ಹುಬ್ಬಳ್ಳಿ: ಮುಂಬೈ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ, ನಾಲ್ವರ ಸಾವು

ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಬೆಳ್ಳಿಗಟ್ಟಿ ಕ್ರಾಸ್ ಬಳಿಯ ಬೆಂಗಳೂರು - ಮುಂಬೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಕಾರು ಮತ್ತು ಲಾರಿ ನಡುವೆ ಸರಣಿ ಅಪಘಾತ ಸಂಭವಿಸಿದೆ. ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಹುಬ್ಬಳ್ಳಿ: ಮುಂಬೈ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ, ನಾಲ್ವರ ಸಾವು
ಹುಬ್ಬಳ್ಳಿ ರಸ್ತೆ ಅಪಘಾತ
Follow us
ಶಿವಕುಮಾರ್ ಪತ್ತಾರ್. ಹುಬ್ಬಳ್ಳಿ
| Updated By: ವಿವೇಕ ಬಿರಾದಾರ

Updated on:Jan 06, 2024 | 9:23 AM

ಹುಬ್ಬಳ್ಳಿ, ಜನವರಿ 06: ಧಾರವಾಡ (Dharwad) ಜಿಲ್ಲೆ ಕುಂದಗೋಳ (Kundagol) ತಾಲೂಕಿನ ಬೆಳ್ಳಿಗಟ್ಟಿ ಕ್ರಾಸ್ ಬಳಿಯ ಬೆಂಗಳೂರು-ಮುಂಬೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು (ಜ.06) ಬೆಳ್ಳಂ ಬೆಳಿಗ್ಗೆ ಎರಡು ಕಾರು ಮತ್ತು ಲಾರಿ ನಡುವೆ ಸರಣಿ ಅಪಘಾತ (Accident) ಸಂಭವಿಸಿದೆ. ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಾಸನದ ಮಣಿಕಂಠ (26), ಪವನ(23), ಚಂದನ (31) ಮತ್ತು ಬೆಂಗಳೂರಿನ ಪ್ರಭು (34) ಮೃತ ದುರ್ದೈವಿಗಳು.

ಘಟನೆಯಲ್ಲಿ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಹುಬ್ಬಳ್ಳಿ ಕಿಮ್ಸ್​​​ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕುಂದಗೋಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾಸನದಿಂದ ಗೋವಾಗೆ ತೆರಳುತ್ತಿದ್ದ ಕಾರು ಮತ್ತು ಬೆಂಗಳೂರಿನಿಂದ ಶಿರಡಿಗೆ ತೆರಳುತಿದ್ದ ಕಾರಿನ ಮಧ್ಯೆ ಭೀಕರ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಧಾರವಾಡ ಎಸ್ಪಿ ಡಾ ಗೋಪಾಲ ಬ್ಯಾಕೋಡ್ ಭೇಟಿ ನೀಡಿದ್ದಾರೆ.

ಇನ್ನು ಕಿಮ್ಸ್​ ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್​ ಲಾಡ್​ ಭೇಟಿ ನೀಡಿ, ಶವಗಳನ್ನು ಕಂಡು ಭಾವುಕರಾದರು. ಮತ್ತು ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಅನಿರೀಕ್ಷಿತವಾಗಿ ಭೀಕರ ಅಪಘಾತ ಸಂಭವಿಸಿದೆ. ಕಾರು ಅಪಘಾತ ಸಂಭವಿಸಿದ ನಂತರ ರಸ್ತೆ ಬದಿ ನಿಂತವರ ಮೇಲೆ ಲಾರಿ ಹರಿದಿದೆ. ಲಾರಿ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ. ಯಾವ ರೀತಿ ಆಗಿದೆ ಅಂತ ಗೊತ್ತಾಗಿಲ್ಲ. ಮಂಜು ಇತ್ತಾ ಅಂತ ಪರಿಶೀಲನೆ ಮಾಡುತ್ತೇವೆ. ಈ ದುರ್ಘಟನೆ ಸಂಭವಿಸಬಾರದಾಗಿತ್ತು ಎಂದು ಹೇಳಿದರು.

ಶಿರಾಡಿ ಘಾಟ್​ನಲ್ಲಿ ಲಾರಿ ಮತ್ತು ಟ್ರಕ್ ಮಧ್ಯೆ ಅಪಘಾತ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಶಿರಾಡಿ ಘಾಟ್​ನಲ್ಲಿ ಲಾರಿ ಮತ್ತು ಟ್ರಕ್ ಮಧ್ಯೆ ಅಪಘಾತ ಸಂಭವಿಸಿದೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆಯಲ್ಲಿ ಅಪಾಯದಿಂದ ಡ್ರೈವರ್ ಕ್ಲೀನರ್ ಪಾರಾಗಿದ್ದಾರೆ. ಟ್ರಕ್ ಸ್ಕಿಡ್ ಆಗಿ ಮುಂಭಾಗದ ಲಾರಿಗೆ ಡಿಕ್ಕಿ ಹೊಡೆದಿದೆ.

ಸೀಟ್ ಬೆಲ್ಟ್ ಹಾಕಿದ್ದರಿಂದ ಡ್ರೈವರ್ ಹಾಗೂ ಕ್ಲೀನರ್ ಬಚಾವ್ ಆಗಿದ್ದಾರೆ. ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಟಾವಿಗೆ ಬಂದಿದ್ದ ರಾಗಿಗೆ ಬೆಂಕಿ; ಸಹೋದರರ ಮೇಲೆ ಶಂಕೆ ವ್ಯಕ್ತಪಡಿಸಿದ ಮಾಲಿಕ

ನೆಲಮಂಗಲ: ಕಟಾವಿಗೆ ಬಂದಿದ್ದ ರಾಗಿ ಬೆಳೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಎಡೆಹಳ್ಳಿ ಗ್ರಾಮದಲ್ಲಿ ನಡೆದಿದೆ. ಬೆಂಕಿಯ ಕೆನ್ನಾಲ್ಲಿಗೆ ರೈತ ಮಂಜುನಾಥ್ ಸೇರಿದ ರಾಗಿ ಬೆಳೆ ಸುಟ್ಟು ಭಸ್ಮವಾಗಿದೆ. ಮಂಜುನಾಥ್ 1 ಎಕರೆ 20 ಗುಂಟೆ ಜಮೀನಿನಲ್ಲಿ ರಾಗಿ ಬೆಳೆದಿದ್ದರು. ಮಂಜುನಾಥ್ ಸಹೋದರರ ಮೇಲೆ ಮೇಲೆ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:35 am, Sat, 6 January 24

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ