ಅಂಜಲಿ ಕೊಲೆ ಪ್ರಕರಣ ಸಿಐಡಿಗೆ, ನೇಹಾ ಕೇಸ್​ ಸಿಬಿಐಗೆ ಕೊಡಲ್ಲ: ಗೃಹ ಸಚಿವ ಪರಮೇಶ್ವರ್

Hubballi Anjali murder case : ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಕಾರ್ಪೋರೆಟರ್ ಪುತ್ರಿ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಅಂಜಲಿ ಅಂಬಿಗೇರ ಕೊಲೆಯಾಗಿದೆ. ಹಂತಕ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದಾನೆ. ಇದೀಗ ಈ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ ಗೃಹ ಸಚಿವ ಡಾ.‌ಜಿ.ಪರಮೇಶ್ವರ ಅಧಿಕೃತವಾಗಿ ಹೇಳಿದ್ದಾರೆ.

ಅಂಜಲಿ ಕೊಲೆ ಪ್ರಕರಣ ಸಿಐಡಿಗೆ, ನೇಹಾ ಕೇಸ್​ ಸಿಬಿಐಗೆ ಕೊಡಲ್ಲ: ಗೃಹ ಸಚಿವ ಪರಮೇಶ್ವರ್
ಅಂಜಲಿ, ಪರಮೇಶ್ವರ್
Follow us
ಶಿವಕುಮಾರ್ ಪತ್ತಾರ್. ಹುಬ್ಬಳ್ಳಿ
| Updated By: ರಮೇಶ್ ಬಿ. ಜವಳಗೇರಾ

Updated on:May 20, 2024 | 6:07 PM

ಹುಬ್ಬಳ್ಳಿ, (ಮೇ 20): ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು(Hubballi Anjali murder case ) ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಗೃಹ ಸಚಿವ ಡಾ. ಜಿ ಪರಮೇಶ್ವರ್​ ತಿಳಿಸಿದ್ದಾರೆ. ಇಂದು(ಮೇ 20) ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿರುವ ಅಂಜಲಿ ಅಂಬಿಗೇರ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಇಂದು ಸಂಜೆ ಅಥವಾ ನಾಳೆ ಸಿಐಡಿಗೆ ಹಸ್ತಾಂತರ ಮಾಡುತ್ತೇವೆ ಎಂದರು.

ಹುಬ್ಬಳ್ಳಿಯಲ್ಲಿ ಎರಡು ಕೊಲೆಗಳು ನಡೆದಿರುವುದು ದುರದೃಷ್ಟಕರ. ಅಂಜಲಿ ಕೊಲೆ ಆರೋಪಿ ಗಿರೀಶ್ ಪೊಲೀಸರ ವಶದಲ್ಲಿದ್ದು, ತನಿಖೆ ನಡೆಯುತ್ತಿದೆ. ಆರೋಪಿಗೆ ಶಿಕ್ಷೆ ಆಗಬೇಕು. ಹೀಗಾಗಿ ಪೊಲೀಸ್ ಇಲಾಖೆ ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದೆ. ಇನ್ನು ಈ ಪ್ರಕರಣವನ್ನು ಇಂದು ಸಂಜೆ ಅಥವಾ ನಾಳೆ ಸಿಐಡಿಗೆ ಹಸ್ತಾಂತರ ಮಾಡುತ್ತೇವೆ ಎಂದು ಹೇಳಿದರು.

ಇದನ್ನೂ ಓದಿ: ಹುಬ್ಬಳ್ಳಿ ನೇಹಾ ಹತ್ಯೆ ಪ್ರಕರಣದ ತನಿಖೆ ಸಿಐಡಿ ಹೆಗಲಿಗೆ

ನೇಹಾದಂತೆ ಅಂಜಲಿ ಕೊಲೆ ಕೂಡ ಗಂಭೀರ ಪ್ರಕರಣ. ಕೊಲೆಯಾದ ಅಂಜಲಿ ಅಂಬಿಗೇರ ಕುಟುಂಬ ಕಡುಬಡತನದಲ್ಲಿದೆ. ಬೆಂಗಳೂರಲ್ಲಿ ಇದ್ದುಕೊಂಡೇ 2 ಕೊಲೆ ಕೇಸ್ ಮಾಹಿತಿ ಪಡೆಯುತ್ತಿದ್ದೆ. ಮಾನವೀಯತೆ ದೃಷ್ಟಿಯಿಂದ 2 ಕುಟುಂಬಗಳನ್ನು ಭೇಟಿ ಮಾಡಿದ್ದೇನೆ. ಪೊಲೀಸರಿಗೆ ಕೆಲ ಸೂಚನೆ ಕೊಡಬೇಕು, ಹೀಗಾಗಿ ಹುಬ್ಬಳ್ಳಿಗೆ ಬಂದಿದ್ದೇನೆ ಎಂದು ತಿಳಿಸಿದರು.

ನೇಹಾ ಕೊಲೆ ಕೇಸ್ ಸಿಬಿಐಗೆ ಕೊಡಲ್ಲ

ಇನ್ನು ಇದೇ ವೇಳೆ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಒತ್ತಾಯಗಳು ಕೇಳಿಬಂದಿದ್ದು, ಇ ಬಗ್ಗೆ ಪರಮೇಶ್ವರ್ ಪ್ರತಿಕ್ರಿಯಿಸಿ, ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣ ಸಿಬಿಐಗೆ ಕೊಡಲ್ಲ. ರಾಜ್ಯದ ಪೊಲೀಸರು ಸಮರ್ಥರಿದ್ದಾರೆ, ಹೀಗಾಗಿ ಸಿಬಿಐಗೆ ಕೊಡಲ್ಲ. ಕೆಲವು ಬಾರಿ ಹೊರಗಿನವರಿಂದ ತನಿಖೆ ಆಗಬೇಕು. ಹೀಗಾಗಿ ನೇಹಾ ಪ್ರಕರಣ ಸಿಐಡಿಗೆ ಹಸ್ತಾಂತರ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:06 pm, Mon, 20 May 24

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್