ಹಿಜಾಬ್, ಕೇಸರಿ ವಿವಾದ ರಾಜಕೀಯಮಯ, ಶಾಲಾ-ಕಾಲೇಜಿಗೆ ರಜೆ ನೀಡಿದ್ದು ಸರಿಯಲ್ಲ: ಸಭಾಪತಿ ಬಸವರಾಜ ಹೊರಟ್ಟಿ

ಹಿಜಾಬ್ ಕೇಸರಿ ವಿವಾದ ರಾಜಕೀಯಮಯವಾಗಿದ್ದು, ಶಾಲಾ-ಕಾಲೇಜಿಗೆ ರಜೆ ನೀಡಿದ್ದು ಸರಿಯಲ್ಲ. ಸರ್ಕಾರಕ್ಕೆ ಈ ವಿಷಯದಲ್ಲಿ ಗಂಭೀರತೆ ಇಲ್ಲ. ಶಿಕ್ಷಣ ಸಚಿವರು ಸುಮ್ಮನೆ ಆರಾಮಾಗಿದ್ದರೆ ಹೇಗೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಬೇಸರ ವ್ಯಕ್ತಪಡಿಸಿದ್ದಾರೆ.

ಹಿಜಾಬ್, ಕೇಸರಿ ವಿವಾದ ರಾಜಕೀಯಮಯ, ಶಾಲಾ-ಕಾಲೇಜಿಗೆ ರಜೆ ನೀಡಿದ್ದು ಸರಿಯಲ್ಲ: ಸಭಾಪತಿ ಬಸವರಾಜ ಹೊರಟ್ಟಿ
ಸಭಾಪತಿ ಬಸವರಾಜ ಹೊರಟ್ಟಿ (ಸಂಗ್ರಹ ಚಿತ್ರ)
Follow us
TV9 Web
| Updated By: preethi shettigar

Updated on:Feb 11, 2022 | 12:21 PM

ಹುಬ್ಬಳ್ಳಿ:  ಹಿಜಾಬ್(Hijab),​ ಕೇಸರಿ ಶಾಲು ವಿವಾದಕ್ಕೆ ಸಂಬಂಧಪಟ್ಟಂತೆ ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ(Basavaraj Horatti) ಪ್ರತಿಕ್ರಿಯೆ ನೀಡಿದ್ದು, ಸರ್ಕಾರ ತನ್ನ ಜವಬ್ದಾರಿಯಿಂದ ವಿಮುಖವಾಗಿದೆ‌. ಹಿಜಾಬ್ ಕೇಸರಿ ವಿವಾದ(controversy) ರಾಜಕೀಯಮಯವಾಗಿದ್ದು, ಶಾಲಾ-ಕಾಲೇಜಿಗೆ ರಜೆ ನೀಡಿದ್ದು ಸರಿಯಲ್ಲ. ಸರ್ಕಾರಕ್ಕೆ ಈ ವಿಷಯದಲ್ಲಿ ಗಂಭೀರತೆ ಇಲ್ಲ. ಶಿಕ್ಷಣ ಸಚಿವರು ಸುಮ್ಮನೆ ಆರಾಮಾಗಿದ್ದರೆ ಹೇಗೆ ಎಂದು ರಾಜ್ಯ ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ.

ರಾಮನ ಭಕ್ತರೇ ಇರಲಿ ಹನುಮನ ಭಕ್ತರೇ ಇರಲಿ ಮಕ್ಕಳ ಜೊತೆ ರಾಜಕೀಯ ಮಾಡಬಾರದು. ಕೆಲ ಸಂಘಟನೆಗಳು ರಾಜಕೀಯ ನಾಯಕರ ಸಂಬಂಧಿಕರಾಗಿದ್ದಾರೆ. ಕುಮ್ಮಕ್ಕು ಕೊಟ್ಟು ಈ ರೀತಿ ಮಾಡಲಾಗುತ್ತಿದೆ. ಸಮಾಜದಲ್ಲಿ ಜವಬ್ದಾರಿ ಇರುವವರು ನಮ್ಮ ಊರು, ‌ನಮ್ಮ ಜಿಲ್ಲೆಯ ಮಕ್ಕಳು ಎನ್ನುವುದನ್ನು ಮರೆತಿದ್ದಾರೆ. ಈ ರೀತಿ ಮಾಡುವುದು ಒಂದೇ, ಕೊಲೆ ಮಾಡುವುದು ಎರಡೂ ಒಂದೇ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ.

ನ್ಯಾಯಾಲಯದಿಂದ ತೀರ್ಮಾನ ಆದರೂ, ಮಕ್ಕಳಲ್ಲಿ ಈ ವಿಷ ಹಾಗೇ ಇರುತ್ತದೆ. ನಾನೇ ಉಸ್ತುವಾರಿ ತೆಗೆದುಕೊಂಡು ಈ ಸಮಸ್ಯೆ ಬಗೆ ಹರಿಸು ಅಂದರೆ ಮಾಡುತ್ತೇನೆ. ಪೋಷಕರು, ಕಾಲೇಜು ಆಡಳಿತ ಮಂಡಳಿ, ಶಿಕ್ಷಣ ಸಚಿವರ ಜೊತೆ ಸಭೆ ಮಾಡುತ್ತೀನಿ. ಸಿಎಂ ಬಸವರಾಜ ಬೊಮ್ಮಾಯಿ ನಂಗೆ ಹೇಳಲಿ ಎಂದು ರಾಜ್ಯ ಸರ್ಕಾರಕ್ಕೆ ಪರೋಕ್ಷವಾಗಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ‌ ಎಚ್ಚರಿಸುವಂತೆ ಹೇಳಿಕೆ ನೀಡಿದ್ದಾರೆ.

ತುರ್ತು ವಿಚಾರಣೆಗೆ ನಕಾರ, ವಿಷಯ ದೊಡ್ಡದು ಮಾಡದಂತೆ ಸುಪ್ರೀಂಕೋರ್ಟ್ ಕಿವಿಮಾತು ಕಾಲೇಜುಗಳಲ್ಲಿ ಹಿಜಾಬ್, ಕೇಸರಿ ಶಾಲು ಸಂಘರ್ಷ ವಿಚಾರವು ಸದ್ಯ ದೇಶ ವ್ಯಾಪಿಯಾಗಿದೆ. ನಿನ್ನೆ ವಿಚಾರಣೆ ನಡೆಸಿದ್ದ ಹೈಕೋರ್ಟ್‌ ಮಧ್ಯಂತರ ಮೌಖಿಕ ಆದೇಶ ನೀಡಿದೆ. ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಅರ್ಜಿ ವಿಚಾರಣೆ ಮುಂದಿನ ಆದೇಶದವರೆಗೂ ವಿದ್ಯಾರ್ಥಿಗಳು ಧಾರ್ಮಿಕ ಡ್ರೆಸ್ ಧರಿಸದಂತೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಸಂವಿಧಾನದ 25ನೇ ವಿಧಿಯಡಿ ನೀಡಿರುವ ಹಕ್ಕು ಸಿಗಲ್ಲ ಎಂದು ಹಿಜಾಬ್ ಅರ್ಜಿದಾರರ ಪರ ವಕೀಲ ದೇವದತ್ತ ಕಾಮತ್ ಸುಪ್ರೀಂಕೋರ್ಟ್​ ಮೊರೆಹೋಗಿದ್ದಾರೆ.

ಕಾಲೇಜುಗಳಲ್ಲಿ ಹಿಜಾಬ್, ಕೇಸರಿ ಶಾಲು ಸಂಘರ್ಷ ವಿಚಾರವಾಗಿ ಹೈಕೋರ್ಟ್ ಮಧ್ಯಂತರ ಮೌಖಿಕ ಆದೇಶಕ್ಕೆ ತಡೆ ಕೋರಿ ಅರ್ಜಿ ಸಲ್ಲಿಸಲಾಗಿದೆ. ಆದರೆ ತುರ್ತು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಕರ್ನಾಟಕ ಹೈಕೋರ್ಟ್ ಆದೇಶದ ಬಗ್ಗೆ ನಮಗೆ ಮಾಹಿತಿ ಇಲ್ಲ. ಆದರೆ ಕರ್ನಾಟಕದಲ್ಲಿ ಏನಾಗುತ್ತಿದೆ ಎಂಬುದನ್ನು ವೀಕ್ಷಿಸುತ್ತಿದ್ದೇವೆ. ಮೊದಲು ಕರ್ನಾಟಕ ಹೈಕೋರ್ಟ್ ತನ್ನ ಆದೇಶವನ್ನು ನೀಡಲಿ. ಸೂಕ್ತ ಸಂದರ್ಭದಲ್ಲಿ ನಾವು ಪ್ರಕರಣವನ್ನು ಕೈಗೆತ್ತಿಕೊಳ್ಳುತ್ತೇವೆ. ನಮಗೆ ಎಲ್ಲರ ಸಾಂವಿಧಾನಿಕ ಹಕ್ಕುಗಳನ್ನು ರಕ್ಷಿಸಬೇಕಿದೆ. ನಾವು ಖಂಡಿತವಾಗಿಯೂ ಇದನ್ನು ಪರಿಗಣಿಸುತ್ತೇವೆ. ಯಾವುದಾದರೂ ಪರೀಕ್ಷೆಗೆ ತೊಂದರೆ ಆಗುವುದಾದರೆ ಸೂಕ್ತ ಸಂದರ್ಭದಲ್ಲಿ ವಿಚಾರಣೆ ನಡೆಸುತ್ತೇವೆ. ಪ್ರಕರಣದ ಬಗ್ಗೆ ಆಲೋಚಿಸುವಂತೆ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಲಾಗಿದೆ ಎಂದು ಸುಪ್ರೀಂ ಕೋರ್ಟ್​ ಹೇಳಿದೆ.

ಇದನ್ನೂ ಓದಿ: ಹಿಜಾಬ್ V/S ಕೇಸರಿ ಶಾಲು ಸಂಘರ್ಷ! ಹೊರಗಡೆಯವರು ಪ್ರಚೋದನೆ ನೀಡುತ್ತಿದ್ದಾರೆ; ಸಿಎಂ ಬೊಮ್ಮಾಯಿ

ಹಿಜಾಬ್‌ ವಿವಾದದ ಅತಿದೊಡ್ಡ ಎಕ್ಸ್‌ಕ್ಲೂಸಿವ್‌ ಸುದ್ದಿ: ನವೆಂಬರ್ ತಿಂಗಳಲ್ಲೇ ನಡೆದಿತ್ತು ಹಿಜಾಬ್ ವಿವಾದಕ್ಕೆ ಮಾಸ್ಟರ್ ಪ್ಲಾನ್!?

Published On - 12:09 pm, Fri, 11 February 22