ಡಿಮ್ಹಾನ್ಸ್ನಲ್ಲಿ MRI ಅಳವಡಿಸುವವರೆಗೆ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯ ವೇತನ ತಡೆಹಿಡಿಯುವಂತೆ ಹೈಕೋರ್ಟ್ ಆದೇಶ

ಎಂಆರ್‌ಐ ಯಂತ್ರ ಅಳವಡಿಸಿ ಕಾರ್ಯಾರಂಭ ಮಾಡುವವರೆಗೆ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರ ವೇತನವನ್ನುತಡೆಹಿಡಿಯುವಂತೆ ರಾಜ್ಯ ಸರ್ಕಾರಕ್ಕೆ ನ್ಯಾಯಾಲಯ ಸೂಚಿಸಿದೆ.

ಡಿಮ್ಹಾನ್ಸ್ನಲ್ಲಿ MRI ಅಳವಡಿಸುವವರೆಗೆ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯ ವೇತನ ತಡೆಹಿಡಿಯುವಂತೆ ಹೈಕೋರ್ಟ್ ಆದೇಶ
ಕರ್ನಾಟಕ ಹೈಕೋರ್ಟ್
Follow us
TV9 Web
| Updated By: ಆಯೇಷಾ ಬಾನು

Updated on: Apr 06, 2022 | 11:41 AM

ಧಾರವಾಡದ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ (ಡಿಮ್ಹಾನ್ಸ್) ಎಂಆರ್‌ಐ ಯಂತ್ರ ಅಳವಡಿಸಿ ಕಾರ್ಯನಿರ್ವಹಿಸುವವರೆಗೆ ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ವೇತನವನ್ನು ತಡೆಹಿಡಿಯುವಂತೆ ಕರ್ನಾಟಕ ಹೈಕೋರ್ಟ್ ಮಂಗಳವಾರ ಆದೇಶಿಸಿದೆ.

ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ ಮತ್ತು ನ್ಯಾಯಮೂರ್ತಿ ಎಸ್‌ಆರ್ ಕೃಷ್ಣ ಕುಮಾರ್ ಅವರ ವಿಭಾಗೀಯ ಪೀಠವು, ಎರಡು ವರ್ಷಗಳ ಹಿಂದೆಯೇ ಯಂತ್ರವನ್ನು ಖರೀದಿಸಿ ಕಾರ್ಯ ಪ್ರಾರಂಭಿಸಲು ಆರು ವಾರಗಳ ಕಾಲಾವಕಾಶವನ್ನು ನೀಡಲಾಗಿತ್ತು. ಆದರೆ ಅದು ಇನ್ನೂ ಕಾರ್ಯನಿರ್ವಹಿಸುತ್ತಿಲ್ಲ ಎಂದು ಪೀಠವು ಪ್ರಶ್ನಿಸಿದೆ.

2020ರ ಮಾರ್ಚ್ 5ರಂದು, ಡಿಮ್ಹಾನ್ಸ್ ಬಳಕೆಗೆ ಅಗತ್ಯವಿರುವ ಎಂಆರ್‌ಐ ಯಂತ್ರವನ್ನು ಖರೀದಿಸಲು ತಕ್ಷಣವೇ ಕ್ರಮಗಳನ್ನು ತೆಗೆದುಕೊಳ್ಳುವಂತೆ ನ್ಯಾಯಾಲಯವು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಆರು ವಾರಗಳಲ್ಲಿ ಡಿಮ್ಹಾನ್ಸ್ಗೆ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸಬೇಕು. ಎಂಆರ್ಐ ಸ್ಯಾನಿಂಗ್ ಯಂತ್ರ ಖರೀದಿಸಬೇಕು, ವೈದ್ಯಕೀಯ ಅಧೀಕ್ಷಕರನ್ನು ನೇಮಕ ಮಾಡಬೇಕು ಎಂದು ಗಡುವು ನೀಡಿತ್ತು. ಆದ್ರೆ ಸರ್ಕಾರ ಆದೇಶ ಪಾಲಿಸಿಲ್ಲ. ಯಂತ್ರವನ್ನು ಅಳವಡಿಸದಿರುವ ಅಧಿಕಾರಿಗಳ ಉದ್ದೇಶವನ್ನು ಇದು ಬಿಂಬಿಸುತ್ತದೆ. ಸಂಬಂಧಿಸಿದ ಅಧಿಕಾರಿಗಳ ಕಾರ್ಯವೈಖರಿಯನ್ನು ನಾವು ಪ್ರಶಂಸಿಸುವುದಿಲ್ಲ ಎಂದು ನ್ಯಾಯಾಲಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದೆ.

ಅಮೆರಿಕಾದಿಂದ ಎಂಆರ್‌ಐ ಮಷಿನ್ ಬಂದಿದೆ. ಅದರ ಅಳವಡಿಕೆಗೆ ಶೇ.75 ಸಿವಿಲ್ ಕಾಮಗಾರಿ ಮುಕ್ತಾಯವಾಗಿದ್ದು, ಇನ್ನುಳಿದ ಶೇ.25ರಷ್ಟು ಕಾಮಗಾರಿ ಪ್ರಗತಿಯಲ್ಲಿದೆ, ಹಾಗಾಗಿ ಸಮಯ ನೀಡಬೇಕೆಂದು ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಮಾಣಪತ್ರ ಸಲ್ಲಿಸಿತ್ತು. ಅದನ್ನು ಪರಿಶೀಲಿಸಿದ ನ್ಯಾಯಪೀಠ, ”ಪದೇ ಪದೇ ಸೂಚಿಸಿದರೂ ಕ್ರಮ ಕೈಗೊಳ್ಳುತ್ತಿಲ್ಲ, ಹಲವು ಗಡುವು ನೀಡಿದರೂ ಸೌಕರ್ಯ ಒದಗಿಸಿಲ್ಲ. ಇದು ಸರ್ಕಾರಿ ಸಂಸ್ಥೆಯ ಅಸಮರ್ಥತೆ ತೋರಿಸುತ್ತಿದೆ. ಇಂತಹ ನಡವಳಿಕೆಯನ್ನು ಸಹಿಸಲು ಸಾಧ್ಯವಿಲ್ಲ, ಜನರ ಸಮಸ್ಯೆಗಳ ಬಗ್ಗೆ ಸಂವೇದನೆಯನ್ನೇ ಕಳೆದುಕೊಂಡಿದ್ದೀರಾ ಎಂದು ಪ್ರಶ್ನಿಸಿತು.

ಇನ್ನು ಹಿಂದಿನ ವಿಚಾರಣೆಯ ಸಮಯದಲ್ಲಿ ಮಾರ್ಚ್ 30 ರೊಳಗೆ ಎಂಆರ್ಐ ಯಂತ್ರವನ್ನು ಕಾರ್ಯಗತಗೊಳಿಸಲಾಗುವುದು ಎಂದು ರಾಜ್ಯ ಸರ್ಕಾರವು ಭರವಸೆ ನೀಡಿತ್ತು. ಎಂಆರ್‌ಐ ಯಂತ್ರದ ಅಳವಡಿಕೆಯ ವಿಷಯವು ಸಾಕಷ್ಟು ಸಮಯದಿಂದ ನಡೆಯುತ್ತಿದೆ, 2020 ರ ಮಾರ್ಚ್‌ನಲ್ಲಿ ಯಂತ್ರವನ್ನು ಖರೀದಿಸಲು ಮತ್ತು ಸ್ಥಾಪಿಸಲು ತಕ್ಷಣ ಕ್ರಮಗಳನ್ನು ತೆಗೆದುಕೊಳ್ಳುವಂತೆ ರಾಜ್ಯಕ್ಕೆ ನಿರ್ದೇಶನ ನೀಡಲಾಗಿತ್ತು. ಹಲವು ಬಾರಿ ಈ ವಿಚಾರದಲ್ಲಿ ವಿಳಂಬ ಮಾಡಿದ ಕಾರಣ ಸಂಬಂಧಪಟ್ಟ ಅಧಿಕಾರಿಗಳು ತಮ್ಮ ಸೂಕ್ಷ್ಮತೆಯನ್ನು ಕಳೆದುಕೊಂಡಿದ್ದಾರೆ ಮತ್ತು ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಕಾಳಜಿ ವಹಿಸುತ್ತಿಲ್ಲ ಎಂದು ನ್ಯಾಯಾಲಯ ಟೀಕಿಸಿದೆ. ಹಾಗಾಗಿ ಎಂಆರ್‌ಐ ಯಂತ್ರ ಅಳವಡಿಸಿ ಕಾರ್ಯಾರಂಭ ಮಾಡುವವರೆಗೆ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರ ವೇತನವನ್ನುತಡೆಹಿಡಿಯುವಂತೆ ರಾಜ್ಯ ಸರ್ಕಾರಕ್ಕೆ ನ್ಯಾಯಾಲಯ ಸೂಚಿಸಿದೆ. ಈ ಪ್ರಕರಣದ ಮುಂದಿನ ವಿಚಾರಣೆ ಏಪ್ರಿಲ್ 21 ರಂದು ನಡೆಯಲಿದೆ.

ಇದನ್ನೂ ಓದಿ: ಉರ್ದು ಮಾತಾಡಲು ನಿರಾಕರಿಸಿದ್ದಕ್ಕೆ ಕೊಲೆ ಮಾಡಲಾಗಿದೆ: ಮತೀಯ ತಿರುವು ಪಡೆದುಕೊಂಡ ಚಂದ್ರು ಹತ್ಯೆ ಪ್ರಕರಣ

Aadhaar On DigiLocker: ಡಿಜಿಲಾಕರ್​ ಜತೆ ಆಧಾರ್ ಜೋಡಿಸುವುದು ಹೇಗೆ ಹಂತಹಂತವಾದ ಮಾಹಿತಿ ಇಲ್ಲಿದೆ

ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು