ಸಿಲಿಂಡರ್ ಸ್ಫೋಟಕ್ಕೆ ಮನೆ ಧ್ವಂಸ: ತಪ್ಪಿದ ಭಾರೀ ಅನಾಹುತ

ಧಾರವಾಡ: ಅಡುಗೆ ಸಿಲಿಂಡರ್ ಸ್ಫೋಟಗೊಂಡು ಮನೆ ಧ್ವಂಸವಾಗಿರುವ ಘಟನೆ ತಾಲೂಕಿನ ಶಿವಳ್ಳಿ ಗ್ರಾಮದಲ್ಲಿ ನಡೆದಿದೆ. ಹುಸೇನ್ ಸಾಬಣ್ಣನವರ್‌ ಎಂಬುವರಿಗೆ ಸೇರಿದ ಮನೆಯಲ್ಲಿ ಈ ಘಟನೆ ಸಂಭವಿಸಿದೆ. ಹುಸೇನ್ ಸಾಬಣ್ಣನವರ್‌ ಕುಟುಂಬಸ್ಥರು ಕೆಲಸಕ್ಕೆಂದು ಹೊಲಕ್ಕೆ ಹೋಗಿದ್ದರು. ಈ ವೇಳೆ ಸಿಲಿಂಡರ್ ಸ್ಫೋಟಗೊಂಡು ಮನೆ ಹಾಗು ಸಾಮಗ್ರಿಗಳು ಛಿದ್ರ ಛಿದ್ರವಾಗಿವೆ. ಅದೃಷ್ಟವಶಾತ್ ಮನೆಯಲ್ಲಿ ಯಾರೂ ಇಲ್ಲದ ಕಾರಣ ಭಾರೀ ಅನಾಹುತ ತಪ್ಪಿದೆ. ಈ ಸಂಬಂಧ ಧಾರವಾಡ ಗ್ರಾಮೀಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಿಲಿಂಡರ್ ಸ್ಫೋಟಕ್ಕೆ ಮನೆ ಧ್ವಂಸ: ತಪ್ಪಿದ ಭಾರೀ ಅನಾಹುತ
ಸಾಧು ಶ್ರೀನಾಥ್​

Updated on: Dec 28, 2019 | 4:14 PM

ಧಾರವಾಡ: ಅಡುಗೆ ಸಿಲಿಂಡರ್ ಸ್ಫೋಟಗೊಂಡು ಮನೆ ಧ್ವಂಸವಾಗಿರುವ ಘಟನೆ ತಾಲೂಕಿನ ಶಿವಳ್ಳಿ ಗ್ರಾಮದಲ್ಲಿ ನಡೆದಿದೆ. ಹುಸೇನ್ ಸಾಬಣ್ಣನವರ್‌ ಎಂಬುವರಿಗೆ ಸೇರಿದ ಮನೆಯಲ್ಲಿ ಈ ಘಟನೆ ಸಂಭವಿಸಿದೆ.

ಹುಸೇನ್ ಸಾಬಣ್ಣನವರ್‌ ಕುಟುಂಬಸ್ಥರು ಕೆಲಸಕ್ಕೆಂದು ಹೊಲಕ್ಕೆ ಹೋಗಿದ್ದರು. ಈ ವೇಳೆ ಸಿಲಿಂಡರ್ ಸ್ಫೋಟಗೊಂಡು ಮನೆ ಹಾಗು ಸಾಮಗ್ರಿಗಳು ಛಿದ್ರ ಛಿದ್ರವಾಗಿವೆ. ಅದೃಷ್ಟವಶಾತ್ ಮನೆಯಲ್ಲಿ ಯಾರೂ ಇಲ್ಲದ ಕಾರಣ ಭಾರೀ ಅನಾಹುತ ತಪ್ಪಿದೆ. ಈ ಸಂಬಂಧ ಧಾರವಾಡ ಗ್ರಾಮೀಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us