ದೇಶದ 58 ವಿಮಾನ ನಿಲ್ದಾಣಗಳ ಪೈಕಿ ಚೋಟಾ ಮುಂಬೈ ಹುಬ್ಬಳ್ಳಿ ಏರ್​ಪೋರ್ಟ್​ಗೆ ಟಾಪ್​ 5 ಗರಿ

ಉತ್ತರ ಕರ್ನಾಟಕದ ಹುಬ್ಬಳ್ಳಿ ವಿಮಾನ ನಿಲ್ದಾಣವು ದೇಶದ ವಿಮಾನ ನಿಲ್ದಾಣಗಳ ಪಟ್ಟಿಯಲ್ಲಿ 5ನೇ ಸ್ಥಾನ ಗಿಟ್ಟಿಸಿಕೊಂಡಿದೆ. ಗ್ರಾಹಕರ ಸೇವೆಯಲ್ಲಿ ಅತ್ಯುನ್ನತ ದರ್ಜೆಗೇರುವ ಮೂಲಕ ಅಭಿವೃದ್ಧಿಯಲ್ಲಿ ರಾಷ್ಟ್ರದ ಗಮನ ಸೆಳೆಯುವಲ್ಲಿ ಹುಬ್ಬಳ್ಳಿ ಯಶಸ್ವಿಯಾಗಿದೆ. ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸಂತಸ ವ್ಯಕ್ತಪಡಿಸಿದ್ದು ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ದೇಶದ 58 ವಿಮಾನ ನಿಲ್ದಾಣಗಳ ಪೈಕಿ ಚೋಟಾ ಮುಂಬೈ ಹುಬ್ಬಳ್ಳಿ ಏರ್​ಪೋರ್ಟ್​ಗೆ ಟಾಪ್​ 5 ಗರಿ
ಹುಬ್ಬಳ್ಳಿ ಏರ್​ಪೋರ್ಟ್​
Follow us
TV9 Web
| Updated By: ಆಯೇಷಾ ಬಾನು

Updated on: Mar 21, 2024 | 11:33 AM

ಹುಬ್ಬಳ್ಳಿ, ಮಾರ್ಚ್​.21: ಚೋಟಾ ಮುಂಬೈ ಎಂದೇ ಪ್ರಸಿದ್ಧಿಯಾಗಿರುವ ವಾಣಿಜ್ಯ ನಗರಿ ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೀಗ (Hubballi Airport ) ದೇಶದಲ್ಲೇ ಟಾಪ್ 5 ಗರಿ ಸಿಕ್ಕಿದೆ. ಭಾರತದ 58 ವಿಮಾನ ನಿಲ್ದಾಣಗಳನ್ನು ಈ ಗ್ರಾಹಕರ ಸಂತೃಪ್ತಿ ಸಮೀಕ್ಷೆಯಲ್ಲಿ ಪರಿಗಣಿಸಲಾಗಿತ್ತು. ಅದರಲ್ಲಿ ಟಾಪ್ 5ನೇ ಸ್ಥಾನವನ್ನು ಹುಬ್ಬಳ್ಳಿಯ ವಿಮಾನ ನಿಲ್ದಾಣವು ಪಡೆದುಕೊಂಡಿದೆ. ಗ್ರಾಹಕರ ಸೇವೆಯಲ್ಲಿ ಅತ್ಯುನ್ನತ ದರ್ಜೆಗೇರುವ ಮೂಲಕ ಅಭಿವೃದ್ಧಿಯಲ್ಲಿ ರಾಷ್ಟ್ರದ ಗಮನ ಸೆಳೆಯುವಲ್ಲಿ ಹುಬ್ಬಳ್ಳಿ ಯಶಸ್ವಿಯಾಗಿದೆ.

1974ರಲ್ಲಿ ನಿರ್ಮಾಣ ಕಂಡಿರುವ ಈ ವಿಮಾನ ನಿಲ್ದಾಣ ಸುವರ್ಣ ಮಹೋತ್ಸವದ ಸಂಭ್ರಮದಲ್ಲಿ ಇರುವಾಗಲೇ ಈಗ ಗ್ರಾಹಕರ ಸಂತೃಪ್ತಿ ಸಮೀಕ್ಷೆಯಲ್ಲಿ ದೇಶದಲ್ಲೇ ಟಾಪ್​ 5 ಆಗಿರುವುದು ಹುಬ್ಬಳ್ಳಿಯ ಹಿರಿಮೆಗೆ ಮತ್ತೊಂದು ಮುಕುಟ ಎನ್ನುವಂತಿದೆ. ಕಳೆದೆರೆಡು ದಶಕಗಳಿಂದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಇಚ್ಛಾಶಕ್ತಿಯಿಂದಾಗಿ ಅತ್ಯಾಧುನಿಕ ಸೌಲಭ್ಯಗಳನ್ನು ಕಂಡು ಹುಬ್ಬಳ್ಳಿ ವಿಮಾನ ನಿಲ್ದಾಣ ಕಂಗೊಳಿಸುತ್ತಿದೆ.

ದೇಶದ 58ರಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣ ಟಾಪ್ 5

ದೇಶದ ಒಟ್ಟು 58 ವಿಮಾನ ನಿಲ್ದಾಣಗಳಲ್ಲಿ ಟಾಪ್ 5ನೇ ಸ್ಥಾನವನ್ನು ಹುಬ್ಬಳ್ಳಿಯ ವಿಮಾನ ನಿಲ್ದಾಣ  ಗಿಟ್ಟಿಸಿಕೊಂಡಿದ್ದು, ಗ್ರಾಹಕರ ಸೇವೆಯಲ್ಲಿ ಅತ್ಯುನ್ನತ ದರ್ಜೆಗೇರುವ ಮೂಲಕ ಅಭಿವೃದ್ಧಿಯಲ್ಲಿ ರಾಷ್ಟ್ರದ ಗಮನವನ್ನೇ ಸೆಳೆದಿದೆ.

ಮೊನ್ನೆ ಮೊನ್ನೆಯಷ್ಟೇ ಸುಮಾರು 320 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ಎರಡನೇ ಟರ್ಮಿನಲ್​ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಶಂಕುಸ್ಥಾಪನೆ ನೆರವೇರಿಸಿದ್ದು, ಎರಡೇ ವರ್ಷದಲ್ಲಿ ಇದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಿ ರೂಪುಗೊಳ್ಳುತ್ತದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದನ್ನು ಸ್ಮರಿಸಬಹುದು.

ಈ ಮಧ್ಯೆ ಗ್ರಾಹಕರಿಗೆ ನೀಡುತ್ತಿರುವ ಸೇವೆ ಹಾಗೂ ಸೌಲಭ್ಯಗಳನ್ನು ಪರಿಗಣಿಸಿ ನಡೆಸಲಾದ ಸಮೀಕ್ಷೆಯಲ್ಲಿ 5ನೇ ಸ್ಥಾನ ಪಡೆದಿರುವುದು ಹುಬ್ಬಳ್ಳಿ-ಧಾರವಾಡಗರಿಗೆ ಹೆಮ್ಮೆಯ ಸಂಗತಿಯಾಗಿದೆ.

ಮಧ್ಯಮ ಗಾತ್ರದ ವಿಮಾನ ನಿಲ್ದಾಣಗಳ ವಿಭಾಗದಲ್ಲಿ ಟಾಪ್ 5 ಗೌರವಕ್ಕೆ ಪಾತ್ರವಾಗಿದ್ದು, ಉತ್ತರ ಕರ್ನಾಟಕ ಭಾಗದಲ್ಲಿ ದೊಡ್ಡದಾದ ಹಾಗೂ ಹೆಚ್ಚು ಪ್ರಯಾಣಿಕರಿಗೆ ಸೇವೆ ನೀಡುವ ವಿಮಾನ ನಿಲ್ದಾಣ ಇದಾಗಿದೆ.

ಇದನ್ನೂ ಓದಿ;ಮೇಕೆದಾಟು ವಿಚಾರದಲ್ಲಿ ಕನ್ನಡಿಗರ ಬೆನ್ನಿಗೆ ಚೂರಿ ಹಾಕುತ್ತಿರುವ ದ್ರೋಹಿಗಳು: ಡಿಎಂಕೆ ಪ್ರಣಾಳಿಕೆ ಪ್ರಸ್ತಾಪಿಸಿ ಅಶೋಕ್ ವಾಗ್ದಾಳಿ

ದೇಶದ 58 ಭಾರತೀಯ ವಿಮಾನ ನಿಲ್ದಾಣಗಳನ್ನು ಗ್ರಾಹಕ ಸಂತೃಪ್ತಿ ಸಮೀಕ್ಷೆಗೆ ಒಳಪಡಿಸಿದ್ದು, ಗ್ರಾಹಕರಿಗೆ ಅತ್ಯುತ್ತಮ ಸೇವೆ ಒದಗಿಸುವಲ್ಲಿ ಒಟ್ಟು 5 ಅಂಕಕ್ಕೆ 4.95ರಷ್ಟು ಅಂಕ ಪಡೆಯುವ ಮೂಲಕ 5ನೇ ಸ್ಥಾನ ಪಡೆದುಕೊಂಡಿದೆ ಎಂದು ಸಚಿವ ಜೋಶಿ ಸಂತಸ ವ್ಯಕ್ತಪಡಿಸಿದ್ದಾರೆ.

ಹುಬ್ಬಳ್ಳಿಯಿಂದ ದೇಶದ ಹಲವು ನಗರಗಳಿಗೆ ವಿಮಾನಯಾನ ಸೇವೆ ಆರಂಭವಾಗಿದ್ದು, ದೆಹಲಿ, ಬೆಂಗಳೂರು, ಹೈದ್ರಾಬಾದ್, ಮುಂಬೈ, ಚೆನ್ನೈ ಮುಂತಾದ ನಗರಗಳಿಗೆ ವಿಮಾನ ಸೌಲಭ್ಯ ಲಭ್ಯವಿದೆ. ಇಂಡಿಗೋ, ಸ್ಪೇಸ್ ಜೆಟ್​, ಏರ್​ಇಂಡಿಯಾ, ಅಲಯನ್ಸ್​ ಏರ್​ ಮುಂತಾದ ಕಂಪನಿಗಳು ಪ್ರಯಾಣಿಕರಿಗೆ ಉತ್ತಮ ಸೇವೆ ನೀಡುತ್ತಿವೆ. ಕೆಲ ವರ್ಷಗಳಿಂದ ಇಲ್ಲಿ ಕಾಗೋರ್ ಸೇವೆಯನ್ನೂ ಆರಂಭಿಸಲಾಗಿದೆ.

ಹುಬ್ಬಳ್ಳಿ ಇದೀಗ ದೇಶದ ಎಲ್ಲ ಪ್ರಮುಖ ನಗರಗಳಿಗೆ ವಿಮಾನಯನ ಮೂಲಕ ಸಂಪರ್ಕ ಸಾಧಿಸುತ್ತಿದೆ. ನಿತ್ಯ ಸುಮಾರು 15 ವಿಮಾನಗಳು ವಾಣಿಜ್ಯ ನಗರಿಗೆ ಬಂದಿಳಿದು ಹಾರಾಟ ನಡೆಸಿವೆ. ಸಾವಿರಾರು ಪ್ರಯಾಣಿಕರು ಸುಖಕರ ಪ್ರಯಾಣ ಮಾಡುತ್ತಿದ್ದಾರೆ ಎಂದು ವಿಮಾನ ನಿಲ್ದಾಣ ನಿರ್ದೇಶಕ ರೂಪೇಶಕುಮಾರ ಮಾಹಿತಿ ನೀಡಿದ್ದಾರೆ.

ಅಧಿಕಾರಿಗಳು, ಸಿಬ್ಬಂದಿಗೆ ಸಚಿವ ಜೋಶಿ ಅಭಿನಂದನೆ

ದೇಶದ 58 ವಿಮಾನ ನಿಲ್ದಾಣಗಳ ಪೈಕಿ ಹುಬ್ಬಳ್ಳಿ 5ನೇ ಸ್ಥಾನ ಪಡೆದಿರುವುದು ಸಂತಸದ ಸಂಗತಿ. ಈ ಮನ್ನಣೆ ಪಡೆಯಲು ಕಾರಣಕರ್ತರಾದ ವಿಮಾನ ನಿಲ್ದಾಣದ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ ಜೋಶಿ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್