AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ ಗಲಭೆ ಕೇಸ್‌ ಹಿಂಪಡೆಯುವ ತೀರ್ಮಾನ: ಸರ್ಕಾರದ ವಿರುದ್ಧ ತೊಡೆತಟ್ಟಿದ ಯುವ ವಕೀಲರು

ಯುವ ವಕೀಲರ ತಂಡವು ಹಳೇ ಹುಬ್ಬಳ್ಳಿ ಪ್ರಕರಣವನ್ನು ಹಿಂಪಡೆದಿರುವ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಫೆಬ್ರವರಿ 16 ರಂದು ಸಲ್ಲಿಸಲಾದ ಈ ಅರ್ಜಿಯ ಕುರಿತು ಕಾರಣ ಕೇಳಿ ಹೈಕೋರ್ಟ್ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ. ಮಾರ್ಚ್ 17 ರಂದು ಈ ಅರ್ಜಿಯ ವಿಚಾರಣೆ ನಡೆಯಲಿದೆ.

ಹುಬ್ಬಳ್ಳಿ ಗಲಭೆ ಕೇಸ್‌ ಹಿಂಪಡೆಯುವ ತೀರ್ಮಾನ: ಸರ್ಕಾರದ ವಿರುದ್ಧ ತೊಡೆತಟ್ಟಿದ ಯುವ ವಕೀಲರು
ಹುಬ್ಬಳ್ಳಿ ಗಲಭೆ ಕೇಸ್‌ ಹಿಂಪಡೆಯುವ ತೀರ್ಮಾನ: ಸರ್ಕಾರದ ವಿರುದ್ಧ ತೊಡೆತಟ್ಟಿದ ಯುವ ವಕೀಲರು
Follow us
ಶಿವಕುಮಾರ್ ಪತ್ತಾರ್. ಹುಬ್ಬಳ್ಳಿ
| Updated By: ಗಂಗಾಧರ​ ಬ. ಸಾಬೋಜಿ

Updated on:Mar 06, 2025 | 3:28 PM

ಹುಬ್ಬಳ್ಳಿ, ಮಾರ್ಚ್​​ 06: ಸಿಎಂ ಸಿದ್ದರಾಮಯ್ಯ (Siddaramaiah) ಸರ್ಕಾರ ಇತ್ತೀಚೆಗೆ ಹಳೇ ಹುಬ್ಬಳ್ಳಿ ಕೇಸ್ (Hubli riots case)​ ಹಿಂಪಡೆದಿತ್ತು. ಇದು ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಸಂಚಲನ ಮೂಡಿಸಿತ್ತು. ಈ ವಿಚಾರ ಸಾಕಷ್ಟು ಆರೋಪ ಪ್ರತ್ಯಾರೋಪಗಳಿಗೂ ಕಾರಣವಾಗಿತ್ತು. ಈ ಮಧ್ಯೆ ಹಳೇ ಹುಬ್ಬಳ್ಳಿ ಕೇಸ್ ಹಿಂಪಡೆಯುವ ತೀರ್ಮಾನ ಪ್ರಶ್ನಿಸಿ ಯುವ ವಕೀಲರ ತಂಡ ಹೈಕೋರ್ಟ್​​ನಲ್ಲಿ (High Court) ರೀಟ್ ಅರ್ಜಿ ಸಲ್ಲಿಸಿದೆ. ಆ ಮೂಲಕ ಸರ್ಕಾರದ ವಿರುದ್ಧ ತೊಡೆತಟ್ಟಿದ್ದಾರೆ. ಈ ಕುರಿತು ಕಾರಣ ಕೇಳಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ನೀಡಿದೆ.

ಗೀರಿಶ್ ಭಾರದ್ವಾಜ್ ಮತ್ತು ಶ್ರೀಧರ್ ಎನ್ನುವವರಿಂದ ಫೆ 16 ರಂದು ರಿಟ್ ಅರ್ಜಿ ಸಲ್ಲಿಸಿದ್ದರು. ವೆಂಕಟೇಶ ದಳವಾಯಿ ಸರ್ಕಾರದ ವಿರುದ್ಧ ಹೈಕೋರ್ಟ್​​ನಲ್ಲಿ ವಾದ ಮಂಡಿಸಲಿದ್ದಾರೆ. ಹೈಕೋರ್ಟ್​ನಲ್ಲಿ ಮಾರ್ಚ್ 17 ರಂದು ರೀಟ್ ಅರ್ಜಿ ವಿಚಾರಣೆ ನಡೆಸಲಿದೆ. ಹುಬ್ಬಳ್ಳಿ ಸಂಜೀವ್ ಬಡಾಸ್ಕರ ಮತ್ತು ಅಶೋಕ್ ಅಣ್ವೇಕರ್ ತಂಡದಿಂದ ಬೆಂಗಳೂರು ವಕೀಲರಿಗೆ ಸಾಥ್ ನೀಡಲಾಗಿದೆ.

ಇದನ್ನೂ ಓದಿ: ಹುಬ್ಬಳ್ಳಿ ಗಲಭೆ ಪ್ರಕರಣ ಹಿಂಪಡೆದ ಕಾಂಗ್ರೆಸ್​ ಸರ್ಕಾರ; ಕಿಡಿಕಾರಿದ ಬಿಜೆಪಿ ನಾಯಕರು

ಇದನ್ನೂ ಓದಿ
Image
ಹುಬ್ಬಳ್ಳಿ ಗಲಭೆ ಕೇಸ್ ವಾಪಸ್:ರಾಷ್ಟ್ರಪತಿ, ಪ್ರಧಾನಿಗೆ ನಾರಾಯಣಸ್ವಾಮಿ ಪತ್ರ
Image
ಹಳೇ ಹುಬ್ಬಳ್ಳಿ ಕೇಸ್​ ಹಿಂಪಡೆದಿದ್ದಕ್ಕೆ ಪ್ರಲ್ಹಾದ್​ ಜೋಶಿ ವಾಗ್ದಾಳಿ
Image
ಹುಬ್ಬಳ್ಳಿ ಗಲಭೆ ಪ್ರಕರಣ ಹಿಂಪಡೆದ ಕಾಂಗ್ರೆಸ್​ ಸರ್ಕಾರ; ಕಿಡಿಕಾರಿದ ಬಿಜೆಪಿ
Image
ರವಿ ಕೇಸ್ ಗುರಾಣಿಯಾಗಿ ಬಳಸಲು ವಾಪಸ್ಸು ಪಡೆದಿರುವ ಗುಮಾನಿ ದಟ್ಟವಾಗುತ್ತಿದೆ

ಒಂದು ವಾಟ್ಸಪ್ ಸ್ಟೇಟಸ್​ನಿಂದ ಹೊತ್ತುಕೊಂಡಿದ್ದ ಬೆಂಕಿ ಅಂದು ರಾತ್ರಿ ದೊಡ್ಡ ಪ್ರಮಾಣದಲ್ಲಿ ಗಲಭೆಗೆ ಕಾರಣವಾಗಿತ್ತು. ಗಲಭೆಯಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ ನಡೆದು, ಪೊಲೀಸ್ ಠಾಣೆ ಮೇಲೆ ಗಲಭೆಕೋರರು ಕಲ್ಲು ಎಸೆದಿದ್ದರು. ಈ ಗಲಭೆ ಇಡೀ ದೇಶದ್ಯಾಂತ ಚರ್ಚೆಗೂ ಗ್ರಾಸವಾಗಿತ್ತು.

ಇದನ್ನೂ ಓದಿ: ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ಸು ಪಡೆಯುವ ಸರ್ಕಾರದ ನಿರ್ಧಾರ ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ

ಈ ಗಲಭೆಯಲ್ಲಿ ಭಾಗಿಯಾದ ಬರೋಬ್ಬರಿ 150 ಕ್ಕೂ ಹೆಚ್ಚು ಜನರನ್ನು ಪೊಲೀಸರು ಅರೆಸ್ಟ್ ಮಾಡಿದ್ದರು. ಆದರೆ ಇತ್ತೀಚೆಗೆ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ಹಳೇ ಹುಬ್ಬಳ್ಳಿ ಗಲಭೇ ಸೇರಿ ಕೆಲ ಕೇಸ್​ಗಳನ್ನು ವಾಪಸ್ ಪಡೆಯಲು ನಿರ್ಧಾರ ಮಾಡಿತ್ತು. ಸರ್ಕಾರದ ಈ ನಿರ್ಧಾರದ ವಿರುದ್ದ ರಾಜ್ಯದಲ್ಲಿ ಆಕ್ರೋಶಕ್ಕೆ ಕಾರಣವಾಗಿತ್ತು. ಬಿಜೆಪಿ ನಾಯಕರು ಕಾಂಗ್ರೆಸ್​ ಮೇಲೆ ಉರಿದುಬಿದಿದ್ದರು. ಹೋರಾಟಕ್ಕೂ ಕರೆ ನೀಡಿದ್ದರು.

ರಾಜ್ಯಪಾಲರಿಗೆ ಬಿಜೆಪಿ ದೂರು

ಇನ್ನು ರಾಜ್ಯ ಸರ್ಕಾರ ಹಳೇ ಹುಬ್ಬಳ್ಳಿ ಪ್ರಕರಣ ಹಿಂಪಡೆದ ಸರ್ಕಾರದ ನಿರ್ಧಾರ ಖಂಡಿಸಿ ರಾಜ್ಯಪಾಲರಿಗೆ ಬಿಜೆಪಿ ದೂರು ಕೂಡ ಸಲ್ಲಿಸಿತ್ತು. ವಿಪಕ್ಷ ನಾಯಕ ಅಶೋಕ್, ಶಾಸಕ ಡಾ.ಅಶ್ವತ್ಥ್ ನಾರಾಯಣ, ಎಂಎಲ್​ಸಿ ರವಿಕುಮಾರ್ ಸೇರಿ ಹಲವು ನಾಯಕರಿದ್ದ ನಿಯೋಗ ರಾಜ್ಯಪಾಲರಿಗೆ ದೂರು ಸಲ್ಲಿಸಿತ್ತು. ಆ ಮೂಲಕ ರಾಜ್ಯ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ಮನವಿ ಮಾಡಲಾಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:23 pm, Thu, 6 March 25

ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್
ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್
ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ
ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ