ಹುಬ್ಬಳ್ಳಿ-ಧಾರವಾಡ ಬೈಪಾಸ್ 6 ಲೈನ್ ರಸ್ತೆ ಮೊದಲ ಹಂತ ಡಿಸೆಂಬರ್ ಒಳಗೆ ಪೂರ್ಣಗೊಳ್ಳಲಿದೆ : ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

Hubballi and Dharwad six-lane bypass: ಹುಬ್ಬಳ್ಳಿ ಧಾರವಾಡ ಬೈಪಾಸ್ 6 ಲೈನ್ ರಸ್ತೆ 2025ರ ಒಳಗಾಗಿ ಪೂರ್ಣಗೊಳ್ಳಲಿದ್ದು, ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಪ್ರಲ್ಹಾದ್ ಜೋಶಿ ವೇಳೆ ತಿಳಿಸಿದರು.

ಹುಬ್ಬಳ್ಳಿ-ಧಾರವಾಡ ಬೈಪಾಸ್ 6 ಲೈನ್ ರಸ್ತೆ ಮೊದಲ ಹಂತ ಡಿಸೆಂಬರ್ ಒಳಗೆ ಪೂರ್ಣಗೊಳ್ಳಲಿದೆ : ಕೇಂದ್ರ ಸಚಿವ  ಪ್ರಲ್ಹಾದ್ ಜೋಶಿ
ಹುಬ್ಬಳ್ಳಿ-ಧಾರವಾಡ ಬೈಪಾಸ್ 6 ಲೈನ್ ರಸ್ತೆ ಮೊದಲ ಹಂತ
Follow us
ಸಾಧು ಶ್ರೀನಾಥ್​
|

Updated on: Jun 04, 2023 | 4:59 AM

ಹುಬ್ಬಳ್ಳಿ ಧಾರವಾಡ ಬೈಪಾಸ್ 6 ಲೈನ್ ರಸ್ತೆ (Hubballi and Dharwad six-lane bypass) ಕಾಮಗಾರಿ ವೇಗವಾಗಿ ನಡೆಯಲಿದೆ ಎಂದು ಧಾರವಾಡ ಸಂಸದರೂ ಆಗಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಹೇಳಿದ್ದಾರೆ. ಅಧಿಕಾರಿಗಳೊಂದಿಗೆ ಬೈಪಾಸ್ ರಸ್ತೆ ಕಾಮಗಾರಿ ಪರಿಶೀಲನೆ ನಡೆಸಿದ ಸಚಿವರು ಮಾಧ್ಯಮಗಳಿಗೆ ಈ ಕುರಿತು ಮಾಹಿತಿ ನೀಡಿದರು. ಬೈಪಾಸ್ ರಸ್ತೆ 6 ಲೈನ್ ಅಗಲೀಕರಣವು ಅವಳಿನಗರದ ಜನರ ಬಹುದಿನಗಳ ಬೇಡಿಕೆಯಾಗಿದೆ. ವಾಸ್ತವವಾಗಿ ಈ ಹಿಂದಿನ ಅಗ್ರಿಮೆಂಟ್ ಪ್ರಕಾರ 2025 ರ ವರೆಗೆ ಈ ರಸ್ತೆ ಕಾಮಗಾರಿಗೆ ಕೈಹಾಕುವಂತಿರಲಿಲ್ಲ. ಆದರೆ ಕೇಂದ್ರ ಸಚಿವ ನಿತಿನ್ ಗಡ್ಕರಿ (Nitin Gadkari) ಅವರಿಗೆ ನಾವು ಮನವಿ ಮಾಡಿದ ಹಿನ್ನೆಲೆಯಲ್ಲಿ ಅವರ ಸಹಕಾರದಿಂದ 6 ಲೈನ್ ರಸ್ತೆ ಕಾಮಗಾರಿಗೆ ಅವಕಾಶ ದೊರೆತಿದೆ. ಕಾಮಗಾರಿ ಕೂಡ ಭರದಿಂದ ಸಾಗುತ್ತಿದೆ ಎಂದು ಜೋಶಿ ಹೇಳಿದರು.‌

ಸುಮಾರು 570 ಕೋಟಿ ವೆಚ್ಚದಲ್ಲಿ 31 ಕಿ ಮೀ ದೂರದ ರಸ್ತೆ ಅಗಲಿಕರಣ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಮೊದಲ ಹಂತವಾಗಿ ತಾರಿಹಾಳ ಕ್ರಾಸ್ ನಿಂದ ಧಾರವಾಡದ ಕಲಘಟಗಿ ಕ್ರಾಸ್‌ವರೆಗೆ 16 ಕಿಮೀ 6 ಲೈನ್ ರಸ್ತೆ ಕಾಮಗಾರಿಯನ್ನ ಡಿಸೆಂಬರ್ ಒಳಗೆ ಪೂರ್ಣಗೊಳಿಸುವಂತೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಧಾನ ವ್ಯವಸ್ಥಾಪಕರಾದ ಜೈಸ್ವಾಲ್ ಅವರೊಂದಿಗೆ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿದ ಜೋಶಿ ಫಸ್ಟ್ ಫೇಸ್ ಕಾಮಗಾರಿ ಡಿಸೆಂಬರ್ ಒಳಗೆ ಪೂರ್ಣಗೊಳಿಸಿ, ಜನವರಿಯೊಳಗೆ ಸಾರ್ವಜನಿಕರ ಪ್ರಯಾಣಕ್ಕೆ ಅನುವು ಮಾಡಿಕೊಡುವಂತೆ ಸೂಚಿಸಿದರು. 2025ರ ಒಳಗಾಗಿ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ಸಂಪೂರ್ಣಗೊಳ್ಳಲಿದ್ದು, ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಪ್ರಲ್ಹಾದ್ ಜೋಶಿ ಇದೇ ವೇಳೆ ತಿಳಿಸಿದರು.

ಬಹುಕಾಲದ ಮಹತ್ತರವಾದ ಬೇಡಿಕೆಯೊಂದು ಈಡೇರುತ್ತಿದ್ದು, ಇದಕ್ಕೆ ಪೂರಕವಾಗಿ ಸ್ಪಂದಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರಿಗೆ ಅವಳಿ ನಗರದ ಜನತೆಯ ಪರವಾಗಿ ಪ್ರಲ್ಹಾದ್ ಜೋಶಿ ಧನ್ಯವಾದ ಅರ್ಪಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ