ಹಿಂದೂ ಯುವತಿ ಜೊತೆ ವಿವಾಹಿತ ಮುಸ್ಲಿಂ ವ್ಯಕ್ತಿ ಪರಾರಿ: ಲವ್​​ ಜಿಹಾದ್​​ಗೆ ಒಳಗಾದ ಮಗಳನ್ನು ಹುಡುಕಿಕೊಡಿ ಎಂದು ತಾಯಿಯ ಅಳಲು

ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್​​ ಜಿಹಾದ್​​ ಆರೋಪ ಪ್ರಕರಣ ವರದಿಯಾಗಿದೆ. ಧಾರವಾಡದ ಕೆಲಗೇರಿಯ ಹಿಂದೂ ಯುವತಿಯನ್ನು ವಿವಾಹಿತ ಮುಸ್ಲಿಂ ವ್ಯಕ್ತಿ ಪುಸಲಾಯಿಸಿ ಕರೆದುಕೊಂಡು ಹೋಗಿದ್ದಾನೆ. ಮನೆ ಖರೀದಿಗೆ ನೀಡಿದ್ದ 10 ಲಕ್ಷ ಹಣವನ್ನೂ ವಂಚಿಸಿದ್ದಾನೆ. ಎರಡು ವರ್ಷಗಳಿಂದ ಮಗಳು ನಾಪತ್ತೆಯಾಗಿದ್ದು, ಈ ಬಗ್ಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ನಾಪತ್ತೆಯಾಗಿರುವ ಯುವತಿಯ ತಾಯಿ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.

ಹಿಂದೂ ಯುವತಿ ಜೊತೆ ವಿವಾಹಿತ ಮುಸ್ಲಿಂ ವ್ಯಕ್ತಿ ಪರಾರಿ: ಲವ್​​ ಜಿಹಾದ್​​ಗೆ ಒಳಗಾದ ಮಗಳನ್ನು ಹುಡುಕಿಕೊಡಿ ಎಂದು ತಾಯಿಯ ಅಳಲು
ಆರೋಪಿತ ವ್ಯಕ್ತಿ ಮತ್ತು ನಾಪತ್ತೆಯಾಗಿರುವ ಯುವತಿ
Image Credit source: Tv9 Kannada
Edited By:

Updated on: Apr 08, 2026 | 12:34 PM

ಹುಬ್ಬಳ್ಳಿ, ಏಪ್ರಿಲ್​ 08: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಸಾಲು ಸಾಲು ಲವ್​​ ಜಿಹಾದ್​​ ಆರೋಪ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಇದೀಗ ಇವುಗಳ ಸಾಲಿಗೆ ಮತ್ತೊಂದು ಹೊಸ ಸೇರ್ಪಡೆಯಾಗಿದ್ದು, ತನ್ನ ಮಗಳನ್ನು ಮುಸ್ಲಿಂ ಸಮುದಾಯದ ವಿವಾಹಿತ ವ್ಯಕ್ತಿ ಪುಸಲಾಯಿಸಿ ಕರೆದುಕೊಂಡು ಹೋಗಿದ್ದಾನೆ. ಜೊತಗೆ ಮನೆ ಖರೀದಿಸಲು ನೀಡಿದ್ದ ಹತ್ತು ಲಕ್ಷ ಹಣ ಕೂಡಾ ತೆಗೆದುಕೊಂಡು ಹೋಗಿದ್ದಾನೆ. ಇದೀಗ ಹಣವೂ ಇಲ್ಲ, ಮಗಳೂ ಇಲ್ಲ ಎಂಬಂತಾಗಿದೆ. ದಯವಿಟ್ಟು ಮಗಳನ್ನು ಹುಡುಕಿ ಕೊಡಿ ಎಂದು ತಾಯಿಯೊಬ್ಬಳು ಮನವಿ ಮಾಡಿದ್ದಾರೆ. ಕಳೆದ ಎರಡು ವರ್ಷಗಳಿಂದ ಮಗಳಿಗಾಗಿ ಹುಡುಕಾಟ ನಡೆಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದ್ದಾರೆ.

ಧಾರವಾಡದ ಕೆಲಗೇರಿಯ ನಿವಾಸಿ ಇಪ್ಪತ್ತೆರಡು ವರ್ಷದ ತಂಗೆಮ್ಮಾ ಎಂಬ ಯುವತಿ ಮನೆ ಎದುರಿನ ನಿವಾಸಿ ಕಾರು ಚಾಲಕನಾಗಿದ್ದ ಮುಸ್ಲಿಂ ವ್ಯಕ್ತಿಯ ಜೊತೆಗೆ ಓಡಿ ಹೋಗಿದ್ದಾಳಂತೆ. ಈ ಬಗ್ಗೆ ಆಕೆಯ ತಾಯಿ ಮಂಜುಳಾ ಅವರೇ ಮಾಹಿತಿ ನೀಡಿದ್ದು, ತಮ್ಮ ಮಗಳಿಗೆ ಪರಿಚಿತ ಯುವಕನ ಜೊತೆ ವಿವಾಹವಾಗಿತ್ತು. ಆದ್ರೆ ಮಗಳು ನಮ್ಮ ಜೊತೆಯೇ ಇದ್ದಳು. ಆಕೆಯ ಪತಿ ಆಗಾಗ ಬಂದು ಹೋಗುತ್ತಿದ್ದ. ಧಾರವಾಡದ ಕೆಲಗೇರಿಯಲ್ಲಿ ಬಾಡಿಗೆ ಮನೆಯಲ್ಲಿದ್ದಾಗ, ತಮಗೆ ವಕೀಲರೊಬ್ಬರು ಪರಿಚಯವಿದ್ದರು. ಅವರ ಕಾರ್ ಡ್ರೈವರ್ ಆಗಿ ಮುನ್ನಾ ಎಂಬಾತ ಕೆಲಸ ಮಾಡ್ತಿದ್ದ. ಆಗ ನಾವು ನಮಗೆ ಸ್ವಂತದೊಂದು ಮನೆ ಮಾಡಬೇಕು. ಹೀಗಾಗಿ ಮನೆ ಹುಡುಕಿ ಕೊಡಿ ಎಂದು ಮುನ್ನಾ ಮತ್ತು ವಕೀಲರಿಗೆ ಹತ್ತು ಲಕ್ಷ ಹಣ ನೀಡಿದ್ದೆವು.  ಆ ಬಳಿಕ ವಕೀಲರು ಮತ್ತು ಮುನ್ನಾ ಆಗಾಗ ಮನೆಗೆ ಬಂದು ಹೋಗಿ ಮಾಡುತ್ತಿದ್ದರು. ಆದರೆ 2023ರಲ್ಲಿ ನಾವು ಮನೆಯಲ್ಲಿ ಇಲ್ಲದ ಸಂದರ್ಭ ಮುನ್ನಾ ತಮ್ಮ ಮಗಳನ್ನು ಪುಸಲಾಯಿಸಿ ಕರೆದುಕೊಂಡು ಹೋಗಿದ್ದಾನೆ. ಈ ಬಗ್ಗೆ ಧಾರವಾಡದ ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದೆವು. ಆಗ ಪೊಲೀಸರು ಮುನ್ನಾ ವಿರುದ್ದ ದೂರು ದಾಖಲಿಸಿಕೊಳ್ಳದೇ ಕೇವಲ ಮಿಸ್ಸಿಂಗ್ ಕಂಪ್ಲೇಟ್ ದಾಖಲಿಸಿಕೊಂಡಿದ್ದರು. ಆದ್ರೆ ಇಲ್ಲಿವರಗೆ ಮುನ್ನಾ ಮತ್ತು ತಮ್ಮ ಮಗಳು ಎಲ್ಲಿದ್ದಾರೆ ಎಂದು ಹುಡುಕಿಲ್ಲ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿ ಲವ್ ಜಿಹಾದ್ ಪ್ರಕರಣ; ಮತ್ತೆರಡು ಸ್ಫೋಟಕ ವಿಡಿಯೋ ಬಿಡುಗಡೆ! ಕಾಂಗ್ರೆಸ್ ಮುಖಂಡನ ಕೈವಾಡ ಇದೆ ಎಂದ ಯುವತಿ

ಇನ್ನು ಮುನ್ನಾಗೆ ಬೆಳಗಾವಿ ಜಿಲ್ಲೆಯ ರಾಮದುರ್ಗದ ಮುಸ್ಲಿಂ ಯುವತಿ ಜೊತೆ ಈ ಹಿಂದೆಯೇ ವಿವಾಹವಾಗಿತ್ತಂತೆ. ದಂಪತಿಗೆ ಇಬ್ಬರು ಮಕ್ಕಳು ಕೂಡಾ ಇವೆಯಂತೆ. ಹೀಗಿದ್ದರೂ ಹೆಂಡತಿ ಮಕ್ಕಳನ್ನು ಬಿಟ್ಟು ಮುನ್ನಾ ತಂಗೆಮ್ಮಳನ್ನು ಕರೆದುಕೊಂಡು ನಾಪತ್ತೆಯಾಗಿದ್ದಾನೆ. ಆತನಿಗಾಗಿ ಆರಂಭದಲ್ಲಿ ಪೊಲೀಸರು ಅನೇಕ ಕಡೆ ಹುಡುಕಾಡಿದ್ದರು. ಹೈದ್ರಾಬಾದ್ ಸೇರಿದಂತೆ ಅನೇಕ ಕಡೆ ತೆರಳಿದ್ದರು. ಆದ್ರೆ ಆತ ಸಿಮ್ ಬದಲಾವಣೆ ಮಾಡಿದ್ದು, ಕುಟುಂಬದವರ ಸಂಪರ್ಕ ಕೂಡ ಇಟ್ಟುಕೊಂಡಿಲ್ಲ. ಹೀಗಾಗಿ ಮುನ್ನಾ ಮತ್ತು ತಂಗೆಮ್ಮಾ ಎಲ್ಲಿದ್ದಾರೆಂದು ಪತ್ತೆ ಮಾಡೋದು ಪೊಲೀಸರಿಗೂ ಸವಾಲಾಗಿ ಮಾರ್ಪಟ್ಟಿದೆ. ಇನ್ನು ಮುನ್ನಾ ಮೇಲೆ ದೆಹಲಿಯಲ್ಲಿ ಅತ್ಯಾಚಾರ ಪ್ರಕರಣ ಕೂಡಾ ಇರೋದು ಗೊತ್ತಾಗಿದ್ದು, ಆತ ಕ್ರಿಮಿನಲ್ ಹಿನ್ನೆಲೆಯಳ್ಳ ವ್ಯಕ್ತಿ ಎಂಬುದು ಬಹಿರಂಗಗೊಂಡಿದೆ.  ತಮ್ಮ ಮಗಳನ್ನು ಹುಡುಕಿ ಕೊಡುವಂತೆ ಧಾರವಾಡ ಸಬ್ ಅರ್ಬನ್ ಪೊಲೀಸರಿಗೆ ಹತ್ತಾರು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗದ ಕಾರಣ ಹಿಂದೂಪರ ಸಂಘಟನೆಗಳ ಜೊತೆ ಆಗಮಿಸಿ ಪೊಲೀಸ್ ಕಮಿಷನರ್​​ಗೆ ಮಂಜುಳಾ ದೂರು ನೀಡಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

ಸಂಜಯ್ಯಾ ಚಿಕ್ಕಮಠ

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ನಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಕೊಪ್ಪಳಕ್ಕೆ ಬಂದು ನಿಂತಿದೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
Follow Us