AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಷುಲ್ಲಕ ಕಾರಣಕ್ಕೆ 6 ತಿಂಗಳ ಮಗು ಸೇರಿ ಐವರ ಮೇಲೆ ಆ್ಯಸಿಡ್ ದಾಳಿ: ಆರೋಪಿಯೂ ಸೇರಿ ಇಬ್ಬರ ಸ್ಥಿತಿ ಗಂಭೀರ

ಹುಬ್ಬಳ್ಳಿಯ ತಾರಿಹಾಳದಲ್ಲಿ ನಡೆದ ಆಘಾತಕಾರಿ ಆ್ಯಸಿಡ್ ದಾಳಿಯಲ್ಲಿ 6 ತಿಂಗಳ ಮಗು ಸೇರಿ ಐವರು ಗಾಯಗೊಂಡಿದ್ದಾರೆ. ನಾದಿನಿಯರ ಫೋಟೋ ತೆಗೆದ ಕ್ಷುಲ್ಲಕ ಕಾರಣಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ ಈ ಕೃತ್ಯ ನಡೆದಿದೆ. ಘಟನೆಯಲ್ಲಿ ಆರೋಪಿ ಕೂಡ ಗಂಭೀರವಾಗಿ ಗಾಯಗೊಂಡಿದ್ದು, ಆತನ ಪತ್ನಿ ಸ್ಥಿತಿ ಚಿಂತಾಜನಕವಾಗಿದೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕ್ಷುಲ್ಲಕ ಕಾರಣಕ್ಕೆ 6 ತಿಂಗಳ ಮಗು ಸೇರಿ ಐವರ ಮೇಲೆ ಆ್ಯಸಿಡ್ ದಾಳಿ: ಆರೋಪಿಯೂ ಸೇರಿ ಇಬ್ಬರ ಸ್ಥಿತಿ ಗಂಭೀರ
ಸಾಂದರ್ಭಿಕ ಚಿತ್ರImage Credit source: thedailystar.net
ಸಂಜಯ್ಯಾ ಚಿಕ್ಕಮಠ
| Edited By: |

Updated on: May 09, 2026 | 2:42 PM

Share

ಹುಬ್ಬಳ್ಳಿ, ಮೇ 09: ವ್ಯಕ್ತಿಯೋರ್ವ ಕ್ಷುಲ್ಲಕ ಕಾರಣಕ್ಕೆ 6 ತಿಂಗಳ ಮಗು ಸೇರಿ ಐವರ ಮೇಲೆ ಆ್ಯಸಿಡ್ ದಾಳಿ ನಡೆಸಿರುವ ಆಘಾತಕಾರಿ ಘಟನೆ ಹುಬ್ಬಳ್ಳಿಯ ತಾರಿಹಾಳದ ವಾಜಪೇಯಿ ನಗರದಲ್ಲಿ ನಡೆದಿದೆ. ನಾದಿನಿಯರ ಫೋಟೋ ತೆಗೆದ ವಿಚಾರಕ್ಕೆ ಆರಂಭವಾದ ಜಗಳ ವಿಕೋಪಕ್ಕೆ ಹೋದ ಪರಿಣಾಮ ಸುರೇಶ್​ ಎಂಬಾತ ಕುಟುಂಬದ ಐವರ ಮೇಲೆ ಆ್ಯಸಿಡ್ ದಾಳಿ ನಡೆಸಿರುವ ಆರೋಪ ಕೇಳಿಬಂದಿದೆ. ಘಟನೆಯಲ್ಲಿ 6 ತಿಂಗಳ ಮಗುವಿನ ಮುಖ, ಬಾಯಿಗೂ ಆ್ಯಸಿಡ್​​ ತಗುಲಿದ್ದು, ರಾಜೇಶ್ವರಿ (24) ಎಂಬವರ ಸ್ಥಿತಿ ಚಿಂತಾಜನಕವಾಗಿದೆ.

  • ಕ್ಷುಲ್ಲಕ ಕಾರಣಕ್ಕೆ 6 ತಿಂಗಳ ಮಗು ಸೇರಿ ಐವರ ಮೇಲೆ ಆ್ಯಸಿಡ್ ದಾಳಿ
  • ಹುಬ್ಬಳ್ಳಿಯ ತಾರಿಹಾಳದ ವಾಜಪೇಯಿ ನಗರದಲ್ಲಿ ನಡೆದ ಘಟನೆ
  • ನಾದಿನಿಯರ ಫೋಟೋ ತೆಗೆದ ವಿಚಾರಕ್ಕೆ ಶುರುವಾಗಿದ್ದ ಜಗಳ

ಇದನ್ನೂ ಓದಿ: ಜಗದ್ಗುರುಗಳ ಸಮ್ಮುಖದಲ್ಲಿ ಸ್ವಾಮೀಜಿ-ಭಕ್ತರ ಸಂಧಾನ; ಏನಿದು ಕುಂದಗೋಳ ಮಠದ ವಿವಾದ?

ನಾದಿನಿಯರ ವಿಚಾರವಾಗಿ ಸುರೇಶ್ ಮತ್ತು ಆತನ ಪತ್ನಿ ರಾಜೇಶ್ವರಿ ನಡುವೆ ಜಗಳ ನಡೆದಿತ್ತು. ನಾದಿನಿಯರ ಫೋಟೋ ತೆಗೆಯದಂತೆ ಗಂಡನಿಗೆ ರಾಜೇಶ್ವರಿ ತಾಕೀತು ಮಾಡಿದ್ದರೂ ಮತ್ತೆ  ಫೋಟೋ ತೆಗೆದು ಸುರೇಶ್ ಕಿರಿಕ್ ಮಾಡುತ್ತಿದ್ದ. ಇದೇ ವಿಚಾರವಾಗಿ ದಂಪತಿ ನಡುವಿನ ಜಗಳ ಆ್ಯಸಿಡ್​​ ದಾಳಿಯ ಹಂತಕ್ಕೆ ಹೋಗಿದೆ. ಘಟನೆಯಲ್ಲಿ ಶ್ರುತಿ ಹಾಗೂ ರೇಷ್ಮಾ ಎಂಬುವವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ವತಃ ಆರೋಪಿ ಸುರೇಶ್​ ಬೈಲ್​ ಪತ್ತಾರ(33) ಕೂಡ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಾಳುಗಳನ್ನು ಕೂಡಲೇ ಹುಬ್ಬಳ್ಳಿಯ ಕಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಮುಂದುವರಿದಿದೆ.

ಇನ್ನು ಆರೋಪಿ ಸುರೇಶ್​ ಬೈಲ್​ ಪತ್ತಾರ ತಾಮ್ರ, ಹಿತ್ತಾಳೆ ಕೆಲಸಗಳನ್ನು ಮಾಡಿಕೊಂಡಿದ್ದ. ನಾದಿನಿಯರ ವಿಚಾರ ಸಂಬಂಧದ ಜಗಳ ವಿಕೋಪಕ್ಕೆ ಹೋಗುತ್ತಿದ್ದಂತೆ ತಾಮ್ರ, ಹಿತ್ತಾಳೆ ತೊಳೆಯಲು ಬಳಸುತ್ತಿದ್ದ ಕೆಮಿಕಲ್​​ನಿಂದಲೇ ಈತ ಕುಟುಂಬದ ಮೇಲೆ ದಾಳಿ ನಡೆಸಿದ್ದಾನೆ ಎನ್ನಲಾಗಿದೆ. ಈ ವೇಳೆ ಸುರೇಶ್​​ ಮೈಮೇಲೆಯೂ ಆ್ಯಸಿಡ್​​ ಚೆಲ್ಲಿದ ಪರಿಣಾಮ ಆತನೂ ಗಂಭೀರ ಗಾಯಗೊಂಡು ಆಸ್ಪತ್ರೆ ಸೇರುವಂತಾಗಿದೆ. ಒಟ್ಟಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಶುರುವಾದ ಜಗಳವೀಗ ಇಬ್ಬರ ಜೀವವನ್ನು ಅಪಾಯಕ್ಕೆ ನೂಕಿದ್ದು, ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಸಂಜಯ್ಯಾ ಚಿಕ್ಕಮಠ
ಸಂಜಯ್ಯಾ ಚಿಕ್ಕಮಠ

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್​ನಿಂದ ಆರಂಭವಾದ ವೃತ್ತಿ ಬದುಕು, ಕಲಬುರಗಿ, ಕೊಪ್ಪಳದಿಂದ ಇದೀಗ ಹುಬ್ಬಳ್ಳಿಗೆ ಬಂದಿದ್ದು, ಉತ್ತರ ಕರ್ನಾಟಕ ಪ್ರಮುಖ ವಾಣಿಜ್ಯ ನಗರ ಹುಬ್ಬಳ್ಳಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು