್ ವಸೂಲಿಗಾಗಿ ಪ್ರತ್ಯೇಕ ನೋಡಲ್ ಅಧಿಕಾರಿ ನೇಮಿಸಿದೆ.

ಇದನ್ನೂ ಓದಿ: Gruha Jyothi Scheme: ಗೃಹಜ್ಯೋತಿ ಯೋಜನೆಯ ಲಾಭ ಪಡೆದವರೆಷ್ಟು, ವಂಚಿತರಾದವರೆಷ್ಟು? ಇಲ್ಲಿದೆ ಮಾಹಿತಿ

ರಾಜ್ಯ ನಿರಾವರಿ ಇಲಾಖೆ 4 ಸಾವಿರ ಕೋಟಿ ರೂ. ವಿದ್ಯುತ್​ ಬಿಲ್​ ಬಾಕಿ

​ರಾಜ್ಯ ನಿರಾವರಿ ಇಲಾಖೆ ನಾಲ್ಕು ಸಾವಿರ ಕೋಟಿ ರೂ. ವಿದ್ಯುತ್​ ಬಿಲ್​ ಬಾಕಿ ಉಳಿಸಿಕೊಂಡಿದೆ ಎಂದು ಕಳೆದ ತಿಂಗಳು ನಡೆದ 16ನೇ ವಿಧಾನಸಭೆಯ ಬಜೆಟ್​ ಅಧಿವೇಶನದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹೇಳಿದ್ದರು. ಪ್ರಶ್ನೋತ್ತರ ವೇಳೆಯಲ್ಲಿ ತುರುವೇಕೆರೆ ಶಾಸಕ ಎಂ.ಟಿ. ಕೃಷ್ಣಪ್ಪ ಏತ ನೀರಾವರಿ ಯೋಜನೆಗೆ ಉಚಿತ ವಿದ್ಯುತ್ ಕೊಡಿ ಎಂದು ಪ್ರಶ್ನೆ ಕೇಳಿದ್ದರು. ಇದಕ್ಕೆ ಉತ್ತರಿಸಿದ್ದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಏತ ನೀರಾವರಿ ಯೋಜನೆಗೆ ಬಳಕೆ ಮಾಡಿಕೊಳ್ಳುತ್ತಿರುವ ವಿದ್ಯುತ್​ಗೆ ಬಿಲ್ ಕಟ್ಟಿಲ್ಲ. ಕೋಟಿ ಕೋಟಿ ಹಣ ಬಾಕಿ ಇಟ್ಟುಕೊಂಡಿದ್ದಾರೆ ಎಂದ್ದಿದ್ದರು.

ಅಲ್ಲದೇ ತುಮಕೂರು ಗ್ರಾಮಾಂತರ, ಚನ್ನಪಟ್ಟಣದಲ್ಲಿ ಕೆರೆ ತುಂಬಿಸಲು ಏತ ನೀರಾವರಿ ಯೋಜನೆ ಬೇಕು ಅಂತಾರೆ. ಆದರೆ ಯಾರು ಸಹ ಇಂಧನ ಇಲಾಖೆಗೆ ಹಣ ಕೊಡುತ್ತಿಲ್ಲ. ತುಮಕೂರು ಗ್ರಾಮಾಂತರದಲ್ಲಿ ಆರು ಕೋಟಿ ರೂ. ಹಣ ಬಾಕಿ ಉಳಿದಿದೆ. ಚನ್ನಪಟ್ಟಣದಲ್ಲಿ ಐದು ಕೋಟಿ ರೂ. ಹಣ ಬಾಕಿ ಇದೆ ಎಂದು ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಶಿವಕುಮಾರ್ ಪತ್ತಾರ್
ಶಿವಕುಮಾರ್ ಪತ್ತಾರ್

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ