ಹುಬ್ಬಳ್ಳಿ ಅಂಜಲಿ ಹತ್ಯೆ ಆರೋಪಿ ಪೊಲೀಸ್ ಬಲೆಗೆ ಬಿದ್ದಿದ್ದೇ ರೋಚಕ; ರೈಲಿನಲ್ಲಿ ಮತ್ತೊಬ್ಬ ಮಹಿಳೆಗೆ ಚಾಕು ತೋರಿಸಿದ್ದ ಹಂತಕ

ಅಂಜಲಿ ಅಂಬಿಗೇರರನ್ನು ಹುಬ್ಬಳ್ಳಿಯಲ್ಲಿ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ವಿಶ್ವ ಅಲಿಯಾಸ್ ಗಿರೀಶ್ ಪೊಲೀಸರ ಬಲೆಗೆ ಬಿದ್ದ ರೀತಿಯೇ ರೋಚಕವಾಗಿದೆ. ಅಂಜಲಿ ಹತ್ಯೆ ಮಾಡಿ ಪಲಾಯನಗೈದ ಆತ ರೈಲಿನಲ್ಲಿಯೂ ಮಹಿಳೆಯೊಬ್ಬರಿಗೆ ಚಾಕು ತೋರಿಸಿ ಬೆದರಿಕೆ ಹಾಕಿದ್ದ. ನಂತರ ಆತ ಪೊಲೀಸ್ ಬಲೆಗೆ ಬಿದ್ದಿದ್ಹೇಗೆ? ಈ ಬಗ್ಗೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಹೇಳಿದ್ದೇನೆಂಬ ವಿವರ ಇಲ್ಲಿದೆ.

ಹುಬ್ಬಳ್ಳಿ ಅಂಜಲಿ ಹತ್ಯೆ ಆರೋಪಿ ಪೊಲೀಸ್ ಬಲೆಗೆ ಬಿದ್ದಿದ್ದೇ ರೋಚಕ; ರೈಲಿನಲ್ಲಿ ಮತ್ತೊಬ್ಬ ಮಹಿಳೆಗೆ ಚಾಕು ತೋರಿಸಿದ್ದ ಹಂತಕ
ವಿಶ್ವ ಅಲಿಯಾಸ್ ಗಿರೀಶ್​
Edited By:

Updated on: May 17, 2024 | 10:34 AM

ದಾವಣಗೆರೆ / ಹುಬ್ಬಳ್ಳಿ, ಮೇ 17: ಹುಬ್ಬಳ್ಳಿಯಲ್ಲಿ ಅಂಜಲಿ ಅಂಬಿಗೇರ ಬರ್ಬರ ಹತ್ಯೆ (Anjali ambigera Murder Case) ಪ್ರಕರಣದ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಬಂಧಿಸುವಲ್ಲಿ ಪೊಲೀಸರು (Hubli Police) ಯಶಸ್ವಿಯಾಗಿದ್ದಾರೆ. ಆದರೆ, ಆತನ ಬಂಧನವಾದ ರೀತಿ ರೋಚಕವಾಗಿದೆ. ಅಂಜಲಿ ಅಂಬಿಗೇರ ಹತ್ಯೆ ಮಾಡಿದ ಬಳಿಕ ಪರಾರಿಯಾಗಿದ್ದ ಆರೋಪಿ ವಿಶ್ವಮಾನವ ಎಕ್ಸ್​​ಪ್ರೆಸ್​​ ರೈಲಿನಲ್ಲಿ ಸಂಚರಿಸುತ್ತಿದ್ದಾಗಲೇ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಆದರೆ, ರೈಲಿನಲ್ಲೂ ಮಹಿಳೆಯೊಬ್ಬರಿಗೆ ಚಾಕು ತೋರಿಸಿ ಬೆದರಿಕೆ ಹಾಕಿದ್ದಾನೆ!

ವಿಶ್ವ ಅಲಿಯಾಸ್ ಗಿರೀಶ್​ ವಿಶ್ವಮಾನವ ಎಕ್ಸ್​​ಪ್ರೆಸ್​​ ರೈಲಿನಲ್ಲಿ ತುಮಕೂರು ಮೂಲದ ಮಹಿಳೆಯೊಬ್ಬರ ಜತೆ ಜಗಳ ಮಾಡಿದ್ದಲ್ಲದೆ, ಚಾಕು ತೊರಿಸಿದ್ದಾನೆ. ಇದರಿಂದ ಸಿಟ್ಟಿಗೆದ್ದು ರೈಲಿನಲ್ಲಿದ್ದ ಪ್ರಯಾಣಿಕರು ಆತನಿಗೆ ಥಳಿಸಿದ್ದರು. ನಂತರ ಆತ ದಾವಣಗೆರೆ ತಾಲೂಕಿನ ಮಾಯಕೊಂಡ ರೈಲು ನಿಲ್ದಾಣದಲ್ಲಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ. ರೈಲಿನಿಂದ ಜಿಗಿದು ತಪ್ಪಿಸಿಕೊಳ್ಳುವುದಕ್ಕೆ ಯತ್ನಿಸಿದ್ದ. ಈ ವೇಳೆ, ಸಹ ಪ್ರಯಾಣಿಕರು ಸಂಶಯ ಬಂದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ನಂತರ ಪರಿಶೀಲನೆ ನಡೆಸಿದ ರೈಲ್ವೆ ಪೊಲೀಸರು, ಅಂಜಲಿ ಹತ್ಯೆ ಆರೋಪಿ ರೈಲಿನಲ್ಲಿದ್ದಾನೆ ಎಂದು ಹುಬ್ಬಳ್ಳಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಮಾಯಕೊಂಡಕ್ಕೆ ಬಂದ ಹುಬ್ಬಳ್ಳಿ ಪೊಲೀಸರು ತಡ‌ರಾತ್ರಿ ಆರೋಪಿಯನ್ನು ಬಂಧಿಸಿ ಕರೆದೊಯ್ದಿದ್ದಾರೆ.

ಮೈಸೂರಿ​ನಲ್ಲಿ ಕೆಲಸ ಮಾಡುತ್ತಿದ್ದ ಆರೋಪಿ

ಆರೋಪಿ ಗಿರೀಶ್ ಮೈಸೂರಿನ ಮಹಾರಾಜ್ ಹೋಟೆಲ್​ನಲ್ಲಿ ಕೆಲಸ ಮಾಡುತ್ತಿದ್ದ. ಹುಡುಗಿ ಅಂಜಲಿ ಮತ್ತು ಆರೋಪಿ ಪರಸ್ಪರ ಪ್ರೀತಿಸುತ್ತಿದ್ದರು. 15 ದಿನಗಳ ಹಿಂದೆ ದೇವಸ್ಥಾನದಲ್ಲಿ ಮದುವೆಯಾಗಿದ್ದಾಗಿಯೂ ಕೆಲವು ಮೂಲಗಳು ಮಾಹಿತಿ ನೀಡಿವೆ. ವಾರದ ಮುಂಚೆ ಯುವತಿ 2 ಸಾವಿರ ರೂಪಾಯಿ ಹಣ ಕೇಳಿದ್ದಳು. ಗಿರೀಶ್ ಒಂದು ಸಾವಿರ ರೂಪಾಯಿ ಪೋನ್ ಪೇ ಮಾಡಿದ್ದ. ಆ ನಂತರ ಗಿರೀಶನ ನಂಬರ್ ಅನ್ನು ಅಂಜಲಿ ಬ್ಲಾಕ್ ಲಿಸ್ಟ್​ ಮಾಡಿದ್ದಳು. ಫೋನ್ ಕರೆ ಕೂಡ ಸ್ವೀಕರಿಸುತ್ತಿರಲಿಲ್ಲ. ಆ ನಂತರ ಆರೋಪಿ ಸಿಟ್ಟಿಗೆದ್ದು ಮೈಸೂರಿ‌ನಿಂದ ಹುಬ್ಬಳ್ಳಿ ಗೆ ಬಂದು 4.30 ರ ಸುಮಾರಿಗೆ ಕೊಲೆ ಮಾಡಿದ್ದಾನೆ. ಅಲ್ಲಿಂದ ಹುಬ್ಬಳ್ಳಿ ಹೊಸ ಬಸ್ ಸ್ಟ್ಯಾಂಡ್​ಗೆ ಬಂದು ಹಾವೇರಿಗೆ ಬಂದಿದ್ದ. ಹಾವೇರಿಯಿಂದ ಮೈಸೂರಿಗೆ ರೈಲು ಹತ್ತಿದ್ದ. ಮಧ್ಯದಲ್ಲಿ ಬಿಹಾರ ವ್ಯಕ್ತಿಯೊಬ್ಬನ ಮೊಬೈಲ್ ನಲ್ಲಿ ಪೋಟೋ ನೋಡಿ ಮೈಸೂರಿಗೆ ವಾಪಸ್ ಹೋಗಿ ಮಹಾರಾಜ್ ಹೋಟೆಲ್​​ನಲ್ಲಿ ಮಲಗಿದ್ದ. ಆ ನಂತರ ಮೈಸೂರಿನಿಂದ ಹುಬ್ಬಳ್ಳಿಗೆ ವಾಪಸ್ ಆಗಲು ಬರುತ್ತಿದ್ದಾಗ ರೈಲ್ವೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪೊಲೀಸ್ ಕಮಿಷನರ್ ಹೇಳಿದ್ದೇನು?

ಬುಧವಾರ ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಒಂದು ಕೊಲೆ ಪ್ರಕರಣ ದಾಖಲಾಗಿತ್ತು. ಈ ಹಿನ್ನಲೆಯಲ್ಲಿ ಆರೋಪಿ ಪತ್ತೆಗಾಗಿ ಎಂಟು ತಂಡವನ್ನು ರಚನೆ ಮಾಡಿದ್ದೆವು. ನಿನ್ನೆ ರೈಲ್ವೆ ಪೋಲಿಸರ ಸಹಾಯದಿಂದ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿ ಗಿರೀಶ್ ತಲೆ ಮತ್ತು ಬೆನ್ನಿಗೆ ಗಂಭೀರ ಗಾಯಗಳಾಗಿವೆ. ಸದ್ಯ ಕೋಮಾ ಸ್ಥಿತಿಯಲ್ಲಿದ್ದಾನೆ. ರೈಲಿನಿಂದ ಯಾಕೆ ಕೆಳಗೆ ಬಿದ್ದ ಎಂಬುದನ್ನು ಆತನ ಹೇಳಿಕೆಯ ನಂತರವಷ್ಟೇ ತಿಳಿಯಬಹುದಾಗಿದೆ ಎಂದು ಹುಬ್ಬಳ್ಳಿ ಧಾರವಾಡ ಪೋಲಿಸ್ ಕಮಿಷನರ್ ರೇಣುಕಾ ಸುಕುಮಾರ ತಿಳಿಸಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿ; ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ ಅರೆಸ್ಟ್

ಬೆಳಗಿನ ಜಾವ 4.30ಕ್ಕೆ ಆರೋಪಿಯನ್ನು ನಮ್ಮ ವಶಕ್ಕೆ ಪಡೆದಿದ್ದೇವೆ. ಮೈಸೂರಿನಿಂದ ಗೋವಾ ಮಹಾರಾಷ್ಟ್ರ ಕಡೆ ತಲೆಮೆರಸಿಕೊಳ್ಳಬೇಕು ಎಂದು ಆತ ಅಂದುಕೊಂಡಿದ್ದ. ಬೈಕ್ ಕಳ್ಳತನ ವಿಚಾರದಲ್ಲಿ ಆತನ ಮೇಲೆ 4 ಪ್ರಕಾರಣಗಳು ದಾಖಲಾಗಿವೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More
Loading...
Unable to load recommendations.
Follow Us