AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ ಅರೆಬೆತ್ತಲೆ ಕೇಸ್​​: ಕೇಶ್ವಾಪುರ ಠಾಣೆ ಪಿಐ ಕಾರ್ಯಸ್ಥಳ ಬದಲಾವಣೆ

ಹುಬ್ಬಳ್ಳಿಯ ಬಿಜೆಪಿ ಕಾರ್ಯಕರ್ತೆ ಸುಜಾತಾ ಹಂಡಿ ಮೇಲಿನ ಹಲ್ಲೆ ಆರೋಪ ಪ್ರಕರಣದಲ್ಲಿ ಕೇಶ್ವಾಪುರ ಠಾಣೆ ಪಿಐ ಕೆ.ಎಸ್. ಹಟ್ಟಿ ಅವರನ್ನು ಕರ್ತವ್ಯದಿಂದ ತೆರವುಗೊಳಿಸಲಾಗಿದೆ. ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಆದೇಶದ ಮೇರೆಗೆ, ತನಿಖೆ ಪೂರ್ಣಗೊಳ್ಳುವವರೆಗೆ ಪಿಐ ಕಚೇರಿಯಲ್ಲೇ ಕೆಲಸ ನಿರ್ವಹಿಸುವಂತೆ ಸೂಚಿಸಲಾಗಿದೆ.

ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ ಅರೆಬೆತ್ತಲೆ ಕೇಸ್​​: ಕೇಶ್ವಾಪುರ ಠಾಣೆ ಪಿಐ ಕಾರ್ಯಸ್ಥಳ ಬದಲಾವಣೆ
ಸುಜಾತಾ ಹಂಡಿ
ಸಂಜಯ್ಯಾ ಚಿಕ್ಕಮಠ
| Edited By: |

Updated on:Jan 08, 2026 | 10:56 PM

Share

ಹುಬ್ಬಳ್ಳಿ, ಜನವರಿ 08: ನರದಲ್ಲಿ ಪೊಲೀಸರ ಕಸ್ಟಡಿಯಲ್ಲಿದ್ದಾಗಲೇ ಬಿಜೆಪಿ ಕಾರ್ಯಕರ್ತೆ ಅರೆಬೆತ್ತಲಾದ ಪ್ರಕರಣ (BJP Worker Assault Case) ದೊಡ್ಡ ಸಂಚಲನ ಸೃಷ್ಟಿಸಿದೆ. ಕಾಂಗ್ರೆಸ್ ಬಿಜೆಪಿ ನಾಯಕರ ಮಧ್ಯೆ ಮಾತಿನ ಜಟಾಪಟಿಗೂ ಕಾರಣವಾಗಿದೆ. ಕಾಂಗ್ರೆಸ್ (congress) ಕಾರ್ಪೊರೇಟರ್​ಅನ್ನ ಪೊಲೀಸರು ಬಂಧಿಸಿದ್ದಾರೆ. ಈ ಮಧ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಯೊಬ್ಬರ ಕಾರ್ಯಸ್ಥಳ ಬದಲಾವಣೆ ಮಾಡಲಾಗಿದೆ. ಕೇಶ್ವಾಪುರ ಪೊಲೀಸ್​​​ ಠಾಣೆಯ ಪಿಐ ಕೆ.ಎಸ್.ಹಟ್ಟಿ ಅವರ ಕಾರ್ಯಸ್ಥಳ ಬದಲಾವಣೆ ಮಾಡಿದ ಆದೇಶಿಸಲಾಗಿದೆ.

ಪಿಐ ಕೆ.ಎಸ್.ಹಟ್ಟಿ ತಲೆದಂಡ

ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಶ್ವಾಪುರ ಪೊಲೀಸ್​​​ ಠಾಣೆಯ ಪಿಐ ಕೆ.ಎಸ್.ಹಟ್ಟಿ ಅವರ ಕಾರ್ಯಸ್ಥಳ ಬದಲಾವಣೆ ಮಾಡಲಾಗಿದೆ. ತನಿಖೆ ಮುಗಿಯೋವರಗೂ ಕಮಿಷನರ್ ಕಚೇರಿಯಲ್ಲಿ ಕೆಲಸ ಮಾಡುವಂತೆ ಸೂಚಿಸಿ ಹುಬ್ಬಳ್ಳಿ-ಧಾರವಾಡ ಪೊಲೀಸ್​ ಆಯುಕ್ತ ಎನ್.ಶಶಿಕುಮಾರ್​​ ​ಆದೇಶ ಹೊರಡಿಸಿದ್ದಾರೆ. ಇನ್ನು ಗಂಟಿಕೇರಿ ಠಾಣೆಯ ಪಿಐ ಜಾಧವ್​ರಿಗೆ ಕೇಶ್ವಾಪುರ ಠಾಣೆ ಪ್ರಭಾರ ವಹಿಸಿಕೊಳ್ಳಲು ಕಮಿಷನರ್ ಸೂಚಿಸಿದ್ದಾರೆ.

ಪ್ರಕರಣದ ತನಿಖೆ ಎಸಿಪಿ ಹೆಗಲಿಗೆ

ಇನ್ನು ಈ ಪ್ರಕರಣದ ತನಿಖೆಯನ್ನು ಎಸಿಪಿ ಹೆಗಲಿಗೆ ನೀಡಲಾಗಿದೆ. ತನಿಖಾಧಿಕಾರಿಯಾಗಿ ಎಸಿಪಿ ಶಿವರಾಜ್ ಕಟಕಬಾವಿ ಅನ್ನ ಪೊಲೀಸ್​ ಆಯುಕ್ತ ಎನ್.ಶಶಿಕುಮಾರ್ ನೇಮಕ ಮಾಡಿದ್ದಾರೆ. ಕೆ.ಎಸ್ ಹಟ್ಟಿ ವಿರುದ್ಧ ಬಿಜೆಪಿ ಆಕ್ರೋಶ ಹೊರಹಾಕಿತ್ತು. ತನಿಖಾಧಿಕಾರಿ ಬದಲಾವಣೆ ಮಾಡಬೇಕು ಎಂದು ಆಗ್ರಹಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಎಸಿಪಿ ಶಿವರಾಜ್ ಕಟಕಬಾವಿ ನೇತೃತ್ವದಲ್ಲಿ ತನಿಖೆಗೆ ಆದೇಶಿಸಲಾಗಿದೆ.

ನಾಳೆ ಹುಬ್ಬಳ್ಳಿಯಲ್ಲಿ ಪ್ರತಿಭಟನೆಗೆ ಮುಂದಾದ ಬಿಜೆಪಿ

ದೌರ್ಜನ್ಯ ಖಂಡಿಸಿ ಬೃಹತ್‌ ಪ್ರತಿಭಟನೆಗೆ ಬಿಜೆಪಿ ಮುಂದಾಗಿದೆ. ನಾಳೆ ಮಧ್ಯಾಹ್ನ 1.30 ಗಂಟೆಗೆ ಪ್ರತಿಭಟನೆ ನಡೆಯಲಿದ್ದು, ಹುಬ್ಬಳ್ಳಿ ಅಂಬೇಡ್ಕರ ಸರ್ಕಲ್​ನಿಂದ ತಹಶೀಲ್ದಾರ ಕಚೇರಿವರೆಗೆ ಮೆರವಣಿಗೆ ನಡೆಯಲಿದೆ.  ಈ ಪ್ರತಿಭಟನಾ ಮೆರವಣಿಗೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್​, ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಚಲುವಾದಿ ನಾರಾಯಣಸ್ವಾಮಿ, ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ, ಶಾಸಕ ಮಹೇಶ ಟೆಂಗಿನಕಾಯಿ, ವಿಧಾನ ಪರಿಷತ್‌ ಸದಸ್ಯ ಪ್ರದೀಪ ಶೆಟ್ಟರ, ವಿಧಾನ ಪರಿಷತ್‌ ಸದಸ್ಯ ಭಾರತಿ ಶೆಟ್ಟಿ ಸೇರಿ ಬಿಜೆಪಿಯ ಅನೇಕ ನಾಯಕರು ಭಾಗಿಯಾಗಲಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:54 pm, Thu, 8 January 26

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ ವಸತಿ ಭಾಗ್ಯ ಇಲ್ಲ
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ ವಸತಿ ಭಾಗ್ಯ ಇಲ್ಲ
ಗಿಲ್ಲಿ ನಟನ ಕ್ರೇಜ್ ನೋಡಿ; ಟ್ಯಾಟೂ ಹಾಕಿಸಿಕೊಂಡ ಅಭಿಮಾನಿ
ಗಿಲ್ಲಿ ನಟನ ಕ್ರೇಜ್ ನೋಡಿ; ಟ್ಯಾಟೂ ಹಾಕಿಸಿಕೊಂಡ ಅಭಿಮಾನಿ
ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದ ಸ್ಥಗಿತಕ್ಕೆ ಕಾರಣ ಕೊಟ್ಟ ಅಮೆರಿಕ
ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದ ಸ್ಥಗಿತಕ್ಕೆ ಕಾರಣ ಕೊಟ್ಟ ಅಮೆರಿಕ