ಸಿಲಿಂಡರ್ ಸ್ಫೋಟಕ್ಕೆ ಮನೆ ಧ್ವಂಸ: ತಪ್ಪಿದ ಭಾರೀ ಅನಾಹುತ
ಧಾರವಾಡ: ಅಡುಗೆ ಸಿಲಿಂಡರ್ ಸ್ಫೋಟಗೊಂಡು ಮನೆ ಧ್ವಂಸವಾಗಿರುವ ಘಟನೆ ತಾಲೂಕಿನ ಶಿವಳ್ಳಿ ಗ್ರಾಮದಲ್ಲಿ ನಡೆದಿದೆ. ಹುಸೇನ್ ಸಾಬಣ್ಣನವರ್ ಎಂಬುವರಿಗೆ ಸೇರಿದ ಮನೆಯಲ್ಲಿ ಈ ಘಟನೆ ಸಂಭವಿಸಿದೆ. ಹುಸೇನ್ ಸಾಬಣ್ಣನವರ್ ಕುಟುಂಬಸ್ಥರು ಕೆಲಸಕ್ಕೆಂದು ಹೊಲಕ್ಕೆ ಹೋಗಿದ್ದರು. ಈ ವೇಳೆ ಸಿಲಿಂಡರ್ ಸ್ಫೋಟಗೊಂಡು ಮನೆ ಹಾಗು ಸಾಮಗ್ರಿಗಳು ಛಿದ್ರ ಛಿದ್ರವಾಗಿವೆ. ಅದೃಷ್ಟವಶಾತ್ ಮನೆಯಲ್ಲಿ ಯಾರೂ ಇಲ್ಲದ ಕಾರಣ ಭಾರೀ ಅನಾಹುತ ತಪ್ಪಿದೆ. ಈ ಸಂಬಂಧ ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಧಾರವಾಡ: ಅಡುಗೆ ಸಿಲಿಂಡರ್ ಸ್ಫೋಟಗೊಂಡು ಮನೆ ಧ್ವಂಸವಾಗಿರುವ ಘಟನೆ ತಾಲೂಕಿನ ಶಿವಳ್ಳಿ ಗ್ರಾಮದಲ್ಲಿ ನಡೆದಿದೆ. ಹುಸೇನ್ ಸಾಬಣ್ಣನವರ್ ಎಂಬುವರಿಗೆ ಸೇರಿದ ಮನೆಯಲ್ಲಿ ಈ ಘಟನೆ ಸಂಭವಿಸಿದೆ.
ಹುಸೇನ್ ಸಾಬಣ್ಣನವರ್ ಕುಟುಂಬಸ್ಥರು ಕೆಲಸಕ್ಕೆಂದು ಹೊಲಕ್ಕೆ ಹೋಗಿದ್ದರು. ಈ ವೇಳೆ ಸಿಲಿಂಡರ್ ಸ್ಫೋಟಗೊಂಡು ಮನೆ ಹಾಗು ಸಾಮಗ್ರಿಗಳು ಛಿದ್ರ ಛಿದ್ರವಾಗಿವೆ. ಅದೃಷ್ಟವಶಾತ್ ಮನೆಯಲ್ಲಿ ಯಾರೂ ಇಲ್ಲದ ಕಾರಣ ಭಾರೀ ಅನಾಹುತ ತಪ್ಪಿದೆ. ಈ ಸಂಬಂಧ ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.