ಧಾರವಾಡ ಪ್ರವೇಶಕ್ಕೆ ವಿನಯ್ ಕುಲಕರ್ಣಿಗಿಲ್ಲ ಅನುಮತಿ, ಅರ್ಜಿ ವಜಾಗೊಳಿಸಿದ ಹೈಕೋರ್ಟ್​​

ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ಪ್ರವೇಶಕ್ಕೆ ಅನುಮತಿ ಕೋರಿ ಕಾಂಗ್ರೆಸ್​ ನಾಯಕ ವಿನಯ್ ಕುಲಕರ್ಣಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್​​ ವಜಾ ಮಾಡಿದೆ.

ಧಾರವಾಡ ಪ್ರವೇಶಕ್ಕೆ ವಿನಯ್ ಕುಲಕರ್ಣಿಗಿಲ್ಲ ಅನುಮತಿ, ಅರ್ಜಿ ವಜಾಗೊಳಿಸಿದ ಹೈಕೋರ್ಟ್​​
ವಿನಯ ಕುಲಕರ್ಣಿ
Follow us
ವಿವೇಕ ಬಿರಾದಾರ
| Updated By: Ganapathi Sharma

Updated on:Apr 21, 2023 | 9:11 PM

ಧಾರವಾಡ: ಬಿಜೆಪಿ ಮುಖಂಡ ಯೋಗೀಶ್ ಗೌಡ (Yogish Gowda) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ (Dharwad) ಪ್ರವೇಶಕ್ಕೆ ಅನುಮತಿ ಕೋರಿ ಕಾಂಗ್ರೆಸ್​ ನಾಯಕ ವಿನಯ್ ಕುಲಕರ್ಣಿ (Vinay Kulakarni) ಅವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್​​ (High Court) ವಜಾ ಮಾಡಿದೆ. ಚುನಾವಣೆಗೆ ಸ್ಪರ್ಧಿಸಿರುವುದರಿಂದ ಧಾರವಾಡಕ್ಕೆ ಪ್ರವೇಶಿಸಲು ಅನುಮತಿ ನೀಡುವಂತೆ ವಿನಯ್​ ಕುಲಕರ್ಣಿ ಪರ ವಕೀಲರು ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್​​, ಧಾರವಾಡಕ್ಕೆ ಪ್ರವೇಶಿಸದಂತೆ ಸುಪ್ರೀಂಕೋರ್ಟ್ ನಿರ್ಬಂಧವಿದ್ದ ಹೊರತಾಗಿಯೂ ಹೈಕಮಾಂಡ್ ಧಾರವಾಡದಿಂದ ಟಿಕೆಟ್ ಏಕೆ ಕೊಟ್ಟಿದೆ ಎಂದು ವಿನಯ್ ಕುಲಕರ್ಣಿ ಪರ ವಕೀಲರಿಗೆ ಹೈಕೋರ್ಟ್ ಪ್ರಶ್ನಿಸಿದೆ. ನಂತರ ಹೈಕೋರ್ಟ್ ವಿನಯ್​ ಕುಲಕರ್ಣಿ ಅವರ ಅರ್ಜಿಯನ್ನು ವಜಾ ಮಾಡಿ ಆದೇಶ ಹೊರಡಿಸಿದೆ.

ಅರ್ಜಿ ತಿರಸ್ಕರಿಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ

ಚುನಾವಣೆಯ ಕಾರಣ ಧಾರವಾಡ ಪ್ರವೇಶಕ್ಕೆ ಅನುಮತಿ ಕೋರಿ ವಿನಯ್ ಕುಲಕರ್ಣಿ ಅರ್ಜಿ ಸಲ್ಲಿಸಿದ್ದರು. ಅದರಂತೆ ಈ ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದ ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಲಯ ಏ.17 ರಂದು ವಿಚಾರಣೆ ನಡೆಸಿತ್ತು. ಈ ವೇಳೆ ವಿನಯ ಕುಲಕರ್ಣಿ ಅವರ ಪರ ವಕೀಲರಾದ ಸಿ ಹೆಚ್ ಹನುಮಂತರಾಯ, ಚುನಾವಣೆಗೆ ನಾಮಪತ್ರ ಸಲ್ಲಿಸಿ ಪ್ರಚಾರ ನಡೆಸಬೇಕಿದೆ. ಹೀಗಾಗಿ ಧಾರವಾಡ ಜಿಲ್ಲಾ ಪ್ರವೇಶಕ್ಕೆ ಅನುಮತಿ ನೀಡುವಂತೆ ವಾದ ಮಂಡಿಸಿದ್ದರು.

ಇದನ್ನೂ ಓದಿ: Karnataka Assembly Election 2023: ಧಾರವಾಡ ಜಿಲ್ಲೆಯ ಈ 3 ಕ್ಷೇತ್ರಗಳಲ್ಲಿ ಮಹಿಳಾ ಮತದಾರರ ಸಂಖ್ಯೆಯೇ ಹೆಚ್ಚು

ವಾದ-ಪ್ರತಿವಾದವನ್ನು ಆಲಿಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ​​ ಏ.18 ರಂದು  ವಿನಯ್ ಕುಲಕರ್ಣಿ ಅವರ ಅರ್ಜಿಯನ್ನು ವಜಾಗೊಳಿಸಿತ್ತು. ಧಾರವಾಡದಲ್ಲಿ ಯೋಗೀಶ್ ಗೌಡ ಹತ್ಯೆ ಪ್ರಕರಣದ 90 ಸಾಕ್ಷಿಗಳಿದ್ದಾರೆ. ವಿನಯ್ ಕಲಕರ್ಣಿಗೆ​ ಧಾರವಾಡ ಪ್ರವೇಶಕ್ಕೆ ಅನುಮತಿ ನೀಡಿದರೆ ಪ್ರಕರಣಕ್ಕೆ ಸಮಸ್ಯೆಯಾಗಬಹುದು. ಸೂಚಕರ ಮೂಲಕವೇ ಅಭ್ಯರ್ಥಿ ನಾಮಪತ್ರ ಸಲ್ಲಿಸಲು ಅವಕಾಶವಿದೆ ಎಂದು ಕೋರ್ಟ್​ ಮುಂದೆ ಸಿಬಿಐ ಪರ ವಕೀಲ ವಾದ ಮಂಡಿಸಿದ್ದರು. ಇದನ್ನು ಆಲಿಸಿದ ನ್ಯಾಯಮೂರ್ತಿ ಬಿ. ಜಯಂತ ಕುಮಾರ್  ಅವರು ಇದ್ದ ಪೀಠ, ವಿನಯ್ ಕುಲಕರ್ಣಿ ಮನವಿಯನ್ನು ತಿರಸ್ಕರಿಸಿ ಆದೇಶ ಹೊರಡಿಸಿದ್ದರು.

ಇದೀಗ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ​​ದ ತೀರ್ಪನ್ನು ಪ್ರಶ್ನಿಸಿ ಹೈಕೋರ್ಟ್​ ಮೆಟ್ಟಿಲೇರಿದ್ದ ವಿನಯ್​ ಕುಲಕರ್ಣಿ ಅವರಿಗೆ ಮತ್ತೆ ಹಿನ್ನಡೆಯಾಗಿದೆ. ಇದರಿಂದ ಮಾಜಿ ಸಚಿವ, ಧಾರವಾಡ ಕಾಂಗ್ರೆಸ್​ ಅಭ್ಯರ್ಥಿ ವಿನಯ್ ಕುಲಕರ್ಣಿ ಸಂಕಷ್ಟಕ್ಕೆ ಸಿಲುಕಿದಂತಾಗಿದೆ. ಈಗ ವಿನಯ ಕುಲಕರ್ಣಿ ಮತ್ತೆ ಸುಪ್ರಿಂ ಕೋರ್ಟ್​ ಮೊರೆ ಹೋಗುತ್ತಾರಾ ಕಾದು ನೋಡಬೇಕಿದೆ.

ಯೋಗೀಶ್ ಗೌಡ ಕೊಲೆ ಪ್ರಕರಣದ ಹಿನ್ನೆಲೆ

2016 ರ ಜೂನ್ 15 ರಂದು ಧಾರವಾಡದಲ್ಲಿ ಜಿಲ್ಲಾ ಪಂಚಾಯತ್ ಬಿಜೆಪಿ ಸದಸ್ಯ ಯೋಗೀಶ್ ಗೌಡ ಹತ್ಯೆಯಾಗಿತ್ತು. ಈ ಪ್ರಕರಣದಲ್ಲಿ ಆರೋಪಿಯಾಗಿರೋ ಮಾಜಿ ಸಚಿವ ವಿನಯ ಕುಲಕರ್ಣಿ ಅವರಿಗೆ ಧಾರವಾಡ ಜಿಲ್ಲೆಗೆ ಬರಲು ಅವಕಾಶ ಇಲ್ಲ. ಈ ಹಿನ್ನೆಲೆಯಲ್ಲಿ ಬೇರೆ ಬೇರೆ ಕಾರಣಗಳನ್ನು ನಮೂದಿಸಿ ಇತ್ತೀಚಿಗೆ ಸುಪ್ರೀಂ ಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿತ್ತು. ಅಲ್ಲದೇ ಈ ಬಗ್ಗೆ ಕೆಳಹಂತದ ನ್ಯಾಯಾಲಯದಲ್ಲಿಯೇ ಅನುಮತಿ ಕೇಳಿ ಎಂದೂ ಸೂಚಿಸಿತ್ತು. ಇದೇ ಕಾರಣಕ್ಕೆ ಕಳೆದ ವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿನಯ ಕುಲರ್ಣಿ ಅರ್ಜಿ ಸಲ್ಲಿಸಿದ್ದರು. ಆದರೆ ಅವರ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿತ್ತು. ಇದೇ ಕಾರಣಕ್ಕೆ ವಿನಯ ಕುಲಕರ್ಣಿ ಹೈಕೋರ್ಟ್​ಗೆ ಮೊರೆ ಹೋಗಿದ್ದರು. ಆದರೆ ಇಂದು ಹೈಕೋರ್ಟ್ ಅವರ ಮನವಿಯನ್ನು ತಳ್ಳಿ ಹಾಕಿ, ಅರ್ಜಿಯನ್ನು ವಜಾಗೊಳಿಸಿದೆ. ಈ ಹಿನ್ನೆಲೆಯಲ್ಲಿ ವಿನಯ ಕುಲಕರ್ಣಿ ಚುನಾವಣೆ ಸಂದರ್ಭದಲ್ಲಿ ಕ್ಷೇತ್ರ ಪ್ರವೇಶಿಸದಂತಾಗಿದೆ.

ಶೇ 90ರಷ್ಟು ವಿಚಾರಣೆ ಮುಗಿದ ಬಳಿಕ ಪ್ರಕರಣ ಸಿಬಿಐಗೆ

ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ ಕುಲಕರ್ಣಿ ಜೈಲು ಕಂಡು ಬಂದಿದ್ದಾರೆ. ಕೊಲೆ ನಡೆದ ಬಳಿಕ ಉಪ ನಗರ ಠಾಣೆ ಪೊಲೀಸರು ತನಿಖೆ ನಡೆಸಿ, ಅದಾಗಲೇ ವಿಚಾರಣೆಯನ್ನು ಶೇ 90 ರಷ್ಟು ಮುಗಿಸಿದ್ದರು. ಆದರೆ ರಾಜ್ಯದಲ್ಲಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಬಳಿಕ, 2019ರ ಸೆಪ್ಟೆಂಬರ್ 6ರಂದು ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿ, ರಾಜ್ಯ ಸರಕಾರ ಆದೇಶ ಹೊರಡಿಸಿತು. 2019ರ ಸೆಪ್ಟೆಂಬರ್ 24ರಂದು ಎಫ್​ಐಆರ್ ದಾಖಲಿಸಿಕೊಂಡ ಸಿಬಿಐ ತನಿಖೆ ಆರಂಭಿಸಿತು. ಪ್ರಕರಣದ ಅಂಗವಾಗಿ ಸಿಬಿಐ ಅನೇಕರನ್ನು ಬಂಧಿಸಿ ಜೈಲಿಗಟ್ಟಿತ್ತು. ಅದರಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ, ಅವರ ಮಾವ ಚಂದ್ರಶೇಖರ ಇಂಡಿ, ಕೆಎಎಸ್ ಅಧಿಕಾರಿ ಸೋಮಶೇಖರ್ ಕೂಡ ಇದ್ದರು. ಇದೀಗ ಇವರೆಲ್ಲ ಜಾಮೀನಿನ ಮೇಲೆ ಹೊರಗೆ ಬಂದಿದ್ದರೂ ಅವರಿಗೆ ಕಂಟಕ ತಪ್ಪಿಲ್ಲ. ಇದೇ ಕಾರಣಕ್ಕೆ ವಿನಯ ಕುಲಕರ್ಣಿ ಸೇರಿ ಐವರು ಆರೋಪಿಗಳು ರಾಜ್ಯ ಸರಕಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿದ್ದನ್ನು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಿದ್ದರು. ವಿಚಾರಣೆ ಮುಗಿಯೋ ಹಂತದಲ್ಲಿದ್ದಾಗ ಮತ್ತೇಕೆ ರಾಜ್ಯ ಸರಕಾರ ಸಿಬಿಐಗೆ ಪ್ರಕರಣದ ತನಿಖೆಯನ್ನು ನೀಡಿತು ಅನ್ನೋದು ಈ ಅರ್ಜಿದಾರರ ವಾದವಾಗಿತ್ತು. ಆದರೆ ಸುದೀರ್ಘ ವಿಚಾರಣೆ ನಡೆಸಿದ ಹೈಕೊರ್ಟ್​ನ ದ್ವಿಸದಸ್ಯ ಪೀಠ ಇವರೆಲ್ಲರ ಅರ್ಜಿಯನ್ನು ವಜಾಗೊಳಿಸಿ, ಸಿಬಿಐ ವಿಚಾರಣೆಯನ್ನು ಮುಂದುವರೆಸಲು ಆದೇಶ ನೀಡಿತ್ತು.

ಕಾಂಗ್ರೆಸ್ ಹೈಕಮಾಂಡ್ ವಿರುದ್ಧವೇ ಹೈಕೋರ್ಟ್ ಗರಂ

ವಿಧಾನಸಭೆ ಚುನಾವಣೆಯಲ್ಲಿ ಧಾರವಾಡ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನಯ ಕುಲಕರ್ಣಿ ಅವರನ್ನು ಘೋಷಣೆ ಮಾಡಲಾಗಿದೆ. ಇದರ ಬೆನ್ನಲ್ಲೇ ಅವರು ಕ್ಷೇತ್ರಕ್ಕೆ ಬರಲು ನಾನಾ ಕಸರತ್ತು ನಡೆಸಿದ್ದಾರೆ. ಈ ಬಗ್ಗೆ ಶುಕ್ರವಾರ ಬೆಳಿಗ್ಗೆ ಹೈಕೋರ್ಟ್​ನಲ್ಲಿ ವಿಚಾರಣೆ ನಡೆದು, ಕೊನೆಗೆ ಹೈಕೋರ್ಟ್ ಅವರ ಅರ್ಜಿಯನ್ನು ವಜಾಗೊಳಿಸಿದೆ. ಈ ವೇಳೆ ನ್ಯಾಯಮೂರ್ತಿಗಳು, ಸುಪ್ರೀಂ ಕೋರ್ಟ್ ವಿನಯ ಕುಲಕರ್ಣಿಗೆ ಧಾರವಾಡ ಜಿಲ್ಲೆ ಪ್ರವೇಶಿಸಿದಂತೆ ನಿರ್ಬಂಧ ವಿಧಿಸಿದೆ. ಹಾಗಿದ್ದಾಗ ಹೈಕಮಾಂಡ್ ಇವರಿಗೆ ಟಿಕೆಟ್ ಏಕೆ ಕೊಟ್ಟಿದೆ ಎಂದು ವಿನಯ ಕುಲಕರ್ಣಿ ಪರ ವಕೀಲರಿಗೆ ಖಾರವಾಗಿ ಪ್ರಶ್ನಿಸಿದೆ. ಸುಪ್ರೀಂ ಕೋರ್ಟ್ ಕೂಡಾ ಜಾಮೀನು ಷರತ್ತನ್ನು ಸಡಿಲಿಸಿಲ್ಲ ಎಂಬುದನ್ನೂ ಕೋರ್ಟ್ ಉಲ್ಲೇಖಿಸಿದೆ.

ವಿನಯ್ ಕುಲಕರ್ಣಿಗೆ ಭಾರೀ ಹಿನ್ನಡೆ

ಹೈಕೋರ್ಟ್​ನ ಇಂದಿನ ಆದೇಶದಿಂದ ವಿನಯ ಕುಲಕರ್ಣಿ ಅವರಿಗೆ ಭಾರೀ ಹಿನ್ನೆಡೆಯಾಗಿದೆ. ಇದೀಗ ಮತ್ತೆ ಅವರು ಸುಪ್ರೀಂ ಕೋರ್ಟ್ ಕದ ತಟ್ಟಬೇಕಿದೆ. ಆದರೆ ಅದಾಗಲೇ ಸುಪ್ರೀಂ ಇತ್ತೀಚಿಗಷ್ಟೇ ವಿನಯ ಕುಲಕರ್ಣಿ ಅವರ ಅರ್ಜಿ ವಜಾಗೊಳಿಸಿತ್ತು. ಹೀಗಾಗಿ ಈ ಬಾರಿ ಮತ್ತೆ ಸುಪ್ರಿಂ ಕೋರ್ಟ್​​ ಮೊರೆ ಹೋದರೆ, ಅದರಿಂದ ಹೆಚ್ಚಿನ ಲಾಭ ಆgಲಾರದು ಎನ್ನಲಾಗುತ್ತಿದೆ. ಚುನಾವಣೆಗೆ ಕೇವಲ 19 ದಿನಗಳಷ್ಟೇ ಉಳಿದಿವೆ. ಸುಪ್ರೀಂ ಕೋರ್ಟ್​​ಗೆ ಹೋಗಿ, ಅಲ್ಲಿ ವಿಚಾರಣೆ ಆರಂಭವಾಗಿ ಆದೇಶ ಬರಬೇಕೆಂದರೆ ನಾಲ್ಕೈದು ದಿನಗಳಾದರೂ ಬೇಕು. ಅಷ್ಟಾಗಿಯೂ ಕುಲಕರ್ಣಿ ಅವರಿಗೆ ಧನಾತ್ಮಕವಾಗಬಹುದಾದಂಥ ತೀರ್ಪು ಬುರುವುದು ಅಸಾಧ್ಯ ಎನ್ನಲಾಗಿದೆ. ಇವೆಲ್ಲವನ್ನು ಗಮನದಲ್ಲಿಟ್ಟುಕೊಂಡು ನಾಮಪತ್ರ ಸಲ್ಲಿಕೆಯ ಕೊನೆ ದಿನವಾಗಿದ್ದರಿಂದ ಪತ್ನಿ ಶಿವಲೀಲಾ ಕುಲಕರ್ಣಿ ಅವರಿಂದಲೂ ನಾಮಪತ್ರ ಸಲ್ಲಿಸಿದ್ದರು. ಇದೀಗ ಇಬ್ಬರ ನಾಮಪತ್ರಗಳು ಊರ್ಜಿತಗೊಂಡಿವೆ. ಆದರೆ ನಾಮಪತ್ರವನ್ನು ಹಿಂಪಡೆಯಲು ಶಿವಲೀಲಾ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ವಿನಯ ಕ್ಷೇತ್ರದಲ್ಲಿ ಸ್ಪರ್ಧಿಸೋದು ಖಚಿತವಾದಂತಾಗಿದೆ. ಆದರೆ ವಿನಯ ಕುಲಕರ್ಣಿ ಜಿಲ್ಲೆಯಿಂದ ಹೊರಗಡೆ ಉಳಿದುಕೊಂಡೇ ಹೇಗೆ ಸ್ಪರ್ಧಿಸುತ್ತಾರೆ? ಕಾರ್ಯಕರ್ತರನ್ನು ಹೇಗೆ ಸಂಪರ್ಕಿಸುತ್ತಾರೆ? ಅನ್ನೋ ಪ್ರಶ್ನೆಗಳು ಎದುರಾಗಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:25 pm, Fri, 21 April 23

ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್