ಬೆಂಗಳೂರಲ್ಲಿ ಹಸು ಕೆಚ್ಚಲು ಕೊಯ್ದ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಕ್ರೌರ್ಯ
ಹುಬ್ಬಳ್ಳಿಯ ಬಣಗಾರ ಲೇಔಟ್‌ನಲ್ಲಿ ಏಳು ತಿಂಗಳ ಕರು ಹೊಟ್ಟೆ ಬಗೆದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಶರಣಪ್ಪ ಬಾರಕೇರ ಎಂಬುವವರಿಗೆ ಸೇರಿದ ಈ ಕರು ನಿಶಕ್ತಿಯಾಗಿತ್ತು. ಪಶು ವೈದ್ಯರ ಪ್ರಕಾರ, ಪ್ರಾಣಿಯೊಂದು ದಾಳಿ ಮಾಡಿರುವಂತೆ ಕಾಣುತ್ತದೆ. ಈ ಘಟನೆ ಅಶೋಕ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು,ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಹುಬ್ಬಳ್ಳಿ, ಜನವರಿ 15: ಬೆಂಗಳೂರಿನ (Bengaluru) ಚಾಮರಾಜಪೇಟೆಯಲ್ಲಿ ಹಸುವಿನ ಕೆಚ್ಚಲು ಕೊಯ್ದ (Cow Attack) ಪ್ರಕರಣ ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲಿ (Hubballi) ಕರುವಿನ (Calf) ಮೇಲೆ ಕ್ರೌರ್ಯ ಮೆರೆಯಲಾಗಿದೆ. ಹುಬ್ಬಳ್ಳಿಯ ಬಣಗಾರ ಲೇಔಟ್‌ನಲ್ಲಿ ಹೊಟ್ಟೆ ಬಗೆದ ಸ್ಥಿತಿಯಲ್ಲಿ ಏಳು ತಿಂಗಳ ಕರು ಪತ್ತೆಯಾಗಿದೆ. ಏಳು ತಿಂಗಳು ಕರು ಶರಣಪ್ಪ ಬಾರಕೇರ ಎಂಬುವರಿಗೆ ಸೇರಿದೆ. ಹುಬ್ಬಳ್ಳಿಯ ಅಶೋಕ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಏಳು ತಿಂಗಳ ಕರುವಿಗೆ ನಿಶಕ್ತಿಯಾಗಿತ್ತು. ಕರುವನ್ನು ನೋಡಿದರೆ ಪ್ರಾಣಿ ತಿಂದ ಹಾಗೆ ಕಾಣತ್ತೆ ಎಂದು ಪಶು ವೈದ್ಯರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಏನಾಗಿತ್ತು?
ಚಾಮರಾಜಪೇಟೆಯ ಓಲ್ಡ್ ಪೆನ್ಷನ್ ಮೊಹಲ್ಲಾದ ವಿನಾಯಕನಗರ ನಿವಾಸಿ ಕರ್ಣ ಎಂಬುವರು ಕಳೆದ ಹಲವು ವರ್ಷಗಳಿಂದ ಇಲ್ಲಿ ಹಸು ಸಾಕುತ್ತಿದ್ದಾರೆ. ಶನಿವಾರ ತಡರಾತ್ರಿ ಯಾರೋ ಕಿಡಿಗೇಡಿಗಳು ಮೂರು ಹಸುಗಳ ಕೆಚ್ಚಲನ್ನು ಕತ್ತರಿಸಿ, ಕಾಲಿಗೆ ಮಚ್ಚಿನಿಂದ ಹಲ್ಲೆ ಮಾಡಿ ವಿಕೃತಿ ಮೆರೆದಿದ್ದರು.
ಹಸುಗಳ ಮಾಲೀಕ ಕರ್ಣ ಕಾಟನ್ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರು ಆಧರಿಸಿ ಪ್ರರಕಣ ದಾಖಲಿಸಿಕೊಂಡ ಪೊಲೀಸರು ಭಾನುವಾರ ರಾತ್ರಿ ಓರ್ವ ಆರೋಪಿಯನ್ನು ಬಂಧಿಸಿ, ವಿಚಾರಣೆ ನಡೆಸಿದ್ದಾರೆ. ಚಿಕ್ಕಪೇಟೆ ಉಪ ವಿಭಾಗದ ಎಸಿಪಿ ರಮೇಶ್ ನೇತೃತ್ವದಲ್ಲಿ 20ಕ್ಕೂ ಹೆಚ್ಚು ಪೊಲೀಸರು ತನಿಖೆ ನಡೆಸಿದ್ದಾರೆ.
ಇದನ್ನೂ ಓದಿ: ಹಸುಗಳ ಕೆಚ್ಚಲು ಕೊಯ್ದ ಆರೋಪಿ ಸೈಯದ್ ನಸ್ರು ಮನಸ್ಥಿತಿ ಕಂಡು ಪೊಲೀಸರೇ ಶಾಕ್..!
ಹಸುಗಳಿಗೆ ಚಾಮರಾಜಪೇಟೆ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಹಸುಗಳು ಕ್ಷೇಮವಾಗಿವೆ. ಆದರೆ, ಇನ್ನೂ ಎರಡು ವಾರ ಗಾಯ ಮಾಸಲು ಸಮಯಬೇಕಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಹಿಂದೂ ಪರ ಸಂಘಟನೆ ಮುಖಂಡರು, ವಿಪಕ್ಷ ನಾಯಕ ಆರ್ ಅಶೋಕ್, ಸಂಸದ ಪಿಸಿ ಮೋಹನ್, ಎಂಎಲ್ಸಿ ರವಿಕುಮಾರ್ ಸ್ಥಳಕ್ಕೆ ಭೇಟಿ ನೀಡಿ, ಮಾಲೀಕ ಕರ್ಣನಿಗೆ ಸಾಂತ್ವನ ಹೇಳಿದ್ದರು. ಘಟನೆಯನ್ನು ಖಂಡಿಸಿದ ನಾಯಕರು, ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದರು. ವಿಪಕ್ಷ ನಾಯಕ ಆರ್. ಅಶೋಕ್ ವೈಯುಕ್ತಿಕವಾಗಿ ಒಂದು ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 12:23 pm, Wed, 15 January 25