AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ ಅಂಜಲಿ ಅಂಬಿಗೇರ ಹಂತಕ ಗಿರೀಶ್​ಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

ರಾಜ್ಯದ ಗಮನ ಸೆಳೆದಿದ್ದ ಹುಬ್ಬಳ್ಳಿಯ ಯುವತಿ ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿದ್ದ ಗಿರೀಶ್ ಅಲಿಯಾಸ್ ವಿಶ್ವನಾಥ್ ಎಸ್.ಸಾವಂತ್‌ನನ್ನು ದೋಷಿ ಎಂದು ಹುಬ್ಬಳ್ಳಿ ನ್ಯಾಯಾಲಯ ಘೋಷಿಸಿದೆ. ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 451, 302 ಹಾಗೂ 201ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧಗಳಲ್ಲಿ ಆರೋಪಿಯನ್ನು ದೋಷಿ ಎಂದಿದೆ. ಇದರ ಬೆನ್ನಲ್ಲೇ ಇಂದು ಹಂತಕನಿಗೆ ಶಿಕ್ಷೆ ಪ್ರಮಾಣವನ್ನು ಸಹ ಘೋಷಿಸಿ ಆದೇಶ ಹೊರಡಿಸಿದೆ.

ಹುಬ್ಬಳ್ಳಿ ಅಂಜಲಿ ಅಂಬಿಗೇರ ಹಂತಕ ಗಿರೀಶ್​ಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್
Anjali And Girish
ಸಂಜಯ್ಯಾ ಚಿಕ್ಕಮಠ
| Edited By: |

Updated on: Nov 25, 2026 | 5:17 PM

Share

ಹುಬ್ಬಳ್ಳಿ, ನವೆಂಬರ್ 25:  2024ರ ಮೇ ತಿಂಗಳಲ್ಲಿ ನಡೆದಿದ್ದ ಹುಬ್ಬಳ್ಳಿಯ ಯುವತಿ ಅಂಜಲಿ ಅಂಬಿಗೇರ ಕೊಲೆ ಪ್ರಕರಣದಲ್ಲಿ  ಗಿರೀಶ್ ಅಲಿಯಾಸ್ ವಿಶ್ವನಾಥ್ ಎಸ್.ಸಾವಂತ್‌ನನ್ನು ದೋಷಿ ಎಂದು ನ್ಯಾಯಾಲಯ ಘೋಷಿಸಿದೆ. ಇದೀಗ ಇಂದು (ನವೆಂಬರ್ 25) ಹಂತಕ ಗಿರೀಶ್ ಅಲಿಯಾಸ್ ವಿಶ್ವನಾಥ್ ಗೆ ಜೀವಾವಾಧಿ ಶಿಕ್ಷೆ ಜೊತೆಗೆ 45 ಸಾವಿರ ರೂಪಾಯಿ ದಂಡ ವಿಧಿಸಿ ಹುಬ್ಬಳ್ಳಿ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಪಲ್ಲವಿ ಬಿ ಆರ್ ಆದೇಶ ಹೊರಡಿಸಿದ್ದಾರೆ.

ಹುಬ್ಬಳ್ಳಿಯ ಪ್ರಥಮ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರು ನವೆಂಬರ್ 21 ದೋಷಿ ಎಂದು ತೀರ್ಪು ನೀಡಿತ್ತು. ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 451, 302 ಹಾಗೂ 201ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧಗಳಲ್ಲಿ ಆರೋಪಿಯನ್ನು ದೋಷಿ ಎಂದು ಆದೇಶಿಸಿದ್ದು, ಶಿಕ್ಷೆ ಪ್ರಮಾಣದ ತೀರ್ಪನ್ನು ನ.25ಕ್ಕೆ ಕಾಯ್ದಿರಿಸಿತ್ತು.

ಇದನ್ನೂ ಓದಿ: ಅಂಜಲಿಯನ್ನು ಕೊಲೆ ಮಾಡಿದ ಆರೋಪಿ ವಿಶ್ವ ಯಾರು, ಈತನ ಹಿನ್ನೆಲೆ ಏನು? ಇಲ್ಲಿದೆ ಓದಿ

ಅಂಜಲಿ ಕೊಲೆ ಪ್ರಕರಣ ಹಿನ್ನೆಲೆ

2024ರ ಮೇ 15ರಂದು ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿರುವ ತನ್ನ ನಿವಾಸದಲ್ಲಿ 20 ವರ್ಷದ ಅಂಜಲಿ ಅಂಬಿಗೇರ ಬರ್ಬರವಾಗಿ ಹತ್ಯೆಯಾಗಿದ್ದಳು. ಮನೆಯಲ್ಲಿದ್ದ ಅಂಜಲಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿತ್ತು. ಅಂಜಲಿ ಮತ್ತು ಗಿರೀಶ್  ನಡುವಿನ  ಪ್ರೀತಿ ವಿಚಾರದಲ್ಲಿ ಬಿರುಕು ಮೂಡಿದ್ದೇ ಕೊಲೆಗೆ ಕಾರಣ ಎಂಬ ಅಂಶ ತನಿಖೆಯಲ್ಲಿ ತಿಳಿದುಬಂದಿತ್ತು. ಅಂಜಲಿ ಸಂಪರ್ಕ ಕಡಿದುಕೊಂಡಿದ್ದ ಹಿನ್ನೆಲೆಯಲ್ಲಿ ಆರೋಪಿ ಈ ಕೃತ್ಯ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿತ್ತು.

ಕೊಲೆ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ದಾವಣಗೆರೆ ಸಮೀಪ ರೈಲ್ವೆ ಪೊಲೀಸರ ನೆರವಿನಿಂದ ವಶಕ್ಕೆ ಪಡೆಯಲಾಗಿತ್ತು. ಚಲಿಸುವ ರೈಲಿನಿಂದ ಬಿದ್ದು ಗಾಯಗೊಂಡಿದ್ದ ಆತನಿಗೆ ಚಿಕಿತ್ಸೆ ಕೊಡಿಸಿದ ಬಳಿಕ ಹುಬ್ಬಳ್ಳಿ ಪೊಲೀಸರು ವಶಕ್ಕೆ ಪಡೆದಿದ್ದರು. ಅಂಜಲಿ ಕೊಲೆಗೂ ಮುನ್ನ ಆರೋಪಿಯಿಂದ ಬಂದಿದ್ದ ಬೆದರಿಕೆಗಳ ಕುರಿತು ನೀಡಿದ್ದ ದೂರನ್ನು ನಿರ್ಲಕ್ಷಿಸಿದ ಆರೋಪದ ಹಿನ್ನೆಲೆಯಲ್ಲಿ ಕರ್ತವ್ಯಲೋಪ ಆರೋಪದ ಮೇಲೆ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿತ್ತು.

ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ರಾಜ್ಯ ಸರ್ಕಾರ ತನಿಖೆಯನ್ನು ಸಿಐಡಿಗೆ (CID) ವಹಿಸಿತ್ತು. ತನಿಖೆ ಪೂರ್ಣಗೊಳಿಸಿದ ಸಿಐಡಿ ಅಧಿಕಾರಿಗಳು, 2024ರ ಆಗಸ್ಟ್‌ನಲ್ಲಿ ನ್ಯಾಯಾಲಯಕ್ಕೆ 494 ಪುಟಗಳ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದರು. ವಾದ-ಪ್ರತಿವಾದ, ಸಾಕ್ಷಿಗಳ ಹೇಳಿಕೆ ಹಾಗೂ ಲಭ್ಯವಿದ್ದ ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿದ ನ್ಯಾಯಾಲಯ ಇದೀಗ ಹಂತನಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಸಂಜಯ್ಯಾ ಚಿಕ್ಕಮಠ
ಸಂಜಯ್ಯಾ ಚಿಕ್ಕಮಠ

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್​ನಿಂದ ಆರಂಭವಾದ ವೃತ್ತಿ ಬದುಕು, ಕಲಬುರಗಿ, ಕೊಪ್ಪಳದಿಂದ ಇದೀಗ ಹುಬ್ಬಳ್ಳಿಗೆ ಬಂದಿದ್ದು, ಉತ್ತರ ಕರ್ನಾಟಕ ಪ್ರಮುಖ ವಾಣಿಜ್ಯ ನಗರ ಹುಬ್ಬಳ್ಳಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ಮರಿಗಳಿಗೆ ರಕ್ಷಣಾ ಕೋಟೆ ಕಟ್ಟಿ ಸಾಗುತ್ತಿರುವ 39 ಕಾಡಾನೆಗಳ ದಂಡು
ಮರಿಗಳಿಗೆ ರಕ್ಷಣಾ ಕೋಟೆ ಕಟ್ಟಿ ಸಾಗುತ್ತಿರುವ 39 ಕಾಡಾನೆಗಳ ದಂಡು
ಆಶಾ ಕಾರ್ಯಕರ್ತರ ಬಗ್ಗೆ ನೀಡಿದ್ದ ಹೇಳಿಕೆಗೆ ಸಚಿವ ನರೇಂದ್ರಸ್ವಾಮಿ ವಿಷಾದ
ಆಶಾ ಕಾರ್ಯಕರ್ತರ ಬಗ್ಗೆ ನೀಡಿದ್ದ ಹೇಳಿಕೆಗೆ ಸಚಿವ ನರೇಂದ್ರಸ್ವಾಮಿ ವಿಷಾದ
ವಿನಯ್ ಕುಲಕರ್ಣಿ ಜಾಮೀನು ರದ್ದು: ಸುಪ್ರೀಂ ಕೋರ್ಟ್ ತೀರ್ಪಿಗೆ ಹರ್ಷ
ವಿನಯ್ ಕುಲಕರ್ಣಿ ಜಾಮೀನು ರದ್ದು: ಸುಪ್ರೀಂ ಕೋರ್ಟ್ ತೀರ್ಪಿಗೆ ಹರ್ಷ
ಆಶಾ ಕಾರ್ಯಕರ್ತರ ಪ್ರತಿಭಟನೆಗೆ ತಾರಾ ಬೆಂಬಲ: ಗೌರವಧನ ಹೆಚ್ಚಳಕ್ಕೆ ಆಗ್ರಹ
ಆಶಾ ಕಾರ್ಯಕರ್ತರ ಪ್ರತಿಭಟನೆಗೆ ತಾರಾ ಬೆಂಬಲ: ಗೌರವಧನ ಹೆಚ್ಚಳಕ್ಕೆ ಆಗ್ರಹ
ಕಾರವಾರ: ದಿಶಾ ಸಮಿತಿ ಸಭೆಯಲ್ಲಿ 'ವಂದೇ ಮಾತರಂ' ಜಟಾಪಟಿ
ಕಾರವಾರ: ದಿಶಾ ಸಮಿತಿ ಸಭೆಯಲ್ಲಿ 'ವಂದೇ ಮಾತರಂ' ಜಟಾಪಟಿ
ಕಾಫಿತೋಟದಿಂದ ಇಳಿದು ಭತ್ತದ ಗದ್ದೆಗಳನ್ನ ದಾಟಿ ಹೋಗಿರುವ ಕಾಡಾನೆಗಳು
ಕಾಫಿತೋಟದಿಂದ ಇಳಿದು ಭತ್ತದ ಗದ್ದೆಗಳನ್ನ ದಾಟಿ ಹೋಗಿರುವ ಕಾಡಾನೆಗಳು
ವಿನಯ್ ಕುಲಕರ್ಣಿಗೆ ಮತ್ತೆ ಜೈಲು: ವಕೀಲರು ಹೇಳಿದ್ದೇನು ನೋಡಿ
ವಿನಯ್ ಕುಲಕರ್ಣಿಗೆ ಮತ್ತೆ ಜೈಲು: ವಕೀಲರು ಹೇಳಿದ್ದೇನು ನೋಡಿ
'ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾದ್ರೆ ಒಳ್ಳೇದು ಅನ್ನಿಸುತ್ತೆ'
'ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾದ್ರೆ ಒಳ್ಳೇದು ಅನ್ನಿಸುತ್ತೆ'
9ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಪ್ರತಿಭಟನೆ
9ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಪ್ರತಿಭಟನೆ
ಫಾಸ್ಟ್‌ಟ್ರ್ಯಾಕ್‌ ನೇಮಕಾತಿ: ಸರ್ಕಾರಿ ಹುದ್ದೆಗಳ ಭರ್ತಿಗೆ ಹೊಸ ದಾರಿ
ಫಾಸ್ಟ್‌ಟ್ರ್ಯಾಕ್‌ ನೇಮಕಾತಿ: ಸರ್ಕಾರಿ ಹುದ್ದೆಗಳ ಭರ್ತಿಗೆ ಹೊಸ ದಾರಿ