ಧಾರವಾಡದಲ್ಲಿ ದಾರುಣ ಘಟನೆ: ಬೀದಿ ನಾಯಿಗಳ ದಾಳಿಗೆ ಅಮಾಯಕ ಭಿಕ್ಷುಕಿ ಸಾವು

Street Dog Attack: ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದಲ್ಲಿ ಕಳೆದ ರಾತ್ರಿ ಮಲಗಿದ್ದ ಭಿಕ್ಷುಕಿ ಮೇಲೆ ಬೀದಿ ನಾಯಿಗಳು ದಾಳಿ ಮಾಡಿವೆ. ಈ ಪರಿಣಾಮ ಭಿಕ್ಷುಕಿ ಪ್ರಾಣಬಿಟ್ಟಿದ್ದಾರೆ.

ಧಾರವಾಡದಲ್ಲಿ ದಾರುಣ ಘಟನೆ: ಬೀದಿ ನಾಯಿಗಳ ದಾಳಿಗೆ ಅಮಾಯಕ ಭಿಕ್ಷುಕಿ ಸಾವು
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on:Jan 10, 2023 | 12:57 PM

ಧಾರವಾಡ: ಭಿಕ್ಷೆ ಬೇಡುತ್ತ, ಜನ ಕೊಟ್ಟಿದ್ದನ್ನು ತಿಂದು, ಎಲ್ಲೆಂದರಲ್ಲಿ ಮಲಗಿ ಅನಾಥವಾಗಿ ಜೀವನ ಸಾಗಿಸುತ್ತಿದ್ದ ಭಿಕ್ಷುಕಿಯ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿ ಕೊಂದು ಹಾಕಿರುವ ಅಮಾನವೀಯ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದಲ್ಲಿ ಕಳೆದ ರಾತ್ರಿ ಮಲಗಿದ್ದ ಭಿಕ್ಷುಕಿ ಮೇಲೆ ಬೀದಿ ನಾಯಿಗಳು ದಾಳಿ ಮಾಡಿವೆ. ಈ ಪರಿಣಾಮ ಭಿಕ್ಷುಕಿ ಪ್ರಾಣಬಿಟ್ಟಿದ್ದಾರೆ.

ಧಾರವಾಡದಲ್ಲಿ ಬೀದಿ ನಾಯಿಗಳ ಆವಳಿಗೆ ಜನ ಬೆಚ್ಚಿಬಿದ್ದಿದ್ದಾರೆ. ಎಂದಿನಂತೆ ರಸ್ತೆ ಬದಿ ರಾತ್ರಿ ನಿದ್ದೆಗೆ ಜಾರಿದ್ದ ಭಿಕ್ಷುಕಿ ಮೇಲೆ ಬೀದಿ ನಾಯಿಗಳು ಎರಗಿವೆ. ಭಿಕ್ಷುಕಿಯನ್ನು ಕಚ್ಚಿ ಎಳೆದಾಡಿವೆ. ನಾಯಿ ದಾಳಿಯಿಂದ ಭಿಕ್ಷುಕಿ ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ. ಗ್ರಾಮದ ಖಬರಸ್ತಾನ್ ಬಳಿ ಶವ ಪತ್ತೆಯಾಗಿದ್ದು ಘಟನಾ ಸ್ಥಳಕ್ಕೆ ಗರಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಾಯಿ ದಾಳಿಗೆ ಮೃತಪಟ್ಟ ಭಿಕ್ಷುಕಿ ಹೆಸರು, ವಿಳಾಸ ಪತ್ತೆಯಾಗಿಲ್ಲ.

ಇದನ್ನೂ ಓದಿ:  ಪಿಚ್ಚನಕೆರೆ ಏರಿ ಮೇಲೆ ಚಲಿಸುತ್ತಿದ್ದ ಶಾಲಾ ಬಸ್ಸಿನಿಂದ ಚಕ್ರದಡಿಗೆ ಬಿದ್ದು ಯುಕೆಜಿ ವಿದ್ಯಾರ್ಥಿನಿ ಸಾವು

ಕಲ್ಲಿನಿಂದ ಹೊಡೆದು ವ್ಯಕ್ತಿಯ ಹತ್ಯೆ

ತುಮಕೂರಿನ ಕ್ಯಾತ್ಸಂದ್ರ ಸರ್ಕಲ್ ಬಳಿ ಕಲ್ಲಿನಿಂದ ಹೊಡೆದು ವ್ಯಕ್ತಿಯನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. ವೆಲ್ಡಿಂಗ್ ಕೆಲಸ‌ ಮಾಡಿಕೊಂಡಿದ್ದ ಬೆಂಗಳೂರಿನ ಲಗ್ಗೆರೆ ನಿವಾಸಿ ಕುಮಾರ್​(36) ಕೊಲೆಯಾದ ವ್ಯಕ್ತಿ. ಆದ್ರೆ ​ಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಕ್ಯಾತ್ಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮಲಗಿದ್ದ ಮಹಿಳೆಗೆ ಬೆಂಕಿ ಹಚ್ಚಿ ಭೀಕರ ಹತ್ಯೆ

ಮಂಡ್ಯದ ಮದ್ದೂರು ತಾಲೂಕಿನ ಮಾರಸಿಂಗನಹಳ್ಳಿ ಗ್ರಾಮದಲ್ಲಿ ಬೆಳ್ಳಂ ಬೆಳಗ್ಗೆ ಗ್ರಾಮಸ್ಥರು ಬೆಚ್ಚಿ ಬೀಳುವಂತಹ ಘಟನೆ ನಡೆದಿದೆ. ಮಲಗಿದ್ದ ಮಹಿಳೆ ಪ್ರೇಮ (42) ಬೆಂಕಿ ಹಚ್ಚಿ ಭೀಕರ ಹತ್ಯೆ ಮಾಡಲಾಗಿದೆ. ಮನೆಯಲ್ಲಿ ಮಲಗಿದ್ದಾಗ ಹತ್ಯೆ ಮಾಡಿ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. ಬೆಸಗರಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಮೃತ ಮಹಿಳೆಗೆ ಓರ್ವ ಪುತ್ರನಿದ್ದು ಆತ ಬೆಂಗಳೂರಿನಲ್ಲಿ ವಾಸವಾಗಿದ್ದಾನೆ. ಪತಿಯ ನಿಧನದ ಬಳಿಕ ಮಹಿಳೆ ಒಂಟಿಯಾಗಿ ಜೀವನ ಸಾಗಿಸುತ್ತಿದ್ದಳು. ರಾತ್ರಿ ತಮ್ಮ ಮನೆಯಲ್ಲಿ ಒಂಟಿಯಾಗಿ ಮಲಗಿದ್ದಾಗ ಬೆಂಕಿ ಹಚ್ಚಿ ಹತ್ಯೆ ಮಾಡಲಾಗಿದೆ. ಹಾಸಿಗೆಯಲ್ಲಿಯೇ ಮಹಿಳೆ ಸಂಪೂರ್ಣ ಸುಟ್ಟು ಹೋಗಿದ್ದಾರೆ. ಬೆಸಗರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:33 am, Tue, 10 January 23

ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ