ರಾಜ್ಯದ ಮೊದಲ ಹಸಿರು ವಿಮಾನ ನಿಲ್ದಾಣವಾಗಿ ಪರಿವರ್ತನೆಯಾದ ಹುಬ್ಬಳ್ಳಿ ವಿಮಾನ ನಿಲ್ದಾಣ : ಪ್ರಲ್ಹಾದ್ ಜೋಶಿ

| Updated By: ವಿವೇಕ ಬಿರಾದಾರ

Updated on: Nov 21, 2022 | 6:42 PM

ಹುಬ್ಬಳ್ಳಿಯ ವಿಮಾನ ನಿಲ್ದಾಣವನ್ನು ಈಗ ರಾಜ್ಯದ ಮೊದಲ ಹಸಿರು ವಿಮಾನ ನಿಲ್ದಾಣವಾಗಿ ಬದಲಿಸಲಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಂತಸ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮೊದಲ ಹಸಿರು ವಿಮಾನ ನಿಲ್ದಾಣವಾಗಿ ಪರಿವರ್ತನೆಯಾದ ಹುಬ್ಬಳ್ಳಿ ವಿಮಾನ ನಿಲ್ದಾಣ : ಪ್ರಲ್ಹಾದ್ ಜೋಶಿ
ಹುಬ್ಬಳ್ಳಿ ವಿಮಾನ ನಿಲ್ದಾಣ
Follow us on

ಧಾರವಾಡ: ದಿನದಿಂದ ದಿನಕ್ಕೆ ಹೊಸ ಹೊಸ ಸಂಪರ್ಕಗಳನ್ನು ಜೋಡಿಸುತ್ತಿರುವ ಹುಬ್ಬಳ್ಳಿಯ ವಿಮಾನ ನಿಲ್ದಾಣವನ್ನು (Hubli Airport) ಈಗ ರಾಜ್ಯದ ಮೊದಲ ಹಸಿರು ವಿಮಾನ ನಿಲ್ದಾಣವಾಗಿ ಬದಲಿಸಲಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಸಂತಸ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ (Narendra Modi) ಕನಸಿನಂತೆ 2030 ರೊಳಗೆ ಶೇ 50 ರಷ್ಟು ಗ್ರೀನ್ ಎನರ್ಜಿಯತ್ತ ದೇಶ ಸಾಗಬೇಕಿದೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣ ಶೇ.100 ರಷ್ಟು ಅಂದರೆ ಸಂಪೂರ್ಣ ಸೌರಶಕ್ತಿಯ ಮೂಲಕ ಕಾರ್ಯನಿರ್ವಹಿಸಲಿದೆ ಎಂದು ಟ್ವೀಟ್​​ ಮಾಡಿದ್ದಾರೆ.

ಸುಮಾರು 8MWp ಸೌರಶಕ್ತಿಯಿಂದ ವಿದ್ಯುತ್ ಶಕ್ತಿ ಉತ್ಪಾದಿಸುವ ಘಟಕದ ಸ್ಥಾಪನೆ ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಆರಂಭವಾಗಿದೆ. ಅದರ ಶೇಖರಣೆಯು ಹುಬ್ಬಳ್ಳಿಯಲ್ಲಿಯೇ ಆಗಲಿದೆ. ಶೇಖರಿಸಿದ ವಿದ್ಯುತ್ ಶಕ್ತಿಯನ್ನು ಬೆಳಗಾವಿ, ಮೈಸೂರು, ಬಳ್ಳಾರಿ, ಬೆಂಗಳೂರು ಹಾಗೂ ಇನ್ನಿತರ ವಿಮಾನ ನಿಲ್ದಾಣಗಳಿಗೆ ಸರಬರಾಜು ಮಾಡಲಾಗುವದು ಎಂದು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ