AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಕಾಮಣ್ಣನ‌ ಮೂರ್ತಿ ಪ್ರತಿಷ್ಠಾಪನೆಗೆ ಜಟಾಪಟಿ, ಉಪನಗರ ಪೊಲೀಸ್ ಠಾಣೆಯಲ್ಲಿ ತುರ್ತು ಸಭೆ

ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಮೇಯರ್ ಈರೇಶ್ ಅಂಚಟಗೇರಿ ಕಾಮಣ್ಣನ ಮೂರ್ತಿ ಪ್ರತಿಷ್ಠಾಪನೆಗೆ ಷರತ್ತುಬದ್ಧ ಅವಕಾಶ ನೀಡಿದ್ದರು. ಆದ್ರೆ ಪಾಲಿಕೆ ಆಯುಕ್ತರು ಇನ್ನೂ ಅನುಮತಿ ನೀಡಿಲ್ಲ. ಹೀಗಾಗಿ ಹಿಂದೂ ಪರ ಸಂಘಟನೆಗಳು ಮೈದಾನದ ಮುಂದೆ ಆಕ್ರೋಶ ಹೊರ ಹಾಕಿದ್ದಾರೆ.

Follow us
ಆಯೇಷಾ ಬಾನು
|

Updated on:Mar 09, 2023 | 1:02 PM

ಹುಬ್ಬಳ್ಳಿ: ಸದಾ ಒಂದಿಲ್ಲೊಂದು ವಿವಾದದ ಸುಳಿಯಲ್ಲಿ ಸಿಲುಕಿಕೊಳ್ಳುವ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಗಣೇಶ ಮೂರ್ತಿ ಪ್ರತಿಷ್ಠಾಪನೆ(Ganesha Utsav), ಟಿಪ್ಪು ಜಯಂತಿ(Tipu Jayanti) ಆಚರಣೆ, ಮೈದಾನದ ಹೆಸರು ಬದಲಾವಣೆ ವಿಚಾರವಾಗಿ ವಿವಾದದಲ್ಲಿದ್ದ ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ(Hubli Idgah Maidan) ಹೋಳಿ ಹಬ್ಬ(Holi 2023) ಹಿನ್ನೆಲೆ ಕಾಮಣ್ಣನ ಮೂರ್ತಿ ಪ್ರತಿಷ್ಠಾಪನೆ ವಿಚಾರದಲ್ಲಿ ಗಲಾಟೆ ಶುರುವಾಗಿದೆ. ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಮೇಯರ್ ಈರೇಶ್ ಅಂಚಟಗೇರಿ ಕಾಮಣ್ಣನ ಮೂರ್ತಿ ಪ್ರತಿಷ್ಠಾಪನೆಗೆ ಷರತ್ತುಬದ್ಧ ಅವಕಾಶ ನೀಡಿದ್ದರು. ಆದ್ರೆ ಪಾಲಿಕೆ ಆಯುಕ್ತರು ಇನ್ನೂ ಅನುಮತಿ ನೀಡಿಲ್ಲ. ಹೀಗಾಗಿ ಹಿಂದೂ ಪರ ಸಂಘಟನೆಗಳು ಮೈದಾನದ ಮುಂದೆ ಆಕ್ರೋಶ ಹೊರ ಹಾಕಿದ್ದಾರೆ.

ಹುಬ್ಬಳ್ಳಿ ಈದ್ಗಾ ಮೈದಾನದ ಮುಂದೆ ಪ್ರತಿಭಟನೆ ನಡೆಸಿ ಹಿಂದೂ ಪರ ಸಂಘಟನೆಗಳು ಕಾಮಣ್ಣನ‌ ಮೂರ್ತಿ ಪ್ರತಿಷ್ಠಾಪನೆಗೆ ಆಗ್ರಹಿಸಿವೆ. ಈ ಹಿಂದೆ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡಿದ್ದೀರಿ, ಟಿಪ್ಪು, ಕನಕ ಜಯಂತಿ ಆಚರಣೆಗೂ ಅನುಮತಿ ನೀಡಿದ್ದೀರಿ, ಅದೇ ಮಾದರಿಯಲ್ಲಿ ಕಾಮಣ್ಣ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ಕೊಡಿ ಎಂದು ಪಟ್ಟು ಹಿಡಿದಿದ್ದಾರೆ. ಹೀಗಾಗಿ ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಈದ್ಗಾ ಮೈದಾನದ ಬಳಿ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ಮಹಿಳಾ ದಿನ: ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಇಡೀ ಕಾರ್ಯಾಚರಣೆ ಸಂಪೂರ್ಣವಾಗಿ ಸುರಕ್ಷಿತವಾಗಿ ಮಹಿಳಾ ತಂಡದ ಸುಪರ್ದಿಯಲ್ಲಿತ್ತು!

ಹುಬ್ಬಳ್ಳಿಯ ಉಪನಗರ ಪೊಲೀಸ್ ಠಾಣೆಯಲ್ಲಿ ತುರ್ತು ಸಭೆ

ಈದ್ಗಾ ಮೈದಾನದಲ್ಲಿ ಕಾಮಣ್ಣನ ಮೂರ್ತಿ ಪ್ರತಿಷ್ಠಾಪನೆಗೆ ಪಟ್ಟು ಹಿನ್ನೆಲೆ ಹುಬ್ಬಳ್ಳಿಯ ಉಪನಗರ ಪೊಲೀಸ್ ಠಾಣೆಯಲ್ಲಿ ತುರ್ತು ಸಭೆ ನಡೆಸಲಾಗುತ್ತಿದೆ. ಹುಬ್ಬಳ್ಳಿ-ಧಾರವಾಡ ಪಾಲಿಕೆ ಆಯುಕ್ತ ಡಾ.ಗೋಪಾಲಕೃಷ್ಣ, ಹು-ಧಾ ಪೊಲೀಸ್ ಆಯುಕ್ತ ರಮಣಗುಪ್ತಾ ನೇತೃತ್ವದಲ್ಲಿ ಸಭೆ ನಡೆಸಲಾಗುತ್ತಿದ್ದು ಹಿಂದೂಪರ ಸಂಘಟನೆಗಳ ಮುಖಂಡರು ಕೂಡ ಸಭೆಯಲ್ಲಿ ಭಾಗಿಯಾಗಿದ್ದಾರೆ.

ಸೂಕ್ತ ಬಂದೋಬಸ್ತ್ ಇಲ್ಲದ ಕಾರಣ ಅವಕಾಶ ನೀಡಿಲ್ಲ

ಇನ್ನು ಈ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಪಾಲಿಕೆ ಆಯುಕ್ತ ಗೋಪಾಲಕೃಷ್ಣ ಮಾತನಾಡಿದ್ದು ಪಾಲಿಕೆಗೆ ಹೋಳಿ ಹುಣ್ಣಿಮೆ ಪ್ರಯುಕ್ತ ಕಾಮಣ್ಣನ ಪ್ರತಿಷ್ಠಾಪನೆ ಮಾಡಲು ರಾಣಿ ಚೆನ್ನಮ್ಮ ಮೈದಾನ, ಗಜಾನನ ಉತ್ಸವ ಮಹಾಮಂಡಳಿಯಿಂದ ಮನವಿ ಕೊಟ್ಟಿದ್ರು. ಸೂಕ್ತ ಬಂದೋಬಸ್ತ್ ಇಲ್ಲದ ಕಾರಣ ನಾವು ಅನುಮತಿ ಕೊಟ್ಟಿಲ್ಲ. ಮೋದಿ ಬರುವ ಕಾರಣಕ್ಕೆ ಭದ್ರತಾ ದೃಷ್ಟಿಯಿಂದ ಕಾಮಣ್ಣನ ಮೂರ್ತಿ ಪ್ರತಿಷ್ಠಾಪನೆ ಅರ್ಜಿಯನ್ನು ಪರಿಗಣಿಸಲಿಲ್ಲ. ನಾವು ಈಗಾಗಲೇ ಆಯೋಜಕರನ್ನು ಕರೆದು ಹೇಳಿದ್ದೇವೆ. ಮೇಯರ್ ಅವರು ಸದಸ್ಯರೊಂದಿಗೆ ಚರ್ಚೆ ಮಾಡಿ ಅವರ ನಿಲುವು ಹೇಳಿದ್ದಾರೆ. ಆದ್ರೆ ಅಂತಿಮವಾಗಿ ಆಯುಕ್ತರೇ ಅನುಮತಿ ಕೊಡಬೇಕಾದವರು. ಭದ್ರತಾ ದೃಷ್ಟಿಯಿಂದ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚೆ ಮಾಡಿದ್ದೇವೆ. ಮೋದಿ ಬರೋ ಕಾರಣಕ್ಕೆ ಪೊಲೀಸ್ ಬಂದೋಬಸ್ತ್ ಹಿನ್ನಲೆ ಪೊಲೀಸ್ ಸಿಬ್ದಂದಿ ಧಾರವಾಡಕ್ಕೆ ಹೋಗ್ತಾರೆ. ಮೋದಿ ಅವರು IIT ಉದ್ಘಾಟನೆಗೆ ಬರುವ ಕಾರಣ ನಾವು ಅರ್ಜಿಯನ್ನು ಪರಿಗಣಿಸಲಿಲ್ಲ. ನಾವು ಮುಂಜಾಗೃತ ಕ್ರಮದಿಂದ ಈದ್ಗಾ ಮೈದಾನದಲ್ಲಿ ಕಾಮಣ್ಣನ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ಕೊಡಲಿಲ್ಲ. ನನಗೆ ಯಾವುದೇ ರಾಜಕೀಯ ನಾಯಕರು ಒತ್ತಡ ಹಾಕಿಲ್ಲ ಎಂದು ತಿಳಿಸಿದ್ದಾರೆ.

ಈ ಹಿಂದೆ ಗಜಾನನ ಉತ್ಸವ ಮಹಾಮಂಡಳಿ ಗಣೇಶ ಉತ್ಸವಕ್ಕೆ ಅನುಮತಿ ಕೇಳಿತ್ತು. ಅದೇ ರೀತಿ ಈ ಬಾರಿ ಕೂಡ ಅಧ್ಯಕ್ಷ ಸಂಜಯ್ ಬಡಾಸ್ಕರ್ ನೇತೃತ್ವದಲ್ಲಿ ರಂಗ ಪಂಚಮಿ ಪ್ರಯುಕ್ತ ಕಾಮಣ್ಣನ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿ ವಿಚಾರಣೆ ಮಾಡಿದ ಹು-ಧಾ ಪಾಲಿಕೆ, ವಿವಿಧ ನಿಯಮಗಳನ್ನು ವಿಧಿಸಿ ಕಾಮಣ್ಣನ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡಿತ್ತು. 10,000 ರೂ ಶುಲ್ಕ, ಷರತ್ತು ವಿಧಿಸಿ ಇಂದಿನಿಂದ 3 ದಿನಗಳ ಕಾಲ ಕಾಮಣ್ಣನ‌ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡಲಾಗಿತ್ತು. ಕಾರ್ಯಕ್ರಮದ ವೇಳೆ ಯಾವುದೇ ಗಲಭೆಗೆ ಅವಕಾಶ ನೀಡಬಾರದು. ಒಂದು ವೇಳೆ ಗಲಾಟೆಯಾಗಿ ಆಸ್ತಿ ಪಾಸ್ತಿ ಹಾನಿಯಾದ್ರೆ ಆಯೋಜಕರೇ ಜವಾಬ್ದಾರರೆಂದು ಹು-ಧಾ ಪಾಲಿಕೆ ಷರತ್ತು ವಿಧಿಸಿತ್ತು. ಆದ್ರೆ ಮೇಯರ್ ಈ ಆದೇಶ ಹೊರಡಿಸಿದ್ದು ಪಾಲಿಕೆ ಆಯುಕ್ತರು ಇನ್ನೂ ಅವಕಾಶ ನೀಡಿಲ್ಲ. ಹೀಗಾಗಿ ಹುಬ್ಬಳ್ಳಿ ಮೈದಾನದಲ್ಲಿ ಆಕ್ರೋಶ ಭುಗಿಲೆದ್ದಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:07 pm, Thu, 9 March 23

Daily Devotional: ಅಸಹಾಯಕರ ಶಾಪ ಹೇಗೆ ಪರಿಣಾಮ ಬೀರುತ್ತೆ ಗೊತ್ತಾ?
Daily Devotional: ಅಸಹಾಯಕರ ಶಾಪ ಹೇಗೆ ಪರಿಣಾಮ ಬೀರುತ್ತೆ ಗೊತ್ತಾ?
ಈ ರಾಶಿಯವರಿಗೆ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಆರ್ಥಿಕ ಲಾಭ, ಸಂತೋಷ
ಈ ರಾಶಿಯವರಿಗೆ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಆರ್ಥಿಕ ಲಾಭ, ಸಂತೋಷ
ಇದು ಆತ್ಮದ ಹಾಡು; ‘ಶಿವಂ ಶಿವಂ ಸನಾತನಂ’ ಬಗ್ಗೆ ವಿಜಯ್ ಪ್ರಕಾಶ್ ಮಾತು
ಇದು ಆತ್ಮದ ಹಾಡು; ‘ಶಿವಂ ಶಿವಂ ಸನಾತನಂ’ ಬಗ್ಗೆ ವಿಜಯ್ ಪ್ರಕಾಶ್ ಮಾತು
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ