ನೇಹಾ ಹತ್ಯೆ: ಆರೋಪಿಯ ರುಂಡ ಕತ್ತರಿಸಿ ಹುಬ್ಬಳ್ಳಿ ಬಾಗಿಲಿಗೆ ಹಾಕುತ್ತೇವೆ ಎಂದ ಅಂಜುಮನ್ ಸಂಸ್ಥೆ!

Hubballi Neha Murder Case: ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿ ನೇಹಾ ಹತ್ಯೆಗೈದ ಆರೋಪಿ ಫಯಾಜ್​ನನ್ನು ಗುಂಡಿಕ್ಕಿ ಕೊಲ್ಲುವಂತೆ ಆಗ್ರಹಗಳ ವ್ಯಕ್ತವಾಗುತ್ತಿವೆ. ಈ ರೀತಿಯ ಕೃತ್ಯಗಳು ಮತ್ತೆ ನಡೆಯಬಾರದು ಎಂದರೆ ಇಂತಹ ರಕ್ಕಸರನ್ನು ನೇರವಾಗಿ ನೇಣಿಗೆ ಹಾಕುವ ಕಾನೂನು ಜಾರಿತೆ ತರಬೇಕೆಂಬ ಕೂಗುಗಳು ಕೇಳಿ ಬರುತ್ತಿವೆ. ಇನ್ನು ಈ ಘಟನೆಯನ್ನು ಅಂಜುಮನ್ ಸಂಸ್ಥೆ ಸಹ ಖಂಡಿಸಿದೆ.

ನೇಹಾ ಹತ್ಯೆ: ಆರೋಪಿಯ ರುಂಡ ಕತ್ತರಿಸಿ ಹುಬ್ಬಳ್ಳಿ ಬಾಗಿಲಿಗೆ ಹಾಕುತ್ತೇವೆ ಎಂದ ಅಂಜುಮನ್ ಸಂಸ್ಥೆ!
ಆರೋಪಿಯನ್ನು ಎನ್​ಕೌಂಟರ್​ ಮಾಡುವಂತೆ ಅಂಜುಮನ್ ಸಂಸ್ಥೆ ದೂರು
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Apr 19, 2024 | 5:19 PM

ಹುಬ್ಬಳ್ಳಿ, (ಏಪ್ರಿಲ್ 19): ಹುಬ್ಬಳ್ಳಿಯಲ್ಲಿ (Hubballi) ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿ ನೇಹಾ (Hubballi Neha Murder Case) ಹತ್ಯೆಗೈದ ಆರೋಪಿ ಫಯಾಕ್ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ನಿನ್ನೆ(ಏಪ್ರಿಲ್ 18) ಎಕ್ಸಾಂ ಇದೆ ಅಂತ ಹೊಸ್ತಿಲು ದಾಟಿದ್ದ ಮಗಳು ಹೆಣವಾಗಿ ಮರಳಿದ್ದಾಳೆ. ರಕ್ಕಸನ ಅಟ್ಟಹಾಸಕ್ಕೆ ಜ್ಞಾನ ದೇಗುಲದಲ್ಲೇ ಬರ್ಬರವಾಗಿ ಕೊಲೆಯಾಗಿದ್ದಾಳೆ. ಮಗಳ ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಇತ್ತ ಸಾರ್ವಜನಿಕರು ಆಕ್ರೋಶದ ಕಿಡಿ ಹೊತ್ತಿಸಿದೆ. ಹಿಂದೂಪರ ಸಂಘಟನೆಗಳು, ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು, ಆರೋಪಿಯನ್ನು ಎನ್​ಕೌಂಟರ್ ಮಾಡಬೇಕೆಂದು ಆಗ್ರಹಿಸುತ್ತಿವೆ. ಇನ್ನು ಈ ಘಟನೆಯನ್ನು ಹುಬ್ಬಳ್ಳಿಯ ಅಂಜುಮನ್ ಸಂಸ್ಥೆ ಖಂಡಿಸಿದೆ. ಅಲ್ಲದೇ ಆರೋಪಿಯನ್ನು ಎನ್‌ಕೌಂಟರ್ ಮಾಡುವಂತೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಿಗೆ ಮನವಿ ಮಾಡಿದೆ.

ಇನ್ನು ಈ ಬಗ್ಗೆ ಟಿವಿ9 ಜೊತೆ ಮಾತನಾಡಿದ ಅಂಜುಮನ್ ಸಂಸ್ಥೆ ಮುಖ್ಯಸ್ಥ ಅಲ್ತಾಫ್, ನೇಹಾ ಹತ್ಯೆಯನ್ನು ನಾವು ಖಂಡಿಸುತ್ತೇವೆ. ಆರೋಪಿ ಫಯಾಜ್ ನನ್ನು ನಮ್ಮ ಕೈಗೆ ಕೊಡಿ ಅವನ ರುಂಡ ಕತ್ತರಿಸಿ ಹುಬ್ಬಳ್ಳಿ ಬಾಗಿಲಿಗೆ ಹಾಕುತ್ತೇವೆ. ಫಯಾ‌ಜ್‌ನನ್ನು ಎನ್‌ಕೌಂಟರ್ ಮಾಡುವಂತೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಿಗೆ ಮನವಿ ಮಾಡಿದ್ದೇವೆ. ಭಾರತೀಯ ಜನತಾ ಪಕ್ಷದವರು ಇದರಲ್ಲಿ ರಾಜಕೀಯ ಮಾಡಬಾರದು. ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯ ಮಾಡಿದ್ದೇವೆ. ಹುಬ್ಬಳ್ಳಿ ಚೆನ್ನಮ್ಮ ಸರ್ಕಲ್​​ನಲ್ಲಿ ಆರೋಪಿ ಎನ್​ಕೌಂಟರ್ ಮಾಡಬೇಕು ಎಂದು ಹೇಳಿದರು.

ಇದನ್ನೂ ಒದಿ: ನೇಹಾ ಪ್ರಕರಣ ಆಕಸ್ಮಿಕ ಎನ್ನುವ ಗೃಹ ಸಚಿವ ಪರಮೇಶ್ವರ್ ರಾಜೀನಾಮೆ ನೀಡಬೇಕೆಂದ ಹುಬ್ಬಳ್ಳಿ ಮಹಿಳೆಯರು

ವ್ಯಾಪಕ ಆಕ್ರೊಶ:

ಕಾಲೇಜು ಆವರಣದಲ್ಲಿ ನೇಹ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಫಯಾಜ್ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಕೊಲೆ ಖಂಡಿಸಿ ವಿವಿಧ ಜಿಲ್ಲೆಗಳಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಇನ್ನು ಸಾಮಾಜಿಕ ಜಾಲತಾಣಗಳಲ್ಲೂ ಸಹ ಜಸ್ಟೀಸ್ ಫಾರ್ ನೇಹ ಎನ್ನುವ ಹ್ಯಾಶ್​ ಟ್ಯಾಗ್ ಹಾಕಿ ಆರೋಪಿಯನ್ನು ಗಲ್ಲಿಗೇರಿಸುವಂತೆ ಆಗ್ರಹಗಳು ವ್ಯಕ್ತವಾಗುತ್ತಿವೆ.

ಇನ್ನು ರಾಜ್ಯ ಸರ್ಕಾರದ ವಿರುದ್ಧವೂ ಸಹ ಆಕ್ರೋಶಗಳು ವ್ಯಕ್ತವಾಗುತ್ತಿವೆ. ಅದರಲ್ಲೂ ಬಿಜೆಪಿ ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರದ ವಿರುದ್ಧ ಮುಗಿಬಿದ್ದಿದೆ. ಇನ್ನು ಬಿಜೆಪಿ ನಾಯಕರು ಸಹ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ