Indigo plane: ಹುಬ್ಬಳ್ಳಿಯಲ್ಲಿ ಇಳಿಯುವಾಗ ಇಂಡಿಗೋ ವಿಮಾನದ ಟೈರ್​ ಪಂಕ್ಚರ್; ಪ್ರಯಾಣಿಕರು ಸುರಕ್ಷಿತ

Hubballi airport: ಕಣ್ಣೂರಿನಿಂದ ಹುಬ್ಬಳ್ಳಿಗೆ ಬರುತ್ತಿದ್ದ ಇಂಡಿಗೋ ಎಟಿಆರ್ 6ಇ-7979 ವಿಮಾನವು ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ನಿನ್ನೆ ಸೋಮವಾರ ರಾತ್ರಿ ಇಳಿಯುವಾಗ ಟೈರ್​ ಪಂಕ್ಚರ್ ಆಗಿದೆ. ಎಲ್ಲ ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತವಾಗಿದ್ದಾರೆ.

Indigo plane: ಹುಬ್ಬಳ್ಳಿಯಲ್ಲಿ ಇಳಿಯುವಾಗ ಇಂಡಿಗೋ ವಿಮಾನದ ಟೈರ್​ ಪಂಕ್ಚರ್; ಪ್ರಯಾಣಿಕರು ಸುರಕ್ಷಿತ
Hubballi Indigo plane: ಹುಬ್ಬಳ್ಳಿಯಲ್ಲಿ ಇಳಿಯುವಾಗ ಇಂಡಿಗೋ ವಿಮಾನದ ಟೈರ್​ ಪಂಕ್ಚರ್; ಪ್ರಯಾಣಿಕರು ಸುರಕ್ಷಿತ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jun 15, 2021 | 1:09 PM

ಹುಬ್ಬಳ್ಳಿ: ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಇಳಿಯುವಾಗ ಇಂಡಿಗೋ ವಿಮಾನದ ಟೈರ್​ ಪಂಕ್ಚರ್ ಆಗಿದೆ. ಪ್ರಮಾದದಲ್ಲಿ ಯಾವುದೇ ಪ್ರಯಾಣಿಕರಿಗಾಗಲಿ ಅಥವಾ ಸಿಬ್ಬಂದಿಗಾಗಲಿ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಕಣ್ಣೂರಿನಿಂದ ಹುಬ್ಬಳ್ಳಿಗೆ ಬರುತ್ತಿದ್ದ ಇಂಡಿಗೋ ಎಟಿಆರ್ 6ಇ-7979 ವಿಮಾನವು ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ನಿನ್ನೆ ಸೋಮವಾರ ರಾತ್ರಿ ಇಳಿಯುವಾಗ ಟೈರ್​ ಪಂಕ್ಚರ್ ಆಗಿದೆ. ಎಲ್ಲ ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತವಾಗಿದ್ದಾರೆ. ಎಲ್ಲ ಪ್ರಯಾಣಿಕರನ್ನು ತಕ್ಷಣ ಸುರಕ್ಷಿತವಾಗಿ ಇಳಿಸಲಾಯಿತು. ಮಂಗಳವಾರ ಬೆಳಗಿನ ಜಾವ 2 ಗಂಟೆಯ ವೇಳೆಗೆ ರನ್​ವೇ ಅನ್ನು ಮತ್ತೆ ಸಿದ್ಧಗೊಳಿಸಲಾಗಿದೆ. ವಿಮಾನವನ್ನು ನಿರ್ವಹಣೆ ಚೆಕ್​ ಅಪ್​ಗಾಗಿ ಬಿಡಲಾಗಿದೆ ಎಂದು ಇಂಡಿಗೋ ಏರ್​ಲೈನ್ಸ್​ ಸಂಸ್ಥೆಯ ಅಧಿಕಾರಿಗಳು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. ​

ಸೋಮವಾರ ರಾತ್ರಿ ಇಂಡಿಗೋ ಎಟಿಆರ್ 6ಇ-7979 ವಿಮಾನವು ಮೊದಲು 8 ಗಂಟೆ 3 ನಿಮಿಷಕ್ಕೆ ಇಳಿಯಲು ಯತ್ನಿಸಿತು. ಆದರೆ ಭಾರೀ ಪ್ರಮಾಣದಲ್ಲಿ ಅಡ್ಡ ಗಾಳಿ ಬೀಸಿದಾಗ ವಿಮಾನ ಇಳಿಯುವುದು ಸಾಧ್ಯವಾಗದೇ ಹೋಯಿತು. ತಕ್ಷಣವೇ ಮತ್ತೆ ಮೇಲಕ್ಕೆ ಹಾರಿದ ವಿಮಾನ ಆಗಸದಲ್ಲಿ ಸುತ್ತು ಹಾಕತೊಡಗಿತು. ಮತ್ತೆ 8 ಗಂಟೆ 35 ನಿಮಿಷಕ್ಕೆ ಇಳಿಯಿತು. ವೇಗವಾಗಿ ಇಳಿದಿದ್ದರೆ ಪರಿಣಾಮ ಮತ್ತು ಜೋರು ಗಾಳಿಯಿಂದಾಗಿ ವಿಮಾನದ ಟೈರೊಂದು ಸಿಡಿಯಿತು ಎಂದು ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಹುಬ್ಬಳ್ಳಿ ನಿಲ್ದಾಣದಲ್ಲಿ ವಿಮಾನ ಸಂಚಾರ ಈಗ ಮೊದಲಿನಂತಿದ್ದು, ಪ್ರಕರಣವನ್ನು ಎಟಿಎಸ್ ಗಮನಕ್ಕೆ ತರಲಾಗಿದೆ ಎಂದೂ ಅವರು ಹೇಳಿದ್ದಾರೆ.

(Hubballi-bound Indigo plane from kannur Tyre Bursts While Landing in Hubballi airport Passengers and crew Safe)

Published On - 1:08 pm, Tue, 15 June 21

‘2 ರೆಕ್ಕೆ ಕೊಡು, ದೊಡ್ಡ ಸ್ಟಾರ್ ಆಗಬೇಕು’; ಟ್ರೋಫಿ ನೋಡಿ ತ್ರಿವಿಕ್ರಂ ಮಾತು
‘2 ರೆಕ್ಕೆ ಕೊಡು, ದೊಡ್ಡ ಸ್ಟಾರ್ ಆಗಬೇಕು’; ಟ್ರೋಫಿ ನೋಡಿ ತ್ರಿವಿಕ್ರಂ ಮಾತು
ಸತ್ತವರ ಹೆಸರಲ್ಲಿ ಅರ್ಚನೆ! ಸಂಕಲ್ಪ ಮಾಡಿಸಬಹುದಾ? ವಿಡಿಯೋ ನೋಡಿ
ಸತ್ತವರ ಹೆಸರಲ್ಲಿ ಅರ್ಚನೆ! ಸಂಕಲ್ಪ ಮಾಡಿಸಬಹುದಾ? ವಿಡಿಯೋ ನೋಡಿ
ಈ ರಾಶಿಯವರು ಮದುವೆ ಮತ್ತು ಮನೆ ವಿಷಯಗಳಲ್ಲಿ ಇಂದು ಶುಭ ಸುದ್ದಿ ಕೇಳುವರು
ಈ ರಾಶಿಯವರು ಮದುವೆ ಮತ್ತು ಮನೆ ವಿಷಯಗಳಲ್ಲಿ ಇಂದು ಶುಭ ಸುದ್ದಿ ಕೇಳುವರು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್