ಹುಬ್ಬಳ್ಳಿ ಸಿಸಿಬಿ ಪೊಲೀಸರ ಬಲೆಗೆ ಬಿದ್ದ ಹನಿಟ್ರ್ಯಾಪ್ ಗ್ಯಾಂಗ್; ನಾಲ್ವರು ಅರೆಸ್ಟ್
ಇತ್ತೀಚೆಗೆ ಕಲಬುರಗಿಯಲ್ಲಿ ಹನಿಟ್ರ್ಯಾಪ್ ಪ್ರಕರಣವೊಂದು ಬೆಳಕಿಗೆ ಬಂದಿತ್ತು. ಇದರ ಬೆನ್ನಲ್ಲೇ ಇದೀಗ ಹುಬ್ಬಳ್ಳಿ(Hubballi) ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಎರಡ್ಮೂರು ವಿಡಿಯೋ ತುಣುಕುಗಳನ್ನು ರೆಕಾರ್ಡ್ ಮಾಡಿಕೊಂಡು ಬ್ಲಾಕ್ ಮೇಲ್ ಮಾಡುತ್ತಿದ್ದ ಗ್ಯಾಂಗ್ನ್ನು ಹೆಡೆಮುರಿ ಕಟ್ಟಿದ್ದಾರೆ.
ಹುಬ್ಬಳ್ಳಿ, ಅ.08: ಹುಬ್ಬಳ್ಳಿ(Hubballi) ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಹನಿಟ್ರ್ಯಾಪ್ ಮಾಡುತ್ತಿದ್ದ ಗ್ಯಾಂಗ್ನ್ನು ಹೆಡೆಮುರಿ ಕಟ್ಟಿದ್ದಾರೆ. ಎರಡ್ಮೂರು ವಿಡಿಯೋ ತುಣುಕುಗಳನ್ನು ರೆಕಾರ್ಡ್ ಮಾಡಿಕೊಂಡು ಬ್ಲಾಕ್ ಮೇಲ್ ಮಾಡುತ್ತಿದ್ದ ಈ ಗ್ಯಾಂಗ್, ಹುಬ್ಬಳ್ಳಿಯ ವ್ಯಾಪಾರಿ ಚಗನ್ ಲಾಲ್ ಚೌಧರಿ ಎಂಬುವರಿಗೆ ಹನಿಟ್ರ್ಯಾಪ್ ಮಾಡಿತ್ತು. ಅವರ ವಿಡಿಯೋಗಳನ್ನು ಮಾಡಿಕೊಂಡು 5 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದರು.
ಈ ಕುರಿತು ಗಾಬರಿಯಾದ ಚಗನ್ ಲಾಲ್, ಅಶೋಕ ನಗರ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದರು. ದೂರು ನೀಡಿದ ಬೆನ್ನಲ್ಲೇ ಎಚ್ಚೆತ್ತ ಸಿಸಿಬಿ ಪೊಲೀಸರು, ಕಾರ್ಯಾಚರಣೆ ನಡೆಸಿ ಹನಿಟ್ರ್ಯಾಪ್ ಮಾಡಿದ್ದ ನಾಲ್ವರು ಬಂಧಿಸಿದ್ದಾರೆ. ವಿಚಾರಣೆ ವೇಳೆ ಸತ್ಯಾಂಶ ಬಾಯ್ಬಿಟ್ಟ ಖದೀಮರು, ‘ಈ ಗ್ಯಾಂಗ್ನ ಕೆಲ ಸದಸ್ಯರು ಅಂಗಡಿಗಳ ಮೇಲಿನ ನಂಬರ್ಗಳನ್ನು ತಗೆದುಕೊಂಡು ಹೋಗಿ ಯುವತಿಗೆ ನೀಡುತ್ತಿದ್ದರು.
ಇದನ್ನೂ ಓದಿ:ಕಲಬುರಗಿಯಲ್ಲಿ ಮತ್ತೊಂದು ಹನಿಟ್ರ್ಯಾಪ್ ಪ್ರಕರಣ ಬೆಳಕಿಗೆ: ಉದ್ಯಮಿಗಳೇ ಇವರ ಟಾರ್ಗೆಟ್
ನಂಬರ್ ಸಿಗುತ್ತಿದ್ದಂತೆ ಆರೋಪಿ ಯುವತಿ ಜೋಯಾ ಶಬಾನಾ ಚಾಟಿಂಗ್ ಮಾಡಿ ಬಲೆಗೆ ಹಾಕಿಕೊಳ್ಳುತ್ತಿದ್ದರು. ಇದೀಗ ಜೋಯಾ ಶಬಾನಾ, ಸೈಯದ್, ತೌಸಿಫ್, ಅಬ್ದುಲ್ ರೆಹಮಾನ್ ಸೇರಿದಂತೆ ನಾಲ್ವರು ಖದೀಮರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಸಿಡಿಲು ಬಡಿದು ಬಾಲಕ ಸಾವು
ಬೀದರ್: ಜಿಲ್ಲೆಯ ಭಾಲ್ಕಿ ತಾಲೂಕಿನ ಮೇಹಕರ್ ಗ್ರಾಮದಲ್ಲಿ ಪೋಷಕರ ಜತೆ ಜಮೀನಿಗೆ ತೆರಳಿದ್ದಾಗ ಸಿಡಿಲು ಬಡಿದು ಬಾಲಕ ಸಾವನ್ನಪ್ಪಿದ ಘಟನೆ ನಡೆದಿದೆ. ಮುಕೇಶ್ ಭೀಮಣ್ಣ ಮೊಳಕೇರಾ(16) ಮೃತ ಬಾಲಕ. ಶಾಲೆಗೆ ರಜೆ ಹಿನ್ನೆಲೆ ಸೋಯಾಬಿನ್ ಕಟಾವಿಗೆ ತೆರಳಿದ್ದ ವೇಳೆ ದುರ್ಘಟನೆ ನಡೆದಿದೆ. ಈ ಕುರಿತು ಮೇಹಕರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:45 pm, Tue, 8 October 24